News Kadaba

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಡಿ. 24: ಅತ್ಯಾಚಾರ, ಆಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರಿಗೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಉಚಿತ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ. ಹೀಗೆ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅರ್ಜಿಯ ವಿಚಾರಣೆ ವೇಳೆ […]

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಳ್ಳಾರಿಯಲ್ಲಿ ಕಳೆದ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ನಿಧನ

(ನ್ಯೂಸ್ ಕಡಬ) newskadaba.com ಡಿ. 24: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ಮತ್ತೊಂದು ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸರ್ಕಾರಕ್ಕೆ ಜಿಲ್ಲಾಡಳಿತ ಆಡಿಟ್ ರಿಪೋರ್ಟ್ ಸಲ್ಲಿಸಿದ್ದು, ಇದರಲ್ಲಿ ಜಿಲ್ಲೆಯಲ್ಲಿ ಕಳೆದ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಿನಿಂದ ಈವರೆಗೂ 23 ಬಾಣಂತಿಯರು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆ, ವಿಮ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿಯರು ಸಾವನ್ನಪ್ಪಿರುವ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್

ಬಳ್ಳಾರಿಯಲ್ಲಿ ಕಳೆದ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ನಿಧನ Read More »

ಕರ್ನಾಟಕ

ಸಾಮಾಜಿಕ ಮಾಧ್ಯಮದ ಪ್ರಭಾವಿ ಯುವತಿಯರೇ ಸೈಬರ್ ವಂಚಕರ ಟಾರ್ಗೆಟ್!

(ನ್ಯೂಸ್ ಕಡಬ) newskadaba.com ಡಿ. 24: ಬೆಂಗಳೂರು: ದಿನಗಳು ಕಳೆದಂತೆಲ್ಲಾ ಸೈಬರ್ ವಂಚಕರು ಹೊಸ ಹೊಸ ವೇಷ ತೊಟ್ಟು ವಂಚಿಸುವ ದಾರಿಯನ್ನು ಕಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗಿನ ಟ್ರೆಂಡ್‌ನಲ್ಲಿ ಲಾಭದಾಯಕ ಸಹಯೋಗದ ಅವಕಾಶ ನೀಡುವ ಬ್ರ್ಯಾಂಡ್‌ಗಳು ಅಥವಾ ಏಜೆನ್ಸಿಗಳ ಸೋಗಿನಲ್ಲಿ ಸಾಮಾಜಿಕ ಮಾಧ್ಯಮದ ಪ್ರಭಾವಿಗಳನ್ನು ಅದರಲ್ಲೂ ಮಹಿಳಾ ಪ್ರಭಾವಿಗಳನ್ನು ಗುರಿಯಾಗಿಸಿಕೊಂಡು ವಂಚನೆಗೆ ಮುಂದಾಗಿದ್ದಾರೆ. ವೃತ್ತಿಪರ ಪಾಲುದಾರಿಕೆಯ ಹೆಸರಿನಲ್ಲಿ ಈ ವಂಚಕರು ಮಹಿಳೆಯರ ವೈಯಕ್ತಿಕ ಮಾಹಿತಿ, ಫೊಟೋಗಳು ಮತ್ತು ವಿಡಿಯೋಗಳನ್ನು ಕೇಳುತ್ತಾರೆ. ಕೃತಕ ಬುದ್ಧಿಮತ್ತೆ (AI) ಮತ್ತು ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿಕೊಂಡು, ಅವುಗಳನ್ನು

ಸಾಮಾಜಿಕ ಮಾಧ್ಯಮದ ಪ್ರಭಾವಿ ಯುವತಿಯರೇ ಸೈಬರ್ ವಂಚಕರ ಟಾರ್ಗೆಟ್! Read More »

ಬ್ರೇಕಿಂಗ್ ನ್ಯೂಸ್

ಕ್ರಿಸ್‌ಮಸ್‌-ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆದರೆ DCPಗಳೇ ಹೊಣೆ- ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ. 24: ಬೆಂಗಳೂರು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೋಮವಾರ ಸೂಚನೆ ನೀಡಿದರು. ನಗರ ಪೊಲೀಸ್ ಕಮಿಷನರ್‌ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂಭ್ರಮದ ವೇಳೆ ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಅದೇ ರೀತಿ ಈ ವರ್ಷವೂ

ಕ್ರಿಸ್‌ಮಸ್‌-ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆದರೆ DCPಗಳೇ ಹೊಣೆ- ರಾಜ್ಯ ಸರ್ಕಾರ Read More »

ಕರ್ನಾಟಕ

ದ.ಕ. ಸರ್ಕಾರಿ ಶಾಲೆ ಉಳಿಸಲು ‘ನಮಗಾಗಿ’ ವೆಬ್ ಪೋರ್ಟಲ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಸರಕಾರಿ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ದ.ಕ. ಜಿಲ್ಲಾಡಳಿತ, ದೇಶದ ವಿವಿಧ ಭಾಗ ಹಾಗೂ ವಿದೇಶಗಳಲ್ಲಿರುವ ಜಿಲ್ಲೆಯವರಿಂದ ಸಹಾಯಹಸ್ತ ಬಯಸುವ ‘ನಮಗಾಗಿ (ನಿಮ್ಮ ಸಹಾಯ-ನಮ್ಮ ಬೆಳಕಿಗೆ)’ ಎಂಬ ಪೋರ್ಟಲ್ ಆರಂಭಿಸಿದ್ದು, ಈ ವಿಶೇಷ ಯೋಜನೆಯ ಪೋರ್ಟಲನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಈ ವಿಶೇಷ ಯೋಜನೆಯ ಪೋರ್ಟಲನ್ನು ಉದ್ಘಾಟಿಸಲಾಯಿತು. ದ.ಕ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತ್‌ನ ಈ ಯೋಜನೆಯು

ದ.ಕ. ಸರ್ಕಾರಿ ಶಾಲೆ ಉಳಿಸಲು ‘ನಮಗಾಗಿ’ ವೆಬ್ ಪೋರ್ಟಲ್ ಬಿಡುಗಡೆ Read More »

ಕರಾವಳಿ

ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಗೆ ಕರೆಂಟ್‌ ಶಾಕ್‌ ನೀಡಿ ಕೊಲೆ

(ನ್ಯೂಸ್ ಕಡಬ) newskadaba.com ಡಿ. 23 ಬಾಗಲಕೋಟೆ: ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ್ದ ವ್ಯಕ್ತಿಯನ್ನು ಥಳಿಸಿ, ಕರೆಂಟ್‌ ಶಾಕ್‌ ನೀಡಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಶಾಕಿಂಗ್‌ ಘಟನೆ ಅಬಕಾರಿ ಸಚಿವರ ತವರಾದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಐವರು ಸೇರಿ ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ. ವೆಂಕರೆಡ್ಡಿ ಶೇಷಪ್ಪನವರ(40) ಕೊಲೆಯಾದ ವ್ಯಕ್ತಿ. ಐವರು ಸೇರಿ ದೊಣ್ಣೆಗಳಿಂದ ಹಲ್ಲೆ ನಡೆಸಿ ಕರೆಂಟ್ ಶಾಕ್ ನೀಡಿದ್ದಾರೆ. ಈ ಕೊಲೆ ಕೇಸ್​ನಲ್ಲಿ ಐವರು

ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಗೆ ಕರೆಂಟ್‌ ಶಾಕ್‌ ನೀಡಿ ಕೊಲೆ Read More »

ಕರ್ನಾಟಕ

‘ಕಾಂಗ್ರೆಸ್‌ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು’- ಪ್ರಲ್ಹಾದ ಜೋಶಿ

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಈಗಿನ ಕಾಂಗ್ರೆಸ್‌, ಮಹಾತ್ಮ ಗಾಂಧೀಜಿಗೂ ಏನು ಸಂಬಂಧ. ಈಗಿನದು ನಕಲಿ ಕಾಂಗ್ರೆಸ್, ಹಳೇ ಕಾಂಗ್ರೆಸ್ ತುಂಡು ತುಂಡಾಗಿ ಹೋಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಶತಮಾನೋತ್ಸವದ ಕುರಿತು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು. ಅದು ಕಳ್ಳಕಾಕರ ಗುಂಪು. ಇವರ‍್ಯಾರು ಮಹಾತ್ಮ ಗಾಂಧೀಜಿ ಅವರ ಕಾಂಗ್ರೆಸ್ನ ವಾರಸುದಾರಲ್ಲ ಎಂದರು.     ವಿಧಾನ ಪರಿಷತ್

‘ಕಾಂಗ್ರೆಸ್‌ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು’- ಪ್ರಲ್ಹಾದ ಜೋಶಿ Read More »

ಕರ್ನಾಟಕ

‘ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ ‘- ಲಕ್ಷ್ಮಿ ಹೆಬ್ಬಾಳ್ಕರ್‌

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬಿಜೆಪಿ ನಾಯಕ ಸಿ.ಟಿ ರವಿ ನಿಂದಿಸಿದ ಆರೋಪ ವ್ಯಾಪಕವಾಗಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಸಿ.ಟಿ ರವಿ ಪದ ಬಳಸಿದ್ದಾರೆ ಎನ್ನಲಾದ ವೀಡಿಯೋವೊಂದನ್ನ ಲಕ್ಷ್ಮಿ ಹೆಬ್ಬಾಳ್ಕರ್‌ ಬಿಡುಗಡೆ ಮಾಡಿದ್ದಾರೆ. ಪರಿಷತ್‌ ಕಲಾಪದ ವೇಳೆ ಸಿ.ಟಿ ರವಿ ಆ ಪದ ಬಳಸಿ ನಿಂದಿಸಿದ್ದಾರೆ ಎನ್ನಲಾದ ವೀಡಿಯೋವನ್ನ ಪ್ರಸಾರ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ಸಿ.ಟಿ ರವಿ

‘ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ ‘- ಲಕ್ಷ್ಮಿ ಹೆಬ್ಬಾಳ್ಕರ್‌ Read More »

ಕರ್ನಾಟಕ

ಕರ್ನಾಟಕದಲ್ಲಿ ಮತ್ತೋರ್ವ ಬಾಣಂತಿ ಸಾವು: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ!

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಕರ್ನಾಟಕದಲ್ಲಿ ಬಾಣಂತಿಯರ ಸಾವು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಬೆಂಗಳೂರಿನಲ್ಲೇ ಮತ್ತೋರ್ವ ಬಾಣಂತಿ ಸಾವು ವರದಿಯಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಿಳೆ ಸಾವಿಗೆ ಖಾಸಗಿ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಬೆಂಗಳೂರಿನ

ಕರ್ನಾಟಕದಲ್ಲಿ ಮತ್ತೋರ್ವ ಬಾಣಂತಿ ಸಾವು: ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ! Read More »

ಕರ್ನಾಟಕ

ಉಡುಪಿ: ಮಿಲಾಗ್ರಿಸ್ ಹೈಸ್ಕೂಲ್ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 23 : ವಿಜಯ ನಗರ ಜಿಲ್ಲೆಯ ಕೂಡ್ಲುಗಿ ತಾಲೂಕಿನ ಪ್ರಸ್ತುತ ಸಂತೆಕಟ್ಟೆ ಸುಬ್ರಹ್ಮಣ್ಯ ನಗರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಕೆ. ಮಣಿಕಂಠ (15) ಡಿ. 19 ರಂದು ಶಾಲೆಗೆ ಹೋಗಿದ್ದು, ಮರಳಿ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಈತ ಸಂತೆಕಟ್ಟೆ ಮಿಲಾಗ್ರಿಸ್ ಹೈಸ್ಕೂಲ್ನಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದ. 4.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದ. ಕನ್ನಡ ಭಾಷೆ ಬಲ್ಲವನಾಗಿದ್ದಾನೆ.

ಉಡುಪಿ: ಮಿಲಾಗ್ರಿಸ್ ಹೈಸ್ಕೂಲ್ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ
Scroll to Top