News Kadaba

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು

(ನ್ಯೂಸ್ ಕಡಬ) newskadaba.com ಡಿ. 18ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್(30) ಬಂಧಿತ ಆರೋಪಿ.ಆರೋಪಿಯು ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ […]

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು Read More »

ಕರಾವಳಿ

‘ಪ್ರತಿ ಕ್ರೇತ್ರಕ್ಕೆ ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಅನುದಾನ ಸಿಗಲಿದೆ’- ಸಿಎಂ ಭರವಸೆ

(ನ್ಯೂಸ್ ಕಡಬ) newskadaba.com ಡಿ. 18ಬೆಂಗಳೂರು: ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಹಣ ಒಂದೊಂದು ಕ್ಷೇತ್ರಕ್ಕೆ ಸಿಗಲಿದೆ. ಯಾರು ಬೇಸರ ಮಾಡಿಕೊಳ್ಳಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಂದು ಭರವಸೆ ನೀಡಿದ್ದಾರೆ. ನಮ್ಮದೇ ಸರ್ಕಾರ ಇದ್ದರೂ ನಮಗೆ ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೋವು ತೋಡಿಕೊಂಡಿದ್ದರು. ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ಬಗ್ಗೆ ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಿಎಂ ತಿಳಿಸಿದ್ದರು.ಅನುದಾನ ಕೊರತೆ ನೀಗಿಸಲು

‘ಪ್ರತಿ ಕ್ರೇತ್ರಕ್ಕೆ ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಅನುದಾನ ಸಿಗಲಿದೆ’- ಸಿಎಂ ಭರವಸೆ Read More »

ಕರ್ನಾಟಕ

‘ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳ ಪೂರೈಕೆ’- ಆರ್.ಅಶೋಕ್ ಆರೋಪ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳನ್ನು ಪೂರೈಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿಂದು ಆರೋಪ ಮಾಡಿದ್ದಾರೆ. ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಶೌಚಾಲಯಗಳಿಲ್ಲ, ಅಗತ್ಯ ವೈದ್ಯರಿಲ್ಲ. ಅವಧಿ ಮುಗಿದ ಔಷಧ ಸೇವಿಸುವ ಪರಿಸ್ಥಿತಿ ಇದೆ. ನೂರಾರು ಜನರು ಮೃತಪಡುತ್ತಿದ್ದಾರೆ. ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ವಿಚಾರದ ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷ

‘ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳ ಪೂರೈಕೆ’- ಆರ್.ಅಶೋಕ್ ಆರೋಪ Read More »

ಕರ್ನಾಟಕ

ದರ್ಶನ್ ಜಾಮೀನು ವಿಚಾರ: ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಬೆಂಗಳೂರು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ. ಕೋರ್ಟ್ ಗೆ ಹೋಗಲು ತಯಾರಿ ನಡೆದಿದ್ದು ಶೀಘ್ರವೇ ಅರ್ಜಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ. ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪೊಲೀಸರು ಚಾರ್ಜ್ಶೀಟ್ ಪ್ರತಿಗಳನ್ನು

ದರ್ಶನ್ ಜಾಮೀನು ವಿಚಾರ: ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ Read More »

ಕರ್ನಾಟಕ

ರಾಜಸ್ಥಾನದಲ್ಲಿ 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 17 ನವದೆಹಲಿ: ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜಸ್ಥಾನದ ಜೈಪುರದಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳ 24 ಯೋಜನೆಗಳನ್ನು ಉದ್ಘಾಟಿಸಿದರು. ಇಂಧನ, ರಸ್ತೆ, ರೈಲ್ವೇ ಮತ್ತು ಜಲ ಕ್ಷೇತ್ರಗಳಲ್ಲಿ ಹಲವಾರು ಯೋಜನೆಗಳಿಗೆ ಪ್ರಧಾನಮಂತ್ರಿ ಮೋದಿ ಶಂಕುಸ್ಥಾಪನೆ ಮಾಡಿದರು. ಭಜನ್ ಲಾಲ್ ಮತ್ತು ಅವರ ಇಡೀ ತಂಡವು ರಾಜಸ್ಥಾನದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲು ತುಂಬಾ ಶ್ರಮಿಸಿದೆ ಎಂದು ಅವರು ಹೇಳಿದರು.

ರಾಜಸ್ಥಾನದಲ್ಲಿ 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ Read More »

ಕರಾವಳಿ

‘ಒಂದು ದೇಶ, ಒಂದು ಚುನಾವಣೆ’ ಪರ 269 ಮತ, ವಿರುದ್ಧವಾಗಿ 198 ಮತ

(ನ್ಯೂಸ್ ಕಡಬ) newskadaba.com ಡಿ. 17 ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. “ಒಂದು ದೇಶ, ಒಂದು ಚುನಾವಣೆ” ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು

‘ಒಂದು ದೇಶ, ಒಂದು ಚುನಾವಣೆ’ ಪರ 269 ಮತ, ವಿರುದ್ಧವಾಗಿ 198 ಮತ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಹೂಡೆಯಲ್ಲಿ ಗೂಡ್ಸ್ ವಾಹನಕ್ಕೆ ಬೆಂಕಿ; ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಡಿ. 17 ಉಡುಪಿ: ತೆಂಗಿನಕಾಯಿ ಕತ್ತ ಸಾಗಿಸುತ್ತಿದ್ದ ವಾಹನಕ್ಕೆ ತಡರಾತ್ರಿ ಬೆಂಕಿ ತಗುಲಿ ಸುಟ್ಟ ಘಟನೆ ಉಡುಪಿಯ ಹೂಡೆಯಲ್ಲಿ ಸಂಭವಿಸಿದೆ. ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಘಟನೆ ನಡೆದಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಕದಲ್ಲೆ ವಸತಿ, ಹೊಟೇಲ್, ಕೆಫೆಯಿದ್ದು ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ ಸಮಯದಲ್ಲಿ ಅಗ್ನಿ ಶಾಮಕ ದಳದ

ಉಡುಪಿ: ಹೂಡೆಯಲ್ಲಿ ಗೂಡ್ಸ್ ವಾಹನಕ್ಕೆ ಬೆಂಕಿ; ತಪ್ಪಿದ ಅನಾಹುತ Read More »

ಕರಾವಳಿ

ಬಿಳಿನೆಲೆಯ ವ್ಯಕ್ತಿ ರೈಲಿನಿಂದ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 17 ಬಂಟ್ವಾಳ: ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಸಮೀಪದ ನೆತ್ತರಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಬಿಳಿನೆಲೆ ಗೂನಡ್ಕ ನಿವಾಸಿ ಶಶಿಕುಮಾರ್ ಎಸ್. ಎಂದು ಗುರುತಿಸಲಾಗಿದೆ.ರಾತ್ರಿ ಸುಮಾರು 11 ಗಂಟೆಯ ವೇಳೆ ಸುಬ್ರಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಪಂಚಗಂಗಾ ಎಕ್ಸ್ ಪ್ರೆಸ್ ನಿಂದ ಕೆಳಗೆ ಬಿದ್ದು ಈತ ಸಾವನ್ನಪ್ಪಿದ್ದಾರೆ. ಶಶಿಕುಮಾರ್ ಅವರು ರೈಲಿನ ಮೆಟ್ಟಿಲಿನ ಮೇಲೆ ಕುಳಿತು ಪ್ರಯಾಣಿಸುತ್ತಿದ್ದರು. ಇದೇ

ಬಿಳಿನೆಲೆಯ ವ್ಯಕ್ತಿ ರೈಲಿನಿಂದ ಬಿದ್ದು ಮೃತ್ಯು Read More »

ಕರಾವಳಿ

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಡನೆ; ವಿಪಕ್ಷಗಳಿಂದ ಭಾರೀ ವಿರೋಧ

(ನ್ಯೂಸ್ ಕಡಬ) newskadaba.com ಡಿ. 17ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಗಳವಾರ ಮಂಡನೆಯಾಗಿದೆ. ಈ ಪ್ರಸ್ತಾವನೆಯು ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ʼಒಂದು ರಾಷ್ಟ್ರ, ಒಂದು ಚುನಾವಣೆʼ ಮಸೂದೆಯನ್ನು ಮಂಡಿಸಿದರು. ಮಸೂದೆ ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿವೆ. ಈ ಬಗ್ಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಸಂಸದ

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಡನೆ; ವಿಪಕ್ಷಗಳಿಂದ ಭಾರೀ ವಿರೋಧ Read More »

ರಾಷ್ಟ್ರೀಯ ನ್ಯೂಸ್

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಕಾಣೆಯಾಗಿದ್ದಾರೆ. ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ Read More »

ಕರ್ನಾಟಕ
Scroll to Top