News Kadaba

ಶಬರಿಮಲೆ ಅಯ್ಯಪ್ಪನ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಡಿ. 17 ಶಬರಿಮಲೆ : ಶಬರಿಮಲೆಯ ಶ್ರೀ ಅಯ್ಯಪ್ಪನ ದೇವಸ್ಥಾನದಲ್ಲಿ, ಸಾವಿರಾರು ಭಕ್ತರ ಮುಂದೆಯೇ ಕರ್ನಾಟಕದ ಭಕ್ತರೊಬ್ಬರು ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ ಎಂದು ಗುರುತಿಸಲಾಗಿದೆ. ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದ ಮೇಲಿನಿಂದ ಇವರು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯ ವಿಡಿಯೋ ಭಕ್ತರೊಬ್ಬರ ಮೊಬೈಲ್‌ನಲ್ಲಿ ದಾಖಲಾಗಿದ್ದು, ಇದೀಗ ವೈರಲ್‌ ಆಗಿದೆ. ಶಬರಿಮಲೆಯ ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಜಿಗಿದು […]

ಶಬರಿಮಲೆ ಅಯ್ಯಪ್ಪನ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು:  ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,139 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,788 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ ಚಿನ್ನ 57,112

ಇಂದಿನ ಚಿನ್ನದ ದರ Read More »

ಕರ್ನಾಟಕ

ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ರೈತ ಸಂಘಟನೆಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 17 ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದವು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ

ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ರೈತ ಸಂಘಟನೆಗಳಿಂದ ಪ್ರತಿಭಟನೆ Read More »

ಕರ್ನಾಟಕ

ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ, ಭರ್ತಿಗೆ ಶೀಘ್ರದಲ್ಲೇ ಕ್ರಮ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು:  ಆರೋಗ್ಯ ಇಲಾಖೆಯಲ್ಲಿ ಮಂಜೂರಾದ 69,915 ಹುದ್ದೆಗಳ ಪೈಕಿ 32,870 ಹುದ್ದೆಗಳು ಖಾಲಿ ಉಳಿದಿದ್ದು, ಹುದ್ದೆ ಭರ್ತಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎಂ.ಜಿ. ಮೂಳೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸುಮಾರು 4,000 ಗ್ರೂಪ್ ಡಿ ಸಿಬ್ಬಂದಿಯನ್ನು ಹೊರಗುತ್ತಿಗೆ ಮೂಲಕ ನೇಮಿಸಿಕೊಳ್ಳಲಾಗಿದೆ, ಆದರೆ ಸುಮಾರು

ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ, ಭರ್ತಿಗೆ ಶೀಘ್ರದಲ್ಲೇ ಕ್ರಮ: ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು:  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಉಸಿರಾಟದ ತೊಂದರೆ, ಕೆಟ್ಟ ಸಮಸ್ಯೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ನವೆಂಬರ್ 30ರಂದು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ಸಾಲು ಮರದ ತಿಮ್ಮಕ್ಕ ಅವರು ಗ್ಯಾಸ್ಟ್ರೋ ಇಂಟಸ್ಟೈನಲ್ ಸೋಂಕು, ಅತಿಸಾರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಇನ್ಮುಂದೆ ವಸತಿ ಶಾಲಾ- ಕಾಲೇಜುಗಳಿಗೂ ಉಚಿತ ವಿದ್ಯುತ್!

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಸಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಸಂಘದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ 503 ವಸತಿ ಶಾಲೆ ಗಳು, ಪರಿಶಿಷ್ಟ ಪಂಗಡದ 144, ಹಿಂದುಳಿದ ವರ್ಗದ 174 ಸೇರಿ ಒಟ್ಟಾರೆ 821 ವಸತಿ ಶಾಲಾ, ಕಾಲೇಜುಗಳಿವೆ. ಇವುಗಳಿಗೆ ಉಚಿತ ವಿದ್ಯುತ್ ಪೂರೈಸಲು ವಾರ್ಷಿಕ ಅಂದಾಜು 36 ಕೋಟಿ

ಇನ್ಮುಂದೆ ವಸತಿ ಶಾಲಾ- ಕಾಲೇಜುಗಳಿಗೂ ಉಚಿತ ವಿದ್ಯುತ್! Read More »

ಕರ್ನಾಟಕ

ನಿರುಪಯುಕ್ತ ಕೊಳವೆಬಾವಿ ಮುಚ್ಚದಿದ್ದರೆ 10 ಸಾವಿರ ದಂಡದೊಂದಿಗೆ 1 ವರ್ಷ ಜೈಲು ಶಿಕ್ಷೆ; ಬೆಳಗಾವಿ ಅಧಿವೇಶನದಲ್ಲಿ ವಿಧೇಯಯಕ ಅಂಗಿಕಾರ

(ನ್ಯೂಸ್ ಕಡಬ) newskadaba.com ಡಿ. 16: ಸ್ಥಗಿತಗೊಂಡ ಕೊಳವೆಬಾವಿಯನ್ನು  ಮುಚ್ಚದಿದ್ದರೆ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ದುರಂತಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024 ವಿಧೇಯಕವನ್ನು ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಹೊಸ

ನಿರುಪಯುಕ್ತ ಕೊಳವೆಬಾವಿ ಮುಚ್ಚದಿದ್ದರೆ 10 ಸಾವಿರ ದಂಡದೊಂದಿಗೆ 1 ವರ್ಷ ಜೈಲು ಶಿಕ್ಷೆ; ಬೆಳಗಾವಿ ಅಧಿವೇಶನದಲ್ಲಿ ವಿಧೇಯಯಕ ಅಂಗಿಕಾರ Read More »

ಕರ್ನಾಟಕ

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ

(ನ್ಯೂಸ್ ಕಡಬ) newskadaba.com ಡಿ. 16: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ರವರ ಅರ್ಜಿ ವಿಚಾರಣೆಯನ್ನು ಜನವರಿ 22ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿತು. ಈ ವೇಳೆ ಕೌಂಟರ್ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು. ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹಾಗೂ

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ Read More »

ಕರ್ನಾಟಕ

ಮುಂದಿನ 3 ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ; ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 16 ಬೆಳಗಾವಿ:  ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮುಂದಿನ ಮೂರು ದಿನಗಳಲ್ಲಿ ಚರ್ಚಿಸಲು ನಿರ್ಧರಿಸಿದ್ದೇವೆ. ವಿರೋಧ ಪಕ್ಷಗಳು ಯಾವ ವಿಷಯಗಳನ್ನು ಎತ್ತಬಹುದೆಂದು ನಾವು ಊಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಕ್ಫ್ ಸಮಸ್ಯೆಗೆ ಸಂಬಂಧಿಸಿದಂತೆ, “ನಾವು ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ಚರ್ಚೆ ಪೂರ್ಣಗೊಂಡಿಲ್ಲ. ಅವರು ಈ ವಿಷಯವನ್ನು ಪ್ರಸ್ತಾಪಿಸುತ್ತಾರೋ ಅಥವಾ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಗಮನ

ಮುಂದಿನ 3 ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ; ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ

ಎರಡೂವರೆ ತಿಂಗಳುಗಳ ಕಾಲ ಜೋಗ್ ಫಾಲ್ಸ್ ಪ್ರವೇಶ ಬಂದ್..!

(ನ್ಯೂಸ್ ಕಡಬ) newskadaba.com ಡಿ. 16 ಶಿವಮೊಗ್ಗ: ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ  ಪ್ರವಾಸಿಗರ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು

ಎರಡೂವರೆ ತಿಂಗಳುಗಳ ಕಾಲ ಜೋಗ್ ಫಾಲ್ಸ್ ಪ್ರವೇಶ ಬಂದ್..! Read More »

ಕರ್ನಾಟಕ
Scroll to Top