News Kadaba

ವಿಜಯ್ ದಿವಸ್ : ಸೈನಿಕರ ನಿಸ್ವಾರ್ಥ ಸಮರ್ಪಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ

(ನ್ಯೂಸ್ ಕಡಬ) newskadaba.com ಡಿ. 16: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ವಿಜಯ್ ದಿವಸ್ ಸ್ಮರಣಾರ್ಥ ರಾಷ್ಟ್ರದ ನೇತೃತ್ವ ವಹಿಸಿ, 1971 ರ ಯುದ್ಧದ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಅಧ್ಯಕ್ಷ ಮುರ್ಮು, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿನ ತನ್ನ ಪೋಸ್ಟ್‌ನಲ್ಲಿ, ಬ್ರೇವ್‌ಹಾರ್ಟ್‌ಗಳಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ: “ವಿಜಯ್ ದಿವಸ್‌ನಲ್ಲಿ, 1971 ರ ಯುದ್ಧದ ಸಮಯದಲ್ಲಿ ಅದಮ್ಯ ಧೈರ್ಯವನ್ನು ಪ್ರದರ್ಶಿಸಿ, ಭಾರತಕ್ಕೆ ವಿಜಯವನ್ನು ತಂದುಕೊಟ್ಟ ನಮ್ಮ […]

ವಿಜಯ್ ದಿವಸ್ : ಸೈನಿಕರ ನಿಸ್ವಾರ್ಥ ಸಮರ್ಪಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ Read More »

ರಾಷ್ಟ್ರೀಯ ನ್ಯೂಸ್

ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ

(ನ್ಯೂಸ್ ಕಡಬ) newskadaba.com ಡಿ. 14: ರೈತರಿಗೆ ಅಡಮಾನ ರಹಿತವಾಗಿ ನೀಡಲಾಗುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್ ಬ್ಯಾಂ ಕ್ 2 ಲಕ್ಷಕ್ಕೆ ಹೆಚ್ಚಿಸಿದೆ. ಇದು ಬರುವ ಜ. 1ರಿಂದಲೇ ಜಾರಿಗೆ ಬರಲಿದೆ. ಈ ಮೊದಲು ಅಡಮಾನವಿಲ್ಲದೇ 1.6 ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್ಬಿಐನ ಈಹೊಸ ನಿರ್ದೇ ಶನದ ಮೂಲಕ, ರಾಷ್ಟ್ರ ವ್ಯಾಪಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು ಪಡೆಯುವ 2ಲಕ್ಷ ವರೆಗಿನ ಸಾಲಕ್ಕೆ ಅಡಮಾನ ಅಥವಾ ಇತರ ಅಗತ್ಯ ದಾಖಲೆಗಳ ಮಿತಿಯನ್ನು ತೆಗೆದುಹಾಕಲು ಬ್ಯಾಂಕ್‌ಗಳಿಗೆ

ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ Read More »

ರಾಷ್ಟ್ರೀಯ ನ್ಯೂಸ್

‘ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದು, ತನಿಖೆಗೆ ಎಲ್ಲ ರೀತಿಯಲ್ಲೂ ಸಹಕರಿಸುತ್ತೇನೆ’- ನಟ ಅಲ್ಲು ಅರ್ಜುನ್

(ನ್ಯೂಸ್ ಕಡಬ) newskadaba.com ಡಿ. 14: ‘ಪುಷ್ಪ 2’ ಪ್ರೀಮಿಯರ್‌ ಶೋ ವೇಳೆ ಚಿತ್ರಮಂದಿರದ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿ ನಟ ಅಲ್ಲು ಅರ್ಜುನ್‌ ಒಂದೇ ದಿನಕ್ಕೆ ಜೈಲಿನಿಂದ ಹೊರಬಂದಿದ್ದಾರೆ. ಬಳಿಕ  ಪ್ರತಿಕ್ರಿಯಿಸಿದ ಅಲ್ಲು ಅರ್ಜುನ್‌, ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಚಿಂತಿಸುವುದು ಏನೂ ಇಲ್ಲ. ನಾನು ಮತ್ತೊಮ್ಮೆ ಮೃತರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇದು ದುರದೃಷ್ಟಕರ ಘಟನೆಯಾಗಿದೆ ಎಂದರು ಹೇಳಿದರು. ಈ ರೀತಿ ಘಟನೆ ನಡೆದಿದ್ದಕ್ಕಾಗಿ

‘ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದು, ತನಿಖೆಗೆ ಎಲ್ಲ ರೀತಿಯಲ್ಲೂ ಸಹಕರಿಸುತ್ತೇನೆ’- ನಟ ಅಲ್ಲು ಅರ್ಜುನ್ Read More »

ಸಿನಿಮಾ

ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗಟ್ಟಲು 5,000 ಕೋಟಿ ರೂ.ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣಬೈರೇಗೌಡ

(ನ್ಯೂಸ್ ಕಡಬ) newskadaba.com ಡಿ. 14 ಬೆಂಗಳೂರು: ಬೆಂಗಳೂರಿನ ಮಳೆ-ಸಂಬಂಧಿತ ಸವಾಲುಗಳಿಗೆ ಶಾಶ್ವತ ಪರಿಹಾರವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸಮಗ್ರ ವಿಪತ್ತು ಪರಿಹಾರ ಯೋಜನೆಯನ್ನು ಜಾರಿಗೆ ತರಲು ಸಜ್ಜಾಗಿದೆ. ಇದು ಮೂಲಸೌಕರ್ಯಗಳನ್ನು ಹೆಚ್ಚಿಸಲು ಮತ್ತು ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ಉತ್ತಮಗೊಳಿಸಲು 5,000 ಕೋಟಿ ರೂಪಾಯಿಗಳ ಹೂಡಿಕೆ ಒಳಗೊಂಡಿದೆ. ರಾಜ್ಯದಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಇದೇ ರೀತಿಯ ಸಮಸ್ಯೆಗಳನ್ನು ಪರಿಹರಿಸಲು 425 ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ. ಶುಕ್ರವಾರ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮುಂಗಾರು ಮತ್ತು ಖಾರಿಫ್

ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗಟ್ಟಲು 5,000 ಕೋಟಿ ರೂ.ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣಬೈರೇಗೌಡ Read More »

ಕರ್ನಾಟಕ

‘ಡಿ.25, 26 ಕ್ಕೆ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ – ಡಾ.ಎನ್.ಎ. ಜ್ಞಾನೇಶ್

(ನ್ಯೂಸ್ ಕಡಬ) newskadaba.com ಡಿ. 14 ಸುಳ್ಯ: ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಆಧುನಿಕ ಸುಳ್ಯದ ಭವ್ಯ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ, ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆಯು ಡಿ.25 ಮತ್ತು 26 ರಂದು ನಡೆಯಲಿದೆ ಎಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಡಾ.ಎನ್.ಎ. ಜ್ಞಾನೇಶ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆವಿಜಿ ಕಾನೂನು ಮಹಾ ವಿದ್ಯಾಲಯದ ವಠಾರದಲ್ಲಿ ನಡೆಯುವ

‘ಡಿ.25, 26 ಕ್ಕೆ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ – ಡಾ.ಎನ್.ಎ. ಜ್ಞಾನೇಶ್ Read More »

ಕರಾವಳಿ

ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ ವೇತನ ಕಡಿತ ಆರೋಪ; ಬಸ್ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಡಿ. 14: ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ  ವೇತನದಲ್ಲಿ ಅರ್ಧಕ್ಕಿಂತಲೂ ಅಧಿಕಪಟ್ಟು ಕಡಿತ ಮಾಡುತ್ತಿರುವ  ಗುತ್ತಿಗೆ ಸಂಸ್ಥೆಯ  ಕ್ರಮವನ್ನು ವಿರೋಧಿಸಿ  ಹೊರಗುತ್ತಿಗೆ ಚಾಲಕರು ದಿಢೀರ್ ಕೆಲಸ ಸ್ಥಗಿತಗೊಳಿಸಿರುವ ಘಟನೆ ವರದಿಯಾಗಿದೆ. ಹೊರಗುತ್ತಿಗೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 60 ಬಸ್ ಚಾಲಕರ ಪೈಕಿ 40 ಮಂದಿ ಶುಕ್ರವಾರ ರಾತ್ರಿಯಿಂದ ಕೆಲಸ ಸ್ಥಗಿತಗೊಳಿಸಿದ್ದಾರೆ. ಇದರಿಂದ ಪುತ್ತೂರು ಕೆಎಸ್ಸಾರ್ಟಿಸಿ ಡಿಪೋದ ಬಸ್ ಸೇವೆ ಅಸ್ತವ್ಯಸ್ತಗೊಂಡಿದೆ ಎಂದು ತಿಳಿದುಬಂದಿದೆ. ಪುತ್ತೂರು ಕೆಎಸ್ಸಾರ್ಟಿಸಿ ಡಿಪೋದ ಬಸ್ ಗಳಲ್ಲಿ

ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ ವೇತನ ಕಡಿತ ಆರೋಪ; ಬಸ್ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಡಿ. 14 ಣೌಧೇಃಳೀ: ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಯವರ ಆರೋಗ್ಯ ನಿನ್ನೆ ತಡರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜುಲೈ ನಂತರ ಅವರನ್ನು ನಾಲ್ಕನೇ ಬಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್

ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಡಿ. 14 ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು. ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯರಾದ ಧನಂಜಯ ಸಿರ್ಜಿ ಮತ್ತು ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಬೇಡಿಕೆಗಳನ್ನು ಸರ್ಕಾರ ಆಲಿಸಿದ್ದು, ಅವರ ಮನವಿಗಳನ್ನು ಹಣಕಾಸು ಇಲಾಖೆಗೆ ರವಾನಿಸಲಾಗಿದೆ. ಶೀಘ್ರದಲ್ಲೇ

ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 14 ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಕಳೆದ ಮಂಗಳವಾರ 2ಎ ಮೀಸಲಾತಿಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಸಮರ್ಥಿಸಿದ್ದಾರೆ. ಸಿಂದಗಿ ಶಾಸಕ ಅಶೋಕ ಮನಗೂಳಿ ಪುತ್ರಿ ವಿವಾಹದಲ್ಲಿ ಪಾಲ್ಗೊಂಡು ಇಲ್ಲಿ ತಂಗಿದ್ದ ಅವರು ಶುಕ್ರವಾರ ಮಾತನಾಡಿ, ಸುವರ್ಣ ಸೌಧಕ್ಕೆ ನುಗ್ಗಲು ಮುಂದಾದರು. ಕಲ್ಲು ಹೊಡೆದರು. ನನ್ನ ಬಳಿ ಫೋಟೊಗಳಿವೆ.

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ನಿಧನ

(ನ್ಯೂಸ್ ಕಡಬ) newskadaba.com ಡಿ. 14 ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ನಿಧನ Read More »

ಕರಾವಳಿ
Scroll to Top