News Kadaba

ಮತ್ತೆ ಏರಿಕೆ ಕಂಡ ಚಿನ್ನದ ದರ; ಇಂದಿನ ಚಿನ್ನದ ದರ ಎಷ್ಟಿದೆ?

(ನ್ಯೂಸ್ ಕಡಬ) newskadaba.com .ಡಿ. 11. ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 87 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,285ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,947 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 […]

ಮತ್ತೆ ಏರಿಕೆ ಕಂಡ ಚಿನ್ನದ ದರ; ಇಂದಿನ ಚಿನ್ನದ ದರ ಎಷ್ಟಿದೆ? Read More »

ಕರ್ನಾಟಕ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 11.  ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ನಿವಾಸಿ ಕಾರು ಚಾಲಕ ಮಹಮ್ಮದ್ ಕುಂಞಿ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗನನ್ನು ಕಾಸರಗೋಡಿಗೆ ಬಿಟ್ಟು ಬರುತ್ತಿದ್ದಾಗ ಕುಂಟಾರು ಕಳೆದು- ಮೂರೂರು ಸಮೀಪ ತಲುಪುತ್ತಿದ್ದಂತೆ ಕುಂಟಾರಿನ ಲಾರಿಯೊಂದು ಢಿಕ್ಕಿ ಹೊಡೆದಿದೆ. ಅಪಘಾತದ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪರಾಷ್ಟ್ರಪತಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ;ದೇಶದ ಇತಿಹಾಸದಲ್ಲೇ ಮೊದಲು!

(ನ್ಯೂಸ್ ಕಡಬ) newskadaba.com .ಡಿ. 11. ನವದೆಹಲಿ:  ತಮ್ಮ ಬಗ್ಗೆ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿ ಕೂಟವು ರಾಜ್ಯಸಭೆ ಸ್ಪೀಕರ್‌ ಕೂಡ ಆದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯದ ನೋಟಿಸ್‌ ನೀಡಿವೆ. ಈ ಹಿಂದೆ 3 ಬಾರಿ ಲೋಕಸಭೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗಿತ್ತು. ಮೂರೂ ವಿಫಲವಾಗಿದ್ದವು. ಆದರೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಇದೇ ಮೊದಲು.ಕಾಂಗ್ರೆಸ್‌ , ತೃಣಮೂಲ

ಉಪರಾಷ್ಟ್ರಪತಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ;ದೇಶದ ಇತಿಹಾಸದಲ್ಲೇ ಮೊದಲು! Read More »

ರಾಷ್ಟ್ರೀಯ ನ್ಯೂಸ್

ಇಂದು ಎಸ್‌ಎಂಕೆ ಅಂತ್ಯಕ್ರಿಯೆ: ಭದ್ರತೆಗೆ 1,000ಕ್ಕೂ ಅಧಿಕ ಪೊಲೀಸರ ನಿಯೋಜನೆ

(ನ್ಯೂಸ್ ಕಡಬ) newskadaba.com ಡಿ. 11.  ಕರುನಾಡು ಕಂಡ ಅದಮ್ಯ ಚೇತನ, ಮಾಜಿ ಸಿಎಂ ಎಸ್‌.ಎಂ ಕೃಷ್ಣ  ಅವರು ತಮ್ಮ ಬದುಕಿನ ಪಯಣ ಮುಗಿಸಿದ್ದು ಇಂದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಸೋಮನಹಳ್ಳಿಯಲ್ಲಿ ನಡೆಯಲಿದೆ. ಈ ಹಿನ್ನೆಲೆ ಅಂತ್ಯಕ್ರಿಯೆ ಸ್ಥಳದಲ್ಲಿ ಸುಮಾರು 1,000ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಕೃಷ್ಣರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತಿದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆ ಸ್ಥಳದಲ್ಲಿ ಡಿಐಜಿ

ಇಂದು ಎಸ್‌ಎಂಕೆ ಅಂತ್ಯಕ್ರಿಯೆ: ಭದ್ರತೆಗೆ 1,000ಕ್ಕೂ ಅಧಿಕ ಪೊಲೀಸರ ನಿಯೋಜನೆ Read More »

ಕರ್ನಾಟಕ

ಬರ ಪರಿಹಾರ ನಿಧಿ ಸಮಸ್ಯೆ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com . 10. ನವದೆಹಲಿ: ಬರ ನಿರ್ವಹಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (NDRF) ಆರ್ಥಿಕ ನೆರವು ಬಿಡುಗಡೆ ವಿವಾದವನ್ನು ಕೇಂದ್ರ ಹಾಗೂ ಕರ್ನಾಟಕ ಸರ್ಕಾರ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಎನ್ ಡಿಆರ್ ಎಫ್ ನಿಂದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ಇಲ್ಲಿಯವರೆಗೂ ಎಷ್ಟು ಹಣವನ್ನು ಬಿಡುಗಡೆ

ಬರ ಪರಿಹಾರ ನಿಧಿ ಸಮಸ್ಯೆ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಕ್ಷುಬ್ಧ ಸಿರಿಯಾದಿಂದ 75 ಮಂದಿ ಭಾರತೀಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಡಿ. 11. ಅಸ್ಸಾದ್ ಸರ್ಕಾರ ಪತನಗೊಂಡಿದೆ, ಅಧ್ಯಕ್ಷ ಬೇರೆ ದೇಶಕ್ಕೆ ಪಲಾಯನ ಮಾಡಿದ್ದು, ಬಂಡುಕೋರರು ರಾಜಧಾನಿ ಡಮಾಸ್ಕಸ್​ ಸೇರಿದಂತೆ ಬಹುತೇಕ ಎಲ್ಲಾ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತವು 75 ಭಾರತೀಯರನ್ನು ಇದೀಗ ಸುರಕ್ಷಿತವಾಗಿ ಲೆಬನಾನ್​ಗೆ ಸ್ಥಳಾಂತರ ಮಾಡಿದ್ದು, ಶೀಘ್ರವೇ ಭಾರತಕ್ಕೆ ಕರೆತರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಿಂದ ಸ್ಥಳಾಂತರಿಸಲ್ಪಟ್ಟವರಲ್ಲಿ ಜಮ್ಮು ಮತ್ತು ಕಾಶ್ಮೀರದ 44 ಯಾತ್ರಾರ್ಥಿಗಳೂ ಸೇರಿದ್ದಾರೆ. ದಂಗೆಯ ನಂತರದ ಸೂಕ್ಷ್ಮ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರವು ಇನ್ನೂ ಸಿರಿಯಾದಲ್ಲಿ ವಾಸಿಸುವ

ಪ್ರಕ್ಷುಬ್ಧ ಸಿರಿಯಾದಿಂದ 75 ಮಂದಿ ಭಾರತೀಯರ ರಕ್ಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್ ಹೆದ್ದಾರಿಯ ಕರ್ನಾಟಕ ಮಾರ್ಗ ಪ್ರಯಾಣಕ್ಕೆ ಮುಕ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು, . 10. ಬಹುನಿರೀಕ್ಷಿತ ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ವೇ ಕಾಮಾಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದರ ನಡುವೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕರ್ನಾಟಕ ಜನತೆಗೆ ಗುಡ್ ನ್ಯೂಸ್ ನೀಡಿದೆ. 260 ಕಿಲೋಮೀಟರ್ ಉದ್ದದ ಈ ಹೆದ್ದಾರಿ ಪೈಕಿ ಕರ್ನಾಟಕದ 71 ಕಿಲೋಮೀಟರ್ ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಮಾರ್ಗದ ಮೂಲಕ ಚೆನ್ನೈ ಹಾಗೂ ಈ ರಸ್ತೆ ಹಾದು ಹೋಗುವ ಜಿಲ್ಲೆ ಹಾಗೂ ಪಟ್ಟಣಗಳಿಗೆ ತೆರಳುವವರು ಇದೇ ರಸ್ತೆಯನ್ನು ಬಳಸುತ್ತಿದ್ದಾರೆ. 71 ಕಿ.ಮೀ ಪ್ರಯಾಣಕ್ಕೆ ಕೇವಲ 30

ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್ ಹೆದ್ದಾರಿಯ ಕರ್ನಾಟಕ ಮಾರ್ಗ ಪ್ರಯಾಣಕ್ಕೆ ಮುಕ್ತ Read More »

ಕರ್ನಾಟಕ

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಡಿ.11ರಂದು ಸರಕಾರಿ ರಜೆ ಘೋಷಣೆ ಮಾಡಿರುವುದರಿಂದ ಅಂದು ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬದಲಾದ ಪರಿಷ್ಕೃತ ಪರೀಕ್ಷೆ ದಿನಾಂಕಗಳನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.                                                                

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ Read More »

ಕರಾವಳಿ

ಎಸ್.ಎಂ.ಕೃಷ್ಣ ಗೌರವಾರ್ಥ ವಿಧಾನ ಮಂಡಲದ ಅಧಿವೇಶನ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಳಗಾವಿ, . 10. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಒಂದು ದಿನ ಮುಂದೂಡಲಾಗಿದೆ. ರಾಜ್ಯ ಸರಕಾರವು ಬುಧವಾರ ಸರಕಾರಿ ರಜೆ ಘೋಷಿಸಿರುವುದರಿಂದ ಅಂದು ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಕಾರ್ಯಕಲಾಪಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಗುರುವಾರ ಪೂರ್ವಾಹ್ನ 11 ಗಂಟೆಗೆ ಸೇರುವಂತೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ

ಎಸ್.ಎಂ.ಕೃಷ್ಣ ಗೌರವಾರ್ಥ ವಿಧಾನ ಮಂಡಲದ ಅಧಿವೇಶನ ಮುಂದೂಡಿಕೆ Read More »

ಕರ್ನಾಟಕ

ರಸ್ತೆ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಕಾವೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿದೆ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದ್ದು ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ

ರಸ್ತೆ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top