News Kadaba

ವಿದ್ಯುತ್ ತಗುಲಿ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com . 10. ಯುವಕನೊಬ್ಬ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ನಾರಾಯಣಪುರ ಗ್ರಾಮದ ಕಲ್ಲಪ್ಪ ಬಸವರಾಜ ಮೇತ್ರೆ (30) ವಿದ್ಯುತ್ ತಗುಲಿ ಎಂದು ಗುರುತಿಸಲಾಗಿದೆ. ಮನೆಯಲ್ಲಿನ ನೀರಿನ ಮೋಟರ್ ಆನ್ ಮಾಡಲು ತೆರಳಿದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಘಟನೆ ಸಂಭವಿಸಿದೆ. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.                                                                

ವಿದ್ಯುತ್ ತಗುಲಿ ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್

ಕೇರಳದ ನರ್ಸ್‌ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ: ಎಫ್‌ಐಆರ್‌ ದಾಖಲು

(ನ್ಯೂಸ್ ಕಡಬ) newskadaba.com . 10. ಕೇರಳದ ನೂರಾರು ನರ್ಸ್‌ಗಳು ಕುವೈತ್ ನ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಸ್ಥೆಯಿಂದ ಸಾಲವನ್ನು ಪಡೆದು ಮರುಪಾವತಿಯನ್ನು ಡೀಫಾಲ್ಟ್ ಮಾಡುವ ಮೂಲಕ ವಂಚಿಸಿದ್ದಾರೆ ಎಂದು ಕುವೈತ್ ಗಲ್ಫ್ ಬ್ಯಾಂಕ್ ಆರೋಪಿಸಿದೆ. ಬ್ಯಾಂಕ್ ನೀಡಿದ ದೂರುಗಳ ನಂತರ ಕೇರಳದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಬ್ಯಾಂಕ್ ಪ್ರಕಾರ, ಆರೋಪಿಗಳು ಆರಂಭದಲ್ಲಿ ಸಣ್ಣ ಸಾಲಗಳನ್ನು ತೆಗೆದುಕೊಂಡರು, ನಂತರ ದೊಡ್ಡ ಮೊತ್ತವನ್ನು ಪಡೆದರು, ರಜೆಯ ಮೇಲೆ ಕುವೈತ್‌ನಿಂದ ಹೊರಡುವ ಮೊದಲು

ಕೇರಳದ ನರ್ಸ್‌ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ: ಎಫ್‌ಐಆರ್‌ ದಾಖಲು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

UPSC ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com . 10. ಕೇಂದ್ರ ಲೋಕಸೇವಾ ಆಯೋಗವು ಐಎಎಸ್, ಐಪಿಎಸ್, ಐಎಫ್ ಎಸ್ ಸೇರಿದಂತೆ ಇತರ ಕೇಂದ್ರ ಸೇವಾ ಹುದ್ದೆಗಳ ನೇಮಕಾತಿಗಾಗಿ ನಡೆಸಿದ್ದ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ನಾಗರಿಕ ಸೇವಾ ಮುಖ್ಯ ಪರೀಕ್ಷೆಯಲ್ಲಿ ಸುಮಾರು 2,845 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ. ಜೂನ್ 16 ರಂದು ನಡೆದ 2024ರ ನಾಗರಿಕ ಸೇವಾ ಪ್ರಿಲಿಮ್ಸ್ ಪರೀಕ್ಷೆಯಲ್ಲಿ 13.4 ಲಕ್ಷ ಅಭ್ಯರ್ಥಿಗಳಲ್ಲಿ 14,625 ಮಂದಿ ತೇರ್ಗಡೆಯಾಗಿದ್ದರು. ಸೆಪ್ಟೆಂಬರ್ 20 ರಿಂದ 29ರವರೆಗೆ ನಡೆದ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸಲಾಗಿದೆ

UPSC ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಕೊಲೆ ಬೆದರಿಕೆ..!

(ನ್ಯೂಸ್ ಕಡಬ) newskadaba.com . 10. ಹೈದರಾಬಾದ್‌ :ಆಂದ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿಗೆ ಕಿಡಿಗೇಡಿಗಳಿಂದ ಬೆದರಿಕೆ ಕರೆಗಳು ಬಂದಿವೆ ಎಂದು ಹೇಳಲಾಗುತ್ತಿದ್ದು, ಅವರನ್ನು ಕೊಲ್ಲುವುದಾಗಿ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಉಪಮುಖ್ಯಮಂತ್ರಿ ಅವರನ್ನು ಗುರಿಯಾಗಿಸಿಕೊಂಡು ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಹೇಳಲಾಗಿದೆ. ಪವನ್ ಕಲ್ಯಾಣ್ ಅವರ ಕಚೇರಿ ಸಿಬ್ಬಂದಿಗೆ , ಪವನ್‌ ಕಲ್ಯಾಣ್‌ ಅವರನ್ನು ಕೊಲ್ಲುವುದಾಗಿ ಆಕ್ಷೇಪಾರ್ಹ ಭಾಷೆಯಲ್ಲಿ ಆರೋಪಿ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ. ಉಪ ಮುಖ್ಯಮಂತ್ರಿ ಪವನ್

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಕೊಲೆ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್

’ಎಸ್‌ಎಂಕೆ ಐಟಿ ಬಿಟಿ ಕೊಡುಗೆಗೆ ಕರ್ನಾಟಕ ಸದಾ ಋಣಿ’- ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com . 10. ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಕೃಷ್ಣ ಅವರು ಕರ್ನಾಟಕಕ್ಕೆ ನೀಡಿದ ಕೊಡುಗೆಗಳನ್ನು ನೆನಪಿಸಿಕೊಂಡಿದ್ದಾರೆ. ಎಸ್.ಎಂ.ಕೃಷ್ಣ ಅವರ ಸಾವಿನಿಂದ ನಾನು ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ

’ಎಸ್‌ಎಂಕೆ ಐಟಿ ಬಿಟಿ ಕೊಡುಗೆಗೆ ಕರ್ನಾಟಕ ಸದಾ ಋಣಿ’- ಸಿದ್ದರಾಮಯ್ಯ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕುಂದಾಪುರ, . 10. ಚಾಲಕನ ನಿದ್ದೆಗಣ್ಣಿನಿಂದ ನಿಯಂತ್ರಣ ತಪ್ಪಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಂಗಳೂರು ಸಮೀಪ ಇರುವ ಸಹನಾ ಕನ್ವೆನ್ಶನ್ ಸೆಂಟರ್ ಸಮೀಪ ರಸ್ತೆ ಬಿಟ್ಟು ಡಿವೈಡರ್ ಏರಿ ಸರ್ವಿಸ್ ರಸ್ತೆಗೆ ಮಗುಚಿ ಕೊಂಡ ಘಟನೆ ಇಂದು ಬೆಳಿಗ್ಗಿನ ಜಾವ ಸುಮಾರು ಎರಡು ಗಂಟೆಗೆ ನಡೆದಿದೆ. ಘಟನೆಯಲ್ಲಿ ಲಾರಿ ಮಗುಚಿ ಬಿದ್ದಿದ್ದು, ರಸ್ತೆ ಸಂಚಾರ ವಿರಳವಾಗಿದ್ದುದರಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಕುಂದಾಪುರ ಸಂಚಾರಿ ಪೊಲೀಸರು

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಅಪಾಯದಿಂದ ಪಾರು Read More »

ಕರಾವಳಿ

ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

(ನ್ಯೂಸ್ ಕಡಬ) newskadaba.com . 10.ನವದೆಹಲಿ:   ಕರ್ನಾಟಕದ  ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ರವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು  ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಮೋದಿ ಭಾವಪೂರ್ವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಎಸ್.ಎಂ.ಕೃಷ್ಣ ಜೀ ಅವರು ಸಮೃದ್ಧ ಓದುಗ ಮತ್ತು

ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ Read More »

ಕರ್ನಾಟಕ

ಆಭರಣಗಳ ಬೆಲೆ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com . 10. ಬೆಂಗಳೂರು:   ಚಿನ್ನದ ದರದಲ್ಲಿ ಇಂದು ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು  22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 75 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 86 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,205ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,860 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಆಭರಣಗಳ ಬೆಲೆ ಮತ್ತೆ ಏರಿಕೆ Read More »

ಕರ್ನಾಟಕ

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನಕ್ಕೆ ದ. ಕ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ

(ನ್ಯೂಸ್ ಕಡಬ) newskadaba.com ಮಂಗಳೂರು, . 10. ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಎಸ್ಎಂ ಕೃಷ್ಣ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ ಸೂಚಿಸಿದ್ದಾರೆ. ಎಸ್‌.ಎಂ. ಕೃಷ್ಣ ಅವರು ರಾಜಕೀಯವಾಗಿ ನಡೆದು ಬಂದಿದ್ದ ಹಾದಿ, ಅವರ ಆಡಳಿತ ಕಾರ್ಯ ವೈಖರಿಗಳು, ರಾಜಕೀಯ ಅನುಭವ, ದೂರದೃಷ್ಟಿಯ ಚಿಂತನೆಗಳು, ಅವರ ವ್ಯಕ್ತಿತ್ವ-ವರ್ಚಸ್ಸು ನಿಜಕ್ಕೂ ಸ್ಪೂರ್ತಿದಾಯಕ ಹಾಗೂ ಅನುಕರಣೀಯ. ಆ ಮೂಲಕ, ಒಬ್ಬ ಅಪ್ಪಟ ರಾಜಕೀಯ ಮುತ್ಸದ್ದಿಯನ್ನು ಕರುನಾಡು ಹಾಗೂ ದೇಶ ಕಳೆದುಕೊಂಡಿರುವುದು

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನಕ್ಕೆ ದ. ಕ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ Read More »

ಕರಾವಳಿ

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಸಿ.ಎಂ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com . 10. ಬೆಂಗಳೂರು:  ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆಯು ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶವಾದದ್ದು. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಸಿ.ಎಂ ಖಡಕ್ ಎಚ್ಚರಿಕೆ Read More »

ಕರ್ನಾಟಕ
Scroll to Top