News Kadaba

ರೀಲ್ಸ್ ಹುಚ್ಚಿಗೆ ಪ್ರಾಣ ಬಿಟ್ಟ ಮೂವರು ಸಹೋದರರು

(ನ್ಯೂಸ್‌ ಕಡಬ) newskadaba.com,  ಎ.20: ಸಾಮಾಜಿಕ ಮಾಧ್ಯಮಕ್ಕಾಗಿ ರೀಲ್ಸ್‌ ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ದುರಂತ ಘಟನೆಗಳು ನರೆಯುತ್ತಲೇ ಇರುತ್ತವೆ. ಆದರೂ ಯುವಜನತೆ ಮಾತ್ರ ಇದರಿಂದ ಎಚ್ಚೆತ್ತಂತೆ ಕಾಣುತ್ತಿಲ್ಲ. ಇದೀಗ ಮಧ್ಯಪ್ರದೇಶದಲ್ಲೊಂದು (Madhya Pradesh) ಇಂಥದ್ದೆ ದುರ್ಘಟನೆ ನಡೆದಿದೆ. ರೀಲ್ಸ್ ಮಾಡಲು ಹೋಗಿ ಮೂವರು ಸಹೋದರರು ದುರ್ಮರಣಕ್ಕೀಡಾಗಿದ್ದಾರೆ. ಹೆದ್ದಾರಿಯಲ್ಲಿ ವೇಗವಾಗಿ ಬಂದ ಬೈಕ್ ಟ್ರಕ್ ಗೆ ಡಿಕ್ಕಿ ಹೊಡೆದ (accident) ಪರಿಣಾಮ ಸೋದರರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ. ಏಪ್ರಿಲ್ 14 ರಂದು ಈ ಘಟನೆ […]

ರೀಲ್ಸ್ ಹುಚ್ಚಿಗೆ ಪ್ರಾಣ ಬಿಟ್ಟ ಮೂವರು ಸಹೋದರರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಎ.20: ಕರ್ನಾಟಕ ಕೃಷಿ ಇಲಾಖೆ (KSDA) ಮತ್ತು KEA ಮೂಲಕ 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೃಷಿ ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಉತ್ತಮ ವೇತನ ಶ್ರೇಣಿ ಹೊಂದಿರುವ ಈ ಹುದ್ದೆಗಳಿಗೆ ಮೇ 10ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ

ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಗೂಡ್ಸ್ ವಾಹನಕ್ಕಿ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ; ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.20: ರಾಂಗ್ ಸೈಡ್‌ನಿಂದ ಬಂದ ಸ್ಕೂಟಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದು, ಸವಾರ ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎರ್ಮಾಳು ನಾರಾಳ್ತಾಯ ಗುಡಿ ಬಳಿ ಭಾನುವಾರ ಸಂಜೆ ಸಂಭವಿಸಿದೆ…ಮೃತರನ್ನು ಅದಮಾರು ಸಮೀಪದ ವಕೀಲರ ತೋಟದ ನಿವಾಸಿ ಗುರುರಾಜ ರಾವ್ (೬೩) ಎಂದು ಗುರುತಿಸಲಾಗಿದೆ. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ಮೂಲದ ಗೂಡ್ಸ್ ವಾಹನ ಚಾಲಕ ವಿಜಯ್ ಕಾಮತ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ: ಗೂಡ್ಸ್ ವಾಹನಕ್ಕಿ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ; ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ

(ನ್ಯೂಸ್‌ ಕಡಬ) newskadaba.com,  ಎ.20: ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿ ಸಲೀಂ  ಅವರಿಗೆ ಎಸ್ಪಿ ಕಾಶಿ ಅವರು ದೂರು ನೀಡಿದ್ದಾರೆ…ಮಾನಸಿಕ ಕಿರುಕುಳ, ದರ್ಪ ಮತ್ತು ತಾರತಮ್ಯ ವಿರುದ್ಧ ನಿಂತ ಎಸ್ಪಿ ಕಾಶಿ ಅವರು ಡಿಜಿಪಿಗೆ ಪತ್ರ ಬರೆದಿದ್ದಾರೆ. 30 ನಿಮಿಷ ಟೈಮ್ ಕೊಡಿ, ಮಂಗಳೂರು ಕಮಿಷನರ್ ಕರ್ಮಕಾಂಡ ಬಯಲು ಮಾಡುತ್ತೇನೆ. ಅಧಿಕಾರಿಗೆ ಬ್ಯಾಕ್ ಟು ಬ್ಯಾಕ್ ಮೆಮೊ ಕೊಟ್ಟು, ನಾವು ಹೇಳಿದಂತೆ ಕೆಲಸ ಮಾಡಬೇಕು ಇಲ್ಲವಾದರೆ ಮಾನಸಿಕ ಹಿಂಸೆ ಕೊಡ್ತಾರೆ. ಕನ್ನಡಿಗ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ, ಟಾರ್ಚರ್

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಂಪೇಗೌಡ ಟೌನ್‌ ಪ್ಲಾನಿಂಗ್‌ ನಿರ್ಮಾಣಕ್ಕೆ 50 ಕೋಟಿ: ರಾಜ್ಯ ಸರ್ಕಾರ ಸೂಚನೆ

(ನ್ಯೂಸ್‌ ಕಡಬ) newskadaba.com,  ಎ.20:  ಕೆಂಪೇಗೌಡ ಇನ್ಸ್‌ಟಿಟ್ಯೂಟ್ ಆಫ್ ಟೌನ್ ಪ್ಲಾನಿಂಗ್‌ ನಿರ್ಮಾಣಕ್ಕೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳು 2026-27ನೇ ಸಾಲಿನಲ್ಲಿ ತಲಾ 10 ಕೋಟಿ ರು.ನಂತೆ 50 ಕೋಟಿ ರು. ಮೀಸಲಿಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಪಾಲಿಕೆಗಳ ಆಯುಕ್ತರು ಇತ್ತೀಚೆಗೆ ಮಂಡಿಸಿದ 2026-27ನೇ ಸಾಲಿನ ಬಜೆಟ್‌ಗೆ ಅನುಮೋದನೆ ಕೋರಿ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಕೆಲವೊಂದು ಮಾರ್ಪಾಡುಗಳನ್ನು ಮಾಡಿ ರಾಜ್ಯ ಸರ್ಕಾರ ಆದೇಶ

ಕೆಂಪೇಗೌಡ ಟೌನ್‌ ಪ್ಲಾನಿಂಗ್‌ ನಿರ್ಮಾಣಕ್ಕೆ 50 ಕೋಟಿ: ರಾಜ್ಯ ಸರ್ಕಾರ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ಷಯ ತೃತೀಯ ಮರುದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

(ನ್ಯೂಸ್‌ ಕಡಬ) newskadaba.com,  ಎ.20: ಭಾರತದಲ್ಲಿ ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿ ಮಾಡಬೇಕೆಂದು ಜನರು ಕಾಯುತ್ತಿರುತ್ತಾರೆ. ಈ ವಿಶೇಷ ದಿನದಂದು ಬೆಲೆ ಎಷ್ಟೇ ಆಗಿದ್ರೂ ಜನರು ಕನಿಷ್ಠ 1 ಗ್ರಾಂನಷ್ಟು ಚಿನ್ನವನ್ನು ಖರೀದಿ ಮಾಡುತ್ತಿದ್ದಾರೆ. ಅಕ್ಷಯ ತೃತೀಯ ಮರುದಿನವಾದ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಇಂದು 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 4,900 ರೂ.ಗಳಷ್ಟು ಕಡಿಮೆಯಾಗಿದೆ. ಚಿನ್ನದ ಬೆಲೆಗಳು ನಗರದಿಂದ ನಗರಕ್ಕೆ ಭಿನ್ನವಾಗಿರುತ್ತವೆ. ಹಾಗೆಯೇ 18, 22 ಮತ್ತು

ಅಕ್ಷಯ ತೃತೀಯ ಮರುದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.20: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.. ಪ್ರಭಾಕರ್ (45), ಪ್ರತೀಕ್ (12) ಮೃತ ದುರ್ದೈವಿಗಳು. ಪ್ರತೀಕ್ ಮೂಲತಃ ದುದ್ದ ಹೋಬಳಿ, ಸೋಮನಹಳ್ಳಿ ಗ್ರಾಮದವನು. ಬೇಸಿಗೆ ರಜೆ ಹಿನ್ನಲೆ ಮಾವ ಪ್ರಭಾಕರ್ ಮನೆಗೆ ಬಂದಿದ್ದ. ಮಾವ-ಅಳಿಯ ಇಬ್ಬರೂ ಕೆರೆಯ ಏರಿ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಾಲು ಜಾರಿ ಪ್ರತೀಕ್ ಕೆರೆಗೆ ಬಿದ್ದಿದ್ದಾನೆ. ಪ್ರತೀಕ್‌ನನ್ನು ರಕ್ಷಿಸಿಲು ಮಾವ ಪ್ರಭಾಕರ್ ಕೂಡ ಕೆರೆಗೆ

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೋವಾ ಸುಂದರಿ ಸಾದ್ವಿ ಸೈಲ್‌ಗೆ ‘ಮಿಸ್ ಇಂಡಿಯಾ ವರ್ಲ್ಡ್ 2026’ ಕಿರೀಟ

(ನ್ಯೂಸ್‌ ಕಡಬ) newskadaba.com,  ಎ.20: ಗೋವಾ: ದೇಶದ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯಲ್ಲಿ ಗೋವಾ ಮೂಲದ ಪ್ರತಿಭೆ ಸಾದ್ವಿ ಸೈಲ್ ಅವರು ‘ಮಿಸ್ ಇಂಡಿಯಾ ವರ್ಲ್ಡ್ 2026’ ಪಟ್ಟವನ್ನು ಮುಡಿಗೇರಿಸಿಕೊಳ್ಳುವ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಸೌಂದರ್ಯ ಮತ್ತು ಬುದ್ಧಿವಂತಿಕೆಯ ಅಪರೂಪದ ಸಂಗಮವಾಗಿರುವ ಸಾದ್ವಿ, ಈ ಮೂಲಕ ಅಂತರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅರ್ಹತೆ ಪಡೆದಿದ್ದಾರೆ. ಸಾಧನೆಯ ಹಾದಿ: ಸೌಂದರ್ಯದ ಜೊತೆಗೆ ಉದ್ಯಮಶೀಲತೆ ಮಾಡೆಲಿಂಗ್ ಕ್ಷೇತ್ರದಲ್ಲಿ ಮೊದಲೇ ಗುರುತಿಸಿಕೊಂಡಿದ್ದ ಸಾದ್ವಿ, ಕೇವಲ ಸೌಂದರ್ಯ ಸ್ಪರ್ಧೆಗಳಿಗೆ ಸೀಮಿತವಾಗದೆ ಯಶಸ್ವಿ ಉದ್ಯಮಿಯಾಗಿಯೂ

ಗೋವಾ ಸುಂದರಿ ಸಾದ್ವಿ ಸೈಲ್‌ಗೆ ‘ಮಿಸ್ ಇಂಡಿಯಾ ವರ್ಲ್ಡ್ 2026’ ಕಿರೀಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಪೊಸ್ತೊಲಿಕ್ ನುನ್ಸಿಯೋಗೆ ಆತ್ಮೀಯ ಸ್ವಾಗತ

(ನ್ಯೂಸ್‌ ಕಡಬ) newskadaba.com,  ಎ.20:  ಮಂಗಳೂರು: ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಭವ್ಯ ಸ್ವಾಗತ ಕೋರಲಾಯಿತು. ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭದಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಮಂಗಳೂರಿಗೆ ಆಗಮಿಸಿದ್ದರು. ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಕುಲಪತಿ ವಂ| ಸ್ಟೀಫನ್ ಡಿಸೋಜಾ ಅವರು ಡಾ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಪೊಸ್ತೊಲಿಕ್ ನುನ್ಸಿಯೋಗೆ ಆತ್ಮೀಯ ಸ್ವಾಗತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಜಾತ್ರೆಯ ಸಿಡಿಮದ್ದು ಪ್ರದರ್ಶನದ ವೇಳೆ ಕಿಡಿ ತಾಗಿ ಏಳು ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಎ.20:  ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ನಡೆದ ವೈಭವದ ಸಿಡಿಮದ್ದು ಪ್ರದರ್ಶನದ ವೇಳೆ ಭಕ್ತರಿಗೆ ಕಿಡಿ ತಾಗಿದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಕುಂದಾಪುರ ಮೂಲದ ಸುಮಂತ್ ಶೆಟ್ಟಿ, ಭರತ್, ಕೌಶಿಕ್, ಸೌಮ್ಯ, ದೀಪಕ್, ಯಶ್ವಂತ್, ಮೋಹನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸ್ನೇಹಿತರಾಗಿದ್ದು, ಎಲ್ಲರೂ ಪುತ್ತೂರು ಜಾತ್ರೆಗೆ ಆಗಮಿಸಿದ್ದರು ಎನ್ನಲಾಗಿದೆ. ಪ್ರಸ್ತುತ ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು

ಪುತ್ತೂರು: ಜಾತ್ರೆಯ ಸಿಡಿಮದ್ದು ಪ್ರದರ್ಶನದ ವೇಳೆ ಕಿಡಿ ತಾಗಿ ಏಳು ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top