News Kadaba

ಬೆಂಗಳೂರು: ಆನ್ಲೈನ್ ಜೂಜಾಟದ ಹುಚ್ಚು- ಸಾಲ ತೀರಿಸಲು ಸಾಧ್ಯವಾಗದೆ ವಿದ್ಯಾರ್ಥಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಆನ್‌ಲೈನ್ ಜೂಜಾಟಕ್ಕೆ ವ್ಯಸನಿಯಾಗಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿ ಸಾಲ ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರಂ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ 2ನೇ ವರ್ಷದ ವಿದ್ಯಾರ್ಥಿಯಾಗಿದ್ದ ಪ್ರವೀಣ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ನವೆಂಬರ್ 23 ರಂದು ಕೆಆರ್ ಪುರಂನಲ್ಲಿರುವ ಪ್ರವೀಣ್ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಹಣವನ್ನು ಹಿಂದಿರುಗಿಸುವಂತೆ ಸ್ನೇಹಿತರು ಒತ್ತಡ ಹೇರಿದ್ದಹಿನ್ನೆಲೆಯಲ್ಲಿ ಪ್ರವೀಣ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ಡಿಸೆಂಬರ್ […]

ಬೆಂಗಳೂರು: ಆನ್ಲೈನ್ ಜೂಜಾಟದ ಹುಚ್ಚು- ಸಾಲ ತೀರಿಸಲು ಸಾಧ್ಯವಾಗದೆ ವಿದ್ಯಾರ್ಥಿ ಆತ್ಮಹತ್ಯೆ! Read More »

ಕರ್ನಾಟಕ

ಸುಬ್ರಹ್ಮಣ್ಯ:  ಅಂಗಡಿ ಮೇಲೆ ಅಧಿಕಾರಿಗಳ ದಾಳಿ- ತಂಬಾಕು ಉತ್ಪನ್ನಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, . 05. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಪಾನ್ ಪರಾಗ್, ಮಧು, ಮಾರುತಿ, ಕೂಲ್ ಲಿಪ್ ಬೇರೆ ಬೇರೆ ರೀತಿಯ ತಂಬಾಕು ಉತ್ಪನ್ನಗಳನ್ನು ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ, ಆರೋಗ್ಯ

ಸುಬ್ರಹ್ಮಣ್ಯ:  ಅಂಗಡಿ ಮೇಲೆ ಅಧಿಕಾರಿಗಳ ದಾಳಿ- ತಂಬಾಕು ಉತ್ಪನ್ನಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ವಕ್ಫ್ ನೀತಿ ವಿರುದ್ಧ ರಾಜ್ಯವ್ಯಾಪಿ ಹೋರಾಟಕ್ಕೆ ಬೀದರ್ ನಲ್ಲಿ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 04 ಬೀದರ್: ಮೈಸೂರು ‘ಮುಡಾ’ ಹಗರಣದ ವಿಷಯ ಸದನದಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. ಮುಖ್ಯಮಂತ್ರಿಯವರು ಹಗರಣ ಆಗಿಲ್ಲ; ಅಕ್ರಮ ನಡೆದಿಲ್ಲ ಎಂದಿದ್ದರು. ನಮ್ಮ ಪಾದಯಾತ್ರೆ ಬಳಿಕ ಸಿಎಂ ಸ್ಥಾನಕ್ಕೆ ಕುತ್ತು ಬರುವ ಭಯದಿಂದ 14 ನಿವೇಶನ ವಾಪಸ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಬೀದರ್‍ನಲ್ಲಿ ಇಂದು ವಕ್ಫ್ ಸಂಬಂಧಿತ ಹೋರಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮುಡಾದಲ್ಲಿನ ತಮ್ಮ ಪತ್ನಿಯ 14 ನಿವೇಶನ ವಾಪಸ್ ಕೊಡಲು

‘ವಕ್ಫ್ ನೀತಿ ವಿರುದ್ಧ ರಾಜ್ಯವ್ಯಾಪಿ ಹೋರಾಟಕ್ಕೆ ಬೀದರ್ ನಲ್ಲಿ ಚಾಲನೆ Read More »

ಕರ್ನಾಟಕ

ಎಸ್ಟಿಎಫ್ ಡೈರೆಕ್ಟರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, . 04. ಸಚಿನ್ ತೆಂಡೂಲ್ಕರ್ ಫೌಂಡೇಷನ್ (ಎಸ್ಟಿಎಫ್) ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಲಾಗಿದೆ ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಘೋಷಣೆ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಸಂತೋಷವನ್ನು ಹಂಚಿಕೊಂಡ ಸಚಿನ್ ತೆಂಡೂಲ್ಕರ್ , ಸಾರಾ ಅವರು ಯೂನಿವರ್ಸಿಟಿ ಕಾಲೇಜು ಲಂಡನ್ನಿಂದ ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕ್ರೀಡೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಮೂಲಕ

ಎಸ್ಟಿಎಫ್ ಡೈರೆಕ್ಟರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ನೇಮಕ Read More »

ಕ್ರೀಡಾ ನ್ಯೂಸ್

ಮಾದಕ ವಸ್ತು ಸಾಗಾಟ: ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, . 04. ಸುಮಾರು 30.22 ಗ್ರಾಂ ಎಂ ಡಿ ಎಂ ಎ ಮಾದಕ ವಸ್ತು ಸಹಿತ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಳಿಯಾರು ಮಾಸ್ತಿಕುಂಡುವಿನ ಅಬ್ದುಲ್ ಶೇಖ್ (44) ಎಂದು ಗುರುತಿಸಲಾಗಿದೆ. ಕೂಡ್ಲು ರಾಮದಾಸ ನಗರ ಉಳಿಯತ್ತಡ್ಕ ಪಾರೆಕಟ್ಟೆ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಸ್ಕೂಟರ್‌ನ್ನು ತಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಈತನ ಬಳಿ ಇದ್ದ 13,300 ರೂ.ವನ್ನು ವಶಪಡಿಸಿ ಕೊಳ್ಳಲಾಗಿದೆ.

ಮಾದಕ ವಸ್ತು ಸಾಗಾಟ: ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಬಂಟ್ವಾಳ : ನದಿಯಂಚಿನ ತಡೆಗೋಡೆ ದುರಸ್ತಿಗೊಳಿಸಲು ಗ್ರಾಮಸ್ಥರ ಆಗ್ರಹ

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ತಾಲೂಕು ಕೇಂದ್ರದಿಂದ ಸರಪಾಡಿ, ಅಜಿಲಮೊಗರು ಭಾಗವನ್ನು ಸಂಪರ್ಕಿಸುವ ಅತಿ ಸಮೀಪದ ರಸ್ತೆಯಾಗಿರುವ ಪೂಪಾಡಿಕಟ್ಟೆ-ಪೆರ್ಲ-ಬೀಯಪಾದೆ ರಸ್ತೆಯು ನೇತ್ರಾವತಿ ಕಿನಾರೆಯಲ್ಲೇ ಸಾಗುತ್ತಿದ್ದು, ಪೆರ್ಲ ಭಾಗದಲ್ಲಿ ಪೂರ್ತಿ ನೀರು ನಿಂತಿರುವ ನದಿಯಂಚಿನಲ್ಲೇ ಸಾಗುತ್ತಿದೆ. ಪ್ರಸ್ತುತ ಇಲ್ಲಿ ನಿರ್ಮಿಸಿರುವ ತಡೆಗೋಡೆಯ ಕುರಿತು ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದು, ಅದರ ನಿರ್ವಹಣೆಯ ಭಾಗವಾಗಿ ತಡೆಗೋಡೆಯನ್ನು ದುರಸ್ತಿಗೊಳಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಶಂಭೂರು ಎಎಂಆರ್ ಅಣೆಕಟ್ಟಿನಲ್ಲಿ ನೀರು ನಿಲ್ಲಿಸಿರುವ ಪರಿಣಾಮ ಸರಪಾಡಿ ಭಾಗದಲ್ಲಿ ವರ್ಷಪೂರ್ತಿ ಅದರ ಹಿನ್ನೀರಿ ನದಿಯಲ್ಲಿ

ಬಂಟ್ವಾಳ : ನದಿಯಂಚಿನ ತಡೆಗೋಡೆ ದುರಸ್ತಿಗೊಳಿಸಲು ಗ್ರಾಮಸ್ಥರ ಆಗ್ರಹ Read More »

ಕರಾವಳಿ

ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಅಭಿಯಾನಕ್ಕೆ ನಟ ಉಪೇಂದ್ರ ಚಾಲನೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, . 04. ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಿತ್ರನಟ ಉಪೇಂದ್ರ ಅವರು ನಗರದ ಬಿವಿಬಿ ಕಾಲೇಜಿನಲ್ಲಿ ಚಾಲನೆ ನೀಡಿದರು. ಇಲ್ಲಿನ ಬಿವಿಬಿ ಕಾಲೇಜಿನಿಂದ ತೋಳನಕೆರೆವರೆಗೆ ವಾಕಥಾನ್ ಮೂಲಕ ತೆರಳಿದ ಉಪೇಂದ್ರ ಅವರು ಹುಧಾ ಅವಳಿ ನಗರದ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಸಹಭಾಗಿತ್ವದಲ್ಲಿ ಅಪರಾಧ ತಡೆ, ಸಂಚಾರ ನಿಯಮ ಮತ್ತು ಮಾದಕ ವಸ್ತು ಬಳಕೆ ವಿರುದ್ಧ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸುವ ಮೂಲಕ ಅಭಿಯಾನ ನಡೆಸಿದರು. ಜಾಗೃತಿ

ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಅಭಿಯಾನಕ್ಕೆ ನಟ ಉಪೇಂದ್ರ ಚಾಲನೆ Read More »

ಕರ್ನಾಟಕ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 04. ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರ ಹೆಸರನ್ನು ಅನುಮೋದಿಸಲಾಗಿತ್ತು. ಇದೀಗ ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ಮಹಾರಾಷ್ಟ್ರದ ಸಿಎಂ ಆಗಲಿದ್ದಾರೆ. ಈ ಮೂಲಕ ಅವರು ಸಂಪೂರ್ಣ ಸ್ಥಾನಮಾನ ಮತ್ತು ಪ್ರಭಾವದೊಂದಿಗೆ ಮಹಾರಾಷ್ಟ್ರ ರಾಜಕೀಯಕ್ಕೆ ಮರಳಿದ್ದಾರೆ.   

ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆ Read More »

ಕರ್ನಾಟಕ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 04. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ, ತಪಾಸಣೆ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಭಾರೀ ಮಳೆಗೆ ಮನೆಯ ಛಾವಣಿ ಕುಸಿತ

(ನ್ಯೂಸ್ ಕಡಬ) newskadaba.com ಡಿ. 04 ಕಾಸರಗೋಡು: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಸುರಿದ ಭಾರೀ ಕಾಸರಗೋಡು ಅಡ್ಕತಬೈಲ್ ನಲ್ಲಿ ಮನೆಯೊಂದರ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಅಡ್ಕತಬೈಲ್ ನಿವಾಸಿ ಕಿಶೋರ್ ಕುಮಾರ್ ಎಂಬವರ ಹೆಂಚಿನ ಮನೆಯ ಛಾವಣಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಏಕಾಏಕಿ ಕುಸಿದಿದೆ. ಈ ವೇಳೆ ಮನೆಯೊಳಗಿದ್ದ ಕಿಶೋರ್ ಕುಮಾರ್ ಮತ್ತು ಅವರ ಪತ್ನಿ ಶಶಿಕಲಾ ಹೊರಗಡೆ ಓಡಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಛಾವಣಿ ಕುಸಿತದಿಂದ ಮನೆ ಹಾನಿಯಾಗಿದ್ದು, ಭಾರೀ ನಷ್ಟ

ಕಾಸರಗೋಡು: ಭಾರೀ ಮಳೆಗೆ ಮನೆಯ ಛಾವಣಿ ಕುಸಿತ Read More »

ಕರಾವಳಿ
Scroll to Top