News Kadaba

ಭಾರತಕ್ಕೆ ಎಲ್ಇಟಿ ಉಗ್ರನನ್ನು ಹಸ್ತಾಂತರಿಸಿದ ರುವಾಂಡಾ

(ನ್ಯೂಸ್ ಕಡಬ) newskadaba.com ನ. 29. ಭಯೋತ್ಪಾದಕ ಕೃತ್ಯ ಎಸಗಲು  ಜೈಲಿನಲ್ಲೇ ಸಂಚು ರೂಪಿಸಿದ್ದ, ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ನಂಟು ಹೊಂದಿದ್ದ ಸಲ್ಮಾನ್ ರೆಹಮಾನ್ ಖಾನ್ ಎಂಬಾತನನ್ನು ರುವಾಂಡಾ ದೇಶ ಭಾರತಕ್ಕೆ ಹಸ್ತಾಂತರಿಸಿದ್ದು, ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎನ್ಐಎ, ಬೆಂಗಳೂರು ಕಾರಾಗೃಹದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು ಮತ್ತು ಇದಕ್ಕಾಗಿ ಯುವಕರ ನೇಮಕಾತಿ ನಡೆಸಿದ್ದ ಸಲಾನ್ನನ್ನು ಎನ್ಐಎಆರ್ಐಬಿ, ಇಂಟರ್ಪೋಲ್ ಮತ್ತು ಎನ್ಸಿಬಿ ಸಹಾಯದಿಂದ ವಶಕ್ಕೆ ಪಡೆಯಲಾಗಿದ್ದು, ಆತನನ್ನು ಭಾರತಕ್ಕೆ […]

ಭಾರತಕ್ಕೆ ಎಲ್ಇಟಿ ಉಗ್ರನನ್ನು ಹಸ್ತಾಂತರಿಸಿದ ರುವಾಂಡಾ Read More »

ರಾಷ್ಟ್ರೀಯ ನ್ಯೂಸ್

ಜಮಾ ಮಸೀದಿಯ ಸಮೀಕ್ಷಾ ವರದಿ 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಕೋರ್ಟ್ ಆದೇಶ- ವಿಚಾರಣೆ ಜನವರಿ 8ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನ. 29. ಉತ್ತರ ಪ್ರದೇಶದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸಂಭಾಲ್ ನ ಜಾಮಾ ಮಸೀದಿ ಆವರಣದಲ್ಲಿನ ಸಮೀಕ್ಷಾ ವರದಿಯನ್ನು ಇನ್ನು 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಉತ್ತರ ಪ್ರದೇಶ ಕೋರ್ಟ್ ಆದೇಶ ಶುಕ್ರವಾರ ಆದೇಶ ನೀಡಿದ್ದು, ಮುಂದಿನ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿಕೆ ಮಾಡಿದೆ. ಸಂಭಾಲ್ ನ ಜಾಮಾ ಮಸೀದಿಯನ್ನು ದೇವಸ್ಥಾನದ ಮೇಲೆ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆಗೆ ಉತ್ತರ ಪ್ರದೇಶ ಕೋರ್ಟ್ ಇಲ್ಲಿ ಸಮೀಕ್ಷೆಗೆ ಆದೇಶ ಸೂಚಿಸಿತ್ತು. ಇದಕ್ಕಾಗಿ ಸಮೀಕ್ಷಾ ತಂಡವನ್ನೂ

ಜಮಾ ಮಸೀದಿಯ ಸಮೀಕ್ಷಾ ವರದಿ 10 ದಿನಗಳಲ್ಲಿ ಸಲ್ಲಿಕೆ ಮಾಡುವಂತೆ ಕೋರ್ಟ್ ಆದೇಶ- ವಿಚಾರಣೆ ಜನವರಿ 8ಕ್ಕೆ ಮುಂದೂಡಿಕೆ Read More »

ರಾಷ್ಟ್ರೀಯ ನ್ಯೂಸ್

KSRTC ಸಂಸ್ಥೆಯು 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯ

(ನ್ಯೂಸ್ ಕಡಬ) newskadaba.com ನ. 29. ರಾಜ್ಯದಲ್ಲಿ ವಿವಿಧ ಜಿಲ್ಲೆ ಹಾಗೂ ಪ್ರದೇಶಗಳಿಂದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಹಲವು ವಿಭಾಗಗಳಲ್ಲಿ ನೌಕರಿಗೆ ಸೇರಿದ ಸಾರಿಗೆ ನಿಗಮದ ಸಿಬ್ಬಂದಿ ವಾಪಸ್ ತಮ್ಮ ಊರಿನತ್ತ ಹೋಗಲಾಗದೇ ಪರದಾಡುತ್ತಿದ್ದರು. ಇಂಥವರಿಗೆ ಮೊದಲ ಬಾರಿಗೆ ಅವಕಾಶ ಮಾಡಿಕೊಟ್ಟ ಕೆಎಸ್‌ಆರ್‌ಟಿಸಿ ಸಂಸ್ಥೆಯು ಈವರೆಗೆ 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯವನ್ನು ಒದಗಿಸಿದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ

KSRTC ಸಂಸ್ಥೆಯು 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯ Read More »

ಕರ್ನಾಟಕ

ಬಾಣಂತಿಯರ ಸರಣಿ ಸಾವು; ಗ್ಲೂಕೋಸ್ ಸಹಿತ ಇಂಟ್ರಾವಿನೀಸ್ ದ್ರಾವಣವೇ ಕಾರಣ-ವರದಿ ಬಹಿರಂಗ

(ನ್ಯೂಸ್ ಕಡಬ) newskadaba.com ನ. 29. ಬಳ್ಳಾರಿ:  ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಮಹತ್ವದ  ತಿರುವು ಸಿಕ್ಕಿದ್ದು,  ಇಡೀ ಅನಾಹುತಕ್ಕೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್ ದ್ರಾವಣ ಕಾರಣ ಅನ್ನೋ ವರದಿ ಬಹಿರಂಗವಾಗಿದೆ. ಬಾಣಂತಿಯರ ಸರಣಿ ಸಾವಿನ ಕುರಿತು ತನಿಖೆ ನಡೆಸಲು ನೇಮಕವಾಗಿದ್ದ ತಂಡ ವರದಿಯೊಂದನ್ನು ನೀಡಿದ್ದು, ಹೆರಿಗೆಯಾಗುವ ಗರ್ಭಿಣಿಯರಿಗೆ ಶಸ್ತ್ರ ಚಿಕಿತ್ಸೆ ವೇಳೆ ನೀಡಿದ ದ್ರಾವಣ ಕಳಪೆಯಾಗಿತ್ತು ಎಂಬ ವರದಿ ನೀಡಿದೆ ಎಂದು ತಿಳಿದು ಬಂದಿದೆ. ದ್ರಾವಣದ ಬಗ್ಗೆ ದೂರು ಬಂದಿರುವುದರಿಂದ ಇಂಟ್ರಾವೀನಸ್ ದ್ರಾವಣ ಬಳಕೆ

ಬಾಣಂತಿಯರ ಸರಣಿ ಸಾವು; ಗ್ಲೂಕೋಸ್ ಸಹಿತ ಇಂಟ್ರಾವಿನೀಸ್ ದ್ರಾವಣವೇ ಕಾರಣ-ವರದಿ ಬಹಿರಂಗ Read More »

ಕರ್ನಾಟಕ

ಅಂಬುಲೆನ್ಸ್‌ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 29. ಅಂಬುಲೆನ್ಸ್‌ ನಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಮೌಗಂಜ್‌ನಲ್ಲಿ ನಡೆದಿದ್ದು, ತಡವಾಗಿ (ನ.22ರಂದು) ಬೆಳಕಿಗೆ ಬಂದಿದೆ. ಒಟ್ಟು ನಾಲ್ವರು ಆರೋಪಿಗಳಿದ್ದು, ಆ ಪೈಕಿ ಇಬ್ಬರು ಆರೋಗಳಾದ ಮೌಗಂಜ್ ಜಿಲ್ಲೆಯ ನೈಗರ್ಹಿ ತಹಸಿಲ್‌ನ ನಿವಾಸಿಗಳಾದ ಅಂಬ್ಯುಲೆನ್ಸ್ ಚಾಲಕ ವಿರೇಂದ್ರ ಚತುರ್ವೇದಿ ಹಾಗೂ ಆತನ ಸ್ನೇಹಿತ ರಾಜೇಶ ಕೇವತ್‌ನನ್ನು ಬಂಧಿಸಿದ್ದಾರೆ. ಮೌಗಂಜ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ

ಅಂಬುಲೆನ್ಸ್‌ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್

ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ: ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೀದರ್, ನ. 29. ಜಿಲ್ಲೆಯ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆ ಬಸವಕಲ್ಯಾಣ ತಾಲೂಕಿನ ಸಸ್ತಾಪೂರ್ ಬಂಗ್ಲಾ ಬಳಿ ನಡೆದಿದೆ. ಆರೋಪಿಯನ್ನು ತೆಲಂಗಾಣ ಮೂಲದ ಪಿ.ಕೆ ಭದ್ರುಧಿನ್ ಎಂದು ಗುರುತಿಸಲಾಗಿದೆ ಗೂಡ್ಸ್ ವಾಹನದಲ್ಲಿ ಶ್ರೀಗಂಧವನ್ನು ಅಕ್ರಮವಾಗಿ ನೆರೆಯ ತೆಲಂಗಾಣದಿಂದ ಮಹಾರಾಷ್ಟ್ರದ ಮುಂಬೈ ನಗರಕ್ಕೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು

ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ: ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಮಂಗಳೂರು: ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ನ. 29. ಮಂಗಳೂರು:  ನಗರದ ಮರೋಳಿಯ ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಕಣ್ಣೂರು ನಿವಾಸಿ, ರಿಕ್ಷಾ ಚಾಲಕ ನಝೀರ್ ಮುಹಮ್ಮದ್ (26) ಎಂದು ಗುರುತಿಸಲಾಗಿದೆ. ಬಂಧಿತನಿಂದ 64,500ರೂ. ನಗದು, ದ್ಚಿಚಕ್ರ ವಾಹನ, ಮೊಬೈಲ್, ಹೆಲ್ಮೆಟ್ ವಶಪಡಿಸಿಕೊಳ್ಳಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ

ವಿಕ್ರಮ್ ಗೌಡ ಎನ್ಕೌಂಟರ್ ನ್ಯಾಯಾಂಗ ತನಿಖೆಯಾಗಲಿ: ನಕ್ಸಲ್ ಪುನರ್ವಸತಿ ಸಮಿತಿಯ ಸದಸ್ಯರ ಆಗ್ರಹ

(ನ್ಯೂಸ್ ಕಡಬ) newskadaba.com ನ. 29. ಬೆಂಗಳೂರು:  ಪಶ್ಚಿಮ ಘಟ್ಟಗಳ ಕೆಲವು ಭಾಗಗಳಲ್ಲಿ ಸಕ್ರಿಯವಾಗಿರುವ ಸಿಪಿಐ (ಮಾವೋವಾದಿ)ಪಕ್ಷದ ಎಡಪಂಥೀಯ ಉಗ್ರಗಾಮಿಗಳು  ಶರಣಾಗಲು ಮತ್ತು ಮುಖ್ಯವಾಹಿನಿಗೆ ಸೇರುವಂತೆ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯರು ಮನವಿ ಮಾಡಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮಾರ್ಗಸೂಚಿಗಳ ಪ್ರಕಾರ ಇತ್ತೀಚೆಗೆ ನಡೆದ ನಕ್ಸಲ್ ನಾಯಕ ವಿಕ್ರಮ್ ಗೌಡನ ಎನ್‌ಕೌಂಟರ್ ಹತ್ಯೆಯ ಬಗ್ಗೆ ಸರ್ಕಾರ ತನಿಖೆ ನಡೆಸುವಂತೆಯೂ ಅವರು ಸಲಹೆ ನೀಡಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯರಾದ ಬಂಜಗೆರೆ ಜಯಪ್ರಕಾಶ್,

ವಿಕ್ರಮ್ ಗೌಡ ಎನ್ಕೌಂಟರ್ ನ್ಯಾಯಾಂಗ ತನಿಖೆಯಾಗಲಿ: ನಕ್ಸಲ್ ಪುನರ್ವಸತಿ ಸಮಿತಿಯ ಸದಸ್ಯರ ಆಗ್ರಹ Read More »

ಬ್ರೇಕಿಂಗ್ ನ್ಯೂಸ್

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ: ಡಿಸಿಎಂ ಡಿಕೆಶಿ

(ನ್ಯೂಸ್ ಕಡಬ) newskadaba.com ನ. 29. ನವ ದೆಹಲಿ: ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು. ಸಂಪುಟ ವಿಸ್ತರಣೆ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಡಿಸಿಎಂ ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ: ಡಿಸಿಎಂ ಡಿಕೆಶಿ Read More »

ಕರ್ನಾಟಕ

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ – ಆಸ್ಟ್ರೇಲಿಯಾದಲ್ಲಿ ಮಸೂದೆ ಅಂಗೀಕಾರ

(ನ್ಯೂಸ್ ಕಡಬ) newskadaba.com ನ. 29. 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆಗೆ ನಿಷೇಧ ವಿಧಿಸುವ ಮಸೂದೆಯನ್ನು ಆಸ್ಟ್ರೇಲಿಯಾ ಅಂಗೀಕರಿಸಿದೆ. ಮಸೂದೆಯನ್ನು ಉಭಯಪಕ್ಷೀಯ ಬೆಂಬಲದೊಂದಿಗೆ ಎರಡೂ ಸಂಸದೀಯ ಸದನಗಳು ಅಂಗೀಕರಿಸಿವೆ. ಹದಿಹರೆಯದವರು ಖಾತೆಗಳನ್ನು ಹೊಂದುವುದನ್ನು ತಡೆಯಲು ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಶೀಘ್ರದಲ್ಲೇ ಸಮಂಜಸವಾದ ಕ್ರಮಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.  

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ – ಆಸ್ಟ್ರೇಲಿಯಾದಲ್ಲಿ ಮಸೂದೆ ಅಂಗೀಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top