News Kadaba

ನಕ್ಸಲ್ ವಿಕ್ರಂ ಗೌಡನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ ಪಲ್ಟಿ

(ನ್ಯೂಸ್ ಕಡಬ) newskadaba.com ಉಡುಪಿ ನ. 20. ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವ  ನಕ್ಸಲ್‌ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿಯಾದ ಘಟನೆ ಹೆಬ್ರಿಯ ಕೂಡ್ಲು ಸಮೀಪ ನಡೆದಿದೆ. ಬೆಳಗ್ಗೆ ಮಣಿಪಾಲದ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಮೃತದೇಹವನ್ನು ಅಂಬುಲೆನ್ಸ್‌ ಮೂಲಕ ಸಾಗಿಸುವ ವೇಳೆ ವೇಗವಾಗಿ ಸಾಗಿಸುತ್ತಿದ್ದಾಗ ದಿಢೀರ್‌ ದನ ರಸ್ತೆಗೆ ಅಡ್ಡ ಬಂದಿದೆ. ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬದಿಗೆ ಅಂಬುಲೆನ್ಸ್‌ ಚಲಾಯಿಸಿದಾಗ ಪಲ್ಟಿಯಾಗಿದೆ. ಆದರೆ […]

ನಕ್ಸಲ್ ವಿಕ್ರಂ ಗೌಡನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ ಪಲ್ಟಿ Read More »

ಕರಾವಳಿ

ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕ: 2.5 ಲಕ್ಷ ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೇರಳ, ನ. 20.  ರೋಗಿ ಇರುವ ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ಶಾಕ್ ನೀಡಿದ್ದು, ಬರೋಬ್ಬರಿ 2.5 ಲಕ್ಷ ದಂಡ ವಿಧಿಸಿದ್ದಲ್ಲದೆ ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ. ಸಾಗುತ್ತಿದ್ದ ಕಾರು ಚಾಲಕ ಬೇಕೆಂದೇ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಉದ್ಧಟನ ಪ್ರದರ್ಶನ ಮಾಡಿದ್ದಾನೆ. ಪದೇ ಪದೇ ಆ್ಯಂಬುಲೆನ್ಸ್ ಗೆ ಅಡ್ಡ ಬಂದು ರೋಗಿಯ ಜೀವವನ್ನು ಅಪಾಯಕ್ಕೆ ತಳ್ಳಿದ್ದಾನೆ. ಇದರಿಂದ ಆಕ್ರೋಶಗೊಂಡ ಆ್ಯಂಬುಲೆನ್ಸ್ ಚಾಲಕ ಕಾರು

ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕ: 2.5 ಲಕ್ಷ ದಂಡ ವಿಧಿಸಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಾರ್ಸಲ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಪೋಟ: ಎರಡು ಕೈಗಳು ಛಿದ್ರವಾಗಿ ಬೆರಳುಗಳು ತುಂಡು

(ನ್ಯೂಸ್ ಕಡಬ) newskadaba.com ಬಾಗಲಕೋಟೆ ನ. 20. ಹೇರ್​ ಡ್ರೈಯರ್ ಸ್ಫೋಟಗೊಂಡು ಎರಡೂ ಹಸ್ತಗಳು ಛಿದ್ರಗೊಂಡ ಘಟನೆ ಇಳಕಲ್ ನಗರದಲ್ಲಿ ನಡೆದಿದೆ. ಶಶಿಕಲಾ ಎಂಬುವರ ಮನೆಗೆ ಹೇರ್​ ಡ್ರೈಯರ್ ಪಾರ್ಸಲ್‌ ಮೂಲಕ ​ಬಂದಿತ್ತು. ಪಾರ್ಸಲ್​​ ಮೇಲೆ ಶಶಿಕಲಾ ಅವರ ಮೊಬೈಲ್​ ನಂಬರ್​ ಇದ್ದ ಹಿನ್ನೆಲೆಯಲ್ಲಿ ಡಿಟಿಡಿಸಿ ಕೊರಿಯರ್​ ಸಿಬ್ಬಂದಿ ಶಶಿಕಲಾ ಅವರಿಗೆ ಕರೆ ಮಾಡಿ, ನಿಮ್ಮ ಹೆಸರಿಗೆ ​ಪಾರ್ಸಲ್​ ಬಂದಿದೆ. ಕಲೆಕ್ಟ್​ ಮಾಡಿ ಎಂದಿದ್ದಾನೆ. ಈ ವೇಳೆ ಶಶಿಕಲಾ ನಾನು ಬೇರೆ ಊರಿನಲ್ಲಿದ್ದೇನೆ ಎಂದು ಹೇಳಿದ್ದಾರೆ. ಇಷ್ಟಕ್ಕೆ

ಪಾರ್ಸಲ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಪೋಟ: ಎರಡು ಕೈಗಳು ಛಿದ್ರವಾಗಿ ಬೆರಳುಗಳು ತುಂಡು Read More »

ಕರ್ನಾಟಕ

ಮುಂದಿನ ವರ್ಷ ಕೇರಳಕ್ಕೆ ಬರಲಿದೆ ಲಿಯೋನೆಲ್‌ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಫುಟ್ಬಾಲ್‌ ತಂಡ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 20.  ವಿಶ್ವ ವಿಖ್ಯಾತ ದಿಗ್ಗಜ ಆಟಗಾರ ಲಿಯೋನೆಲ್‌ ಮೆಸ್ಸಿ ಸೇರಿದಂತೆ ಅರ್ಜೆಂಟೀನಾ ಫುಟ್ಬಾಲ್‌ ತಂಡ ಮುಂದಿನ ವರ್ಷ ಅಂತಾರಾಷ್ಟ್ರೀಯ ಪಂದ್ಯಕ್ಕಾಗಿ ಕೇರಳಕ್ಕೆ ಭೇಟಿ ನೀಡಲಿದೆ. ನಮ ರಾಜ್ಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡವೂ ಫುಟ್ಬಾಲ್‌ ಆಡುವ ಮೂಲಕ ಕ್ರೀಡಾ ಪ್ರೇಮಿಗಳನ್ನು ರಂಜಿಸಲಿದ್ದಾರೆ ಎಂದು ಕೇರಳ ಕ್ರೀಡಾ ಸಚಿವ ವಿ ಅಬ್ದುರಹಿಮಾನ್‌ ಬಹಿರಂಗಪಡಿಸಿದ್ದಾರೆ. ಫುಬ್ಬಾಲ್‌ ಪಂದ್ಯವನ್ನು ರಾಜ್ಯ ಸರ್ಕಾರದ ಸಂಪೂರ್ಣ ಮೇಲ್ವಿಚಾರಣೆಯಲ್ಲಿ ನಡೆಸಲಾಗುವುದು ಎಂದು ಅವರು ಹೇಳಿದರು.ಈ

ಮುಂದಿನ ವರ್ಷ ಕೇರಳಕ್ಕೆ ಬರಲಿದೆ ಲಿಯೋನೆಲ್‌ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಫುಟ್ಬಾಲ್‌ ತಂಡ Read More »

ಕ್ರೀಡಾ ನ್ಯೂಸ್

ಕರ್ನಾಟಕದಲ್ಲಿ ಹೊರರೋಗಿ, ಒಳರೋಗಿ ಶುಲ್ಕ ದುಬಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ಕರ್ನಾಟಕದಲ್ಲಿ ಬೆಲೆ ಏರಿಕೆ ಸರಣಿ ಮುಂದುವರೆದಿದ್ದು, ಇದೀಗ ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ಮತ್ತು ಒಳರೋಗಿ ಸೇವೆಗಳ ಶುಲ್ಕವನ್ನು ಹೆಚ್ಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆ, ಮಿಂಟೊ ಆಸ್ಪತ್ರೆ ಸೇರಿದಂತೆ ಪ್ರಮುಖ ಸರ್ಕಾರಿ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ರಾಜ್ಯ ಟ್ರಾಮಾ ಕೇರ್ ಕೇಂದ್ರಗಳಲ್ಲಿ ಹೊರರೋಗಿ ಮತ್ತು ಒಳರೋಗಿ ಸೇವೆಗಳ

ಕರ್ನಾಟಕದಲ್ಲಿ ಹೊರರೋಗಿ, ಒಳರೋಗಿ ಶುಲ್ಕ ದುಬಾರಿ Read More »

ಕರ್ನಾಟಕ

ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ದಾಂಪತ್ಯ ಜೀವನ ಅಂತ್ಯ

(ನ್ಯೂಸ್ ಕಡಬ) newskadaba.com ಮುಂಬೈ, ನ. 20.  ಖ್ಯಾತ ಸಂಗೀತ ಸಂಯೋಜಕ ಹಾಗೂ ಗಾಯಕ ಎ.ಆರ್‌.ರೆಹಮಾನ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ. ರೆಹಮಾನ್‌ ಅವರು ತಮ ಪತ್ನಿ ಸೈರಾ ಬಾನು ಅವರಿಗೆ ವಿಚ್ಛೇದನ ನೀಡಿರುವುದರಿಂದ ಅವರು 29 ವರ್ಷಗಳ ದಾಂಪತ್ಯ ಜೀವನ ಕೊನೆಗೊಂಡಿದೆ. ರೆಹಮಾನ್‌ ಅವರು ಖ್ಯಾತ ಸಂಗೀತ ಸಂಯೋಜಕರು. ಮೊದಲು ಹಿಂದೂ ಆಗಿದ್ದ ಅವರು ನಂತರ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡುದ್ದರು ಹೀಗಾಗಿ ಅವರು ಮುಸ್ಲಿಂ ಹುಡುಗಿಯನ್ನೇ ಮದುವೆ ಆಗಿದ್ದರು. ಇಬ್ಬರೂ ಇನ್ನೇನು ಮೂರು ದಶಕಗಳ

ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ದಾಂಪತ್ಯ ಜೀವನ ಅಂತ್ಯ Read More »

ಸಿನಿಮಾ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 20.  ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ವ್ಯಾಪ್ತಿಯ ಕಾನಕಟ್ಲ ಬಳಿ ಇಂದು ಸಂಭವಿಸಿದೆ. ಅಂಗನವಾಡಿ ಹಾಗೂ ಇತರೆ ಕಟ್ಟಡಗಳ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಕಾರ್ಯಾಚರಣೆಯ ಹೊರತಾಗಿಯೂ ಇಡೀ ಕಾರು ಸುಟ್ಟು ಭಸ್ಮವಾಗಿದೆ. ಇನ್ನು ಸಮೀಪದ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ Read More »

ಕರಾವಳಿ

ಕೆಎಂಎಫ್ ಸಂಸ್ಥೆಯ ನಂದಿನಿ ಬ್ರ್ಯಾಂಡ್ ಮಾರುಕಟ್ಟೆ ವಿಸ್ತರಿಸಲು ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20.  ರಾಜ್ಯದ ಹೆಮ್ಮೆಯ ಕರ್ನಾಟಕ ಹಾಲು ಒಕ್ಕೂಟದ ( ಕೆಎಂಎಫ್ ) ಉತ್ಪನ್ನ ನಂದಿನಿ ಬ್ಯ್ರಾಂಡ್ ಮಾರುಕಟ್ಟೆಯನ್ನು ರಾಷ್ಟ್ರ ರಾಜಧಾನಿಗೂ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಹೊರಟಿದ್ದಾರೆ. ನಂದಿನಿ ಹಾಲು ಮತ್ತು ಮೊಸರು ಪ್ರಾಡಕ್ಟ್ ಅನ್ನು ದೆಹಲಿಗೂ ವಿಸ್ತರಿಸಲಾಗುತ್ತಿದೆ. ಈ ಸಂಬಂಧ, ಕಾರ್ಯಕ್ರಮವನ್ನು ದೆಹಲಿಯಲ್ಲಿ ಆಯೋಜಿಸಲಾಗುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನು ಉದ್ಘಾಟಿಸಲಿದ್ದಾರೆ ಎಂದು ಕೆಎಂಎಫ್ ಸಂಸ್ಥೆಯ ಎಂಡಿ ಎಂ.ಕೆ.ಜಗದೀಶ್ ಹೇಳಿದ್ದಾರೆ. ಕರ್ನಾಟಕ, ಮಹಾರಾಷ್ಟ್ರದ ಮುಂಬೈ, ನಾಗಪುರ, ಪುಣೆ ಮತ್ತು ಸೋಲಾಪುರ,

ಕೆಎಂಎಫ್ ಸಂಸ್ಥೆಯ ನಂದಿನಿ ಬ್ರ್ಯಾಂಡ್ ಮಾರುಕಟ್ಟೆ ವಿಸ್ತರಿಸಲು ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ವಿಟ್ಲ:ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ನ. 20. ವಿಟ್ಲ ಸಮೀಪದ ಕುಂಡಡ್ಕದ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿಯವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರು ನ.19ರಂದು ಸಂಜೆ ಮನೆಯಿಂದ ಹೊರ ಹೋದವರು ಬಳಿಕ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಅವರಿಗಾಗಿ ಮನೆಮಂದಿ ಹುಟುಕಾಟ ನಡೆಸಿದಾಗ ಮನೆ ಸಮೀಪದ ಗುಡ್ಡದಲ್ಲಿ ತಿಮ್ಮಪ್ಪ ಪೂಜಾರಿಯವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಟ್ಲ:ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ Read More »

ಕರಾವಳಿ

ಅಪಘಾತದಲ್ಲಿ ನಿಧನರಾದ ಚಾಲಕನ ಪತ್ನಿಗೆ ಒಂದೇ ದಿನದಲ್ಲಿ ಉದ್ಯೋಗ ನೀಡಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ತುಮಕೂರು, ನ. 20. ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕೂಡಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಮಾನವೀಯತೆ ಮೆರೆದಿದ್ದಾರೆ. ತುರುವೇಕೆರೆ ತಾಲೂಕಿನ ಡಿ ಕಲ್ಕೆರೆಯ ಪರಮೇಶ್ವರ್‌ ಎಂಬುವವರು ಅಗ್ನಿಶಾಮಕ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕರ್ತವ್ಯ ಮುಗಿಸಿ ಮನೆಗೆ ಬರುವಾಗ 2023ರಲ್ಲಿ ಅಪಘಾತದಲ್ಲಿ ಮೃತರಾಗಿದ್ದರು. ಈ ಪ್ರಕರಣ ಇಲಾಖೆ ಹಂತದಲ್ಲಿ ಇತ್ಯರ್ಥವಾಗಿ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಆದೇಶವಾಗಿತ್ತು. ತಕ್ಷಣ ಜಿಲ್ಲಾಧಿಕಾರಿಗಳು ತಮ ಸಿಬ್ಬಂದಿ

ಅಪಘಾತದಲ್ಲಿ ನಿಧನರಾದ ಚಾಲಕನ ಪತ್ನಿಗೆ ಒಂದೇ ದಿನದಲ್ಲಿ ಉದ್ಯೋಗ ನೀಡಿದ ಜಿಲ್ಲಾಧಿಕಾರಿ Read More »

ಕರ್ನಾಟಕ
Scroll to Top