News Kadaba

ಮಂಗಳೂರು: ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗು ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳದಿದ್ದಾರೆ. ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ಅವರು ಇತ್ತೀಚಿಗೆ ಅಸೌಖ್ಯದಿಂದ ಬಳಲುತ್ತಿದ್ದರು. ಇದೀಗ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ […]

ಮಂಗಳೂರು: ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ಇನ್ನಿಲ್ಲ Read More »

ಕರಾವಳಿ

ಟಿ20 ವಿಶ್ವಕಪ್- ಪಾಕ್‌ ಪ್ರಯಾಣಕ್ಕೆ ಅನುಮತಿ ನೀಡದ ಕೇಂದ್ರ

(ನ್ಯೂಸ್ ಕಡಬ) newskadaba.com ನ. 20. ಭದ್ರತಾ ಕಾರಣದಿಂದಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಲು ಸರ್ಕಾರ ಅನುಮತಿ ನಿರಾಕರಿಸಿರುವುದರಿಂದ ಭಾರತ ಅಂಧರ ಕ್ರಿಕೆಟ್ ತಂಡವು ಟಿ20 ವಿಶ್ವಕಪ್‌ನಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಷ್ಟ್ರೀಯ ಫೆಡರೇಶನ್ ತಿಳಿಸಿದೆ. ನವೆಂಬರ್ 23 ರಿಂದ ಡಿಸೆಂಬರ್ 3 ರವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕಾಗಿ ಭಾರತ ತಂಡವು ಇಂದು ವಾಘಾ ಗಡಿಯನ್ನು ದಾಟಬೇಕಿತ್ತು. ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಲು ಕೇಂದ್ರ ಕ್ರೀಡಾ ಸಚಿವಾಲಯದಿಂದ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ಪಡೆದಿತ್ತು. ಆದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಅನುಮತಿ ಪಡೆಯಲು ಸಾಧ್ಯವಾಗಲಿಲ್ಲ.

ಟಿ20 ವಿಶ್ವಕಪ್- ಪಾಕ್‌ ಪ್ರಯಾಣಕ್ಕೆ ಅನುಮತಿ ನೀಡದ ಕೇಂದ್ರ Read More »

ಕ್ರೀಡಾ ನ್ಯೂಸ್

’ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ’- ಡಿ.ಕೆ.ಶಿವಕುಮಾರ್ ಭರವಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. “ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಯ ನೀಡಿದರು. ಆರ್ಹರ ಬಿಪಿಎಲ್ ಕಾರ್ಡ್‌ಗಳು ಕೂಡ ರದ್ದಾಗುತ್ತಿವೆ ಎಂದು ಮಾಧ್ಯಮಗಳು ಗಮನ ಸೆಳೆದಾಗ ಉತ್ತರಿಸಿದ ಅವರು, “ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ

’ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ’- ಡಿ.ಕೆ.ಶಿವಕುಮಾರ್ ಭರವಸೆ Read More »

ಕರ್ನಾಟಕ

ನ.23ರಂದು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಗೆ ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ರಾಜ್ಯ ಚುನಾವಣಾ ಆಯೋಗ ಘೋಷಿಸಿರುವ ವೇಳಾಪಟ್ಟಿಯಂತೆ ವಿವಿಧ ಕಾರಣಗಳಿಂದ ತೆರವಾಗಿದ್ದ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌ಗಳ ಸದಸ್ಯ ಸ್ಥಾನಗಳಿಗೆ ನವೆಂಬರ್‌ 23ರಂದು ಉಪ ಚುನಾವಣೆಯ ಮತದಾನ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ನ.26ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.ಬೆಂಗಳೂರಿನ ಹೆಬ್ಬಗೋಡಿ, ಚಂದಾಪುರ, ಚಿತ್ರದುರ್ಗ, ಚಳ್ಳಕೆರೆ, ಅರಸೀಕರೆ, ನಿಪ್ಪಾಣಿ, ಇಳಕಲ್‌, ಶಹಾಬಾದ್‌, ರಾಯಚೂರು, ಸಿಂಧನೂರು, ಕೊಪ್ಪಳ ನಗರಸಭೆಗಳಲ್ಲಿ

ನ.23ರಂದು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಗೆ ಮತದಾನ Read More »

ಕರ್ನಾಟಕ

ಮಹಿಳೆಗೆ ಚಿನ್ನ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್‌‍ಆರ್‌ಟಿಸಿ ಬಸ್‌‍ ಚಾಲಕ- ನಿರ್ವಾಹಕ

(ನ್ಯೂಸ್ ಕಡಬ) newskadaba.com ಬಾಗೇಪಲ್ಲಿ, ನ. 20. ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಕೆಎಸ್‌‍ಆರ್‌ಟಿಸಿ ಬಸ್‌‍ ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಬಸ್‌‍ನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಬಂಗಾರವನ್ನು ಕೆಎಸ್‌‍ಆರ್‌ಟಿಸಿ ಬಸ್‌‍ ಚಾಲಕ ಮತ್ತು ನಿರ್ವಾಹಕ ಮಹಿಳೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಬಾಗೇಪಲ್ಲಿ ಪಟ್ಟಣದ 4ನೇ ವಾರ್ಡ್‌ ನಿವಾಸಿ ನಾಗಮಣಿ ಎಂಬುವವರು ಬಾಗೇಪಲ್ಲಿ ಪಟ್ಟಣದಿಂದ ಚಿಕ್ಕಬಳ್ಳಾಪುರಕ್ಕೆ ತನ್ನ ಇಬ್ಬರು ಮಕ್ಕಳೊಂದಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆ ಸುಮಾರು ಒಂದೂವರೆ ಲಕ್ಷ ರೂ.

ಮಹಿಳೆಗೆ ಚಿನ್ನ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್‌‍ಆರ್‌ಟಿಸಿ ಬಸ್‌‍ ಚಾಲಕ- ನಿರ್ವಾಹಕ Read More »

ಕರ್ನಾಟಕ

ರಫೆಲ್‌ ನಡಾಲ್‌ ಸೋಲಿನೊಂದಿಗೆ ಟೆನಿಸ್‌ ​ವೃತ್ತೀಜಿವನಕ್ಕೆ ವಿದಾಯ

(ನ್ಯೂಸ್ ಕಡಬ) newskadaba.com ಮ್ಯಾಡ್ರಿಡ್, ನ. 20. ಸಾರ್ವಕಾಲಿಕ ಶ್ರೇಷ್ಠ ಟೆನಿಸ್ ಆಟಗಾರರಲ್ಲಿ ಒಬ್ಬರಾದ ರಫೆಲ್‌ ನಡಾಲ್‌ ಇಂದು ಅಧಿಕೃತವಾಗಿ 20 ವರ್ಷಗಳ ಟೆನಿಸ್​ ವೃತ್ತೀಜಿವನಕ್ಕೆ ವಿದಾಯ ಹೇಳಿದರು. ಸ್ಪೇನ್ ನ ಖ್ಯಾತ ಟೆನಿಸ್ ಆಟಗಾರ, ಆವೆ ಅಂಗಣದ ರಾಜ ಎಂದೇ ಕರೆಸಿಕೊಂಡಿರುವ ರಫೇಲ್ ನಡಾಲ್ 14 ಫ್ರೆಂಚ್ ಓಪನ್ ಕಿರೀಟ ಸೇರಿದಂತೆ 22 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದ ಸಾಧಕನಾಗಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಬುಧವಾರ ಬೆಳಗ್ಗೆ ನಡೆದಿದ್ದ ಡೇವಿಸ್‌ ಕಪ್‌ ಟೂರ್ನಿಯ ನೆದರ್ಲೆಂಡ್ಸ್‌ ವಿರುದ್ಧದ

ರಫೆಲ್‌ ನಡಾಲ್‌ ಸೋಲಿನೊಂದಿಗೆ ಟೆನಿಸ್‌ ​ವೃತ್ತೀಜಿವನಕ್ಕೆ ವಿದಾಯ Read More »

ಕ್ರೀಡಾ ನ್ಯೂಸ್

ಮದುವೆ ಆಮಂತ್ರಣದ ರೀತಿಯಲ್ಲಿ ಹೊಸ “ಸೈಬರ್ ಸ್ಕ್ಯಾಮ್” ಪತ್ತೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ಮದುವೇ ಸೀಸನ್ ಶುರುವಾಗಿದೆ. ಬಹುತೇಕರು ಡಿಜಿಟಲ್ ಆಮಂತ್ರಣ ಪತ್ರಿಕೆ ಮಾಡಿಸಿ ವ್ಯಾಟ್ಸಾಪ್ ಮೂಲಕ ಹಂಚುತ್ತಾರೆ. ಬಳಿಕ ಕರೆ ಮಾಡಿ ಮದುವೆಗೆ ಆಮಂತ್ರಣ ಮಾಡುವ ಪದ್ದತಿಯೇ ಈಗ ಹೆಚ್ಚು. ಆದರೆ ಇದೇ ಡಿಜಿಟಲ್ ವೆಡ್ಡಿಂಗ್ ಇನ್ವಿಟೇಶನ್ ಸಂದರ್ಭವನ್ನು ಸೈಬರ್ ಕ್ರೈಮ್ ಕಿರಾತಕರು ಬಹಿಮಾಚಲ ಪ್ರದೇಶದ ಸೈಬರ್ ಪೊಲೀಸರು ಇದೀಗ ಹೊಸ ಸೈಬರ್ ಸ್ಕ್ಯಾಮ್ ಕುರಿತು ಎಚ್ಚರಿಸಿದ್ದಾರೆ. ಪ್ರತಿಯೊಬ್ಬರು ಡಿಜಿಟಲ್ ವೆಡ್ಡಿಂಗ್ ಇನ್ವಿಟೇಶನ್ ಸೈಬರ್ ಸ್ಕ್ಯಾಮ್ ಕುರಿತು ಎಚ್ಚರವಾಗಿರಬೇಕು. ಒಂದು ಸಣ್ಣ

ಮದುವೆ ಆಮಂತ್ರಣದ ರೀತಿಯಲ್ಲಿ ಹೊಸ “ಸೈಬರ್ ಸ್ಕ್ಯಾಮ್” ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು?

(ನ್ಯೂಸ್ ಕಡಬ) newskadaba.com ಸುಳ್ಯ, ನ. 20. ಸುಳ್ಯ- ಸುಬ್ರಹ್ಮಣ್ಯದ ಕಾಡಂಚಿನ ಪ್ರದೇಶಗಳಲ್ಲಿ ರಾತ್ರಿ ಸಾಮಾನ್ಯವಾಗಿ ಕಾಡಾನೆಗಳು ಓಡಾಟ ಮಾಡುವುದು ಸಾಮಾನ್ಯವಾಗಿದೆ. ಇದೀಗ ಸುಳ್ಯದ ಮರ್ಕಂಜದಲ್ಲಿ ತಡ ರಾತ್ರಿ ಮುಖ್ಯ ರಸ್ತೆಯಲ್ಲಿಯೇ ಕಾಡಾನೆ ಸಂಚರಿಸಿದೆ. ಮೈಸೂರಿನಂತ ಬಾಡಿಗೆಗೆ ತೆರಳಿ ವಾಪಾಸು ಬರುತ್ತಿದ್ದ ವಾಹನವೊಂದಕ್ಕೆ ಹೈದಂಗೂರು ರಸ್ತೆಯ ಮಧ್ಯೆ 2 ಕಾಡಾನೆಗಳು ಎದುರಾದ ಘಟನೆ ನ. 17ರಂದು ನಡೆದಿದ್ದು ಚಾಲಕ ಜಾಣತನದಿಂದ ಆನೆಗಳು ಹೋದ ಬಳಿಕ ವಾಹನವನ್ನು ಚಲಾಯಿಸಿಕೊಂಡು ಮುಂದೆ ಸಾಗಿದ್ದಾರೆ. ಯಶಸ್ವಿ ಹೆಸರಿನ ವ್ಯಾನ್ ಪ್ರಯಾಣಿಕರನ್ನು ಬಿಟ್ಟು

ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು? Read More »

ಕರಾವಳಿ

ಪದವಿನಂಗಡಿ: ಸರಣಿ ಅಪಘಾತ; ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ಮಂಗಳೂರಿನ ಪದವಿನಂಗಡಿಯಲ್ಲಿ ಕಾರು ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಮದ್ಯಾಹ್ನ ಸಂಭವಿಸಿದೆ. ಜಯಶೀಲ ಮೃತಪಟ್ಟವರು ಎಂದು ತಿಳಿದು ಬಂದಿದೆ. ಜಯಶೀಲರವರು ರಸ್ತೆಬದಿ ನಿಂತಿದ್ದ ವೇಳೆ ಕಾರು ಬಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಕಾರು ಏಕಾಏಕೀ ಬಂದು ಮುಂದೆ ನಿಂತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು, ಆ ಕಾರು ಮತ್ತೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಸರಣಿ

ಪದವಿನಂಗಡಿ: ಸರಣಿ ಅಪಘಾತ; ಮಹಿಳೆ ಮೃತ್ಯು Read More »

ಕರಾವಳಿ

ಮಹಾರಾಷ್ಟ್ರ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ತಾರಾ ಬಳಗ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ನ. 20. ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ನಟ ಅಕ್ಷಯ್ ಕುಮಾರ್ ಮತ್ತು ರಾಜ್‌ಕುಮಾರ್ ರಾವ್ ಅವರು ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ 2024 ರಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮುಂಬೈನ ಮತಗಟ್ಟೆಯಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ಪತ್ನಿ ಅಂಜಲಿ ಮತ್ತು ಮಗಳು ಸಾರಾ ಅವರೊಂದಿಗೆ ಮತದಾನ ಮಾಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಕ್ಷಯ್ ಕುಮಾರ್ ಮತದಾನ ಮಾಡುವಂತೆ ಸ್ಪಷ್ಟನೆ ನೀಡಿದ್ದಾರೆ. ಮತಗಟ್ಟೆಯಲ್ಲಿ ಮಾಡಲಾದ ವ್ಯವಸ್ಥೆಗಳನ್ನು ಶ್ಲಾಘಿಸಿದ ಅಕ್ಷಯ್

ಮಹಾರಾಷ್ಟ್ರ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ತಾರಾ ಬಳಗ Read More »

ರಾಷ್ಟ್ರೀಯ ನ್ಯೂಸ್
Scroll to Top