News Kadaba

HSRP ನಂಬರ್ ಪ್ಲೇಟ್ ಅಳವಡಿಕೆಗೆ ನ.30ರವರೆಗೆ ಗಡುವು ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 16. ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ನಿಗದಿಪಡಿಸಿರುವ ಕಾಲಮಿತಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಕಳೆದ 2019ರ ಏಪ್ರಿಲ್ ಒಂದಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಬೇಕಾಗಿದೆ. ಈಗಾಗಲೇ ಈ ನೋಂದಣಿ ಫಲಕ ಅಳವಡಿಕೆಗೆ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಸಾರಿಗೆ ಇಲಾಖೆ ಸುಮಾರು ನಾಲ್ಕು ಬಾರಿ ವಿಸ್ತರಣೆ ಮಾಡಿದೆ.    

HSRP ನಂಬರ್ ಪ್ಲೇಟ್ ಅಳವಡಿಕೆಗೆ ನ.30ರವರೆಗೆ ಗಡುವು ವಿಸ್ತರಣೆ Read More »

ಕರಾವಳಿ

ಉದ್ಘಾಟನೆಗೊಂಡ ಮೂರು ತಿಂಗಳಿಗೆ ಕುಸಿದ 6.5 ಕೋಟಿ ವೆಚ್ಚದ ಸೇತುವೆ!

(ನ್ಯೂಸ್ ಕಡಬ) newskadaba.com ನ. 16. ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಅಡ್ಡಲಾಗಿ 6.50 ಕೋಟಿ ರೂಪಾಯಿ ವೆಚ್ಚದ ಸಣ್ಣ ನೀರಾವರಿ ಇಲಾಖೆಯಿಂದ ಇತ್ತೀಚೆಗೆ ನಿರ್ಮಿಸಲಾದ ಮಾಂಜರಿ-ಬವನಸೌಂದತ್ತಿ ಸೇತುವೆ-ಕಮ್-ಬ್ಯಾರೇಜ್ ಉದ್ಘಾಟನೆಗೊಂಡು ಮೂರು ತಿಂಗಲಾಗುತ್ತಿದ್ದಂತೆ ಕುಸಿದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ಪ್ರಬಲವಾದ ನದಿ ಪ್ರವಾಹ ತಡೆಯದ ಸೇತುವೆಗ ಕುಸಿದಿದೆ ಎಂದು ಆರೋಪಿಸಿದ್ದಾರೆ. ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಹೀಗಾಗಿ ಸಂಪರ್ಕವನ್ನು ಮರುಸ್ಥಾಪಿಸಲು ತಕ್ಷಣ ದುರಸ್ತಿ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ

ಉದ್ಘಾಟನೆಗೊಂಡ ಮೂರು ತಿಂಗಳಿಗೆ ಕುಸಿದ 6.5 ಕೋಟಿ ವೆಚ್ಚದ ಸೇತುವೆ! Read More »

ಕರ್ನಾಟಕ

ರಾಜ್ಯದ ಹಿರಿಯ ನಾಗರಿಕರಿಗೆ ಬಸ್‌‍ ಟಿಕೆಟ್‌ ದರದಲ್ಲಿ ಶೇ.25 ರಷ್ಟು ರಿಯಾಯಿತಿ ಘೋಷಣೆ

(ನ್ಯೂಸ್ ಕಡಬ) newskadaba.com ನ. 16. ಎಲ್ಲಾ ರಾಜ್ಯದ ಹಿರಿಯ ನಾಗರಿಕರಿಗೆ ಬಸ್‌‍ ಟಿಕೆಟ್‌ ದರದಲ್ಲಿ ಶೇ.25 ರಷ್ಟು ರಿಯಾಯಿತಿ ನೀಡುವುದಾಗಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ ಘೋಷಿಸಿದೆ. 60 ವರ್ಷ ಮೇಲ್ಪಟ್ಟವರು ತಮ ಪ್ರಯಾಣದ ವೇಳೆ ವಯಸ್ಸಿನ ಪುರಾವೆಯಾಗಿ ಆಧಾರ್‌ಕಾರ್ಡ್‌, ಹಿರಿಯ ನಾಗರಿಕರ ಗುರುತಿನ ಚೀಟಿ, ಪಾನ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ಪಾಸ್‌‍ಪೋರ್ಟ್‌ ಅಥವಾ ಪಡಿತರ ಚೀಟಿಯನ್ನು ಭೌತಿಕವಾಗಿ ಅಥವಾ ಡಿಜಿಟಲ್‌ ರೂಪದಲ್ಲಿ ತೋರಿಸಿ ಶೇ.25 ರಷ್ಟು ರಿಯಾಯಿತಿ ಪಡೆಯಬಹುದು ಎಂದು ಅಧಿಕಾರಿಗಳು

ರಾಜ್ಯದ ಹಿರಿಯ ನಾಗರಿಕರಿಗೆ ಬಸ್‌‍ ಟಿಕೆಟ್‌ ದರದಲ್ಲಿ ಶೇ.25 ರಷ್ಟು ರಿಯಾಯಿತಿ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ

(ನ್ಯೂಸ್ ಕಡಬ) newskadaba.com ನ. 16. ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಜೀವ ದಹನ ಆಗಿರುವ ದಾರುಣ ಘಟನೆ ನಡೆದಿದೆ. ವಾರ್ಡ್‌ನಲ್ಲಿದ್ದ ಸಿಬ್ಬಂದಿ ಪ್ರಕಾರ, ರಾತ್ರಿ 10:35 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 10 ಮಕ್ಕಳು ಮೃತಪಟ್ಟಿದ್ದಾರೆ. ಮೂವತ್ತೇಳು ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮಕ್ಕಳ ವಾರ್ಡ್‌ನ ಎರಡು ಘಟಕಗಳ ಪೈಕಿ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಪ್ರಕರಣದ ತನಿಖೆಗೆ ಕ್ರಮವಹಿಸಲಾಗಿದೆ ಎಂದು ಝಾನ್ಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವಿನಾಶ್ ಕುಮಾರ್

ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ Read More »

ಕ್ರೈಮ್ ನ್ಯೂಸ್

ಮಣಿಪುರ: ಅಸ್ಸಾಂ ಗಡಿಯಲ್ಲಿ 3 ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನ. 16. ಇಂಫಾಲ: ಮಣಿಪುರದ ಜಿರಿಬಾಮ್ ಜಿಲ್ಲೆಯಿಂದ ಶಂಕಿತ ಕುಕಿ ಬಂಡುಕೋರರು ಒಂದೇ ಕುಟುಂಬದ 6 ಮಂದಿಯನ್ನು ಅಪಹರಿಸಿದ 3 ದಿನಗಳ ಬಳಿಕ ಶಿಶು ಸೇರಿದಂತೆ ಇಬ್ಬರು ಮಕ್ಕಳು ಮತ್ತು ಮಹಿಳೆಯ ಕೊಳೆತ ಶವ ಮಣಿಪುರ-ಅಸ್ಸಾಂ ಗಡಿಯ ಬಳಿ ನ.15 ರಂದು ಪತ್ತೆಯಾಗಿದೆ. ಸದ್ಯ ಜಿರಿಬಾಮ್ ಜಿಲ್ಲೆಯಲ್ಲಿ ತೀವ್ರ ನಿಗಾ ಇರಿಸಲಾಗಿದೆ. ನ. 11ರಂದು ಮೂವರು ಮಹಿಳೆಯರು ಸಹಿತ 6 ಮಂದಿಯನ್ನು ಅಪಹರಿಸಲಾಗಿತ್ತು. ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ.ಅಪಹರಣ ನಡೆದ ಗ್ರಾಮದಿಂದ ಸುಮಾರು

ಮಣಿಪುರ: ಅಸ್ಸಾಂ ಗಡಿಯಲ್ಲಿ 3 ಮೃತದೇಹ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ನಮ್ಮ ಮೆಟ್ರೋಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ಹಸಿರು ಆಂದೋಲನವನ್ನು ಮುನ್ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭಾರತದಲ್ಲಿ ಹಸಿರು ಚಳುವಳಿಯನ್ನು ಮುನ್ನಡೆಸುತ್ತಿರುವ ಮೆಟ್ರೋ ರೈಲು ಪ್ರಾಧಿಕಾರದ ವರ್ಗದ ಅಡಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಗ್ರೀನ್ ಬಿಲ್ಡಿಂಗ್ ಕಾಂಗ್ರೆಸ್-2024 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶುಕ್ರವಾರದಂದು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ನಮ್ಮ ಮೆಟ್ರೋಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ Read More »

ಕರ್ನಾಟಕ

ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ

(ನ್ಯೂಸ್ ಕಡಬ) newskadaba.com ನ. 16. ಪತ್ರಕರ್ತ ಪ್ರಭಾಕರ ಆಚಾರ್ಯ ಅವರಿಗೆ ಪ್ರಶಸ್ತಿ ಸಿಕ್ಕಿದ್ದು, ಅವರು ಗ್ರಾಮೀಣ ಭಾಗದ ಚಿತ್ತೂರಿನಲ್ಲಿ ಹುಟ್ಟಿ ಬ್ರಹ್ಮಾವರದಲ್ಲಿ ಪತ್ರಿಕೋದ್ಯಮ ಆರಂಭಿಸಿದರು. ಅವರು ಸಾತ್ವಿಕ ಬರವಣಿಗೆಯ ಮೂಲಕ ಹೆಸರು ಪಡೆದು, ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮಾರಣಕಟ್ಟಿ ಶ್ರೀ ಬ್ರಹ್ಮಲಿಂಗೇಶ್ವರ ಸಭಾ ಭವನದಲ್ಲಿ ಚಿತ್ತೂರು ಗ್ರಾಮಸ್ಥರು ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ನೇತ್ರತ್ವದಲ್ಲಿ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ Read More »

ಕರಾವಳಿ

ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳ ಸಜೀವ ದಹನ

(ನ್ಯೂಸ್ ಕಡಬ) newskadaba.com ನ. 16. ಉತ್ತರ ಪ್ರದೇಶ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯು ಶಿಶು ತೀವ್ರ ನಿಗಾ ಘಟಕದ ಸುತ್ತಲೂ ಆವರಿಸಿದೆ. ಬೆಂಕಿ ಹೊತ್ತಿಕೊಂಡಂತೆಯೇ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಆಘಾತಗೊಂಡಿದ್ದು, ವೈದ್ಯರು

ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳ ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್

ಎರಡನೇ ಮಗುವಿನ ತಂದೆಯಾದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ..!

(ನ್ಯೂಸ್ ಕಡಬ) newskadaba.com ನ. 16. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ಸಜ್ದೆ ದಂಪತಿಗೆ ಗಂಡು ಮಗು ಜನಿಸಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೋಹಿತ್ ಶರ್ಮಾ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾರೈಸುತ್ತಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಈ ಮೊದಲೇ ವರದಿಯಾಗಿತ್ತು. ಇದೀಗ ಶುಕ್ರವಾರದಂದು ರಿತಿಕಾ ಮುಂಬೈನ

ಎರಡನೇ ಮಗುವಿನ ತಂದೆಯಾದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ..! Read More »

ಕರ್ನಾಟಕ, ಕ್ರೀಡಾ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಇದೀಗ ಸರ್ಕಾರದಿಂದ ಅನುಮತಿ ಸಿಕ್ಕಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ಸುಪ್ರೀಂ ಅರ್ಜಿ ಸಲ್ಲಿಸುವುದಾಗಿ ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು Read More »

ಕರ್ನಾಟಕ
Scroll to Top