News Kadaba

’ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ’-  ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com ನ. 14. ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ. ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಮಾಡುತ್ತಿರುವ ಆರೋಪ ಆಧಾರರಹಿತವಾದದ್ದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಬುಧವಾರ ಸಿಟಿಜನ್ ಕೌನ್ಸಿಲ್ ವತಿಯಿಂದ ಹಮ್ಮಿಕೊಳ್ಳಲಾದ ಅನೌಪಚಾರಿಕ ಸಂವಾದ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆ ಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ […]

’ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ’-  ನಿರ್ಮಲಾ ಸೀತಾರಾಮನ್ Read More »

ಕರಾವಳಿ

ಶಾಲೆಯಿಂದ ತಪ್ಪಿಸಿಕೊಂಡ 4 ಮಕ್ಕಳ ರಕ್ಷಣೆ

(ನ್ಯೂಸ್ ಕಡಬ) newskadaba.com ನ. 14. ಶಾಲೆಗೆ ಹೋಗಲು ಇಷ್ಟವಿಲ್ಲದ ನಾಲ್ವರು ಮಕ್ಕಳು ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣಕ್ಕೆ ಬಂದಿದ್ದು ಅವರನ್ನು ಆರ್.ಪಿ.ಎಫ್. ಪೊಲೀಸರು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿರುವ ಘಟನೆ ವರದಿಯಾಗಿದೆ. ನಗರದ ಗಾಡಿಕೊಪ್ಪದ ಸರಕಾರಿ ಶಾಲೆಯಲ್ಲಿ ಒಂದು, ಮೂರು ಮತ್ತು ಏಳನೇ ತರಗತಿಯಲ್ಲಿ ಓದುತ್ತಿರುವ ಬೆಂಗಳೂರು ಕಾಮಾಕ್ಷಿಪುರದ ಮಕ್ಕಳು ಶಾಲೆಯಿಂದ ತಪ್ಪಿಸಿಕೊಂಡು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ಆರ್.ಪಿ.ಎಫ್ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ತಮಗೆ

ಶಾಲೆಯಿಂದ ತಪ್ಪಿಸಿಕೊಂಡ 4 ಮಕ್ಕಳ ರಕ್ಷಣೆ Read More »

ಕರ್ನಾಟಕ

3 ತಿಂಗಳ ಸಂಬಳ ಸಿಗದೆ ಹೋರಾಟಕ್ಕೆ ಮುಂದಾದ 108 ಅಂಬುಲೆನ್ಸ್‌ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ನ. 14. ಕರ್ನಾಟಕ ಸರ್ಕಾರದ ವಿರುದ್ಧ ಹೋರಾಟ ನಡೆಸಲು 108 ಅಂಬುಲೆನ್ಸ್‌ ಸಿಬ್ಬಂದಿ ಮುಂದಾಗಿದ್ದಾರೆ. 3 ತಿಂಗಳಿನಿಂದ ನಮಗೆ ಸಂಬಳ ಸಿಕ್ಕಿಲ್ಲ. ಹೀಗಾಗಿ ನ.16ರ ರಾತ್ರಿ 8 ಗಂಟೆಯ ಒಳಗಡೆ ಸಂಬಳವನ್ನು ಬಿಡುಗಡೆ ಮಾಡಬೇಕು. ಅಂದು ಸಂಬಳ ಪಾವತಿಯಾಗದೇ ಇದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ, ಅಖಿಲ ಕರ್ನಾಟಕ 108 ಅಂಬುಲೆನ್ಸ್‌ ನೌಕರರ ಹಿತರಕ್ಷಣಾ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಕವಚ(108) ಅಂಬುಲೆನ್ಸ್‌

3 ತಿಂಗಳ ಸಂಬಳ ಸಿಗದೆ ಹೋರಾಟಕ್ಕೆ ಮುಂದಾದ 108 ಅಂಬುಲೆನ್ಸ್‌ ಸಿಬ್ಬಂದಿ Read More »

ಕರ್ನಾಟಕ

ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ನ. 14. ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮೃತ ದಂಪತಿಯನ್ನು ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಎಂದು ಗುರುತಿಸಲಾಗಿದೆ.  ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ

ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ರೀಲ್ಸ್‌ ಗಾಗಿ ಪೆಟ್ರೋಲ್‌ ಬಾಂಬ್‌ ಸ್ಫೋಟ: ವಿದ್ಯಾರ್ಥಿಗಳ ವಿರುದ್ಧ ಕೇಸ್‌

(ನ್ಯೂಸ್ ಕಡಬ) newskadaba.com ನ. 14. ರೀಲ್ಸ್‌ ಗಾಗಿ ವಿದ್ಯಾರ್ಥಿಗಳು ಪೆಟ್ರೋಲ್ ಬಾಂಬ್ ಸ್ಪೋಟಿಸಿ ಎಲ್ಲೆ ಮೀರಿ ವರ್ತಿಸಿರುವ ಘಟನೆ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿಯಲ್ಲಿ ನಡೆದಿದೆ. ಆರ್ಯುವೇದ ಕಾಲೇಜಿನಲ್ಲಿ ಓದುತ್ತಿರುವ ಹಾಸನ ನಗರದ ಇಬ್ಬರು, ಕುಣಿಗಲ್ ತಾಲ್ಲೂಕಿನ ಓರ್ವ ವಿದ್ಯಾರ್ಥಿ ರಾತ್ರಿ ವೇಳೆ ಕಾಲೇಜಿನ ಎದುರಿನ ರಸ್ತೆಯಲ್ಲಿ ಪ್ಲಾಸ್ಟಿಕ್‌ ಕವರ್‌ಗೆ ಪೆಟ್ರೋಲ್ ತುಂಬಿ, ಅದರ ಮೇಲೆ ಪಟಾಕಿ ಬಾಂಬ್ ಇಟ್ಟು ಬೆಂಕಿ ಹಚ್ಚಿದ್ದಾರೆ. ಪರಿಣಾಮ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಪೆಟ್ರೋಲ್ ಬಾಂಬ್ ಸ್ಪೋಟಗೊಂಡ ಅನತಿ

ರೀಲ್ಸ್‌ ಗಾಗಿ ಪೆಟ್ರೋಲ್‌ ಬಾಂಬ್‌ ಸ್ಫೋಟ: ವಿದ್ಯಾರ್ಥಿಗಳ ವಿರುದ್ಧ ಕೇಸ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು

(ನ್ಯೂಸ್ ಕಡಬ) newskadaba.com ನ. 14.ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ. ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆತನ ಖಡ್ಗವನ್ನು ಆಗಿನ ಬ್ರಿಟಿಷ್‌ ಸೇನೆಯ ಕ್ಯಾಪ್ಟನ್‌ ಜೇಮ್ಸ್‌ ಆಂಡ್ರ್ಯೂ ಡಿಕ್‌ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದರು.  ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದು. ‘ಸ್ಟೀಲ್

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು Read More »

ರಾಷ್ಟ್ರೀಯ ನ್ಯೂಸ್

ಮರದಿಂದ ತಯಾರಿಸಿದ ಉಪಗ್ರಹ ಲಿಗ್ನೋಸ್ಯಾಟ್ ಬಾಹ್ಯಾಕಾಶಕ್ಕೆ ಉಡಾವಣೆ

(ನ್ಯೂಸ್ ಕಡಬ) newskadaba.com ಟೋಕಿಯೋ, ನ. 14. ಚಂದ್ರ ಮತ್ತು ಮಂಗಳನ ಅಂಗಳದಲ್ಲಿ ಮರ ಬಳಸಿ ಮನೆ ಕಟ್ಟುವ ಯೋಜನೆಯನ್ನು ಹೊಂದಿರುವ ವಿಜ್ಞಾನಿಗಳು, ಇದರ ಸಾಧ್ಯಾಸಾಧ್ಯತೆಯನ್ನು ಅರ್ಥ ಮಾಡಿಕೊಳ್ಳಲು ಬಾಹ್ಯಾಕಾಶಕ್ಕೆ ಮರದಿಂದ ತಯಾರಿಸಿದ ಉಪಗ್ರಹ ಲಿಗ್ನೋಸ್ಯಾಟ್ ಉಡಾವಣೆ ಮಾಡಿದ್ದಾರೆ. ಇದು ವಿಶ್ವದಲ್ಲೇ ಮೊದಲ ಮರದ ಉಪಗ್ರಹ ಎಂಬ ಖ್ಯಾತಿ ಪಡೆದುಕೊಂಡಿದೆ. ಮರ ಎಂಬುದಕ್ಕೆ ಲ್ಯಾಟಿನ್ ಭಾಷೆಯಲ್ಲಿರುವ ಪದವನ್ನು ಬಳಸಿ ಲಿಗ್ನೋಸ್ಯಾಟ್ ಎಂಬ ಹೆಸರನ್ನು ಈ ಉಪಗ್ರಹಕ್ಕೆ ಇಡಲಾಗಿದೆ. ಜಪಾನ್ನ ಕ್ಯೋಟೋ ವಿವಿ ಮತ್ತು ಸುಮಿಟಾಮೋ ಫಾರೆಸ್ಟ್ರಿ ಸೇರಿ

ಮರದಿಂದ ತಯಾರಿಸಿದ ಉಪಗ್ರಹ ಲಿಗ್ನೋಸ್ಯಾಟ್ ಬಾಹ್ಯಾಕಾಶಕ್ಕೆ ಉಡಾವಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ರಾಜ್ಯ ಮಿನಿ ಒಲಿಂಪಿಕ್ಸ್‌:  ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 14. 3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 2022ರ ಬಳಿಕ ಅಂಡರ್‌-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಿಎಂ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಹಲವು ಸಚಿವರು, ಗಣ್ಯರು ಪಾಲ್ಗೊಳ್ಳಲಿದ್ದಾರೆ. ಅಥ್ಲೆಟಿಕ್ಸ್‌, ಬಾಸ್ಕೆಟ್‌ಬಾಲ್‌, ಫುಟ್ಬಾಲ್‌, ಹಾಕಿ, ಕುಸ್ತಿ, ಜಿಮ್ನಾಸ್ಟಿಕ್ಸ್‌, ಶೂಟಿಂಗ್‌

ರಾಜ್ಯ ಮಿನಿ ಒಲಿಂಪಿಕ್ಸ್‌:  ಇಂದು ಸಿಎಂ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಧಾರವಾಡ, ನ. 13.  ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ನಡುವೆ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಅಪರಾಧಿಗಳಿಗೆ ಕೊಪ್ಪಳ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಧಾರವಾಡದ ಹೈಕೋರ್ಟ್ ವಿಭಾಗೀಯ ಪೀಠ ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದೆ. ಕೊಪ್ಪಳದ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ 98 ಮಂದಿ ಅಪರಾಧಿಗಳು ಅ.28 ರಂದು ಧಾರವಾಡ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಇಬ್ಬರು ನ್ಯಾಯಮೂರ್ತಿಗಳಿದ್ದ ವಿಭಾಗೀಯ ಪೀಠವು 98

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಅಪರಾಧಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ Read More »

ಕರ್ನಾಟಕ

ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com ಶ್ರೀನಗರ, ನ. 13.  ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು  ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ದಾಖಲಾಗಿದ್ದು, ಸದ್ಯ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 10:43ಕ್ಕೆ ಅಫ್ಘಾನಿಸ್ತಾನ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಾಶ್ಮೀರದ ಕಣಿವೆಯಲ್ಲಿ ಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಯಿಂದಾಚೆ ಓಡಿ ಬಂದಿದ್ದಾರೆ ಎನ್ನಲಾಗಿದೆ.  

ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯ ಭೂಕಂಪ Read More »

ರಾಷ್ಟ್ರೀಯ ನ್ಯೂಸ್
Scroll to Top