News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.15:  ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇದರ ನಡುವೆ ಸಂಜೆ ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮಾ.17ರವರೆಗೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. […]

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಶೀಘ್ರ ಪ್ರಕಟ: 25 ಲಕ್ಷ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯ; ಚೆಕ್ ಮಾಡುವುದು ಹೇಗೆ?

(ನ್ಯೂಸ್‌ ಕಡಬ) newskadaba.com,  ಎ.14 ​ನವದೆಹಲಿ: 2025-26ನೇ ಸಾಲಿನ ಕೇಂದ್ರ ಪ್ರೌಢಶಿಕ್ಷಣ ಮಂಡಳಿ 10ನೇ ತರಗತಿ ಪರೀಕ್ಷ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕಾತರಕ್ಕೆ ಶೀಘ್ರವೇ ತೆರೆ ಬೀಳಲಿದೆ. ಮಂಡಳಿಯು ಫಲಿತಾಂಶ ಪ್ರಕಟಿಸಲು ಅಂತಿಮ ಹಂತದ ಸಿದ್ಧತೆ ನಡೆಸಿದ್ದು, ಸುಮಾರು 25 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಅಂಕಪಟ್ಟಿ ಕೆಲವೇ ದಿನಗಳಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ​ಕಳೆದ ಫೆಬ್ರವರಿ 15 ರಿಂದ ಮಾರ್ಚ್ ಮಧ್ಯಭಾಗದವರೆಗೆ ನಡೆದಿದ್ದ ಬೋರ್ಡ್ ಪರೀಕ್ಷೆಯ ಫಲಿತಾಂಶಕ್ಕಾಗಿ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಿದ್ದಾರೆ. ​ಫಲಿತಾಂಶ ವೀಕ್ಷಿಸುವುದು

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಶೀಘ್ರ ಪ್ರಕಟ: 25 ಲಕ್ಷ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯ; ಚೆಕ್ ಮಾಡುವುದು ಹೇಗೆ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದ ಕೈಗಾರಿಕಾ ಕ್ಷೇತ್ರಕ್ಕೆ ಬೂಸ್ಟರ್ ಡೋಸ್: ₹18,430 ಕೋಟಿ ಹೂಡಿಕೆಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ!

(ನ್ಯೂಸ್‌ ಕಡಬ) newskadaba.com,  ಎ.14: ಕರ್ನಾಟಕದ ಕೈಗಾರಿಕಾ ಕ್ಷೇತ್ರಕ್ಕೆ ಬೂಸ್ಟರ್ ಡೋಸ್: ₹18,430 ಕೋಟಿ ಹೂಡಿಕೆಗೆ ಒಪ್ಪಿಗೆ, 15 ಸಾವಿರ ಉದ್ಯೋಗ ಸೃಷ್ಟಿ! ​ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಕ್ರಾಂತಿಗೆ ಹೊಸ ವೇಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ 67ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ (SHLCC) ಸಭೆಯಲ್ಲಿ, ಒಟ್ಟು ₹18,430.44 ಕೋಟಿ ಮೊತ್ತದ ಬೃಹತ್ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅಧಿಕೃತ ಅನುಮೋದನೆ ನೀಡಲಾಗಿದೆ. ​ಮುಖ್ಯಾಂಶಗಳು:

ಕರ್ನಾಟಕದ ಕೈಗಾರಿಕಾ ಕ್ಷೇತ್ರಕ್ಕೆ ಬೂಸ್ಟರ್ ಡೋಸ್: ₹18,430 ಕೋಟಿ ಹೂಡಿಕೆಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಸ್ಟುಡಿಯೋ ಮಾಲೀಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.14: ಕಳೆದ ಶನಿವಾರ ರಾತ್ರಿ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಮೋಹನ್ ಕುಮಾರ್ ಮೃತ ದುರ್ದೈವಿ. ಅವರು ಪದವಿನಂಗಡಿಯಲ್ಲಿ ‘ನವ್ಯ ಸ್ಟುಡಿಯೋ’ ನಡೆಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿತ್ತು. ಗೋಪಾಲ್ (29) ಎಂಬುವವರು ಚಲಾಯಿಸುತ್ತಿದ್ದ ಬೈಕ್, ಮೋಹನ್ ಕುಮಾರ್ ಅವರ ಸ್ಕೂಟರ್‌ಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಗೋಪಾಲ್ ರಸ್ತೆಗೆ ಬಿದ್ದಾಗ, ಹಿಂಬದಿಯಿಂದ

ಮಂಗಳೂರು: ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಸ್ಟುಡಿಯೋ ಮಾಲೀಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಲ್‌,ಮೆಸೇಜ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

(ನ್ಯೂಸ್‌ ಕಡಬ) newskadaba.com,  ಎ.14: ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಸಹೋದ್ಯೋಗಿಯೊಬ್ಬರು ಮೆಸೇಜ್‌ ಹಾಗೂ ಕಾಲ್‌ ಮಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿಸಿದ್ದಾರೆ.ಈ ಸಂಬಂಧ ಸಂತ್ರಸ್ತೆ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ 9 ತಿಂಗಳಿಂದ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಆಸ್ಪತ್ರೆ ಮುಖ್ಯಸ್ಥ ರಾಕೇಶ್ ಜಯಪ್ರಕಾಶ್ ಸಂತ್ರಸ್ತೆಯನ್ನ ನೋಡಿ, ಅವರೊಂದಿಗೆ ಅನುಚಿತವಾಗಿ ಮಾತಾಡಿದ್ದಾರೆ. ಅಲ್ಲದೇ ಮಿಸ್ ಯು ಅಂತ ಅನುಚಿತವಾಗಿ ಮೆಸೇಜ್ ಮಾಡಿದ್ದಾರೆ. ಕಾಲ್ ಮಾಡಿಯೂ

ಕಾಲ್‌,ಮೆಸೇಜ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: ಪಿಯುಸಿ ಟಾಪರ್ ದಿಶಾ ಪೂಜಾರಿ ಸಾಧನೆಗೆ ಮೆಚ್ಚುಗೆ; ವಿಶ್ವ ಬಂಟರ ಪ್ರತಿಷ್ಠಾನದಿಂದ ಶೈಕ್ಷಣಿಕ ದತ್ತು

(ನ್ಯೂಸ್‌ ಕಡಬ) newskadaba.com,  ಎ.14: 2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ಪೂಜಾರಿಯ ಮುಂದಿನ ವಿದ್ಯಾಭ್ಯಾಸಕ್ಕೆ ಮಹತ್ವದ ಬೆಂಬಲ ಲಭಿಸಿದೆ. ವಿಶ್ವ ಬಂಟರ ಪ್ರತಿಷ್ಟ್ರಾನದ ಮಹಾಪೋಷಕರಾದ ಡಾ. ಬಿ. ಆರ್. ಶೆಟ್ಟಿಯವರು ದಿಶಾ ಪೂಜಾರಿಯ ಸಂಪೂರ್ಣ ವಿದ್ಯಾಭ್ಯಾಸದ ಖರ್ಚನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ. ಸೋಮವಾರ ಸಂಜೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರ

ಮೂಡುಬಿದಿರೆ: ಪಿಯುಸಿ ಟಾಪರ್ ದಿಶಾ ಪೂಜಾರಿ ಸಾಧನೆಗೆ ಮೆಚ್ಚುಗೆ; ವಿಶ್ವ ಬಂಟರ ಪ್ರತಿಷ್ಠಾನದಿಂದ ಶೈಕ್ಷಣಿಕ ದತ್ತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

7 ಗಂಟೆಗಳ ಸುದೀರ್ಘ ಕಾರ್ಯಾಚರಣೆ: ಸುರಕ್ಷಿತವಾಗಿ ಹೊರಬಂದ ಕಾಡಾನೆ

(ನ್ಯೂಸ್‌ ಕಡಬ) newskadaba.com,  ಎ.14: ಸುಮಾರು 25 ಅಡಿ ಆಳದ ಪಾಳುಬಿದ್ದ ಬಾವಿಗೆ ಬಿದ್ದಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ಪೆರಾಜೆ ಸಮೀಪದ ಕಲ್ಚರ್ಪೆಯಲ್ಲಿ ಸೋಮವಾರ ನಡೆದಿದೆ. ಸುಮಾರು 20 ರಿಂದ 22 ವರ್ಷ ಪ್ರಾಯದ ಗಂಡಾನೆ ಭಾನುವಾರ ತಡರಾತ್ರಿ 11:30ರ ಸುಮಾರಿಗೆ ರಾಮ ನಾಯ್ಕ ಎಂಬುವವರ ತೋಟದ ಅಂಚಿನಲ್ಲಿದ್ದ ಬಾವಿಗೆ ಬಿದ್ದಿತ್ತು. ಆನೆಯ ಚೀರಾಟ ಕೇಳಿದ ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಹಿರಿಯ ಅಧಿಕಾರಿಗಳ ಸೂಚನೆಯಂತೆ ಸೋಮವಾರ ಮುಂಜಾನೆ 6:00

7 ಗಂಟೆಗಳ ಸುದೀರ್ಘ ಕಾರ್ಯಾಚರಣೆ: ಸುರಕ್ಷಿತವಾಗಿ ಹೊರಬಂದ ಕಾಡಾನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ

(ನ್ಯೂಸ್‌ ಕಡಬ) com,  ಎ.14: ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಯ ಹೊಸ ಮಾರ್ಗಸೂಚಿಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆಡಳಿತಾತ್ಮಕ ದಕ್ಷತೆ ಮತ್ತು ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮಾವಳಿಗಳನ್ನು ರೂಪಿಸಲಾಗಿದೆ. ಈ ಬಾರಿಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ನಿರ್ಧರಿಸಿದ್ದು ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ನೌಕರರು ತಮ್ಮ ಸೇವಾ ದಾಖಲೆಗಳನ್ನು ನಿಖರವಾಗಿ ಒದಗಿಸುವುದು ಕಡ್ಡಾಯವಾಗಿದೆ. ಕೇವಲ ವೈಯಕ್ತಿಕ ಬೇಡಿಕೆಗಳಲ್ಲದೆ, ಇಲಾಖೆಯ ಆಡಳಿತಾತ್ಮಕ ಅಗತ್ಯತೆಗಳನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಿ ವರ್ಗಾವಣೆ ಆದೇಶ

ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.14: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ನಡುವೆಯೂ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಹೆಚ್ಚಾಗಿರಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕಗಳ ಬದಲು ಗ್ರೇಡ್‌ ನೀಡುವ ಕುರಿತು ಕರಡು ಅಧಿಸೂಚನೆ ಪ್ರಕಟ

(ನ್ಯೂಸ್‌ ಕಡಬ) newskadaba.com,  ಎ.13: ಬೆಂಗಳೂರು,ಏ.13- ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಮುಖ್ಯವಾಗಿ ಹಿಂದಿ ವಿಷಯಕ್ಕೆ ಅಂಕಗಳ ಬದಲು ಗ್ರೇಡ್‌ ನೀಡುವ ನಿರ್ಧಾರ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದೆ. ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಏಳು ದಿನಗಳೊಳಗೆ ಆಹ್ವಾನಿಸಲಾಗಿದೆ. ಈಗಾಗಲೇ ಎಸ್‌‍ಎಸ್‌‍ಎಲ್‌ಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದ್ದು, ಫಲಿತಾಂಶವನ್ನು ಏ.24 ರಂದು ಪ್ರಕಟಿಸುವ ಸಾಧ್ಯತೆ ಇದೆ.ಕರಡು ಅಧಿಸೂಚನೆಯ ಪ್ರಕಾರ, ತೃತೀಯ ಭಾಷೆ ಹಾಗೂ ಎನ್‌ಎಸ್‌‍ಕ್ಯೂಎಫ್‌

ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕಗಳ ಬದಲು ಗ್ರೇಡ್‌ ನೀಡುವ ಕುರಿತು ಕರಡು ಅಧಿಸೂಚನೆ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top