News Kadaba

ಬಸ್‌ ಸೀಟ್ ವಿಚಾರಕ್ಕೆ ಚಪ್ಪಲಿಯಲ್ಲಿ ಹೊಡೆದಾಡಿದ ಮಹಿಳೆಯರು..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ.25. ಸರ್ಕಾರಿ ಬಸ್ಸಿನಲ್ಲಿ ಸೀಟ್‌ ವಿಚಾರಕ್ಕೆ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಮಹಿಳೆಯರು ಹತ್ತಿದ್ದಾರೆ. ಈ ವೇಳೆ ಸೀಟ್ ನನ್ನದು ನನ್ನದು ಅಂತಾ ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ. ಮೊದಲಿಗೆ ಮಹಿಳೆಯರು ಪರಸ್ಪರ ಬೈದಾಡಿಕೊಂಡಿದ್ದಾರೆ. ನಂತರ ಕೈಕೈ ಮಿಲಾಯಿಸಿ ಚಪ್ಪಲಿಯಲ್ಲಿ ಹೊಡೆದಾಡಿದ್ದಾರೆ. ಈ ವೇಳೆ ಅಡ್ಡ ಬಂದ ಬಾಲಕಿಗೂ ಚಪ್ಪಲಿಯಿಂದ ಮಹಿಳೆ ಹೊಡೆದಿದ್ದಾಳೆ.  

ಬಸ್‌ ಸೀಟ್ ವಿಚಾರಕ್ಕೆ ಚಪ್ಪಲಿಯಲ್ಲಿ ಹೊಡೆದಾಡಿದ ಮಹಿಳೆಯರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾರ್ನರ್ ಮೇಲೆ ವಿಧಿಸಿದ್ದ ಅಜೀವ ನಾಯಕತ್ವ ನಿಷೇಧ ಹಿಂಪಡೆದ ಕ್ರಿಕೆಟ್ ಆಸ್ಟ್ರೇಲಿಯಾ

(ನ್ಯೂಸ್ ಕಡಬ) newskadaba.com ಕ್ಯಾನ್ ಬೆರಾ, ಅ.25. ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಹಿನ್ನೆಲೆ ಡೇವಿಡ್ ವಾರ್ನರ್ ಅವರು ಕ್ರಿಕೆಟ್ ಆಸ್ಟ್ರೇಲಿಯಾದಿಂದ ಅಜೀವ ನಾಯಕತ್ವ ನಿಷೇಧಕ್ಕೊಳಗಾಗಿದ್ದರು. ಇದೀಗ ಅವರ ಮೇಲೆ ವಿಧಿಸಿದ್ದ ಅಜೀವ ನಾಯಕತ್ವ ನಿಷೇಧವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಹಿಂಪಡೆದಿದೆ. ವಾರ್ನರ್ ಮೇಲೆ ಹೇರಲಾಗಿದ್ದ ಆಜೀವ ನಾಯಕತ್ವದ ನಿಷೇಧವನ್ನು ಹಿಂತೆಗೆದುಕೊಳ್ಳುವುದರಿಂದ ಅವರು ಈಗ ಮತ್ತೆ ಆಸ್ಟ್ರೇಲಿಯಾದಲ್ಲಿ ಯಾವುದೇ ತಂಡದ ನಾಯಕತ್ವವನ್ನು ವಹಿಸಿಕೊಳ್ಳಬಹುದಾಗಿದೆ. ಇದೀಗ ವಾರ್ನರ್ ಮೇಲಿನ ನಿಷೇಧವನ್ನು ತೆರವುಗೊಳಿಸಿರುವುದರಿಂದ ಮುಂದಿನ ಬಿಬಿಎಲ್‌ನಲ್ಲಿ ವಾರ್ನರ್ ಸಿಡ್ನಿ ಥಂಡರ್ಸ್ ತಂಡದ

ವಾರ್ನರ್ ಮೇಲೆ ವಿಧಿಸಿದ್ದ ಅಜೀವ ನಾಯಕತ್ವ ನಿಷೇಧ ಹಿಂಪಡೆದ ಕ್ರಿಕೆಟ್ ಆಸ್ಟ್ರೇಲಿಯಾ Read More »

ಕ್ರೀಡಾ ನ್ಯೂಸ್

ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು:   ಕರ್ತವ್ಯ ನಿರ್ವಹಿಸುತ್ತಿರುವ ಯಾವುದೇ ಶಿಕ್ಷಕರು, ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಲಿ, ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಲಿ,  ಹಾಗೂ ಪದಾಧಿಕಾರಿಯಾಗಲು ಅವಕಾಶವಿರುವುದಿಲ್ಲ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2020ರ ಸೆಕ್ಷನ್-8(1) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮ-15ರಲ್ಲಿ

ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ Read More »

ಕರ್ನಾಟಕ

ಉಪಚುನಾವಣೆ- ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಚನ್ನಪಟ್ಟಣ, ಅ.25. ರಾಜಕೀಯ ಕಣ ರಂಗೇರುತ್ತಿದ್ದು ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಇದೀಗ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕಿಳಿದಿದ್ದು, ಇದು ಅವರ ಮೂರನೇ ಬಾರಿಯ ಅದೃಷ್ಟಪರೀಕ್ಷೆಯಾಗಿದೆ. ನಾಮಪತ್ರ ಸಲ್ಲಿಕೆಗೆ ಮುನ್ನ ನಿಖಿಲ್ ಕುಮಾರಸ್ವಾಮಿ ಮತ್ತು ಕುಟುಂಬ ದೇವರ ಮೊರೆ ಹೋಗಿದ್ದಾರೆ. ಚನ್ನಪಟ್ಟಣದ ಕೆಂಗಲ್ ಆಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರೋ ಲಕ್ಷ್ಮೀ ವೆಂಕಟೇಶ್ವರ ದೇಗುಲದಲ್ಲಿಯೂ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.  

ಉಪಚುನಾವಣೆ- ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ Read More »

ಕರ್ನಾಟಕ

ಒಡಿಶಾ: ‘ಡಾನಾ’ ಚಂಡಮಾರುತ- 5.84 ಲಕ್ಷ ಜನರ ಸ್ಥಳಾಂತರ ಕುರಿತು ಸಿಎಂ ಜೊತೆ ಪ್ರಧಾನಿ ಮೋದಿ ಚರ್ಚೆ

(ನ್ಯೂಸ್ ಕಡಬ) newskadaba.com ಅ.25, ಭುವನೇಶ್ವರ: ಡಾನಾ ಚಂಡಮಾರುತ ಒಡಿಶಾ ತೀರಕ್ಕೆ ಅಪ್ಪಳಿಸಿದ್ದು, ಈ ಪರಿಣಾಮ ಇನ್ನೂ 2-3 ಗಂಟೆಗಳ ಕಾಲ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಡಾನಾ ಚಂಡಮಾರುತ ಕಳೆದ ಮಧ್ಯರಾತ್ರಿ ಅಪ್ಪಳಿಸಲು ಪ್ರಾರಂಭವಾಯಿತು. ತೀವ್ರ ಚಂಡಮಾರುತವು ಮುಂಜಾನೆ 3.30 ಗಂಟೆಗೆ ಭಿತರ್ಕಾನಿಕಾದಿಂದ ಉತ್ತರ-ಈಶಾನ್ಯಕ್ಕೆ 20 ಕಿಮೀ ದೂರದಲ್ಲಿ ಕೇಂದ್ರೀಕೃತವಾಗಿದೆ. ಮುಂದಿನ ಮೂರ್ನಾಲ್ಕು ಗಂಟೆ ಅದರ ತೀವ್ರತೆ ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.ಪ್ರತಿ ಗಂಟೆಗೆ 120 ಕಿ.ಮೀ

ಒಡಿಶಾ: ‘ಡಾನಾ’ ಚಂಡಮಾರುತ- 5.84 ಲಕ್ಷ ಜನರ ಸ್ಥಳಾಂತರ ಕುರಿತು ಸಿಎಂ ಜೊತೆ ಪ್ರಧಾನಿ ಮೋದಿ ಚರ್ಚೆ Read More »

ಬ್ರೇಕಿಂಗ್ ನ್ಯೂಸ್

ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಲಕ್ನೋ, ಅ.25. ಅಯೋಧ್ಯೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಎಂಡಿಎಂ) ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರ್ಜಿತ್ ಸಿಂಗ್ (58) ಕೊತ್ವಾಲಿ ನಗರದ ಸಿವಿಲ್ ಲೈನ್ಸ್ ಪ್ರದೇಶದ ಸುರ್ಸಾರಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಅ.24ರಂದು ನಿಗೂಢವಾಗಿ ಮೃತಪಟ್ಟಿದ್ದಾರೆ. ಮೂಲಗಳ ಪ್ರಕಾರ ಸಿಂಗ್ ಮೃತದೇಹ ಪತ್ತೆಯಾದ ಕೋಣೆಯ ಸುತ್ತ ನೆಲದ ಮೇಲೆ ರಕ್ತ ಕಂಡುಬಂದಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ಆಗಮಿಸಿದೆ. ಅವರ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತನಿಖೆ ಹಾಗೂ

ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ಮೃತದೇಹ ಪತ್ತೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವಪ್ರಸಿದ್ಧ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ..!

(ನ್ಯೂಸ್ ಕಡಬ) newskadaba.com ಅ.25, ತಿರುಪತಿ: ಕಳೆದ ಹಲವು ದಿನದಿಂದ ವಿಮಾನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿತ್ತು, ಆದರೆ ಈಗ  ಜಗತ್ಪ್ರಸಿದ್ಧ ದೇಗುಲವಾದ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ ಕೇಳಿ ಬಂದಿದೆ. ಆಂಧ್ರಪ್ರದೇಶದಲ್ಲಿರುವ ಈ  ತಿರುಪತಿ ದೇವಾಲಯದಲ್ಲಿ ಬಾಂಬ್ ಬೆದರಿಕೆ ಇರುವ ಬಗ್ಗೆ ಆಘಾತಕಾರಿ ದೂರು ಕೇಳಿ ಬಂದಿದ್ದು, ಈ ಬೆದರಿಕೆ ಬಂದ ನಂತರ ರಾಜ್ಯ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಲೀಲಾಮಹಾಲ್ ಬಳಿ ಮೂರು ಹೋಟೆಲ್‌ಗಳನ್ನು ಸ್ಫೋಟಿಸುವುದಾಗಿ ಬಾಂಬ್ ಇರಿಸಿರುವ ಬಗ್ಗೆ ಕರೆ ಮತ್ತು ಇಮೇಲ್ ಮೂಲಕ ಮಾಹಿತಿ

ವಿಶ್ವಪ್ರಸಿದ್ಧ ತಿರುಪತಿಯಲ್ಲಿಯೂ ಬಾಂಬ್ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.25, ಹುಬ್ಬಳ್ಳಿ: ದೀಪಾವಳಿ ಸಂದರ್ಭದಲ್ಲಿ ಅತೀ ದಟ್ಟಣೆಯಿರುವ ಪ್ರಯಾಣಿಕರನ್ನು  ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ. ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 30ರಂದು ಎಸ್‌ಎಸ್ ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8ಕ್ಕೆ ಹೊರಟು ಅದೇ ದಿನ ಮಧ್ಯಾಹ್ನ 3.45ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.

ದೀಪಾವಳಿಗೆ ಏಕಮುಖ ವಿಶೇಷ ರೈಲು ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

UPSC ಪರೀಕ್ಷೆಯಲ್ಲಿ 71ನೇ ರ್‍ಯಾಂಕ್‌ ಗಳಿಸಿದ ಫಾಬಿ ರಶೀದ್ ಅವರ ಯಶೋಗಾಥೆ

(ನ್ಯೂಸ್ ಕಡಬ) newskadaba.com ಕೇರಳ, ಅ.25. ಯುಪಿಎಸ್ ಸಿಯಲ್ಲಿ ಮೊದಲ ಪ್ರಯತ್ನದಲ್ಲೇ ಪರೀಕ್ಷೆಯಲ್ಲಿ ಟಾಪರ್‌ ಆಗಿ ಪಾಸ್‌ ಆದ ಫಾಬಿ ರಶೀದ್ ಅವರ ಯಶೋಗಾಥೆ ಇಲ್ಲಿದೆ. ಫಾಬಿ ರಶೀದ್ ಕೇರಳದ ಅಲಪ್ಪುಳದ ನಿವಾಸಿಯಾಗಿದ್ದು, 1999ರ ಜೂನ್ 23ರಂದು ಜನಿಸಿದ್ದಾರೆ. ಅವರು 10 ನೇ ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಅವರ ಪೋಷಕರಿಬ್ಬರೂ ವೈದ್ಯರು. ಫಾಬಿಯ ತಾಯಿ ಮಕ್ಕಳ ತಜ್ಞೆ, ಇತ್ತೀಚೆಗಷ್ಟೇ ಸರ್ಕಾರಿ ಕೆಲಸದಿಂದ ನಿವೃತ್ತಿಯಾಗಿದ್ದಾರೆ. ಫಾಬಿಯ ತಂದೆ ಆಯುರ್ವೇದ ತಜ್ಞರಾಗಿದ್ದು, ಅವರೂ ಸರ್ಕಾರಿ

UPSC ಪರೀಕ್ಷೆಯಲ್ಲಿ 71ನೇ ರ್‍ಯಾಂಕ್‌ ಗಳಿಸಿದ ಫಾಬಿ ರಶೀದ್ ಅವರ ಯಶೋಗಾಥೆ Read More »

ರಾಷ್ಟ್ರೀಯ ನ್ಯೂಸ್

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ

(ನ್ಯೂಸ್ ಕಡಬ) newskadaba.com ಕೊಲ್ಕತ್ತಾ, ಅ.25. ಡಾನಾ ಚಂಡಮಾರುತವು ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಇದರಿಂದಾಗಿ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುತ್ತಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಜನಜೀವನ ತತ್ತರಿಸಿದೆ. ವಿಮಾನಯಾನ, ರೈಲ್ವೇ ಸಂಚಾರವನ್ನು ರದ್ದುಗೊಳಿಸಲಾಗಿದ್ದು ಮುಂಜಾಗ್ರತಾ ಕ್ರಮವಾಗಿ 10ಲಕ್ಷ ಜನರನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.  

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ Read More »

ರಾಷ್ಟ್ರೀಯ ನ್ಯೂಸ್
Scroll to Top