News Kadaba

ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಕ್ರೀಡಾಕೂಟ- ಎಲ್‌ಐಸಿ ತಂಡಕ್ಕೆ ಒಲಿದ ಚಾಂಪಿಯನ್‌

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ಉತ್ತರಾಖಂಡ್‌ ರಾಜಧಾನಿ ಡೆಹ್ರಾಡೂನ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಕ್ರೀಡಾಕೂಟದಲ್ಲಿ ಎಲ್‌ಐಸಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತಂಡದ ಸದಸ್ಯೆ ಜಾಯ್ಲಿನ್ ಲೋಬೊ ಅವರು ಲಾಂಗ್ ಜಂಪ್‌ ಮತ್ತು ಟ್ರಿಬ್ಬಲ್ ಜಂಪ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮೂಲಕ ಚಿನ್ನದ ಪದಕ ಹಾಗೂ 4×100 ಮತ್ತು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ‌ ಗಳಿಸಿ ಗಮನ ಸೆಳೆದರು.ಹೈಜಂಪ್‌ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, […]

ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಕ್ರೀಡಾಕೂಟ- ಎಲ್‌ಐಸಿ ತಂಡಕ್ಕೆ ಒಲಿದ ಚಾಂಪಿಯನ್‌ Read More »

ಕ್ರೀಡಾ ನ್ಯೂಸ್

ಮಾಣಿ ಬಾಲವಿಕಾಸ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾವರಿಗೆ ರಾಜ್ಯ ಮಟ್ಟದ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 22. ಅನುದಾನರಹಿತ ಖಾಸಗಿ ಶಾಲೆಗಳ ಸಂಘ (RUPSA) ನೀಡುವ ರಾಜ್ಯ ಮಟ್ಟದ ‘ವಿದ್ಯಾರತ್ನ’ ಪ್ರಶಸ್ತಿಗೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ. ಭಾಜನರಾಗಿದ್ದಾರೆ. ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಪ್ರಿಯಾ ಪ್ರಶಸ್ತಿ ಸ್ವೀಕರಿಸಿದರು. ಇವರು ಮಂಗಳೂರಿನ ಜೆಪ್ಪು ನಿವಾಸಿ, ಮೆಸ್ಕಾಂ

ಮಾಣಿ ಬಾಲವಿಕಾಸ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾವರಿಗೆ ರಾಜ್ಯ ಮಟ್ಟದ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಕೇಸ್: ಮೇಲ್ಮನವಿ ತಿರಸ್ಕಾರಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಅ.22 ನವದೆಹಲಿ:  ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಿರಾಕರಿಸಿದೆ. ಕೃಷ್ಣ ಶೆಟ್ಟಿ ಯವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣದ ವಿರುದ್ಧ ಕೃಷ್ ಆರ್ಟ್ ವರ್ಲ್ಡ್ ನ ಕೃಷ್ಣ ನಾಯಕ್ ರವರು ರಾಜ್ಯ ಹೈಕೋಟ್೯ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಕರ್ನಾಟಕ

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಕೇಸ್: ಮೇಲ್ಮನವಿ ತಿರಸ್ಕಾರಿಸಿದ ಹೈಕೋರ್ಟ್ Read More »

ಕರಾವಳಿ

ಕಂಬಳ ವಿರುದ್ಧ ಪೇಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಅ. 23ಕ್ಕೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜಧಾನಿಯಲ್ಲಿ ಅ.26ರಂದು ಆಯೋಜಿಸಲು ಉದ್ದೇಶಿಸಿದ್ದ ಕಂಬಳಕ್ಕೆ ಅನುಮತಿ ನೀಡಿದಂತೆ ಪೇಟಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ(23ಕ್ಕೆ) ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಂಪ್ರದಾಯಿಕವಾಗಿ ಆಚರಣೆ ಮಾಡುವ ಪದ್ಧತಿ ಶತಮಾನಗಳಿಂದ ನಡೆದು ಬಂದಿದೆ. 2023ರಲ್ಲಿ ಮೊದಲ ಬಾರಿಗೆ ರಾಜಧಾನಿಯಲ್ಲಿ ಕಂಬಳ ಆಯೋಜನೆ ಮಾಡಲಾಯಿತು. ಈ ಬಾರಿ ಅ.26ಕ್ಕೆ ಕಂಬಳ ಆಯೋಜನೆಗೆ

ಕಂಬಳ ವಿರುದ್ಧ ಪೇಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಅ. 23ಕ್ಕೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ
Death, deadbody, Waterfall

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜಧಾನಿ ಬೆಂಗಳೂರಿನಲ್ಲಿ ಕೆಲವುದಿನಗಳಿಂದ ನಿರಂತರವಾಗಿ ಮೆಳೆಯಾಗುತ್ತಿದ್ದು, ಈ ಮಧ್ಯೆ ನಗರದ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮೀ (13)‌ ಎಂದು‌ ಗುರುತಿಸಲಾಗಿದೆ. ಸೋಮವಾರ(ಅ.22) ಸಂಜೆ ಈ ದುರ್ಘಟನೆ‌ ನಡೆದಿದ್ದು, ಮೃತ ಮಕ್ಕಳ ತಾಯಿ ಬಿಬಿಎಂಪಿ ಪೌರಕಾರ್ಮಿಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಕೆಂಗೇರಿ ಸಮೀಪದ ಹರ್ಷ ಲೇಔಟ್ ಗೆ ಬಂದು ನೆಲೆಸಿದ್ದು, ಕೆಲಸದ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿದ್ದಾರೆ. ಹೀಗಾಗಿ ಅನಾರೋಗ್ಯದ ಕಾರಣಕ್ಕೂ ಜಾಮೀನು ಕೇಳುತ್ತಿದ್ದೇವೆ ಎಂದು ಕೋರ್ಟ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ Read More »

ಕರ್ನಾಟಕ

‘ವಯನಾಡ್ಗೆ ಪ್ರಿಯಾಂಕಾಗಿಂತ ಉತ್ತಮ ಪ್ರತಿನಿಧಿಯನ್ನು ಊಹಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ

(ನ್ಯೂಸ್ ಕಡಬ) newskadaba.com ಅ.22 ನವದೆಹಲಿ:  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಒಂದು ದಿನದ ಮೊದಲು, ರಾಹುಲ್ ಗಾಂಧಿ ಅವರು ಮಂಗಳವಾರ ಈ ಕ್ಷೇತ್ರಕ್ಕೆ ತಮ್ಮ ಸಹೋದರಿಗಿಂತಲೂ ಉತ್ತಮ ಪ್ರತಿನಿಧಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಉಪಸ್ಥಿತರಿರಲಿದ್ದಾರೆ. “ವಯನಾಡಿನ ಜನರು

‘ವಯನಾಡ್ಗೆ ಪ್ರಿಯಾಂಕಾಗಿಂತ ಉತ್ತಮ ಪ್ರತಿನಿಧಿಯನ್ನು ಊಹಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ Read More »

ಬ್ರೇಕಿಂಗ್ ನ್ಯೂಸ್

10 ಕೋಟಿ ಸದಸ್ಯರನ್ನು ಹೊಂದಿದ ಬಿಜೆಪಿ ವಿಶ್ವದಾಖಲೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಅ. 22. ವಿಶ್ವದಲ್ಲಿಯೇ ಅತಿದೊಡ್ಡ ಕಾರ್ಯಕರ್ತರ ಪಡೆ ಹೊಂದಿರುವ ಬಿಜೆಪಿ ತನ್ನ ಸದಸ್ಯತ್ವ 10 ಕೋಟಿಯನ್ನು ತಲುಪುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಅಕ್ಟೋಬರ್ 11ರಿಂದ ಎರಡನೇ ಹಂತದ ಅಭಿಯಾನ ಆರಂಭಿಸಲಾಗಿದೆ. ಈ ತಿಂಗಳ ಅಂತ್ಯದವರೆಗೂ ನೋಂದಣಿ ಮುಂದುವರಿಯಲಿದೆ. ನಂತರ ನವೆಂಬರ್ 1ರಿಂದ 5ರವರೆಗೆ ಪರಿಶೀಲನೆಯ ಅವಧಿ ಇರುತ್ತದೆ. ಹೀಗಾಗಿ, ಪಕ್ಷವು ತನ್ನ ಹಿಂದಿನ ಗರಿಷ್ಠ 11 ಕೋಟಿ ಸದಸ್ಯರನ್ನು ಮೀರಿಸುವ ಗುರಿ ಹೊಂದಿದೆ. ದೈಹಿಕ ಮತ್ತು ಆನ್‌ಲೈನ್ ಮೂಲಕ ಬೂತ್

10 ಕೋಟಿ ಸದಸ್ಯರನ್ನು ಹೊಂದಿದ ಬಿಜೆಪಿ ವಿಶ್ವದಾಖಲೆ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ

(ನ್ಯೂಸ್ ಕಡಬ) newskadaba.com ಅ.21 ಉಡುಪಿ:  ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗೊಬ್ಬ  ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ . ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ Read More »

ಕರಾವಳಿ

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22. ಇಲ್ಲಿನ ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದ್ದು, ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುವಂತಾಗಿದೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಜೊತೆಗೆ ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬಾಳೆ

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ Read More »

ಕರಾವಳಿ
Scroll to Top