News Kadaba

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು: ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲೇ ಸಂಕಲನಾತ್ಮಕ ಮೌಲ್ಯ ಮಾಪನ-2 […]

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಜೈಪುರದಲ್ಲಿ ತುರ್ತು ಭೂಸ್ಪರ್ಶ

(ನ್ಯೂಸ್ ಕಡಬ) newskadaba.com ದೆಹಲಿ, ಅ. 19. ದುಬೈ-ಜೈಪುರ ಏರ್ ಇಂಡಿಯಾ ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಇಂದು ಬೆಳಗ್ಗೆ ಜೈಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು, ನಂತರ ಅದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಬೆದರಿಕೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ ನಂತರ, ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. 189 ಪ್ರಯಾಣಿಕರಿದ್ದ ವಿಮಾನವು ಬೆಳಗಿನ ಜಾವ 1.20ಕ್ಕೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಜೈಪುರದಲ್ಲಿ ತುರ್ತು ಭೂಸ್ಪರ್ಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಅಂಚೆ ಮೂಲಕ ತರಿಸಿಕೊಂಡ 21 ಕೋಟಿ ಮೌಲ್ಯದ ಡ್ರಗ್ಸ್ ವಶ

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು:  ದುಷ್ಕರ್ಮಿಗಳು ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. 28 ಕೆ.ಜಿ. ಹೈಡ್ರೋ ಗಾಂಜಾ, 2,569 ಎಲ್‌ಎಸ್‌ಡಿ, 1 ಕೆ.ಜಿ. 618 ಗ್ರಾಂ ಎಂಡಿಎಂಎ ಕ್ರಿಸ್ಟೆಲ್‌, 11,908 ಎಕ್ಸ್‌ಟೆಸಿ ಮಾತ್ರೆಗಳು, 770 ಗ್ರಾಂ ಹೆರಾಯಿನ್‌, 102 ಗ್ರಾಂ ಕೊಕೇನ್‌,

ಭಾರತೀಯ ಅಂಚೆ ಮೂಲಕ ತರಿಸಿಕೊಂಡ 21 ಕೋಟಿ ಮೌಲ್ಯದ ಡ್ರಗ್ಸ್ ವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48) ಎಂದು ಗುರುತಿಸಲಾಗಿದೆ. ಅ.4ರಂದು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿಕ ಸ್ಫೋಟಕ ಸಾಧನ (ಐಇಡಿ) ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಈ ಸಂಬಂಧ ವಿಶ್ವೇಶ್ವರಪುರ ಮತ್ತು ಹನುಮಂತನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಧಾನಪರಿಷತ್ ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿಧಾನಪರಿಷತ್ ಉಪ ಚುನಾವಣೆಗೆ ಸಂಬಂಧಿಸಿ ಅ.21ರಂದು ಮತದಾನ ನಡೆಯಲಿದೆ ಈ ಹಿನ್ನೆಲೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಮತದಾನ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ಮಾಡಬಾರದು. ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು

ವಿಧಾನಪರಿಷತ್ ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ

ಬಾಲ್ಯ ವಿವಾಹ ನಿಷೇಧ ಎಲ್ಲಾ ಧರ್ಮಕ್ಕೆ ಅನ್ವಯ- ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com ಅ.19, ನವದೆಹಲಿ:  ‘ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಯಾವುದೇ ಧರ್ಮದ ವೈಯಕ್ತಿಕ ಕಾನೂನಿನ ಅಡಿಯ ಸಂಪ್ರದಾಯಗಳನ್ನು ಮುಂದಿಟ್ಟು ಕೊಂಡು ಚಿವುಟಿ ಹಾಕಲು ಆಗದು’ ಎಂದು ಮಹತ್ವದ ಆದೇಶ ಪ್ರಕಟಿಸಿರುವ ಸುಪ್ರೀಂ ಕೋರ್ಟ್, ‘ಚಿಕ್ಕ ಮಕ್ಕಳಿಗೆ ವಿವಾಹ ಮಾಡಿದರೆ ಅವರು ತಮ್ಮ ಜೀವನ ಸಂಗಾತಿ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಮೊಟಕು ಗೊಳಿಸಿದಂತೆ’ ಎಂದಿದೆ. ಈ ಮೂಲಕ ಬಾಲ್ಯ ವಿವಾಹ ನಿಷೇಧ ಕಾಯ್ದೆ ಎಲ್ಲಾ ಧರ್ಮಗಳಿಗೂ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ದೇಶದಲ್ಲಿ ಏಕರೂಪದ ನಾಗರಿಕ

ಬಾಲ್ಯ ವಿವಾಹ ನಿಷೇಧ ಎಲ್ಲಾ ಧರ್ಮಕ್ಕೆ ಅನ್ವಯ- ಸುಪ್ರೀಂಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆಟ್ರೋಲ್ ಚಾಲಿತ ಸ್ಕೂಟರ್‌ ಗೆ ಬೆಂಕಿ: ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಭಯಂಕರವಾದ ಘಟನೆ ನಡೆದಿದ್ದು, ವಸತಿ ಗೃಹದಲ್ಲಿ ನಿಲ್ಲಿಸಿದ್ದ ಪೆಟ್ರೋಲ್ ಚಾಲಿತ ಟಿವಿಎಸ್ ಎನ್‌ಟಾರ್ಕ್ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಎರಡು ತಿಂಗಳ ಹಿಂದೆಯಷ್ಟೇ ಸ್ಕೂಟರ್ ಖರೀದಿಸಿದ್ದ ಐಟಿಐ ವಿದ್ಯಾರ್ಥಿ ರಾಕೇಶ್ ಮಾಲೀಕತ್ವದ ಸ್ಕೂಟರ್ 12:30 ರ ಸುಮಾರಿಗೆ ಹೊತ್ತಿ ಉರಿದಿದ್ದು, ಮನೆಯ ಕಿಟಕಿ ಮತ್ತು ವಿದ್ಯುತ್ ತಂತಿಗಳಿಗೆ ವೇಗವಾಗಿ ಬೆಂಕಿ ವ್ಯಾಪಿಸಿದೆ. ಅದೃಷ್ಟವಶಾತ್, ಕುಟುಂಬವು ಆ ಸಮಯಕ್ಕೆ ಎಚ್ಚರವಾಯಿತು ಮತ್ತು ದೊಡ್ಡ ಅನಾಹುತ

ಪೆಟ್ರೋಲ್ ಚಾಲಿತ ಸ್ಕೂಟರ್‌ ಗೆ ಬೆಂಕಿ: ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಮತ್ತೆ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಅ.19, ಮುಂಬೈ: ಎನ್ ಸಿಪಿ ಬಣದ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಶುಕ್ರವಾರದಂದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 9ಕ್ಕೇರಿದೆ. ಬಂಧಿತ 5 ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಐವರು ಆರೋಪಿಗಳನ್ನು ನ್ಯಾಯಾಲಯ ಅಕ್ಟೋಬರ್ 25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಇಬ್ಬರು ಶೂಟರ್‌ಗಳನ್ನು ಬಂಧಿಸಲಾಗಿದ್ದು, ಓರ್ವ ಪ್ರಮುಖ ಶೂಟರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಶೋಧ ನಡೆಯುತ್ತಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ‍.ಬಂಧಿತ

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಮತ್ತೆ ಐವರು ಆರೋಪಿಗಳು ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್

‘ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ’- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಅ.18,ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ

‘ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ’- ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನ; ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ.18,: ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ಮೂಲದ ಸೋನಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ, ೧೫ ಸಾವಿರ ಮೌಲ್ಯದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈತನು ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಭುಜದ ಮೇಲೆ ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಹೋಗುತ್ತಿದ್ದನು. ಈ ವೇಳೆ ಪೊಲೀಸ್ ಜೀಪ್ ನೋಡಿ ಪರಾರಿಯಾಗಲು ಯತ್ನಿಸಿದ್ದಾನೆ.

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನ; ಆರೋಪಿ ಅರೆಸ್ಟ್ Read More »

ಕರಾವಳಿ
Scroll to Top