News Kadaba

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದ ಕೊಹ್ಲಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 17. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಾಖಲೆ ಮಾಡುವುದರೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ […]

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದ ಕೊಹ್ಲಿ Read More »

ಕ್ರೀಡಾ ನ್ಯೂಸ್

ಕಾಲುವೆ ನೀರಲ್ಲಿ ಕೊಚ್ಚಿ ಹೋಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾವೇರಿ, ಅ. 17. ಭಾರೀ ಮಳೆಯ ವೇಳೆ ಬಾಲಕನೋರ್ವ ಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ನಗರದ ಹಳೇ ಪಿ.ಬಿ.ರಸ್ತೆಗೆ ಹೊಂದಿಕೊಂಡಿರುವ ಶಿವಾಜಿ ನಗರದ 3ನೇಕ್ರಾಸ್ ನಲ್ಲಿ ಸಂಭವಿಸಿದೆ. ಮೃತನನ್ನು ನಿವೇದನ್ ಗುಡಗೇರಿ(10) ಎಂದು ಗುರುತಿಸಲಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದ ಇಂದು ನಸುಕಿನ ವರೆಗೆ ಭಾರೀ ಮಳೆಯಾಗಿದೆ. ಮಳೆಯಬ್ಬರಕ್ಕೆ ಕಾಲುವೆ ಹಾಗೂ ರಸ್ತೆಯಲ್ಲಿ ನೀರು ಹರಿದಿದೆ. ರಸ್ತೆ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ. ಸುಮಾರು

ಕಾಲುವೆ ನೀರಲ್ಲಿ ಕೊಚ್ಚಿ ಹೋಗಿ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಿಟನ್‌ನ ಖ್ಯಾತ ಪಾಪ್ ಗಾಯಕ ಲಿಯಾಮ್ ಪಾಯ್ನ್ ನಿಧನ

(ನ್ಯೂಸ್ ಕಡಬ) newskadaba.com ಬೋನಸ್ ಐರಿಸ್, ಅ. 17. ಬ್ರಿಟನ್‌ನ ಖ್ಯಾತ ಪಾಪ್ ಗಾಯಕ, ಲಿಯಾಮ್ ಪಾಯ್ನ್(31) ಅವರು ಅರ್ಜೆಂಟೀನಾದ ರಾಜಧಾನಿ ಬೋನಸ್ ಐರಿಸ್‌ನಲ್ಲಿ ತಂಗಿದ್ದ ಹೋಟೆಲ್ ಕೊಠಡಿಯ ಬಾಲ್ಕನಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಲಿಯಾಮ್, ನಗರದ ಕಾಸಾ ಸರ್ ಹೋಟೆಲ್ ನ ಮೂರನೇ ಮಹಡಿಯ ತನ್ನ ಕೋಣೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಳಗೆ ಹಾರಿದ ಕೂಡಲೇ ಲಿಯಾಮ್ ಮೃತಪಟ್ಟಿದ್ದಾರೆ ಎಂದು ಬೋನಸ್ ಐರಿಸ್ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಬೋನಸ್ ಐರಿಸ್

ಬ್ರಿಟನ್‌ನ ಖ್ಯಾತ ಪಾಪ್ ಗಾಯಕ ಲಿಯಾಮ್ ಪಾಯ್ನ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕಣ್ಣು ತೆರೆದ ನ್ಯಾಯದೇವತೆ- ಸುಪ್ರೀಂ ಕೋರ್ಟ್‌ನಲ್ಲಿ ಮರುರೂಪಿಸಿದ ಪ್ರತಿಮೆ ಅಳವಡಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಅ. 17. ಭಾರತದ ನ್ಯಾಯಾಲಯಗಳಲ್ಲಿ ಇರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ್ದ ಬಟ್ಟೆಯನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಆದೇಶವನ್ನು ನೀಡಿದ್ದಾರೆ. ಲೇಡಿ ಜಸ್ಟೀಸ್‌ನ ಮರುರೂಪಿಸಿದ ಪ್ರತಿಮೆಯನ್ನು ಅಳವಡಿಸುವಂತೆ ಸೂಚಿಸಲಾಗಿದೆ. ಈ ಪ್ರತಿಮೆಯು ಕತ್ತಿಯ ಬದಲಿಗೆ ಭಾರತೀಯ ಸಂವಿಧಾನವನ್ನು ಹೊಂದಿದೆ ಮತ್ತು ತೆರೆದ ಕಣ್ಣುಗಳನ್ನು ಹೊಂದಿದೆ, ಇದು ಭಾರತದಲ್ಲಿ ನ್ಯಾಯವು ಕುರುಡಲ್ಲ ಮತ್ತು ಕೇವಲ ಶಿಕ್ಷೆಯನ್ನು ಪ್ರತಿನಿಧಿಸುವುದಿಲ್ಲ ಎಂಬುದನ್ನು ಸಂಕೇತಿಸುತ್ತದೆ. ಈ ಬದಲಾವಣೆಯು ವಸಾಹತುಶಾಹಿ ಪ್ರಭಾವಗಳಿಂದ ಸಾಂವಿಧಾನಿಕ ಅಧಿಕಾರದ

ಕಣ್ಣು ತೆರೆದ ನ್ಯಾಯದೇವತೆ- ಸುಪ್ರೀಂ ಕೋರ್ಟ್‌ನಲ್ಲಿ ಮರುರೂಪಿಸಿದ ಪ್ರತಿಮೆ ಅಳವಡಿಸುವಂತೆ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ನಾಳೆ ಪ್ರೊ ಕಬಡ್ಡಿ ಲೀಗ್‌ 11ನೇ ಆವೃತ್ತಿಗೆ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಅ. 17. ಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್‌  11ನೇ ಆವೃತ್ತಿಗೆ ನಾಳೆ ಅಧಿಕೃತ ಚಾಲನೆ ಸಿಗಲಿದೆ. ಇನ್ನು ಮೂರು ತಿಂಗಳುಗಳ ಕಾಲ ಕ್ರೀಡಾಭಿಮಾನಿಗಳಿಗೆ ಕಬಡ್ಡಿ ರಸದೌತಣವೂ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಮತ್ತು ಬೆಂಗಳೂರು ಬುಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಅದೇ ದಿನ ನಡೆಯುವ ಎರಡನೇ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ಮತ್ತು ಯು ಮುಂಬಾ ಮುಖಾಮುಖಿಯಾಗಲಿವೆ. ಪಂದ್ಯಗಳು ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಪ್ರಸಾರಗೊಳ್ಳಲಿದೆ. ಟೂರ್ನಿಯಲ್ಲಿ ಒಟ್ಟು 12 ತಂಡಗಳು ಸೆಣಸಲಿವೆ. ಪಂದ್ಯಾವಳಿಯು ಅಕ್ಟೋಬರ್

ನಾಳೆ ಪ್ರೊ ಕಬಡ್ಡಿ ಲೀಗ್‌ 11ನೇ ಆವೃತ್ತಿಗೆ ಅಧಿಕೃತ ಚಾಲನೆ Read More »

ಕ್ರೀಡಾ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಅ. 17. ಎರಡು ವಾರಗಳ ಹಿಂದೆಯಷ್ಟೇ ಕೊಲ್ಲಿ ರಾಷ್ಟ್ರದಿಂದ ಊರಿಗೆ ಮರಳಿದ್ದ ಯುವಕನೊಬ್ಬನ ಮೃತದೇಹ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಯುವಕನನ್ನು ತೂಮಿನಾಡು ಕುಚ್ಚಿಕ್ಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಕೆ.ಎಚ್. ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಅನ್ಸಾರ್ (32) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 11 ರ ಸುಮಾರಿಗೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮುಹಮ್ಮದ್ ಅನ್ಸಾರ್ ಪತ್ತೆಯಾಗಿದ್ದರೆನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವವನ್ನು ರಕ್ಷಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..! Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 17 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ದರ ಇಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 20 ರೂ. ಮತ್ತು 22 ರೂ. ಏರಿಕೆ ಮಾಡಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,160 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,811 ರೂ. ಇದೆ. 22 ಕ್ಯಾರಟ್‌ ಚಿನ್ನದ

ಇಂದಿನ ಚಿನ್ನದ ದರ Read More »

ಕರ್ನಾಟಕ

ಬೀದಿನಾಯಿಗಳ ದಾಳಿಗೆ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಚಿತ್ರದುರ್ಗ, ಅ. 17. ಬೀದಿನಾಯಿಗಳ ದಾಳಿಗೆ ಒಳಗಾಗಿ 11 ವರ್ಷದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಮೃತಪಟ್ಟ ಬಾಲಕನನ್ನು ರಾಂಪುರ ಗ್ರಾಮದ ಮಿಥುನ್(11) ಎಂದು ಗುರುತಿಸಲಾಗಿದೆ. ಮಿಥುನ್ ಟ್ಯೂಷನ್ ಗೆ ತೆರಳುತ್ತಿದ್ದ ವೇಳೆ ದಾರಿಮಧ್ಯೆ ಬೀದಿನಾಯಿಗಳು ದಾಳಿ ಮಾಡಿವೆ. ಬೀದಿನಾಯಿಗಳು ಮಿಥುನ್ ತಲೆ, ಕೆನ್ನೆ, ಮೈಯೆಲ್ಲಾ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು. ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಆಟೋ ಚಾಲಕ ರಾಜಪ್ಪ ಎಂಬವರು ಮಿಥುನ್ ನನ್ನು ನಾಯಿಗಳಿಂದ

ಬೀದಿನಾಯಿಗಳ ದಾಳಿಗೆ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಹಾರ ವ್ಯರ್ಥ ಕಡೆಗೆ ಶೀಘ್ರ ಕಾನೂನು

(ನ್ಯೂಸ್ ಕಡಬ)newskadaba.com, ಅ. 17 ಬೆಂಗಳೂರು: ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಕಾನೂನು ರೂಪಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಬುಧವಾರ ಹೇಳಿದರು. ನಮ್ಮ ಅಹಾರ ವ್ಯವಸ್ಥೆಯನ್ನು ಪರಿವರ್ತಿಸಲು ಮತ್ತು ಹಸಿವು ನಿವಾರಿಸುವುದು ಎಂಬ ಚಿಂತನೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದು, ರಾಜ್ಯದ ಕಟ್ಟ ಕಡೆಯ

ಆಹಾರ ವ್ಯರ್ಥ ಕಡೆಗೆ ಶೀಘ್ರ ಕಾನೂನು Read More »

ಕರ್ನಾಟಕ

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್ ಖನ್ನಾ ಶಿಫಾರಸು

(ನ್ಯೂಸ್ ಕಡಬ) newskadaba.com  ನವದೆಹಲಿ, ಅ. 17. ಸುಪ್ರೀಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಾಧೀಶರನ್ನಾಗಿ ಸುಪ್ರೀಂಕೋರ್ಟ್ ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶ ಸಂಜೀವ್ ಖನ್ನಾ ಅವರ ಹೆಸರನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ. ಈ ಶಿಫಾರಸನ್ನು ಕೇಂದ್ರ ಸರಕಾರ ಅಂಗೀಕರಿಸಿದರೆ ನ್ಯಾ.ಸಂಜೀವ್ ಖನ್ನಾ ಭಾರತದ ಸುಪ್ರೀಂ ಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ಅವರ ಸೇವಾವಧಿ ಇನ್ನು ಆರು ತಿಂಗಳು ಇರಲಿದ್ದು, ಮೇ 13, 2025ರಂದು

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್ ಖನ್ನಾ ಶಿಫಾರಸು Read More »

ರಾಷ್ಟ್ರೀಯ ನ್ಯೂಸ್
Scroll to Top