News Kadaba

ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ

(ನ್ಯೂಸ್ ಕಡಬ)newskadaba.com ಸುರತ್ಕಲ್, ಅ. 11.  ಇಲ್ಲಿನ ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಸಹೋದರಿಗೆ ಮನೆಯಿಂದ ಊಟ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಾಳು ಯುವಕ ಸುರತ್ಕಲ್‌ ನ ಖಾಸಗಿ ಆಸ್ಪತ್ರೆಯಲ್ಲಿ […]

ದ್ವಿಚಕ್ರ ವಾಹನದೊಂದಿಗೆ ಹೊಂಡಕ್ಕೆ ಬಿದ್ದು ಗಾಯಗೊಂಡ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್

ವಿನಯ್ ಕುಲಕರ್ಣಿ ವಿರುಧ್ದ ಅತ್ಯಾಚಾರ ಆರೋಪ

(ನ್ಯೂಸ್ ಕಡಬ)newskadaba.com, ಅ. 11 ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಆರೋಪದ ತನಿಖೆಯ ಹೊಣೆ ಸಿಐಡಿ ಹೆಗಲಿಗೆ ಹೊರಿಸಿದೆ. ಧಾರವಾಡ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಶಾಸಕರ ವಿರುದ್ಧ ಹಾವೇರಿ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಶಾಸಕರು ಮಹಿಳೆಯ ವಿರುದ್ದ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣದ ತನಿಖೆಯ ಹೊಣೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ನೀಡಿದೆ. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ

ವಿನಯ್ ಕುಲಕರ್ಣಿ ವಿರುಧ್ದ ಅತ್ಯಾಚಾರ ಆರೋಪ Read More »

ಕರ್ನಾಟಕ

ಮಂಗಳೂರು: “ಕುಡ್ಲದ ಪಿಲಿ ಪರ್ಬ- 2024” ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇತ್ತೀಚೆಗೆ ಸ್ಪರ್ಧಾಕೂಟದ ಸ್ಪರ್ಶ ಲಭಿಸಿದ್ದು, ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಹಲವು ಹುಲಿವೇಷ

ಮಂಗಳೂರು: “ಕುಡ್ಲದ ಪಿಲಿ ಪರ್ಬ- 2024” ಉದ್ಘಾಟನಾ ಸಮಾರಂಭ Read More »

ಕರಾವಳಿ

ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಆಗ್ರಹ

(ನ್ಯೂಸ್ ಕಡಬ)newskadaba.com, ಅ. 11 ಬೆಳಾಗಾವಿ: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಗೋವಾ ಸರ್ಕಾರ ಒಡ್ಡುತ್ತಿರುವ ಅಡೆತಡೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕವು ಯಾವುದೇ ವಿಳಂಬವಿಲ್ಲದೆ ಯೋಜನೆಗೆ ಅಗತ್ಯ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದು, ಸುಪ್ರೀಂ ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿಲ್ಲ ಎಂದು ತಿಳಿಸಿದೆ. ಅಕ್ಟೋಬರ್ 9 ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯು) 80 ನೇ ಸ್ಥಾಯಿ ಸಮಿತಿ ಸಭೆಯಲ್ಲಿ ಕಣಕುಂಬಿಯಲ್ಲಿ ಕಳಸಾ-ಬಂಡೂರಿ ಯೋಜನೆಯಡಿ ನೀರನ್ನು ತಿರುಗಿಸುವ ಬಗ್ಗೆ ಚರ್ಚಿಸಲಾಯಿತು. ಕಾಳಿ ಮತ್ತು

ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಆಗ್ರಹ Read More »

ಕರ್ನಾಟಕ

ಬಾಂಗ್ಲಾದ ಜೇಶೋರೇಶ್ವರಿ ದೇವಳದ ಕಾಳಿದೇವಿಗೆ ಮೋದಿ ನೀಡಿದ ಕಿರೀಟ ಕಳವು

(ನ್ಯೂಸ್ ಕಡಬ)newskadaba.com, ಅ. 11ಢಾಕಾ: 2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಸತ್ಖಿರಾ ನಗರದ ಶ್ಯಾಮನಗರದಲ್ಲಿರುವ ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದ ಚಿನ್ನದ ಕಿರೀಟ ಕಳವಾಗಿದೆ. ಸ್ಥಳೀಯ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದ ನರೇಂದ್ರ ಮೋದಿ ಜೇಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಚಿನ್ನ ಮತ್ತು ಬೆಳ್ಳಿಯಿಂದ ಮಾಡಿದ ಈ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ಅಕ್ಟೋಬರ್‌ 10 ರಂದು ತಡರಾತ್ರಿ ಸುಮಾರು 2 ಗಂಟೆಗೆ ಕಿರೀಟವನ್ನು ಕಳವು

ಬಾಂಗ್ಲಾದ ಜೇಶೋರೇಶ್ವರಿ ದೇವಳದ ಕಾಳಿದೇವಿಗೆ ಮೋದಿ ನೀಡಿದ ಕಿರೀಟ ಕಳವು Read More »

ಕರಾವಳಿ

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 11.  2000 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ ನೃಪತುಂಗ ರಸ್ತೆಯಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯಲ್ಲಿ ಬದಲಾವಣೆಗೆ ಯತ್ನಿಸಿದ ಐವರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಎ.ಕೆ.ಅಫೈಲ್ ಹುಸೇನ್ (29), ಪ್ರಸೀತ್ (47), ಮೊಹಮ್ಮದ್ ಆಫ್ಘಾಸ್ (34), ನೂರುದ್ದೀನ್ ಅಲಿಯಾಸ್ ಅನ್ವರ್ (34) ಹಾಗೂ ಪ್ರಿಯೇಶ್ (34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮುದ್ರಣ ಯಂತ್ರ, ಕರೆನ್ಸಿ ಪೇಪರ್ಸ್ ಮತ್ತು ರೂ.54 ಲಕ್ಷ ಮೌಲ್ಯದ ಎರಡು ಸಾವಿರ

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಯನಾಡ್ ಗೆ NDRFನಿಂದ ಪರಿಹಾರ ಬಿಡುಗಡೆ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ)newskadaba.com, ಅ. 11 ಕೇರಳ : ವಯನಾಡಿಗೆ ಎನ್‌ಡಿಆರ್‌ಎಫ್(NDRF) ಮತ್ತು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಹಣಕಾಸು ಒದಗಿಸುವ ಕುರಿತು ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರಕಾರಕ್ಕೆ ಕೇರಳ ಹೈಕೋರ್ಟ್ ಸೂಚಿಸಿದೆ. ನ್ಯಾಯಮೂರ್ತಿ ಎ.ಕೆ. ಜಯಶಂಕರ ನಂಬಿಯಾರ್ ಮತ್ತು ನ್ಯಾಯಮೂರ್ತಿ ಶ್ಯಾಮ್ ಕುಮಾರ್ ವಿ ಎಂ ಅವರ ವಿಭಾಗೀಯ ಪೀಠವು, ವಯನಾಡು ಭೂಕುಸಿತದ ಬಳಿಕ ನೈಸರ್ಗಿಕ ವಿಕೋಪಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆಗೆ ಸಂಬಂಧಿಸಿ ದಾಖಲಾದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ವೇಳೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ವಯನಾಡ್ ಗೆ NDRFನಿಂದ ಪರಿಹಾರ ಬಿಡುಗಡೆ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ಸೂಚನೆ Read More »

ಬ್ರೇಕಿಂಗ್ ನ್ಯೂಸ್

ನಾಳೆ ಭಾರತ-ಬಾಂಗ್ಲಾ ಅಂತಿಮ ಟಿ20

(ನ್ಯೂಸ್ ಕಡಬ)newskadaba.com ಹೈದರಾಬಾದ್, ಅ. 11.  ಪ್ರವಾಸಿ ಬಾಂಗ್ಲಾದೇಶ ಮತ್ತು ಆತಿಥೇಯ ಭಾರತ ನಡುವಣ ಮೂರನೇ ಹಾಗೂ ಅಂತಿಮ ಟಿ20 ಪಂದ್ಯ ನಾಳೆ (ಶನಿವಾರ) ಹೈದರಾಬಾದ್‌ನ ‘ರಾಜೀವ್‌ ಗಾಂಧಿ ಇಂಟರ್‌ನ್ಯಾಶನಲ್‌ ಸ್ಟೇಡಿಯಂ’ನಲ್ಲಿ ನಡೆಯಲಿದೆ. ಈಗಾಗಲೇ 2 ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿರುವ ಸೂರ್ಯಕುಮಾರ್‌ ಯಾದವ್‌ ಪಡೆ ಅಂತಿಮ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡುವ ಯೋಜನೆಯಲ್ಲಿದೆ. ವಿಜಯದಶಮಿಯಂದು ಯಾರಿಗೆ ವಿಜಯ ಒಲಿಯಲಿದೆ ಎಂದು ಕಾದು ನೋಡಬೇಕಿದೆ.  

ನಾಳೆ ಭಾರತ-ಬಾಂಗ್ಲಾ ಅಂತಿಮ ಟಿ20 Read More »

ಕ್ರೀಡಾ ನ್ಯೂಸ್

‘ಕನ್ನಡ ರಾಜ್ಯೋತ್ಸವದಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು’: ಡಿಕೆಶಿ

(ನ್ಯೂಸ್ ಕಡಬ)newskadaba.com, ಅ. 11 ಬೆಂಗಳೂರು : ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸೂಚಿಸಿದ್ದಾರೆ. ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ  ದಿನದ ರೀತಿ ಸಂಭ್ರಮಿಸಬೇಕು ಎಂದು ತಿಳಿಸಿದರು. ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು.

‘ಕನ್ನಡ ರಾಜ್ಯೋತ್ಸವದಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು’: ಡಿಕೆಶಿ Read More »

ಕರ್ನಾಟಕ

ಪಡಿತರ ಅಕ್ಕಿಗೆ ಪೌಷ್ಟಿಕಾಂಶ ಸೇರ್ಪಡೆ- ಪ್ರಲ್ಹಾದ ಜೋಶಿ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಅ. 11.  ಕೇಂದ್ರ ಸರ್ಕಾರ ವಿತರಿಸುವ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಠಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಅನುಮೋದನೆ ನೀಡಿದೆ. ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ

ಪಡಿತರ ಅಕ್ಕಿಗೆ ಪೌಷ್ಟಿಕಾಂಶ ಸೇರ್ಪಡೆ- ಪ್ರಲ್ಹಾದ ಜೋಶಿ Read More »

ಕರ್ನಾಟಕ
Scroll to Top