News Kadaba

ಅ.12ರಂದು ನಾಯಬ್ ಸಿಂಗ್ ಸೈನಿ ಹರಿಯಾಣ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಾಧ್ಯತೆ

(ನ್ಯೂಸ್ ಕಡಬ)newskadaba.com, ಅ. ಹರಿಯಾಣ09: ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿಯು ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಬಿಜೆಪಿ ಗೆಲುವಿನ ಬೆನ್ನಲ್ಲೇ ನಯಾಬ್ ಸಿಂಗ್ ಸೈನಿ ಅವರು ಹರಿಯಾಣದ ಮುಂದಿನ ಸಿಎಂ ಆಗುತ್ತಾರೆ ಎಂಬುದು ಬಹುತೇಕ ಅಂತಿಮವಾಗಿದ್ದು, ಅಕ್ಟೋಬರ್ 12ರಂದು ಪ್ರಮಾಣವಷನ ಸ್ವೀಕರಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್ ಲಾಲ್ ಬಧೋಲಿ ಮತ್ತು ನಾಯಬ್ ಸೈನಿ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಮೂಲಗಳ ಪ್ರಕಾರ ಅಕ್ಟೋಬರ್ 12 ವಿಜಯದಶಮಿಯಂದು ನಾಯಬ್ ಸೈನಿ ಅವರು ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಅ.12ರಂದು ನಾಯಬ್ ಸಿಂಗ್ ಸೈನಿ ಹರಿಯಾಣ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಾಧ್ಯತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅತ್ಯಾಚಾರ ಆರೋಪ: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ವಿನಯ್ ಕುಲಕರ್ಣಿ ಅವರನ್ನು ಆರೋಪಿ 1 (A1) ಮತ್ತು ಅವರ ಆಪ್ತ ಸಹಾಯಕ ಅರ್ಜುನ್ ಅನ್ನು ಆರೋಪಿ 2 (A2) ಎಂದು ಹೆಸರಿಸಿ ಎಫ್‌ಐಆರ್ ದಾಖಲಿಸಿದ್ದಾರೆ.  

ಅತ್ಯಾಚಾರ ಆರೋಪ: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರ್ ಜಿ ಕರ್ ಆಸ್ಪತ್ರೆಯ 50 ವೈದ್ಯರ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಅ. 09. ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ನಡೆದ ಇಲ್ಲಿನ ಆರ್ ಜಿ ಕರ್ ಆಸ್ಪತ್ರೆಯಲ್ಲಿ ನಾಲ್ಕು ದಿನಗಳಿಂದ ಆಮರಣ ಉಪವಾಸ ಕೈಗೊಂಡಿರುವ ಏಳು ಮಂದಿ ಕಿರಿಯ ವೈದ್ಯರಿಗೆ ಬೆಂಬಲಾರ್ಥವಾಗಿ ಆಸ್ಪತ್ರೆಯ 50 ಮಂದಿ ಹಿರಿಯ ವೈದ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಆಮರಣ ಉಪವಾಸ ಕೊನೆಗೊಳಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಡ ತರುವ ಉದ್ದೇಶದಿಂದ 50ಕ್ಕೂ ಹೆಚ್ಚು ವೈದ್ಯರು ಈ ನಿರ್ಧಾರಕ್ಕೆ ಬಂದಿದ್ದಾರೆ. “ಈ ಸಾಂಕೇತಿಕ ಕ್ರಮದಿಂದ

ಆರ್ ಜಿ ಕರ್ ಆಸ್ಪತ್ರೆಯ 50 ವೈದ್ಯರ ಸಾಮೂಹಿಕ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್

ಇಂದು ನಾಳೆ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com, ಅ. ನವದೆಹಲಿ 09: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿ ಅ.10ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ

ಇಂದು ನಾಳೆ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕ್- ಸ್ಕೂಟರ್ ಢಿಕ್ಕಿ: ಓರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ. 09. ಬೈಕ್ ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮೈಲಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಪೊಯಿನಾಚಿಯ ಮಣಿಕಂಠ (24) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಮೈಲಾಟಿಯ ಪ್ರಜ್ವಲ್ (23) ಗಾಯಗೊಂಡಿದ್ದು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಕಲದ ಜ್ಯೂಸ್ ಅಂಗಡಿಯಲ್ಲಿ ಕೆಲಸ ಮುಗಿಸಿ ಮಣಿಕಂಠ ತೆರಳುತ್ತಿದ್ದ ಸ್ಕೂಟರ್ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ.  

ಬೈಕ್- ಸ್ಕೂಟರ್ ಢಿಕ್ಕಿ: ಓರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

RBI: ಗೃಹಸಾಲದ ಇಎಂಐ ಇಳಿಕೆಯಿಲ್ಲ

(ನ್ಯೂಸ್ ಕಡಬ)newskadaba.com, ಅ. ನವದೆಹಲಿ 09.: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರೆಪೋ ದರ ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ. ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬ ಮಾನಿಟರಿ ಪಾಲಿಸಿ ಕಮಿಟಿ ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ.3 ದಿನ ನಡೆದ  ಮಾನಿಟರಿ

RBI: ಗೃಹಸಾಲದ ಇಎಂಐ ಇಳಿಕೆಯಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅ. 16 ರಂದು ಕಾವೇರಿ ಯೋಜನೆಯ 5ನೇ ಹಂತಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಯೋಜನೆಯ ಐದನೇ ಹಂತಕ್ಕೆ ಅ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ಸಹಭಾಗಿತ್ವದಲ್ಲಿ 4336 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಯೋಜನೆಯಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್’ಡಿ ನೀರು ಲಭ್ಯವಾಗಲಿದೆ. 50 ಲಕ್ಷ ಜನರಿಗೆ ಸದುಪಯೋಗವಾಗಲಿದೆ. ಬೆಂಗಳೂರಿನ

ಅ. 16 ರಂದು ಕಾವೇರಿ ಯೋಜನೆಯ 5ನೇ ಹಂತಕ್ಕೆ ಚಾಲನೆ Read More »

ಕರ್ನಾಟಕ

ಕುಮಾರಪರ್ವತ ಚಾರಣ ಕೈಗೊಂಡ ಮೊದಲ ತಂಡ

(ನ್ಯೂಸ್ ಕಡಬ)newskadaba.com, ಅ. 09.: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಚಾರಣಕ್ಕೆ ಇದೀಗ ಅರಣ್ಯ ಇಲಾಖೆಯ ಹೊಸ ಮಾರ್ಗ ಸೂಚಿಯೊಂದಿಗೆ ಅವಕಾಶ ನೀಡಲಾಗಿದೆ. ಚಾರಣಿಗರು ಆನ್‌ಲೈನ್‌ ಮೂಲಕ ಬುಕ್‌ ಮಾಡಿದ್ದು, ಮಂಗಳವಾರ ಚಾರಣ ಆರಂಭಿಸಿದ್ದಾರೆ. ಆನ್‌ಲೈನ್‌ ಮೂಲಕ ನೋಂದಾಯಿಸಿದ ಮೊದಲ ತಂಡ ನಿನ್ನೆ ಚಾರಣ ಕೈಗೊಂಡಿದೆ. ಹೊಸ ಮಾರ್ಗಸೂಚಿ ಜಾರಿಯಾದ ಬಳಿಕ ಚಾರಣಿಗರು ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆ ಮೂಲಕ ಚಾರಣ ಕೈಗೊಂಡಿದ್ದಾರೆ. ಕಳೆದ ವರ್ಷದವರೆಗೆ ಕುಮಾರಪರ್ವತ ಚಾರಣ ಸುಲಭವಾಗಿತ್ತು. ಕೆಲ ಕಠಿಣ ನಿಯಮಗಳೊಂದಿಗೆ ನೇರವಾಗಿ ಚಾರಣ ಆರಂಭಿಸಬಹುದಿತ್ತು.

ಕುಮಾರಪರ್ವತ ಚಾರಣ ಕೈಗೊಂಡ ಮೊದಲ ತಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳನ್ನು (ಎ1) ಆಯೇಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಶೋಯೆಬ್ (ಎ5) ಮತ್ತು ಸಿರಾಜ್ ಎಂದು ಗುರುತಿಸಲಾಗಿದೆ. ಅಲಿ ನಾಪತ್ತೆಯಾದ ನಂತರ ರೆಹಮತ್ ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿದೆ. ಆಕೆಯನ್ನು ಬಂಟ್ವಾಳದ ಕಲ್ಲಡ್ಕ ಬಳಿ ಪೊಲೀಸರು ಬಂಧಿಸಿದ್ದಾರೆ.

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ತಿರುಪತಿ-ಉಡುಪಿ ನಡುವೆ ನೇರ ರೈಲು ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 09. ತಿರುಪತಿ ಮತ್ತು ಉಡುಪಿ ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ಉಡುಪಿ ಸಂಸದರ ಅವಿರತ ಪ್ರಯತ್ನದಿಂದ ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ. ಬುಧವಾರ ಮತ್ತು ಶನಿವಾರ ಸಂಜೆ 5ಕ್ಕೆ ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಿಗ್ಗೆ 11ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ.ಕಳೆದ ಒಂದು ದಶಕದಿಂದ ಕುಂದಾಪುರ

ತಿರುಪತಿ-ಉಡುಪಿ ನಡುವೆ ನೇರ ರೈಲು ಸಂಚಾರಕ್ಕೆ ಚಾಲನೆ Read More »

ಕರಾವಳಿ
Scroll to Top