News Kadaba

ನಗರೀಕರಣದಿಂದ ವನ್ಯಜೀವಿ ಆವಾಸಸ್ಥಾನ ನಾಶ: ಆನೆಗಳ ಸಂತತಿ ಮೇಲೆ ಪರಿಣಾಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಹೆಚ್ಚಾಗುತ್ತಿರುವ ನಗರೀಕರಣದಿಂದಾಗಿ ವನ್ಯಜೀವಿ ಆವಾಸಸ್ಥಾನ ನಾಶವಾಗುತ್ತಿದ್ದು, ಇದರಿಂದ ಆನೆಗಳ ಸಂತತಿ ಮೇಲೆ ಪರಿಣಾಮ ಬೀರುತ್ತಿದೆ ಎನ್ನಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸ್ (NCBS) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸಂಶೋಧಕರು ಹಂಚಿಕೊಂಡ ಅಧ್ಯಯನ ವರದಿಯ ಅನ್ವಯ, ವನ್ಯಜೀವಿ ಆವಾಸಸ್ಥಾನ ಕಡಿತ ಮತ್ತು ಹೆಚ್ಚಿದ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ಏಷ್ಯಾಟಿಕ್ ಆನೆಗಳ ನೈಸರ್ಗಿಕ ಜೀನ್ ಪೂಲ್ ಮೇಲೆ (ಅನುವಂಶಿಕತೆ) ಪರಿಣಾಮ ಬೀರಿದೆ ಎಂದು ಗಮನಿಸಿದೆ.

ನಗರೀಕರಣದಿಂದ ವನ್ಯಜೀವಿ ಆವಾಸಸ್ಥಾನ ನಾಶ: ಆನೆಗಳ ಸಂತತಿ ಮೇಲೆ ಪರಿಣಾಮ Read More »

ಕರ್ನಾಟಕ

‘ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ’  ದಿಢೀರ್‌ ಉದ್ಘಾಟನೆ ಮಾಡಿದ ಬಿಸಿಸಿಐ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಭವಿಷ್ಯದ ಕ್ರಿಕೆಟಿಗರಿಗಾಗಿ ಮತ್ತು ಹಾಲಿ ಕ್ರಿಕೆಟಿಗರಿಗಾಗಿ ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಸಂಸ್ಥೆ (ಬಿಸಿಸಿಐ) ಭಾನುವಾರ ದಿಢೀರ್ ಉದ್ಘಾಟನೆ ಮಾಡಿದೆ. ಕ್ರಿಕೆಟ್ ಆಟಗಾರರಿಗೆ ತರಬೇತಿ ನೀಡಲಾಗುತ್ತಿದ್ದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಸ್ವಂತ ಕಟ್ಟಡ ಬೇಕು ಎಂಬ ಬಿಸಿಸಿಐನ ಪರಿಕಲ್ಪನೆಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗಹಳ್ಳಿಯಲ್ಲಿ ನಿರ್ಮಾಣಗೊಂಡಿದ್ದ ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿಯನ್ನು ಉದ್ಘಾಟನೆ ಮಾಡಲಾಗಿದೆ.  

‘ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ’  ದಿಢೀರ್‌ ಉದ್ಘಾಟನೆ ಮಾಡಿದ ಬಿಸಿಸಿಐ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಮೃತ ವ್ಯಕ್ತಿ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ.30. ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಶೋಕ್ ಜು.13ರಂದು ಮೃತಪಟ್ಟಿದ್ದರೂ ಮೃತರ ಅಣ್ಣ ಮೋಹನ್‌ರವರ ಮಗ ದಿನೇಶ್ ಎಂಬಾತನು 2020ರ ಜು.15ರಿಂದ ಆ.18ರ ಮಧ್ಯಾವಧಿ ಯಲ್ಲಿ ಮೃತ ಅಶೋಕ್ ಅವರಿಗೆ ಸೇರಿದ ವಿವಿಧ ಕಂಪೆನಿಗಳ ಸೇರಿದ ಒಟ್ಟು 4,24,90,548.90ರೂ. ಮೌಲ್ಯದ 14,970 ಪೇರುಗಳನ್ನು ಮೃತರ ಮೊಬೈಲ್ ಸಂಖ್ಯೆ ಮತ್ತು ಈ-ಮೇಲ್ ಐ.ಡಿ ದುರ್ಬಳಕೆ

ಮೃತ ವ್ಯಕ್ತಿ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ: ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭ ಮಾಡಲಿದ್ದಾರೆ. ಈಗಾಗಲೇ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದೆ. ಜೊತೆಗೆ ದೂರುದಾರರ ಬಳಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪೊಲೀಸರು ಸಂಗ್ರಹ ಮಾಡಲಿದ್ದಾರೆ. ಮುಡಾ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ

ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಈ ಬಾರಿ ಬಿಗ್ ಬಾಸ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಕರಾವಳಿ ಯುವಕ ಧನರಾಜ್ ಆಚಾರ್ಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.30. ಕರಾವಳಿಯ ಯುವಕ, ಬಹುಮುಖ ಪ್ರತಿಭೆಯ ಕಲಾವಿದ, ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್ಯ ಟಿಕ್‌ಟಾಕ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದವರು. ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ. ಧನರಾಜ್, ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2ರ ಸ್ಪರ್ಧಿಯಾಗಿ ಇಡೀ

ಈ ಬಾರಿ ಬಿಗ್ ಬಾಸ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಕರಾವಳಿ ಯುವಕ ಧನರಾಜ್ ಆಚಾರ್ಯ Read More »

ಸಿನಿಮಾ

ಐಐಎಫ್ಎ- 2024: ಶಾರುಕ್ ಖಾನ್ ಗೆ ಅತ್ಯುತ್ತಮ ನಟ ಪ್ರಶಸ್ತಿ- ʼಅನಿಮಲ್ʼ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಅಬುಧಾಬಿ, ಸೆ.30. ಸೂಪರ್ ಸ್ಟಾರ್ ಶಾರುಕ್ ಖಾನ್ ʼ ಐಐಎಫ್ಎ(IIFA)- 2024ʼ ರ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮತ್ತು ʼಅನಿಮಲ್ʼ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಅತ್ಯುತ್ತಮ ಚಿತ್ರ, ಅತ್ಯುತ್ತಮ ನಿರ್ದೇಶಕ ಮತ್ತು ಪೋಷಕ ನಟ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನಟ ವಿಕ್ಕಿ ಕೌಶಲ್ ಮತ್ತು ನಿರ್ದೇಶಕ ಕರಣ್ ಜೋಹರ್ ಐಐಎಫ್ಎ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ನಡೆಸಿಕೊಟ್ಟಿದ್ದಾರೆ. ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಅನಿಮಲ್ (ANIMAL) ಚಿತ್ರ

ಐಐಎಫ್ಎ- 2024: ಶಾರುಕ್ ಖಾನ್ ಗೆ ಅತ್ಯುತ್ತಮ ನಟ ಪ್ರಶಸ್ತಿ- ʼಅನಿಮಲ್ʼ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ Read More »

ಸಿನಿಮಾ

ಆಯ ತಪ್ಪಿ ಬಾವಿಗೆ ಬಿದ್ದು  ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ.30. ಬಾವಿಯ ಆವರಣ ಗೋಡೆ ಸ್ವಚ್ಛ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಯ ತಪ್ಪಿ ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನವೀನ್ ಬೆಳ್ಚಾಡ(48) ಎಂದು ಗುರುತಿಸಲಾಗಿದೆ. ನವೀನ್ ಅವರು ರವಿವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಆವರಣ ಗೋಡೆಯನ್ನು ಸ್ವಚ್ಛಗೊಳಿಸುತ್ತಿದ್ದರು.ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆಯ ತಪ್ಪಿ ಬಾವಿಗೆ ಬಿದ್ದು  ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

’ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿ’- ಕೆ.ಎಂ.ಹೆಗ್ಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.30. ತುಳುನಾಡಿನ ಜನತೆ ತುಳು ಭಾಷೆಯ ಜತೆ ಇತರ ಭಾಷೆಗಳನ್ನು ಗೌರವಿಸುತ್ತಾರೆ. ಎಲ್ಲ ಜನರನ್ನು ತಮ್ಮವರಂತೆ ನೋಡಿಕೊಳ್ಳುವ ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ ಹೇಳಿದ್ದಾರೆ. ತುಳುವೆರೆ ಕಲ ಇದರ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ರವಿವಾರ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾಪಾರ್ಕ್‌ನಲ್ಲಿ ನಡೆದ ‘ಪಚ್ಚೆ ಸಿರಿ’ ತುಳು

’ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿ’- ಕೆ.ಎಂ.ಹೆಗ್ಡೆ Read More »

ಕರಾವಳಿ
crime, arrest, suspected

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ.30. ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು ಗುರುತಿಸಲಾಗಿದೆ. ಈತ ಕಚೇರಿಯ ಎದುರಿನ ಕಬ್ಬಿಣದ ಶೆಟರ್‌ನ ಬೀಗವನ್ನು ಮುರಿದು ಒಳನುಗ್ಗಿದ್ದು, ಆಫೀಸಿನ ಗೋಡೆಯ ಮೇಲೆ ಇರಿಸಿದ್ದ ಸಿಸಿ ಕ್ಯಾಮರಾವನ್ನು ಒಡೆದು ಹಾಕಿದ್ದಾನೆ. ಬಳಿಕ ಒಳಗೆ ಹೋಗಿ ಕಚೇರಿಯ ಕಬ್ಬಿಣದ ಕಪಾಟಿನ

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.30. ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ ನ ಯುನಿಟ್ 5ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಸೆ. 27ರಂದು ಮೃತಪಟ್ಟಿದ್ದಾರೆ. ಶಶಿಧರ್ ಅವರು ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು, ಕಳೆದ 2 ತಿಂಗಳಿನಿಂದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.  

ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top