News Kadaba

ಸೆ.29ರಂದು ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶ ಆರೋಗ್ಯ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27. ಆ್ಯಂಟಿ ಪೊಲ್ಯೂಶನ್ ಡ್ರೈವ್ ಫೌಂಡೇಶನ್ (ಎಪಿಡಿಎಫ್) ನೇತೃತ್ವದಲ್ಲಿ ಎಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ನ ಸಹಭಾಗಿತ್ವದಲ್ಲಿ ಮಂಗಳೂರಿನ ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶದ ಆರೋಗ್ಯ ತಪಾಸಣೆಯನ್ನು ಸೆ.29ರಂದು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಡಿಪಿಎಫ್ ನ ಸ್ಥಾಪಕ ಹಾಗೂ ಸಿಇಒ ಅಬ್ದುಲ್ಲಾ ಎ. ರಹ್ಮಾನ್‌, ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಅತೀ ಹೆಚ್ಚಾಗಿ ಬಾಧೆಗೆ ಒಳಗಾಗುವವರು ಟ್ರಾಫಿಕ್ ಪೊಲೀಸರಾಗಿರುವ ಕಾರಣ ಅವರ ಆರೋಗ್ಯದ ತಪಾಸಣೆಗೆ ನಿರ್ಧರಿಸಲಾಗಿದೆ ಎಂದರು.

ಸೆ.29ರಂದು ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶ ಆರೋಗ್ಯ ತಪಾಸಣೆ Read More »

ಆರೋಗ್ಯ ಮಾಹಿತಿ, ಕರಾವಳಿ

ಭದ್ರತಾ ಮಂಡಳಿ ಕಾಯಂ ಸದಸ್ಯತ್ವ:ಭಾರತಕ್ಕೆ ಬ್ರಿಟನ್, ಫ್ರಾನ್ಸ್ ನಿಂದ ಬೆಂಬಲ

(ನ್ಯೂಸ್ ಕಡಬ) newskadaba.com ನವದೆಹಲಿಸೆ.27: ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಾಯಂ ಸದಸ್ಯತ್ವ ಭಾರತದ ಮಹತ್ವಾಕಾಂಕ್ಷೆಗೆ ಮತ್ತಷ್ಟು ಬಲಬಂದಿದ್ದು, ಫ್ರಾನ್ಸ್ ಮತ್ತು ಬ್ರಿಟನ್ ದೇಶಗಳು ಬೆಂಬಲ ನೀಡಿವೆ.ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವ ಪಡೆಯಲು ಭಾರತ ನಡೆಸುತ್ತಿರುವ ಪ್ರಯತ್ನಕ್ಕೆ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬೆಂಬಲ ಘೋಷಿಸಿದ್ದಾರೆ.ಭಾರತಕ್ಕೆ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯ ಸ್ಥಾನ ನೀಡುವ ಸಂಬಂಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಡೆಸಿದ್ದ ಮಾತುಕತೆ ಕೊನೆಗೂ ಯಶಸ್ವಿಯಾಗಿದ್ದು, ಫ್ರಾನ್ಸ್ ಮತ್ತು ಬ್ರಿಟನ್

ಭದ್ರತಾ ಮಂಡಳಿ ಕಾಯಂ ಸದಸ್ಯತ್ವ:ಭಾರತಕ್ಕೆ ಬ್ರಿಟನ್, ಫ್ರಾನ್ಸ್ ನಿಂದ ಬೆಂಬಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ: 2ನೇ ಮಂಕಿಫಾಕ್ಸ್ ಪ್ರಕರಣ ಪತ್ತೆ

 (ನ್ಯೂಸ್ ಕಡಬ) newskadaba.com ತಿರುವನಂತಪುರಂ ಸೆ.27: : ಯುನೈಟೆಡ್ ಅರಬ್ ಎಮಿರೇಟ್ಸ್(UAE)ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರದಂದು ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದು ಈ ವರ್ಷ ರಾಜ್ಯದಲ್ಲಿ ಎರಡನೇ ಮತ್ತು ದೇಶದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣವಾಗಿದೆ. ಈ ಹಿಂದೆ ಮಲಪ್ಪುರಂನ ಎಡವನ್ನಾ ಎಂಬ ಪ್ರದೇಶದ 38 ವರ್ಷದ ವ್ಯಕ್ತಿಗೆ ಸೆಪ್ಟೆಂಬರ್ 18 ರಂದು ಮಂಕಿಪಾಕ್ಸ್ ಕಂಡುಬಂದಿತ್ತು. ನಂತರ ಅವರ ಸೋಂಕಿಗೆ ವೈರಸ್‌ನ ಕ್ಲೇಡ್ 1 ಬಿ ಸ್ಟ್ರೈನ್ ಕಾರಣ ಎಂದು ತಿಳಿದುಬಂತು.

ಕೇರಳ: 2ನೇ ಮಂಕಿಫಾಕ್ಸ್ ಪ್ರಕರಣ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ  ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಟೆಸ್ಟ್ ಮಾಡಿದಾಗ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಯಲಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನ ಟೆಸ್ಟ್ ಮಾಡಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ

ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ: ಹೆದ್ದಾರಿ ಮಧ್ಯೆ ಚಿನ್ನ ದರೋಡೆ

 (ನ್ಯೂಸ್ ಕಡಬ) newskadaba.com ಕೇರಳ(ಸೆ.27) :  ಕೇರಳದ ತ್ರಿಶ್ಶೂರ್ ಬಳಿಯ ಪೀಚಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ದರೋಡೆ ಪ್ರಕರಣದ ಡ್ಯಾಷ್ ಕ್ಯಾಮ್ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆದ್ದಾರಿಯಲ್ಲಿ ಕಾರನ್ನು ತಡೆದ 12 ಮಂದಿಗಳ ಗುಂಪು ಆ ಕಾರಿನಲ್ಲಿದ್ದ ಇಬ್ಬರ ಸಹಿತ 2.5 ಕೆ.ಜಿ ಚಿನ್ನವನ್ನು ದರೋಡೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ. ನಿರ್ಮಾಣ ಹಂತದ ಫ್ಲೈಓವರ್ ನಲ್ಲಿ ಕಾರೊದನ್ನು ಗುರಿಯಾಗಿಸಿ ಬಂದ ಮೂರು ಕಾರುಗಳು ಹೆದ್ದಾರಿಯಲ್ಲಿ ಬ್ಲಾಕ್ ಮಾಡಿವೆ. ಚಿನ್ನ ಸಾಗಿಸುತ್ತಿದ್ದ ಕಾರನ್ನು ಇತರ ಮೂರು

ಕೇರಳ: ಹೆದ್ದಾರಿ ಮಧ್ಯೆ ಚಿನ್ನ ದರೋಡೆ Read More »

ಬ್ರೇಕಿಂಗ್ ನ್ಯೂಸ್

ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ಗೌರವ

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 26. ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಬೆಂಗಳೂರು, ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ನೀಡಿ ಗೌರವಿಸಿದೆ. ಶಾಲೆಯ ಮುಖ್ಯೋಪಾಧ್ಯಾಯನಿ ಅಂಬಿಕಾ ರೆಡ್ಡಿ ಕುಸುಮ ಪುರಸ್ಕಾರವನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಸುವರ್ಣ ಭಗವತಿ ಅವರಿಗೆ ಹಸ್ತಾಂತರಿಸಿ ಅಭಿನಂದಿಸಿದರು. ಇನ್ನೂ ಹೆಚ್ಚಿನ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸಬೇಕು ಎಂದು ಸುವರ್ಣ ಭಗವತಿ ಹೇಳಿದರು. ಶಾಲೆಗೆ ಈ ಪುರಸ್ಕಾರ ಬಂದಿರುವುದಕ್ಕೆ ಶಾಲಾ

ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ಗೌರವ Read More »

ಕರ್ನಾಟಕ

ಆರೋಪಿ ನಟ ದರ್ಶನ್ ವಿಚಾರಣೆ ಆರಂಭಿಸಿದ ಐಟಿ ತಂಡ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 26. ಬೆಂಗಳೂರಿನಿಂದ ಬಂದಿರುವ ಐದು ಜನ ಅಧಿಕಾರಿಗಳ ಐಟಿ ತಂಡ ಇಂದು ನಗರದ ಸೆಂಟ್ರಲ್ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ವಿಚಾರಣೆ ನಡೆಸಿದ್ದಾರೆ. ಜೈಲಿನ ಸೂಪರಿಂಟೆಂಡೆಂಟ್ ಕೊಠಡಿಯಲ್ಲಿ ಅವರ ಎದುರಿನಲ್ಲಿಯೇ ನ್ಯಾಯಾಲಯದ ಸೂಚನೆಯಂತೆ ಇಂದು ಮತ್ತು  ನಾಳೆ ವಿಚಾರಣೆ ನಡೆಯಲಿದೆ. ರೇಣುಕಸ್ವಾಮಿ ಕೊಲೆ ಆರೋಪವನ್ನು ಮತ್ತೊಬ್ಬರು ಒಪ್ಪಿಕೊಳ್ಳಲು 80 ಲಕ್ಷ ರೂ ನಗದು ಹಣ ನೀಡಿದ ಕುರಿತು ತನಿಖೆ ನಡೆಯಿತ್ತಿದೆ.  

ಆರೋಪಿ ನಟ ದರ್ಶನ್ ವಿಚಾರಣೆ ಆರಂಭಿಸಿದ ಐಟಿ ತಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಅಜೆಕಾರು, ಸೆ. 26. ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್‌ ಬಳಸಿಕೊಂಡು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸೆ. 24ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಶ್ರವಣ್‌ ಸತೀಶ ಮಿನಜಗಿ (27), ಪ್ರದೀಪ ಮಾರುತಿ ಇಂಗ್ಲೆ (27) ಹಾಗೂ ಕಿರಣ್‌ ಬಾಲು ಚೌಹಾಣ್‌ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿ

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವ ದಸರಾ 2024: ಮೈಸೂರಿನಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಿಂದ ಸಂಗೀತ ಸುಧೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 26. ಈ ವರ್ಷ ಮರೆಯಲಾಗದ ಯುವ ದಸರಾಕ್ಕೆ ಮೈಸೂರು ಸಜ್ಜಾಗಿದ್ದು, ಸಂಗೀತ ರಸಸಂಜೆಯಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಾದ ಇಳಿಯರಾಜ, ಎ.ಆರ್.ರೆಹಮಾನ್ ಮತ್ತು ಶ್ರೇಯಾ ಘೋಷಾಲ್ ಸೇರಿದಂತೆ ಹಲವರು ಸಂಗೀತ ಸುಧೆ ಹರಿಸಲಿದ್ದಾರೆ. ಯುವ ದಸರಾ ಸಮಿತಿಯಿಂದ ಅ.6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.6ರಂದು ಅಶ್ವಿನಿ ಪುನೀತ್ ರಾಜ್‌ಕುಮರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಾಲ್ಕು ದಿನಗಳ ಕಾಲ ಸಂಜೆ 6ರಿಂದ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

ಯುವ ದಸರಾ 2024: ಮೈಸೂರಿನಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಿಂದ ಸಂಗೀತ ಸುಧೆ Read More »

ಕರ್ನಾಟಕ

ಲೆಬನಾನ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ

(ನ್ಯೂಸ್ ಕಡಬ) newskadaba.com  ಬರ್ಲಿನ್, ಸೆ. 26. ಇಸ್ರೇಲ್‌ ಸೇನೆಯಿಂದ ವೈಮಾನಿಕ ದಾಳಿ ಮತ್ತು ಪೇಜರ್‌ಗಳ ಸ್ಫೋಟದ ನಂತರ ಲೆಬನಾನ್‍ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಸೂಚನೆ ಬರುವವರೆಗೂ ಲೆಬನಾನ್‍ಗೆ ಪ್ರಯಾಣಿಸದಂತೆ ಬೈರುತ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸೂಚನೆ ನೀಡಿದೆ. ಲೆಬನಾನ್‍ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಆದಷ್ಟು ಬೇಗ ದೇಶವನ್ನು ತೊರೆಯುವಂತೆ ಸಲಹೆ ನೀಡಲಾಗಿದೆ. ಕಾರಣಾಂತರಗಳಿಂದ ಲೆಬನಾನ್‍ನಲ್ಲೇ ಉಳಿದ ಜನ ತೀವ್ರ ಎಚ್ಚರಿಕೆಯಿಂದ ಹಾಗೂ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.  

ಲೆಬನಾನ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top