News Kadaba

3 ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು-  ಸಚಿವ ವಿ ಸೋಮಣ್ಣ

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಸೆ. 26. ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದ್ದು, 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲಿಸಿ ಮಾತನಾಡಿದ ಅವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ಜೂನ್​​ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು. ರೈಲ್ವೆ ಇಲಾಖೆಯಲ್ಲಿ ಕಳಪೆ ಕಾಮಗಾರಿ ಸಹಿಸಲ್ಲ. ರೈಲ್ವೆ ಇಲಾಖೆ ಎಂಬುದು ರಕ್ಷಣಾ ಇಲಾಖೆ ಇದ್ದ ಹಾಗೆ. ಇನ್ನು […]

3 ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು-  ಸಚಿವ ವಿ ಸೋಮಣ್ಣ Read More »

ಕರ್ನಾಟಕ

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿ: ಪ್ರಧಾನಿ ಮೋದಿ ಪುಣೆ ಭೇಟಿ ರದ್ದು

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 26. ಭಾರೀ ಮಳೆಗೆ ಮುಂಬೈನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಭಾರೀ ಮಳೆಗೆ ನಾಲ್ವರು ಸಾವನ್ನಪ್ಪಿದ್ದು, ಶಾಲಾ ಕಾಲೇಜುಗೆ ರಜೆ ಘೋಷಿಸಲಾಗಿದೆ. ಮುಂಬೈನ ಕೆಲವು ಭಾಗಗಳಲ್ಲಿ ಬುಧವಾರ ಸಂಜೆ ಸುಮಾರು 275 ಮಿಮೀ ಮಳೆ ದಾಖಲಾಗಿದೆ, ಭಾರೀ ಮಳೆಗೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಪುಣೆ ಭೇಟಿಯನ್ನು ರದ್ದುಗೊಳಿಸಲಾಗಿದೆ. ಪುಣೆ ಮೆಟ್ರೋದ ಹೊಸ ಕಾರಿಡಾರ್ ಅನ್ನು ಉದ್ಘಾಟಿಸಲು ಪ್ರಧಾನಿ ಮೋದಿಯವರ ಆಗಮಿಸಬೇಕಿತ್ತು. ಭಾರತೀಯ ಹವಾಮಾನ ಇಲಾಖೆ (IMD)

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ನಾಲ್ವರು ಬಲಿ: ಪ್ರಧಾನಿ ಮೋದಿ ಪುಣೆ ಭೇಟಿ ರದ್ದು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಡಿಕೇರಿ, ಸೆ. 26. ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನೊ(50) ಮೃತಪಟ್ಟಿದ್ದಾರೆ. ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ವಾಹನ ಢಿಕ್ಕಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕ್ರಿಸ್ಟಲಿನೊರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಯಾಲಿಫೋರ್ನಿಯಾದ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರ ಧ್ವಂಸಗೊಳಿಸಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com  ಕ್ಯಾಲಿಫೋರ್ನಿಯಾ, ಸೆ. 26. ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿರುವ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಸೆಪ್ಟೆಂಬರ್ 25 ರ ರಾತ್ರಿ ಹಿಂದೂ ವಿರೋಧಿ ಸಂದೇಶಗಳೊಂದಿಗೆ ಧ್ವಂಸಗೊಳಿಸಲಾಯಿತು. ನ್ಯೂಯಾರ್ಕ್‌ನ ಮೆಲ್‌ವಿಲ್ಲೆಯಲ್ಲಿರುವ ಬ್ಯಾಪ್ಸ್ ಮಂದಿರದಲ್ಲಿ ಇದೇ ರೀತಿಯ ಘಟನೆ ನಡೆದ ಹತ್ತು ದಿನಗಳ ನಂತರ ಈ ಅಪವಿತ್ರ ಕೃತ್ಯವು ಸಂಭವಿಸಿದೆ. ನ್ಯೂಯಾರ್ಕ್​​ನಲ್ಲಿ ಸ್ವಾಮಿ ನಾರಾಯಣ ದೇವಾಲಯದ ಮೇಲೆ ನಡೆದ ದಾಳಿಯೂ ಕೂಡ ಕ್ಯಾಲಿಫೋರ್ನಿಯಾ ಹಾಗೂ ಕೆನಡಾದಲ್ಲಿ ನಡೆದ ಮಾದರಿಯಲ್ಲಿಯೇ ನಡೆದಿದೆ. ಇದರ ಹಿಂದೆ ಖಲಿಸ್ತಾನಿ ಉಗ್ರರ ಕೈವಾಡವಿರುವ ಸಾಧ್ಯತೆ

ಕ್ಯಾಲಿಫೋರ್ನಿಯಾದ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರ ಧ್ವಂಸಗೊಳಿಸಿದ ಕಿಡಿಗೇಡಿಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಲಂಚ ಹಗರಣ ಪ್ರಕರಣ: ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 26. ಉದ್ಯೋಗಕ್ಕಾಗಿ ಲಂಚ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್  ಇಂದು (ಸೆ.26) ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ಅಕ್ಟೋಬರ್ 19ರಂದು ಹೈಕೋರ್ಟ್‌ಬಾಲಾಜಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದೇ ರೀತಿ ಸ್ಥಳೀಯ ನ್ಯಾಯಾಲಯ ಕೂಡಾ ಮೂರು ಬಾರಿ ಬಾಲಾಜಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.  

ಲಂಚ ಹಗರಣ ಪ್ರಕರಣ: ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು Read More »

ರಾಷ್ಟ್ರೀಯ ನ್ಯೂಸ್

ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್ ನಿಧನ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಸೆ. 26. ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್(75) ಇಂದು ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಸೆ.4ರಂದು ರಾಷ್ಟ್ರೀಯ ಹೆದ್ದಾರಿಯ ನೀಲೇಶ್ವರ ಕರುವೆಚ್ಚರಿ ಪೆಟ್ರೋಲ್ ಬಂಕ್ ಸಮೀಪ ಕುಂಞಿಕಣ್ಣನ್ ಸಂಚರಿಸುತ್ತಿದ್ದ ಕಾರು ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿತ್ತು. ಈ ವೇಳೆ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ

ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ನೂತನ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ (CASK) ಇದರ ನೂತನ ಅಧ್ಯಕ್ಷರಾಗಿ ಮಾಜಿ ಲಯನ್ಸ್ ಗವರ್ನರ್ ರೊನಾಲ್ಡ್ ಗೋಮ್ಸ್ ಆಯ್ಕೆಯಾಗಿದ್ದಾರೆ. CASK 111ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಉಪಾಧ್ಯಕ್ಷರಾಗಿ ಮಾರ್ಜೋರಿ ಟೆಕ್ಸೀರಾ ಮತ್ತು ಡಾ.ರೋಹನ್ ಮೋನಿಸ್, ಕಾರ್ಯದರ್ಶಿಯಾಗಿ ಪೀಟರ್ ಪಿಂಟೋ, ಜೊತೆ ಕಾರ್ಯದರ್ಶಿ ಟೈಟಸ್ ನೊರೊನ್ಹಾ ಮತ್ತು ಕೋಶಾಧಿಕಾರಿಯಾಗಿ ರೊನಾಲ್ಡ್ ಮೆಂಡೋನ್ಸಾ ಆಯ್ಕೆಯಾದರು. ಆಡಳಿತ ಮಂಡಳಿಯ ಸದಸ್ಯರಾಗಿ ಇಯಾನ್ ಲೋಬೊ, ಇರ್ವಿನ್ ಲೋಬೊ, ಡಾರಿಲ್

ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ನೂತನ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ Read More »

ಕರಾವಳಿ

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 26. ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು-ಲಾರಿ ಢಿಕ್ಕಿ: ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಸೆ. 26. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಹುನಗುಂದ ತಾಲೂಕಿನ ಧನ್ನೂರ ಟೋಲ ನಾಕಾ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ. ಮೃತಪಟ್ಟವರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯ ನಿವಾಸಿಗಳಾದ ಗುತ್ತಿಗೆದಾರ ಲಕ್ಷ್ಮಣ ವಡ್ಡರ, ಬೈಲಪ್ಪ ಬಿರಾದಾರ, ಕಾರು ಚಾಲಕ ಮುಹಮ್ಮದ್ ರಫೀಕ್ ಗುಡ್ನಾಳ, ಮುದ್ದೇಬಿಹಾಳದ ರಾಮಣ್ಣ ನಾಯಕ ಮಕ್ಕಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಹೊಸಪೇಟೆ ಬಳಿಯ ಹುಲಿಗೆಮ್ಮನ ದೇವಸ್ಥಾನದ ದರ್ಶನ ಮುಗಿಸಿಕೊಂಡು

ಕಾರು-ಲಾರಿ ಢಿಕ್ಕಿ: ನಾಲ್ವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಪುತ್ತೂರಿನಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆ ತರುತ್ತಿದ್ದ ಆ್ಯಂಬುಲೆನ್ಸ್ ಪಡೀಲು ಸಮೀಪ ಪಲ್ಟಿಯಾಗಿ ಗಂಭೀರ ಗಾಯಗೊಂಡ ರೋಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ. ಮೃತರನ್ನು ಕಡಬ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ. ದಾಸಪ್ಪ ರೈ ಅವರ ಪತ್ನಿ ನಳಿನಿ ರೈ (54), ಪುತ್ರ ಹರ್ಷಿತ್ (33) ಹಾಗೂ ಸಂಬಂಧಿಕ ಯುವಕ ಮನೀಷ್ (24) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ.24ರಂದು ತಡರಾತ್ರಿ 1:30ರ

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top