News Kadaba

‘ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ’- ದೇಶಪಾಂಡೆ

 (ನ್ಯೂಸ್ ಕಡಬ) newskadaba.com ಮೈಸೂರು(ಸೆ.25) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಅಂತ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ನಾನು ಸಿದ್ದರಾಮಯ್ಯಗಿಂತ 2 ವರ್ಷ ವಯಸ್ಸಿನಲ್ಲಿ ದೊಡ್ಡವನು. […]

‘ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ’- ದೇಶಪಾಂಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 25. ಅನಿಲ ಸಾಗಾಟದ ಟ್ಯಾಂಕರ್ ಲಾರಿ ರಸ್ತೆಗೆ ಮಗುಚಿ ಬಿದ್ದ ಘಟನೆ ಎಡನೀರು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಟ್ಯಾಂಕರ್ ಎಡನೀರು ಕೋರಿಕ್ಕಾರ್ ಮೂಲೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕಾಸರಗೋಡು ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ವಿದ್ಯಾನಗರ ಠಾಣಾ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮಂಗಳೂರಿನಿಂದ ಕಂಪೆನಿ ಅಧಿಕಾರಿಗಳು ಬಂದ ಬಳಿಕ ಟ್ಯಾಂಕರ್ ನ್ನು ತೆರವುಗೊಳಿಸುವ ಅಥವಾ ಅನಿಲವನ್ನು ಇನ್ನೊಂದು ಟ್ಯಾಂಕರ್

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.25) : ರೈತರ ಪ್ರತಿಭಟನೆ ಬಳಿಕ ರದ್ದಾಗಿದ್ದ ಮೂರು ಕೃಷಿ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು ಎಂದು ಹೇಳಿಕೆ ನೀಡಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಬಹಿರಂಗ ಕ್ಷಮೆ ಯಾಚಿಸಿದ್ದಾರೆ. ಕಂಗನಾ ಹೇಳಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ವಿಡಿಯೋ ಬಿಡುಗಡೆ ಮಾಡುವ ಮೂಲಕ ಕ್ಷಮೆ ಕೇಳಿದ್ದಾರೆ. ನಾನು ಬರೀ ನಟಿಯಲ್ಲ ರಾಜಕಾರಣಿಯೂ ಆಗಿದ್ದೇನೆ ಮತ್ತು ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿರಬಾರದು. ಅದು ಪಕ್ಷದ ಪ್ರತಿಬಿಂಬವಾಗಿರಬೇಕು. ರೈತರ ಕಾನೂನುಗಳ ಬಗ್ಗೆ

ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ(ಸೆ.25) : ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಳ್ಯ ಪೊಲೀಸರ ವಿರುದ್ಧ ಹಾಗೂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಧರ್ಮದ ಯುವಕನ ನಡೆ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಬೃಹತ್‌ ಪ್ರತಿಭಟನೆ ಸುಳ್ಯ ಠಾಣಾ ಬಳಿಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ನಡೆಯಿತು. ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ತಪ್ಪು ಮಾಡಿದವರ ಮೇಲೆ ಕ್ರಮ ಕೈ ಗೊಳ್ಳಲಿ. ಪೊಲೀಸರು ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಬೇಕು. ತಪ್ಪು

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಪೋಸ್ಟ್ ಕಾರ್ಡ್ ಮೂಲಕ ಗೌರವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. 2024ರ ಪ್ಯಾರಾಲಿಂಪಿಕ್ಸ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿರುವ ಪದಕ ವಿಜೇತರನ್ನು ಗೌರವಿಸುವ ಭಾರತೀಯ ಅಂಚೆ ಇಲಾಖೆಯು ‘ಪೋಸ್ಟ್ ಕ್ರಾಸಿಂಗ್ ಸೊಸೈಟಿ ಆಫ್ ಇಂಡಿಯಾ’ ಸಹಯೋಗದಲ್ಲಿ 28 ಪೋಸ್ಟ್ ಕಾರ್ಡ್ ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ವರ್ಷದ ಸಾಧನೆಯ ಸ್ಮರಣಾರ್ಥ ಅಥ್ಲೀಟ್ ಗಳಿಗೆ ಮೀಸಲಾದ ಚಿತ್ರಗಳನ್ನೊಳಗೊಂಡ ಪೋಸ್ಟ್ ಕಾರ್ಡ್ ಗಳ ಸಂಗ್ರಾಹಕ ಆವೃತ್ತಿಯನ್ನು ಜಿಪಿಒ ಪ್ರಕಟಿಸಲಿದೆ.  

ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಪೋಸ್ಟ್ ಕಾರ್ಡ್ ಮೂಲಕ ಗೌರವ Read More »

ಕ್ರೀಡಾ ನ್ಯೂಸ್

ಪಾಕಿಸ್ತಾನಿ ಭಿಕ್ಷುಕರು ದೇಶಕ್ಕೆ ಪ್ರವೇಶಿಸದಂತೆ ಸೌದಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ರಿಯಾದ್, ಸೆ. 25. ಧಾರ್ಮಿಕ ಯಾತ್ರೆಯ ನೆಪದಲ್ಲಿ ದೇಶಕ್ಕೆ ಆಗಮಿಸುತ್ತಿರುವ ಪಾಕಿಸ್ತಾನಿ ಭಿಕ್ಷುಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಸೌದಿ ಹಜ್ ಸಚಿವಾಲಯವು ಪಾಕಿಸ್ತಾನದ ಧಾರ್ಮಿಕ ವ್ಯವಹಾರಗಳ ಸಚಿವಾಲಯಕ್ಕೆ ಎಚ್ಚರಿಕೆ ನೀಡಿದೆ, “ಪಾಕಿಸ್ತಾನಿ ಭಿಕ್ಷುಕರು ಉಮ್ರಾ ವೀಸಾಗಳ ಅಡಿಯಲ್ಲಿ ರಾಜ್ಯವನ್ನು ಪ್ರವೇಶಿಸುವುದನ್ನು ತಡೆಯಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ” ಎಂದು ಪತ್ರಿಕೆ ಹೇಳಿದೆ.  

ಪಾಕಿಸ್ತಾನಿ ಭಿಕ್ಷುಕರು ದೇಶಕ್ಕೆ ಪ್ರವೇಶಿಸದಂತೆ ಸೌದಿ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಅಬಕಾರಿ ಪರವಾನಗಿ ವಿತರಣೆ, ನವೀಕರಣದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವು ಕಚೇರಿಗಳಲ್ಲಿ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ರೂ.2 ಲಕ್ಷ ರೂ. ಪತ್ತೆಯಾಗಿದೆ. ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.25) : “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಪೊಲೀಸ್ ಅಧಿಕಾರಿಗಳು ಇದೇರೀತಿ ದೌಲತ್ತಿನಿಂದ ನಡೆದುಕೊಂಡರೆ ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಕೆ ನೀಡಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪೊಲೀಸರು ರಾಜ್ಯದಲ್ಲಿ ಬಿಜೆಪಿ

ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಪಂಡಿತ್ ದೀನ್ ದಯಾಳ ಉಪಾಧ್ಯಾಯ ಅವರ ಜನ್ಮದಿನಾಚರಣೆಯು ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋನಪ್ಪ ಭಂಡಾರಿಯವರು, “ದೀನ ದಯಾಳ್ ಉಪಾಧ್ಯಾಯ ಅವರ ತ್ಯಾಗ ಪರಿಶ್ರಮ ಈಗಿನ ನಮ್ಮ ಬಿಜೆಪಿ ಕಾರ್ಯಕರ್ತರಿಗೂ ಪ್ರೇರಣೆ ಹಾಗೂ ದಾರಿದೀಪವಾಗಿದೆ” ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಮ.ನ.ಪಾ. ಮೇಯರ್ ಮನೋಜ್ ಕೋಡಿಕಲ್ ಹಾಗೂ ಉಪ ಮೇಯರ್ ಭಾನುಮತಿ ಹಾಗೂ ಬಿಜೆಪಿ ಮುಖಂಡರು ಹಾಗೂ

ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ Read More »

ಕರಾವಳಿ

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ. ಇದು ಮೂಲಭೂತವಾಗಿ ರಾಷ್ಟ್ರದ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ ಎಂದು ಹೇಳಿದೆ.    

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ- ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್
Scroll to Top