News Kadaba

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿದ ಅರ್ಜಿ ವಜಾಗೊಂಡ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಕರೆ ನೀಡಿದ್ದಾರೆ. ಹೈಕೋರ್ಟಿನ ತೀರ್ಪು ಸ್ವಾಗತಾರ್ಹ ಇದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡುವ ಮೂಲಕ ಹೈಕೋರ್ಟ್, […]

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ Read More »

ಕರ್ನಾಟಕ

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.

ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಕರಾವಳಿ

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 24. ಮಲಯಾಳಂ ಸಿನಿಮಾರಂಗದಲ್ಲಿ ಆಂದೋಲನದ ಹಿನ್ನೆಲೆ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಂಧಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ.  

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ

(ನ್ಯೂಸ್ ಕಡಬ) newskadaba.com ಸೆ. 24. ಐತಿಹಾಸಿಕ ಹಿನ್ನೆಲೆಯುಳ್ಳ ಮೂಡುಬಿದಿರೆ ಅರಮನೆಯ ಹೆಬ್ಬಾಗಿಲು ಘನ ವಾಹನವೊಂದರ ಚಾಲಕನ ನಿರ್ಲಕ್ಷ್ಯಕ್ಕೆ ಹಾನಿಗೊಳಗಾಗಿದೆ. ತಮಿಳುನಾಡು ನೋಂದಣಿಯ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಮಾರಕವು ಭಾಗಶಃ ಹಾನಿಗೊಳಗಾಗಿದೆ. ಚಾಲಕನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. 700 ವರ್ಷಗಳ ಇತಿಹಾಸ ಹೊಂದಿರುವ ಮೂಡುಬಿದಿರೆ ಅರಮನೆಯು ಜೈನರ ಪರಂಪರೆಯ ಚೌಟರ ಮನೆತನದ ಆಧೀನದಲ್ಲಿದೆ.    

ಚಾಲಕನ ನಿರ್ಲಕ್ಷ್ಯಕ್ಕೆ ಅರಮನೆಯ ಹೆಬ್ಬಾಗಿಲಿನ ಅಂಶಿಕ ಹಾನಿ Read More »

ಕರಾವಳಿ

ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿದ ಸರ್ಕಾರ

(ನ್ಯೂಸ್ ಕಡಬ) newskadaba.com ಸೆ. 24. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ವರಿಶೀಲಿಸಿ ವರದಿ ನೀಡಲು ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿದ ಸರ್ಕಾರ Read More »

ಕರ್ನಾಟಕ

ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ 10,000 ರೂ. ದಂಡ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ದೇಶದಲ್ಲಿ ಆಧಾರ್‌ ನಷ್ಟೇ ಇನ್ನೊಂದು ಪ್ರಮುಖ ಗುರುತಿನ ಚೀಟಿ ಎಂದರೆ ಅದು ಪ್ಯಾನ್‌ ಕಾರ್ಡ್‌. ಪರ್ಮನೆಂಟ್‌ ಅಕೌಂಟ್‌ ನಂಬರ್‌ ಅನ್ನು ದೇಶದಲ್ಲಿ ಇದುವರೆಗೆ ಕಡ್ಡಾಯಗೊಳಿಸದಿದ್ದರೂ ಆರ್ಥಿಕ ವ್ಯವಹಾರಗಳಿಗೆ ಅತ್ಯಗತ್ಯ ದಾಖಲೆ ಎನಿಸಿಕೊಂಡಿದೆ. ಆದಾಯ ತೆರಿಗೆ ಇಲಾಖೆ ನೀಡುವ 10 ಅಂಕಿಗಳ ವಿಶಿಷ್ಟ ಗುರುತಿನ ಚೀಟಿ ಮುಖ್ಯವಾಗುತ್ತದೆ. ಅದಾಗ್ಯೂ ನೀವು ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ ಭಾರಿ ದಂಡ ಪಾವತಿಸಬೇಕಾಗುತ್ತದೆ. ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌

ಒಂದಕ್ಕಿಂತ ಹೆಚ್ಚು ಪ್ಯಾನ್‌ ಕಾರ್ಡ್‌ ಹೊಂದಿದ್ದರೆ 10,000 ರೂ. ದಂಡ..! Read More »

ರಾಷ್ಟ್ರೀಯ ನ್ಯೂಸ್

’ಶಂಖ್ ಏರ್’ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಅನುಮೋದನೆ

(ನ್ಯೂಸ್ ಕಡಬ) newskadaba.com  ಸೆ. 24. ಭಾರತದ ವಿಮಾನಯಾನ ಕ್ಷೇತ್ರದಲ್ಲಿ ಒಂದರ ಹಿಂದೆ ಒಂದು ಕಂಪನಿಗಳು ಸಂಕಷ್ಟಕ್ಕೆ ಸಿಲುಕುತ್ತಿರುವ ಮಧ್ಯೆ ಹೊಸ ಹೊಸ ಕಂಪನಿಗಳು ಸೃಷ್ಟಿಯಾಗುತ್ತಿದ್ದು, ಇದೀಗ ‘ಶಂಖ್ ಏರ್’ ಎಂಬ ಏರ್ ಲೈನ್ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯವು ಅನುಮೋದನೆ ನೀಡಿದೆ. ವಿಮಾನಯಾನ ಮಹಾ ನಿರ್ದೇಶನಾಲಯದಿಂದ (ಡಿಸಿಸಿಎ) ಒಪ್ಪಿಗೆ ಮುದ್ರೆ ಪಡೆದ ಬಳಿಕ ಶಂಖ್ ಏರ್ ವಿಮಾನ ಹಾರಾಟ ಕಾರ್ಯಾರಂಭಿಸಬಹುದು. ಶಂಖ್ ಏರ್ ಸಂಸ್ಥೆಗೆ ವಿಮಾನ ಹಾರಾಟ ನಡೆಸಲು ಮೂರು ವರ್ಷಗಳಿಗೆ ನಿರಾಕ್ಷೇಪಣ ಪತ್ರ  ನೀಡಲಾಗಿದೆ.

’ಶಂಖ್ ಏರ್’ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್
Death, deadbody, Waterfall

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಸೆ. 24. ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆಂದು ತೆರಳಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಗರದ ಕಂಕನಾಡಿಯ ಬೆಂದೂರುವೆಲ್ನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿರುವ ಕುರಿತು ವರದಿಯಾಗಿದೆ. ಮೃತಪಟ್ಟವರನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ. ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲೆಂದು “ಫ್ಲೋಂಟ್” ಕ್ಲಿನಿಕ್ ಗೆ ತೆರಳಿದ್ದು, ಅರ್ಧ

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ.​ 30ರೊಳಗೆ ಆಸ್ತಿ ಘೋಷಿಸದಿದ್ದರೆ ಸಂಬಳವಿಲ್ಲ- ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಸೆ. 24. ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ತನ್ನ ಉದ್ಯೋಗಿಗಳಿಗೆ ಸೆಪ್ಟೆಂಬರ್ 30ರೊಳಗೆ ತಮ್ಮ ಚರ ಹಾಗೂ ಸ್ಥಿರ ಆಸ್ತಿಗಳನ್ನು ಬಹಿರಂಗಪಡಿಸದಿದ್ದರೆ ಸಂಬಳ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಆದೇಶವನ್ನು ಪಾಲಿಸುತ್ತಿರುವ ನೌಕರರನ್ನು ಸಕಾಲದಲ್ಲಿ ಪರಿಶೀಲಿಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರವು ಡ್ರಾಯಿಂಗ್ ಮತ್ತು ಡಿಸ್ಬರ್ಸಿಂಗ್ ಅಧಿಕಾರಿ (ಡಿಡಿಒ) ಅವರಿಗೆ ವಹಿಸಿದೆ. ಪೋರ್ಟಲ್‌ ನಲ್ಲಿ ತಮ್ಮ ಆಸ್ತಿ ವಿವರಗಳನ್ನು ಒದಗಿಸುವ ಉದ್ಯೋಗಿಗಳಿಗೆ ಮಾತ್ರ ಸೆಪ್ಟೆಂಬರ್ ಸಂಬಳವನ್ನು ನೀಡಲಾಗುತ್ತದೆ. ಕೆಲವು ನೌಕರರು ಹೆಚ್ಚಿನ

ಸೆ.​ 30ರೊಳಗೆ ಆಸ್ತಿ ಘೋಷಿಸದಿದ್ದರೆ ಸಂಬಳವಿಲ್ಲ- ರಾಜ್ಯ ಸರ್ಕಾರ ಆದೇಶ Read More »

ರಾಷ್ಟ್ರೀಯ ನ್ಯೂಸ್

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 24. ಪದವಿ ಹಾಗು ದ್ವಿತೀಯ ಪಿಯುಸಿ ಮುಗಿಸಿ  ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಭಾರತೀಯ ರೈಲ್ವೆ ಇಲಾಖೆಯು ಅತ್ಯುತ್ತಮ ಅವಕಾಶ ನೀಡುತ್ತಿದ್ದು, ಭಾರತದಾದ್ಯಂತ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ ಖಾಲಿ ಇರುವ ಬರೋಬ್ಬರಿ 11,558 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಸ್ಟೇಷನ್‌ ಮಾಸ್ಟರ್‌, ಕ್ಲರ್ಕ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್‌ 20. ಗೂಡ್ಸ್ ಟ್ರೈನ್ ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಮುಖ್ಯ ವಾಣಿಜ್ಯ ಮತ್ತು

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top