News Kadaba

ಅಂಜನಾದ್ರಿ- ಪಂಪಾಸರೋವರದ ಬಳಿ ಚಿರತೆ, ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 13.  ಅಂಜನಾದ್ರಿ ಹಾಗೂ ಪಂಪಾಸರೋವರದ ಬಳಿ ಆಗಾಗ್ಗೆ ಚಿರತೆ ಹಾಗೂ ಕರಡಿ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವಿಜಯಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಚಿರತೆಯೊಂದು ಕಾಣಿಸಿಕೊಳ್ಳುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಕರಡಿಗಳು ನುಗ್ಗಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಭಕ್ತರು ಹಾಗೂ ಪ್ರವಾಸಿಗರ ಆಗ್ರಹಿಸುತ್ತಿದ್ದಾರೆ. ಉತ್ತರ ಭಾರತದಿಂದ ಬರುವ ಅನೇಕ ಪ್ರವಾಸಿಗರು ಇಲ್ಲಿ ರಾತ್ರಿ ವೇಳೆ ಸಮಯ ಕಳೆಯಲು ಬಯಸುತ್ತಾರೆ. […]

ಅಂಜನಾದ್ರಿ- ಪಂಪಾಸರೋವರದ ಬಳಿ ಚಿರತೆ, ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ Read More »

ಕರ್ನಾಟಕ

ನೇಣು ಬಿಗಿದು ಯುವಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕ ವೃತ್ತಿಯಲ್ಲಿ ಆತ ಎಲೆಕ್ಟ್ರೀಶಿಯನ್ ಆಗಿದ್ದ. ಮಾಹಿತಿಗಳ ಪ್ರಕಾರ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದು ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ

ನೇಣು ಬಿಗಿದು ಯುವಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ – ಪ್ರಧಾನಿ ಮೋದಿ ಭಾಗಿ 

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 13.  ಅಮೆರಿಕದ ಅಧ್ಯಕ್ಷ ಜೋ ಬೈಡನ್​ ಸೆಪ್ಟೆಂಬರ್ 21 ರಂದು ಡೆಲವೇರ್‌ ನಲ್ಲಿ ನಾಲ್ಕನೇ ವ್ಯಕ್ತಿಗತ ಕ್ವಾಡ್ ನಾಯಕರ ಶೃಂಗಸಭೆಯನ್ನು ಆಯೋಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬೈಡನ್​-ಹ್ಯಾರಿಸ್ ಆಡಳಿತವು 2021 ರಲ್ಲಿ, ಶ್ವೇತಭವನದಲ್ಲಿ ಕ್ವಾಡ್ ನಾಯಕರ ಸಮ್ಮೇಳನವನ್ನು ನಡೆಸಲಾಯಿತು. ಅಂದಿನಿಂದ ಪ್ರತಿ ವರ್ಷ ಈ ಸಮ್ಮೇಳನ ನಡೆಯುತ್ತಿದೆ. ಕ್ವಾಡ್ ಶೃಂಗಸಭೆಯಲ್ಲಿ ಹಿಂದೂ ಮಹಾಸಾಗರ-ಪೆಸಿಫಿಕ್ ಪ್ರದೇಶ, ಮಿಲಿಟರಿ, ಆರೋಗ್ಯ, ನೈಸರ್ಗಿಕ ವಿಕೋಪ, ಸಾಗರ ಭದ್ರತೆ, ಗುಣಮಟ್ಟದ ಮೂಲಸೌಕರ್ಯ, ತಂತ್ರಜ್ಞಾನ

ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ – ಪ್ರಧಾನಿ ಮೋದಿ ಭಾಗಿ  Read More »

ಅಂತರ್ರಾಷ್ಟ್ರೀಯ ನ್ಯೂಸ್

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13.  ಕೆನಡಾದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಾಲಿಸ್ತಾನ ಪರ ಬೆಂಬಲಿಗರು ದಾಳಿ ನಡೆಸಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎನ್‌ಐಎ ತಂಡ ಇಂದು ಪಂಜಾಬ್‌ನಲ್ಲಿ ಶೋಧ ಕಾರ್ಯ ನಡೆಸಿದೆ. ದಾಳಿ ಪ್ರಕರಣ ಸಂಬಂಧ ಕಳೆದ ವರ್ಷ ಜೂನ್‌ನಲ್ಲಿ ಎಎನ್‌ಎ ಪ್ರಕರಣ ದಾಖಲು ಮಾಡಿಕೊಂಡಿತ್ತು. ತನಿಖೆಯ ಅಂಗವಾಗಿ ಇಂದು ಪಂಜಾಬ್‌ನಲ್ಲಿ ಎನ್‌ಐಎ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023ರ ಮಾರ್ಚ್ 23ರಂದು ಕೆನಡಾದ ಒಟ್ಟಾವಾದಲ್ಲಿ ಭಾರತದ ರಾಯಭಾರ ಕಚೇರಿ ಹೊರಗಡೆ ಖಾಲಿಸ್ತಾನ

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಆರೋಪಿಗಳ ಬಂಧನಕ್ಕೆ ಅಗ್ರಹಿಸಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13.  ನಾಗಮಂಗಲದ ಕೋಮುಗಲಬೆ ಖಂಡಿಸಿ ಬಿಸಿರೋಡ್‌ನಲ್ಲಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ  ಬೃಹತ್ ಪ್ರತಿಭಟನೆ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ – ಬಂಟ್ವಾಳ ತಾಲೂಕು ಇವರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ, ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ನರಸಿಂಹ ಮಾಣಿ ಮತ್ತು ವಕೀಲರಾದ ಪ್ರಸಾದ್ ಕುಮಾರ್ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಸಭೆಯಲ್ಲಿ

ಬಂಟ್ವಾಳ: ಆರೋಪಿಗಳ ಬಂಧನಕ್ಕೆ ಅಗ್ರಹಿಸಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13.  ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಅವರನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಮಂಜೂರು ಮಾಡುವುದಕ್ಕೆ

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು Read More »

ರಾಷ್ಟ್ರೀಯ ನ್ಯೂಸ್

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒರಿಸ್ಸಾದ ಬುಲುಬಿರೊ(24) ಹಾಗೂ ಪಶ್ಚಿಮ ಬಂಗಾಳದ ದಿಲ್ ದಾರ್ ಆಲಿ (28) ಎಂಬವರನ್ನು ವಶಕ್ಕೆ ಪಡೆದುಕೊಂಡು 

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ. 13.  ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ‘ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸೆಪ್ಟೆಂಬರ್ 12 ರಂದು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿ ಮಂಗಳೂರಿನಲ್ಲಿ ನಡೆದ 14 ರ ವಯೋಮಾನದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿಂತನ್ 1000 ಮೀಟರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸ್ಕೇಟಿಂಗ್ ಸ್ಪರ್ಧೆಯ 500 ಮೀಟರ್ ವಿಭಾಗದಲ್ಲಿಯೂ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ‘ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ’ಗೆ ಆಯ್ಕೆ Read More »

ಕ್ರೀಡಾ ನ್ಯೂಸ್

ಉಡುಪಿ: ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13.  ಇಲ್ಲಿನ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.    

ಉಡುಪಿ: ಯುವಕ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top