News Kadaba

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 12.  ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ಹತೋಟಿಗೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಮೂರು ದಿವಸಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಗಣೇಶನ ಮೆರವಣಿಗೆಯು ದರ್ಗಾದ ಎದುರು ಹೆಚ್ಚು ಹೊತ್ತು ನಿಂತಿದ್ದರಿಂದ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು […]

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಾಹನ ಹರಿದು 4 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 12.  ಶಾಲಾ ವಾಹನ ಹರಿದು ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತ ಮಗು ಶಿವಪುರ ಗ್ರಾಮದ ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (4) ಎಂದು ಗುರುತಿಸಲಾಗಿದೆ. ಶಾಲಾ ವಾಹನ ಚಾಲಕ ಶ್ರೀಶೈಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ವಾಹನದಲ್ಲಿ ಬಂದಿಳಿದ ಮಗು ತನ್ನ ತಂದೆಯನ್ನು ಕಂಡು ವಾಹನದ ಹಿಂಬದಿಯಾಗಿ ಓಡಿತ್ತು. ಇದನ್ನು ಗಮನಿಸದ ಚಾಲಕ

ಶಾಲಾ ವಾಹನ ಹರಿದು 4 ವರ್ಷದ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 12.  ಪಟ್ಟಣದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಮಾರುತಿ ನಗರದ ನಿವಾಸಿ ಕಲ್ಲೇಶ ಸುಲೇಕಿ (25) ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ. ಪಟಾಕಿ ಸಿಡಿದಿದ್ದರಿಂದ ಯುವಕನ ಒಂದು ಕಣ್ಣುಗೆ ತೀವ್ರ ಗಾಯವಾಗಿದ್ದು, ತಲೆಗೆ ಗಾಯವಾಗಿ ರಕ್ತಸ್ರಾವವಾಗಿದೆ. ತಕ್ಷಣ ಯುವಕನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದರಿಂದ ತುರ್ತು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಂದು ತಿಳಿದು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ‘ವಿಶ್ವ ಫಿಸಿಯೋಥೆರಪಿ’ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (ಎಫ್‌ಎಂಸಿಒಪಿ)ಆಶ್ರಯದಲ್ಲಿ ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ವಿಶ್ವ ಫಿಸಿಯೋಥೆರಪಿ ದಿನಾಚರಣೆ ನಡೆಯಿತು. ಅಧ್ಯಕ್ಷತೆಯನ್ನು ಸೈಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ.ಫಾದರ್ ಕ್ಲಿಫರ್ಡ್ ಸಿಕ್ವೇರಾ ಎಸ್.ಜೆ ವಹಿಸಿದ್ದರು. ಎಫ್‌ಎಂಸಿಒಪಿಯ ಪ್ರಾಂಶುಪಾಲೆ ಪ್ರೊ.ಚೆರಿಶ್ಮಾ ಡಿ ಸಿಲ್ವಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ಲೇಡಿಸ್ ಸರ್ಕಲ್ 82ರ ಅಧ್ಯಕ್ಷೆ ನಂದಿತಾ ಪಾಯಸ್ ಮತ್ತು ಮಂಗಳೂರು ರೌಂಡ್ ಟೇಬಲ್ 115ರ ಹಿಂದಿನ ಅಧ್ಯಕ್ಷ ಹಾರೋನ್ ಫೆನಾರ್ಂಡಿಸ್

ಮಂಗಳೂರು: ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ‘ವಿಶ್ವ ಫಿಸಿಯೋಥೆರಪಿ’ ದಿನಾಚರಣೆ Read More »

ಕರಾವಳಿ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದ್ರೆಯ ವಕೀಲರಾದ ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಅಧ್ಯಕ್ಷರು ಹಾಗೂ ನಾಲ್ವರು ಸದಸ್ಯರನ್ನು ಮೂರು ವರ್ಷಗಳ ಅವಧಿಗೆ ಸರಕಾರ ನೇಮಕ ಮಾಡಿದೆ. ಸಮಿತಿಯ ಸದಸ್ಯರಾಗಿ ಅಬೂಬಕರ್ ಜಿ.ಎನ್ ಮಂಗಳೂರು, ಹರಿಣಿ ಬಿಕರ್ನಕಟ್ಟೆ, ಕಿಶೋರ್ ಕುಂದರ್ ಎಕ್ಕೂರ್, ಹರೀಶ ಎಂ. ನಾಗರಿ ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತುಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರಕಾರದ ಅಧೀನ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ Read More »

ಕರಾವಳಿ

ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರ ಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ

ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ‘ಸಮಗ್ರ ಪ್ರಶಸ್ತಿ’

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12.  ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ‘ಪ್ರತಿಭಾ ಕಾರಂಜಿ’ ಯಲ್ಲಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಅರಬಿಕ್ ಧಾರ್ಮಿಕ ಪಠಣದಲ್ಲಿ 6ನೆ ತರಗತಿಯ ಮುಹಮ್ಮದ್ ಹಸನ್ ಖಿದಾಷ್ ಮಿತ್ತೂರು, ಚಿತ್ರಕಲೆಯಲ್ಲಿ 7ನೇ ತರಗತಿಯ ಹಾಜರ ಮುಫೀದಾ ಕೊಡಾಜೆ, ಹಿಂದಿ ಕಂಠಪಾಠದಲ್ಲಿ 7ನೆ ತರಗತಿಯ ಆಯಿಷತುಲ್ ಹೈಫಾ ಪೆರುಮೊಗೇರು,  ಕವನ ವಾಚನದಲ್ಲಿ 6ನೆ ತರಗತಿಯ ಮುಹಮ್ಮದ್ ಹಸನ ಖಿದಾಷ್ ಮಿತ್ತೂರು ಪ್ರಥಮ

ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ‘ಸಮಗ್ರ ಪ್ರಶಸ್ತಿ’ Read More »

ಕರಾವಳಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಚಾರ್ಜ್‌ಶೀಟ್ ಸಲ್ಲಿಸಿ ಈ.ಡಿ  24 ಮಂದಿ ಹೆಸರು ಉಲ್ಲೇಖ     

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 11.  ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಈ.ಡಿ.) ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಚಾರ್ಜ್‌ಶೀಟ್ ಸಲ್ಲಿಸಿದೆ. ಇತ್ತೀಚೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಇರಲಿಲ್ಲ. ಆದರೆ, ಈಗ ಈ.ಡಿ. ಸಲ್ಲಿಸಿರುವ ಚಾರ್ಜ್‌ ಶೀಟ್‌ನಲ್ಲಿ ಬಿ.ನಾಗೇಂದ್ರ ಹಾಗೂ ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‌ ಅಧ್ಯಕ್ಷ ಸತ್ಯನಾರಾಯಣ ವರ್ಮಾ ಅವರನ್ನು ಜಂಟಿ ಪ್ರಥಮ ಆರೋಪಿಗಳನ್ನಾಗಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಚಾರ್ಜ್‌ಶೀಟ್ ಸಲ್ಲಿಸಿ ಈ.ಡಿ  24 ಮಂದಿ ಹೆಸರು ಉಲ್ಲೇಖ      Read More »

ಕರ್ನಾಟಕ

ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 11.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟ ನಡೆಯಿತು. ತಾಲೂಕಿನ 14 ತಂಡಗಳು ಭಾಗವಹಿಸಿದ್ದವು. ಬಾಲಕಿಯರ ವಿಭಾಗದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಬಾಲಕರ ವಿಭಾಗದಲ್ಲಿ ಕೆ ಎಸ್ ಗೌಡ ಪದವಿಪೂರ್ವ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ ವಿಭಾಗದಲ್ಲಿ

ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ Read More »

ಕರಾವಳಿ

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 11.  ಪಾಕಿಸ್ತಾನದಲ್ಲಿ ಇಂದು 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 12:58ರ ವೇಳೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಡಿಜಿ ಖಾನ್‌(ಶಾದಿ ವಾಲಾ) 33 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಪಾಕಿಸ್ತಾನದ ಪೇಶಾವರ, ಇಸ್ಲಾಮಾಬಾದ್ ಮತ್ತು ಲಾಹೋರ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿದ್ದು, ದೆಹಲಿ, ನೋಯ್ಡಾ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ Read More »

ರಾಷ್ಟ್ರೀಯ ನ್ಯೂಸ್
Scroll to Top