News Kadaba

ಶಂಕಿತ ಉಗ್ರರಿಂದ ರಾಕೆಟ್ ದಾಳಿ 2 ಕಟ್ಟಡಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com  ಇಂಫಾಲ, ಸೆ. 6. ಮಣಿಪುರ ಬಿಷ್ಣುಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಶಂಕಿತ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ 2 ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಚುರ್ ಚಂದಾಪುರ ಜಿಲ್ಲೆಯ ಗುಡ್ಡ ಪ್ರದೇಶದಿಂದ ಜನವಸತಿ ಇರುವ ಟ್ರೋಂಗ್‌ ಲಾವೋಬಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಶಂಕಿತ ಉಗ್ರರು ರಾಕೆಟ್ ದಾಳಿ ನಡೆಸಿದ್ದಾರೆ. 3 ಕಿ.ಮೀ ದೂರ ಹಾರಬರಲ್ಲ ಸಾಮರ್ಥ್ಯದ ಲಾಂಚರ್ ಬಳಸಿ ರಾಕೆಟ್ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ದಾಳಿಯಲ್ಲಿ […]

ಶಂಕಿತ ಉಗ್ರರಿಂದ ರಾಕೆಟ್ ದಾಳಿ 2 ಕಟ್ಟಡಗಳಿಗೆ ಹಾನಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ಯಾಂಕ್ ದರೋಡೆಗೆ ಯತ್ನ- ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಸೆ. 6. ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗೋಪನಕೊಪ್ಪ ನಿವಾಸಿ ಮಂಜುನಾಥ್ (28) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಬ್ಯಾಂಕ್ ನೌಕರರೊಬ್ಬರ ಕುತ್ತಿಗೆಗೆ ಚಾಕು ಹಿಡಿದು 10 ಲಕ್ಷ ರೂ. ಗೆ ಬೇಡಿಕೆಯಿಟ್ಟಿದ್ದ ಈತ, ನೌಕರನ ರಕ್ಷಣೆಗೆ ಬಂದವರನ್ನು ತಳ್ಳಿ ಪರಾರಿಯಾಗಿದ್ದ. ಈ ಕುರಿತು ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಬ್ಯಾಂಕ್ ದರೋಡೆಗೆ ಯತ್ನ- ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್     

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ವಾಹಕರ ನಡುವೆ ಜಗಳ ನಡೆದಿದ್ದು, ಇದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬುಧವಾರ ಸಂಜೆ ವೇಳೆ ತೊಕ್ಕೊಟ್ಟು ಸಮೀಪ ಈ ಘಟನೆ ನಡೆದಿದ್ದು, ತಲಪಾಡಿಯಿಂದ

ಖಾಸಗಿ ಬಸ್ ನಿರ್ವಾಹಕರ ನಡುವೆ ಜಗಳ  ಇಬ್ಬರು ಅರೆಸ್ಟ್      Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 6. ನಗರದ ಏಳ್ಮುಡಿ ಎಂಬಲ್ಲಿರುವ ತಾಜ್ ಟವರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ ನೀಡಲಾಯಿತು. ವಜ್ರಾಭರಣಗಳ ಪ್ರದರ್ಶನವನ್ನು ವೈದ್ಯೆ ಡಾ.ಹಬೀನಾ ಶಾಯಿರಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸುಲ್ತಾನ್ ಮಳಿಗೆಯಲ್ಲಿ ಅಭರಣಗಳ ಸಾಕಷ್ಟು ಆಭರಣ ಸಂಗ್ರಹವಿದೆ. ಜೊತೆಗೆ ಇಲ್ಲಿನ ಸಿಬ್ಬಂದಿಗಳ ಸೇವೆಯೂ ಉತ್ತಮ ವಾಗಿದ್ದು, ಗ್ರಾಹಕರಿಗೆ ಸಂತೃಪ್ತಿಯನ್ನು ನೀಡುವಂತಿದೆ. ಮಳಿಗೆಯಲ್ಲಿನ

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ Read More »

ಕರಾವಳಿ

ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರವರಿಗೆ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 6. ಸರಕಾರಿ ಶಾಲೆಯ ಶಿಕ್ಷಕನಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಮತ್ತೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶನ, ತರಬೇತಿ, ಪ್ರೇರಣಾ ತರಗತಿಗಳನ್ನು ನೀಡುತ್ತಿರುವ ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರನ್ನು ನಮ್ಮ ನಾಡ ಒಕ್ಕೂಟ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎನ್ ಎನ್ ಒ ಜಿಲ್ಲಾಧ್ಯಕ್ಷ ಡಾ ಆರಿಫ್ ಮಸೂದ್, ಎನ್ ಎನ್ ಒ ಟ್ರಸ್ಟಿ ಗಳಾದ ಹಮೀದ್ ರಾಯಲ್ ಮೂಡುಬಿದಿರೆ,

ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರವರಿಗೆ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನ Read More »

ಕರಾವಳಿ

ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com  ವಿಜಯಪುರ, ಸೆ. 6. ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೃತ ಪಟ್ಟವರನ್ನು ಬೈಕ್ ಚಾಲಕ ತಾಳಿಕೋಟೆ ತಾಲೂಕಿನ ಗೊಟಗುಣಕಿ ನಿವಾಸಿ ನಿಂಗರಾಜ ಚೌಡಕಿ(22), ಸಹ ಸವಾರ ದೇವರಹಿಪ್ಪರಗಿ ತಾಲೂಕು ಹಂಚಲಿ ನಿವಾಸಿ ಅನೀಲ ಎಂ. ಖೈನೂರ(23), ರಸ್ತೆ

ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..! Read More »

ಕ್ರೈಮ್ ನ್ಯೂಸ್

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!               

(ನ್ಯೂಸ್ ಕಡಬ) newskadaba.com  ಕುಂದಾಪುರ, ಸೆ. 6. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ಮುಂದಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದ ತಾಲೂಕಿನ ಹಳ್ನಾಡು ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರ ಸುಪ್ರಜ ಶೆಟ್ಟಿ (17) ಯಾವುದೋ ಕಾರಣದಿಂದ ಬೇಸತ್ತು ಮನೆ ತೋಟದ ಬಳಿ ಇರುವ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸುಪ್ರಜ ಶೆಟ್ಟಿ ಬುಧವಾರ ಬೆಳಗ್ಗೆ 9 ಗಂಟೆಗೆ ಮನೆಯಲ್ಲಿ ತಿಂಡಿ ತಿಂದು ತೋಟದ ಕಡೆಗೆ ಹೋಗಿ ಬರುವುದಾಗಿ ತಿಳಿಸಿ ಹೊರಗೆ ಹೋಗಿದ್ದು,

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!                Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ನೂತನ ಬೀದಿ ದೀಪಗಳನ್ನು ಉದ್ಘಾಟಿಸಿದ ಶಾಸಕ ಯಶ್‌ ಪಾಲ್ ಸುವರ್ಣ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 6.  ನಗರಸಭಾ ವ್ಯಾಪ್ತಿಯ ಮಣಿಪಾಲ- ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಲಾದ ಬೀದಿ ದೀಪಗಳ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಯಶ್ ಪಾಲ್ ಸುವರ್ಣ, ಗೌರಿ ಗಣೇಶ ಹಬ್ಬದ ಶುಭ ಸಂದರ್ಭ ಬೀದಿ ದೀಪದ ಉದ್ಘಾಟನೆಯ ಮೂಲಕ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಉಡುಪಿ ಕರಾವಳಿ ಬೈಪಾಸಿನಿಂದ ಪರ್ಕಳ ಗಡಿಭಾಗದವರೆಗೆ ದಾರಿ ದೀಪ ವ್ಯವಸ್ಥೆ ಪೂರ್ಣಗೊಂಡಿದ್ದು ಸುಗಮ ಸಂಚಾರಕ್ಕೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು. ಅಂದಾಜು

ಉಡುಪಿ: ನೂತನ ಬೀದಿ ದೀಪಗಳನ್ನು ಉದ್ಘಾಟಿಸಿದ ಶಾಸಕ ಯಶ್‌ ಪಾಲ್ ಸುವರ್ಣ Read More »

ಕರಾವಳಿ

ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು  ಹಲವರಿಗೆ ಗಂಭೀರ ಗಾಯ     

(ನ್ಯೂಸ್ ಕಡಬ) newskadaba.com  ರಾಯಚೂರು, ಸೆ. 5. ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಶಾಲಾ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು  ಹಲವರಿಗೆ ಗಂಭೀರ ಗಾಯ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 5. ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಗರ ಸಭೆಯಲ್ಲಿ ನಡೆಯಿತು. ನಗರ ಸಭೆ ಪೌರಾಯುಕ್ತ ಮತಡಿ ಅವರು ನೂತನ ಅಧ್ಯಕ್ಷ ಶಶಿಕಲಾ ಹಾಗೂ ಉಪಾಧ್ಯಕ್ಷ ಸಪ್ನಾಸಪ್ನಾ ಹರೀಶ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಪ್ರದಾನ ಮಾಡಿದರು. ನಗರ ಸಭೆ ನೂತನ ಅಧ್ಯಕ್ಷರಾಗಿ ಶಶಿಕಲಾ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾಧ್ಯಮ ಜೊತೆ ಮಾತನಾಡಿ, ನಗರ ಸಭೆಯ 31 ಕೌನ್ಸಿಲರ್ ಗಳ ‌ಬೆಂಬಲದಿಂದ ಅಧಿಕಾರ ಪಡೆದಿದ್ದೇನೆ. ನಗರ

ಉಳ್ಳಾಲ: ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ  Read More »

ಕರಾವಳಿ
Scroll to Top