News Kadaba

ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  2 ಪ್ರತ್ಯೇಕ ಪ್ರಕರಣಗಳಲ್ಲಿ ನಗರ ಪೊಲೀಸರು ಎರಡು ಆಟೋ ರಿಕ್ಷಾ ಸೇರಿದಂತೆ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದು, ನಗರದಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕಳ್ಳತನವಾಗಿದ್ದ ಬೈಕ್ ನೊಂದಿಗೆ ರಾಜಗೋಪಾಲ್ ಪತ್ತೆಯಾಗಿದ್ದ. ಇದರ ಅನ್ವಯ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು. ಚಿಕ್ಕಬಳ್ಳಾಪುರ ನಿವಾಸಿಯಾಗಿದ್ದು, ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆ ವಾಹನಗಳ ಕುರಿತು […]

ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ Read More »

ಕ್ರೈಮ್ ನ್ಯೂಸ್

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ‍್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 5 ವರ್ಷದ ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪತ್ತೆಯಾದ ಬಾಲಕಿಯನ್ನು ಮರಿಯಮ್‌ ಎಂದು ಗುರುತಿಸಲಾಗಿದೆ. ಶಿವು ಎಂಬುವವರು ತಮ್ಮ ಪುತ್ರಿ ಎಂದು ಗುರುತಿಸಿದ್ದರು. ಬಾಲಕಿಯನ್ನು ರಾಜಾ ಅಲಿಯಾಸ್ ಮಣಿಕಂಠ ಮತ್ತು ಹೀನಾ, ಅಲಿಯಾಸ್ ಕಾಳಿ ಹತ್ಯೆ ಮಾಡಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು. ಇಬ್ಬರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 103

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ/ಎಸ್ ಟಿ ಅನುದಾನ ಬಳಕೆ..! ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ದಲಿತ ವಿಚಾರವಾದಿಗಳು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಪಾರ ಬೆಂಬಲ ವ್ಯಕ್ತವಾಗಿದ್ದರೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗಳಿಗೆ ಮೀಸಲಿಟ್ಟಿದ್ದ 25 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಬಗ್ಗೆ ಬಗ್ಗೆ ಮೌನ ವಹಿಸಿರುವ ಪಕ್ಷದ ದಲಿತ ಶಾಸಕರ ಮೇಲೆ ಅಸಮಾಧಾನಗೊಂಡು ದಲಿತ ವಿಚಾರವಾದಿಗಳ ಒಂದು ಭಾಗ ದೂರ ಉಳಿದಿತ್ತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧದ ಈ ಸಿಟ್ಟು ಮುಂದಿನ ದಿನಗಳಲ್ಲಿ

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ/ಎಸ್ ಟಿ ಅನುದಾನ ಬಳಕೆ..! ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ದಲಿತ ವಿಚಾರವಾದಿಗಳು..! Read More »

ಕರ್ನಾಟಕ

ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!               

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಬಿಬಿಎಂಪಿ ಇದೀಗ ನಗರ ವ್ಯಾಪ್ತಿಯಲ್ಲಿ ‘ಪೇಯಿಂಗ್‌ ಗೆಸ್ಟ್‌’ (ಪಿಜಿ)ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಬಿಬಿಎಂಪಿ ಕಾಯ್ದೆ–2020ರ ಸೆಕ್ಷನ್‌ 305ರ ಪ್ರಕಾರ, ಪಿಜಿಗಳಿಗೆ ಉದ್ದಿಮೆ ಪರವಾನಗಿ ನೀಡುವಾಗ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತರು ಹೊರಡಿಸಿದ್ದಾರೆ. ಈಗಾಗಲೇ ಉದ್ದಿಮೆ ಪರವಾನಗಿ ಪಡೆದಿರುವ ಪಿಜಿಗಳೂ ನವೀಕರಣ ಸಂದರ್ಭದಲ್ಲಿ ಈ ಮಾರ್ಗಸೂಚಿಗಳನ್ನು ಪಾಲಿಸಿರಬೇಕು. ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಸೂಚಿಸಲಾಗಿದೆ.  

ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!                Read More »

ಕರ್ನಾಟಕ

7ನೇ ವೇತನ ಆಯೋಗ ಜಾರಿ..! ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಶುರುವಾಯ್ತು ಆರ್ಥಿಕ ಸಂಕಷ್ಟ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ನಿರ್ಧರಿಸಿದ್ದು, ಈ ನಡುವಲ್ಲೇ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ. ಅಧಿಕಾರಕ್ಕೆ ಬರುವುದಕ್ಕೂ ಮುನ್ನ 2023 ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದಗಳನ್ನು ಯಾವುದೇ ವಿಳಂಬ ನೀತಿ ಅನುಸರಿಸದೆ ಭರ್ತಿ ಮಾಡುತ್ತೇವೆಂದು ಭರವಸೆ ನೀಡಿದ್ದರು. ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ

7ನೇ ವೇತನ ಆಯೋಗ ಜಾರಿ..! ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಶುರುವಾಯ್ತು ಆರ್ಥಿಕ ಸಂಕಷ್ಟ..! Read More »

ಕರ್ನಾಟಕ

ಇಂದು(ಆ.10)ವಯನಾಡಿನ ಭೂಕುಸಿತ ಪ್ರದೇಶಕ್ಕೆ ಪ್ರಧಾನಿ ಭೇಟಿ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ವಯನಾಡಿನ ಭೂಕುಸಿತಗೊಂಡ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಲಿದ್ದು, ಪರಿಹಾರ ಮತ್ತು ಪುನರ್ವಸತಿ ಪರಿಶೀಲಿಸಲಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಕಣ್ಣೂರು ತಲುಪಲಿದ್ದಾರೆ. ನಂತರ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ದುರಂತದಲ್ಲಿ ಬದುಕುಳಿದವರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅಧಿಕಾರಿಗಳು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡಗಳ ಪ್ರಯತ್ನ ಹಾಗೂ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಅವರಿಗೆ ತಿಳಿಸುತ್ತೇವೆ ಎಂದು

ಇಂದು(ಆ.10)ವಯನಾಡಿನ ಭೂಕುಸಿತ ಪ್ರದೇಶಕ್ಕೆ ಪ್ರಧಾನಿ ಭೇಟಿ..! Read More »

ರಾಷ್ಟ್ರೀಯ ನ್ಯೂಸ್

ಒಲಿಂಪಿಕ್ಸ್ ನಲ್ಲಿ ಕಂಚು ಗೆದ್ದು ಇತಿಹಾಸ ಬರೆದ ಅಮನ್ ಸೆಹ್ರಾವತ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಹೊಸ ಇತಿಹಾಸ ನಿರ್ಮಿಸಿದ್ದು. 21ನೇ ವಯಸ್ಸಿವರಾದ ಅಮನ್ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ ಎನ್ನಲಾಗಿದೆ. 57 ಕೆಜಿ ಪುರುಷರ ಫ್ರಿ ಸ್ಟೈಲ್‌ ವಿಭಾಗದಲ್ಲಿ ಅಮನ್‌ ನಿಗದಿತ ಸಮಯದಲ್ಲಿ 13-5 ಅಂಕಗಳಿಂದ ಪೋರ್ಟೊ ರಿಕೊದ ಡೇರಿಯನ್ ಡೋಯಿ ಕ್ರೂಜ್ ಅವರನ್ನು ಮಣಿಸಿದರು. ಈ ಮೂಲಕ ಭಾರತ ಪ್ಯಾರಿಸ್‌ ಒಲಿಂಪಿಕ್ಸ್ ನಲ್ಲಿ ಆರನೇ ಪದಕವನ್ನು ತನ್ನದಾಗಿಸಿಕೊಂಡಿದೆ. ಅಮನ್‌ ಈ ಬಾರಿಯ

ಒಲಿಂಪಿಕ್ಸ್ ನಲ್ಲಿ ಕಂಚು ಗೆದ್ದು ಇತಿಹಾಸ ಬರೆದ ಅಮನ್ ಸೆಹ್ರಾವತ್..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತ್ತೇ ರೈಲು ಮಾರ್ಗದಲ್ಲಿ ಭೂಕುಸಿತ..! ಬೆಂಗಳೂರು- ಮಂಗಳೂರು ರೈಲು ಸಂಚಾರ ರದ್ದು      

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ಎರಡು ದಿನದ ಹಿಂದಷ್ಟೇ ಆರಂಭಗೊಂಡ ಬೆಂಗಳೂರು-ಮಂಗಳೂರು ರೈಲು ಸೇವೆ ತಾತ್ಕಾಲಿಕವಾಗಿ ಮತ್ತೆ ರದ್ದುಗೊಳಿಸಿದ್ದು, ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ರೈಲುಗಳ ಸಂಚಾರ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ. ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರ(ಆ.09) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮುರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ ಎಂದು ವರದಿ ತಿಳಿಸಿದೆ.

ಮತ್ತೇ ರೈಲು ಮಾರ್ಗದಲ್ಲಿ ಭೂಕುಸಿತ..! ಬೆಂಗಳೂರು- ಮಂಗಳೂರು ರೈಲು ಸಂಚಾರ ರದ್ದು       Read More »

ಕರ್ನಾಟಕ

ಉರುಳಿಗೆ ಸಿಲುಕಿ ಮೃತಪಟ್ಟ ಚಿರತೆ..! 

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.10. ಚಿರತೆಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಅಣ್ಣಪ್ಪ ನಾಯ್ಕ್ ಎಂಬವರ ರಬ್ಬರ್ ತೋಟದಲ್ಲಿ ಉರುಳಿಗೆ ಸಿಲುಕಿದ ಸ್ಥಿತಿಯಲ್ಲಿ ಚಿರತೆ ಬೆಳಿಗ್ಗೆ ಪತ್ತೆಯಾಗಿತ್ತು. ಬೊಬ್ಬೆ ಕೇಳಿ ಸ್ಥಳೀಯರು ಗಮನಿಸಿದಾಗ ಚಿರತೆ ಸಿಲುಕಿರುವುದು ಕಂಡು ಬಂದಿದ್ದು, ಅರಣ್ಯಾಧಿಕಾರಿ ನೇತೃತ್ವದ ತಂಡವು ಸ್ಥಳಕ್ಕಾಗಮಿಸಿತ್ತು. ಚಿರತೆಯ ಸೊಂಟಕ್ಕೆ ಉರುಳು ಬಿದ್ದಿರುವುದರಿಂದ ಸಮೀಪಕ್ಕೆ ತೆರಳಲು ಸಾಧ್ಯವಾಗಲಿಲ್ಲ . ಇದರಿಂದ ಪ್ರಜ್ಞೆ ತಪ್ಪಿಸಿ ರಕ್ಷಿಸಲು ವಯನಾಡಿನ ತಂಡದ ನೆರವು ಕೋರಲಾಗಿತ್ತು. ಆದರೆ ತಂಡವು ಆಗಮಿಸುವ ಮೊದಲೇ ಸಂಜೆ

ಉರುಳಿಗೆ ಸಿಲುಕಿ ಮೃತಪಟ್ಟ ಚಿರತೆ..!  Read More »

ಕರಾವಳಿ

ಕುಸುಮ್ ಯೋಜನೆಯಡಿ ಶೇ. 80 ಸಬ್ಸಿಡಿ ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್  ಸಚಿವ ಕೆ. ಜೆ ಜಾರ್ಜ್                      

(ನ್ಯೂಸ್ ಕಡಬ)newskadaba.com ಚಿಕ್ಕಾಬಳ್ಳಾಪುರ, ಆ.09. ಕೊಳವೆಬಾವಿ ಮತ್ತು ನೀರು ಹೊಂದಿರುವ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಕುಸುಮ್ ಯೋಜನೆಯಡಿ ಶೇಕಡ 80 ಸಬ್ಸಿಡಿ ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್, ಮೋಟರ್, ಪ್ಯಾನಲ್ ಬೋರ್ಡ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ರೈತರು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಡಿ ಜಾರಿ ಮಾಡಿರುವ ಕೃಷಿ ಪಂಪ್

ಕುಸುಮ್ ಯೋಜನೆಯಡಿ ಶೇ. 80 ಸಬ್ಸಿಡಿ ಸೌರಶಕ್ತಿ ಆಧಾರಿತ ಕೃಷಿ ಪಂಪ್ ಸೆಟ್  ಸಚಿವ ಕೆ. ಜೆ ಜಾರ್ಜ್                       Read More »

ಕರ್ನಾಟಕ
Scroll to Top