News Kadaba

ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಸುರಿದ ಭಾರಿ ಮಳೆಗೆ ತಡರಾತ್ರಿ ಇತಿಹಾಸ ಪ್ರಸಿದ್ಧ ಗುಜ್ಜರಕೆರೆ ಬಳಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಅಗತ್ಯ ಕಾರ್ಯಾಚರಣೆಗೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು. ಮರ ಬಿದ್ದ ಪರಿಣಾಮ ಗುಜ್ಜರ ಕೆರೆಯ ಸುತ್ತಲೂ ಮಕ್ಕಳು ಹಾಗೂ ಹಿರಿಯರ ಸುರಕ್ಷತೆಯ ದೃಷ್ಟಿಯಿಂದ ಹಾಕಲಾಗಿದ್ದ ಸ್ಟಿಲ್ ರೇಲಿಂಗ್ ಮುರಿದಿದೆ. ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…! Read More »

ಕರಾವಳಿ, ಕ್ರೈಮ್ ನ್ಯೂಸ್

ಲೋಕಸೇವಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ…! ಆಗಸ್ಟ್ 1ರಂದು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.31. ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. 1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು. ಪ್ರೀತಿ ಸೂದನ್ ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿಯಾಗಿದ್ದರು. ಮಹಿಳಾ

ಲೋಕಸೇವಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ…! ಆಗಸ್ಟ್ 1ರಂದು ಅಧಿಕಾರ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಭಾರೀ ಮಳೆಯಿಂದ ಹಂಪಿಯಲ್ಲಿ ಕನಿಷ್ಠ 12 ಸ್ಮಾರಕಗಳು ಮುಳುಗಡೆ…!

(ನ್ಯೂಸ್ ಕಡಬ)newskadaba.com ಹೊಸಪೇಟೆ, ಜು.31. ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ ಗೂ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಭಾರೀ ಮಳೆಯಿಂದ ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ ನದಿಯ ಸಮೀಪ ಎಲ್ಲೆಂದರಲ್ಲಿ ಪ್ರಯಾಣಿಸದಂತೆ ವಿಜಯನಗರ ಆಡಳಿತ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದೆ. ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ 20 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಂಪಿಯ ಪುರಂದರ ಮಂಟಪ,

ಭಾರೀ ಮಳೆಯಿಂದ ಹಂಪಿಯಲ್ಲಿ ಕನಿಷ್ಠ 12 ಸ್ಮಾರಕಗಳು ಮುಳುಗಡೆ…! Read More »

ಕರ್ನಾಟಕ

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ…! ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಚಿನ್ನಾಭರಣ, ವಜ್ರಾಭರಣ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿರುವ ಮಾರತ್ತಹಳ್ಳಿ ಪೊಲೀಸರು, 30 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ ಚಿಕ್ಕಮ್ಮ ಮಂಜು(39) ಹಾಗೂ ಮಂಜು ಅವರ ಪರಿಚಯಸ್ಥ ಈಜಿಪುರದ ರೋಮನ್ ಎಂದು ಗುರುತಿಸಲಾಗಿದೆ. ದಿವ್ಯಾ ಎಂಬ ಮಹಿಳೆ ಉದ್ಯಮಿ ವಿಕ್ರಮ ವೈದ್ಯನಾಥನ್ ಅವರ ನಿವಾಸದಲ್ಲಿ ಮನೆಗೆಲಸ ಮಾಡುತ್ತಿದ್ದರು. ವೈದ್ಯನಾಥನ್ ಅವರು ತಮ್ಮ ಮನೆಯಿಂದ 60 ಲಕ್ಷ ರೂಪಾಯಿ

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ…! ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಭಾರಿ ಮಳೆ ಹಾಗೂ ಬಿರುಗಾಳಿಯಿಂದಾಗಿ ರಾಜ್ಯದ ಹಲವೆಡೆ ಸಾವಿರಾರು ವಿದ್ಯುತ್ ಕಂಬಗಳು, ಪರಿವರ್ತಕಗಳು ಮತ್ತು ವಿದ್ಯುತ್‌ ಸರಬರಾಜು ಮಾರ್ಗಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಸರಬರಾಜು ಕಂಪನಿಗಳಿಗೆ (ಎಸ್ಕಾಂ) ಒಟ್ಟು 96.61 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಹೇಳಿದರು. ಅತಿವೃಷ್ಟಿಯಿಂದ ಇಲಾಖೆಗೆ ಆಗಿರುವ ನಷ್ಟ ಮತ್ತು ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗಳ ಕುರಿತು ಇಲಾಖೆ ಹಾಗೂ ಎಲ್ಲಾ ಎಸ್ಕಾಂಗಳ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ…!            ಕೊಚ್ಚಿ ಹೋದ ರಸ್ತೆ      

(ನ್ಯೂಸ್ ಕಡಬ)newskadaba.com ಹಾಸನ, ಜು.31. ಮುಂಜಾನೆ ಸುರಿದ ಮಳೆ ಮತ್ತು ಭೂಕುಸಿತದಿಂದ ಸಕಲೇಶಪುರ ತಾಲೂಕಿನ ಕುಂಬರಾಡಿ ಮತ್ತು ಹಾರ್ಲೆ ಎಸ್ಟೇಟ್ ನಡುವಿನ ರಸ್ತೆ ಕೊಚ್ಚಿ ಹೋಗಿದೆ. ಅವೈಜ್ಞಾನಿಕವಾಗಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಿಂದಾಗಿ ಸಕಲೇಶಪುರ ತಾಲೂಕಿನ ಕೆಲವೆಡೆ ಭೂಕುಸಿತ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಭಾರೀ ಮಳೆಗೆ ರಸ್ತೆ ಕೊಚ್ಚಿಹೋಗಿ 80 ಅಡಿ ಆಳಕ್ಕೆ ಕುಸಿದಿದ್ದು, ಅಕ್ಕಪಕ್ಕದ ಐದು ಗ್ರಾಮಗಳು ಹೋಬಳಿ ಮತ್ತು ತಾಲೂಕು ಕೇಂದ್ರಗಳಿಗೆ ಸಂಪರ್ಕ ಕಳೆದುಕೊಂಡಿವೆ. ಮಲ್ಲೇಗದ್ದೆ, ಕಾಡುಮನೆ ಮತ್ತು ಹಾರ್ಲೆ ಜನರು ಭೂಕುಸಿತದಿಂದ ಸಂಕಷ್ಟಕ್ಕೆ

ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ…!            ಕೊಚ್ಚಿ ಹೋದ ರಸ್ತೆ       Read More »

ಕರ್ನಾಟಕ

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ    

(ನ್ಯೂಸ್ ಕಡಬ)newskadaba.com ಕೇರಳ, ಜು.31. ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದಲ್ಲಿ ಈವರೆಗೆ ಅನೇಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದೇ ಅಂತಿಮ ಅಂಕಿ-ಅಂಶವಲ್ಲ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಯನಾಡಲ್ಲಿ ಪ್ರಕೃತಿ ಪ್ರಕೋಪ ಆಗಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಮೊದಲ ಜಲ ಸ್ಫೋಟ ಸಂಭವಿಸಿತ್ತು. 4.10ಕ್ಕೆ ಎರಡನೇ ಸ್ಫೋಟ ಉಂಟಾಗಿತ್ತು. ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬದವರಿಗೆ

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ     Read More »

ಕರಾವಳಿ

ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ 

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸುವಂತೆ ತಿಳಿಸಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ

ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ  Read More »

ಕರ್ನಾಟಕ

ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ…!

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.31. ಮನೆಯ ಕುಡಿಯುವ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ ಎಂದು ತಿಳಿದುಬಂದಿದೆ. ದಾರಿ ತಪ್ಪಿ ಬಂದ ಮೊಸಳೆ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯ ಆವರಣ ಗೋಡೆ ತಗ್ಗಿನಲ್ಲಿರುವುದರಿಂದ ಮತ್ತು ಬಾವಿಯಲ್ಲಿ ನೀರು ತುಂಬಿರುವುದರಿಂದ ಆಕಸ್ಮಿಕವಾಗಿ ಮೊಸಳೆ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಬೃಹತ್ ಮೊಸಳೆಯನ್ನು ವೀಕ್ಷಿಸಲು ಧಾವಿಸಿದ್ದಾರೆ. ಅರಣ್ಯಾಧಿಕಾರಿಗಳು, ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ಮೊಸಳೆಯನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಪಶುವೈದ್ಯರೂ ಸ್ಥಳಕ್ಕಾಗಮಿಸಿದ್ದಾರೆ

ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ…! Read More »

ಕರ್ನಾಟಕ

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…!

(ನ್ಯೂಸ್ ಕಡಬ)newskadaba.com ಬೀಜಾಡಿ, ಜು.31. ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಈ ಕುರಿತು ಪೋಲಿಸ್ ಇಲಾಖೆಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ವರದಿ ತಿಳಿಸಿದೆ. ಸ್ಥಳೀಯರು ಈ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಂದಾಗಬೇಕೆಂದು ಕೋರಲಾಗಿದೆ. ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…! Read More »

ಕ್ರೈಮ್ ನ್ಯೂಸ್
Scroll to Top