News Kadaba

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ನಾಪತ್ತೆಯಾಗಿದ್ದ ಯುವತಿಯೊಬ್ಬಳು ಮನೆಯ ಹೊರ ಆವರಣದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಮಹಾನಂದಾ (21) ಎಂದು ಗುರುತಿಸಲಾಗಿದೆ. ಮೃತ ಯುವತಿ ಹಾಗೂ ಆಕೆಯ ಅಕ್ಕ ಕಳೆದ 3 ಮೂರು ವರ್ಷಗಳಿಂದ ಮಹದೇವಪುರದ ಮಹೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇಲ್ಲಿನ ಖಾಸಗಿ ಪೆಟ್ರೋಲ್ ಬಂಕ್ ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಈ ಕುರಿತು ಯುವತಿಯ ಸಹೋದರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮನೆಯ ಹೊರ ಆವರಣದಲ್ಲಿ ಮಹಾನಂದಾ ಮೃತದೇಹ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೆ ದಂತ ಮಾರಾಟಕ್ಕೆ ಯತ್ನ – ಓರ್ವನ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. 7.42 ಕೆ.ಜಿ ತೂಕದ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸಿದ್ದ ಆರೋಪಿಯನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಜೆಸಿ ನಗರದ ಶ್ರೀಶೈಲ (25) ಬಂಧಿತ ಆರೋಪಿಯಾಗಿದ್ದಾನೆ. 7.42 ಕೆಜಿ ತೂಕದ ಐದು ಆನೆ ದಂತದ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ಯಶವಂತಪುರ ಕೈಗಾರಿಕಾ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸುತ್ತಿದ್ದಾನೆಂಬ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಈ

ಆನೆ ದಂತ ಮಾರಾಟಕ್ಕೆ ಯತ್ನ – ಓರ್ವನ ಬಂಧನ Read More »

ಕರ್ನಾಟಕ

ಮೌಖಿಕ ಪರೀಕ್ಷೆಯಲ್ಲಿ ಫೇಲ್…! – SSLC ವಿದ್ಯಾರ್ಥಿನಿ ಆತ್ಯಹತ್ಯೆ

(ನ್ಯೂಸ್ ಕಡಬ)newskadaba.com ಬೆಳಗಾವಿ, ಆ.12. ಮೌಖಿಕ ಪರೀಕ್ಷೆಯಲ್ಲಿ ಅನುತ್ತೀರ್ಣ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಬೆಳಗಾವಿಯ ಟಿಳಕವಾಡಿಯ ರೈಲ್ವೆ ಗೇಟ್ ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರೀತಿ ಅರುಣ್ ಕಾಂಬಳೆ (16) ಎಂದು ಗುರುತಿಸಲಾಗಿದೆ. ಮೌಖಿಕ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಹಿನ್ನೆಲೆಯಲ್ಲಿ ನೊಂದ ಬಾಲಕಿ ಚಲಿಸುವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.  

ಮೌಖಿಕ ಪರೀಕ್ಷೆಯಲ್ಲಿ ಫೇಲ್…! – SSLC ವಿದ್ಯಾರ್ಥಿನಿ ಆತ್ಯಹತ್ಯೆ Read More »

ಕರ್ನಾಟಕ

ರಾಜ್ಯದ 1,695 ಅನಧಿಕೃತ ಶಾಲೆಗಳನ್ನು ಬಂದ್ ಮಾಡಲಾಗುವುದು – ಶಿಕ್ಷಣ ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜ್ಯಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿದ್ದು, ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ. ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಧಿಕೃತ ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರಕಾರದ

ರಾಜ್ಯದ 1,695 ಅನಧಿಕೃತ ಶಾಲೆಗಳನ್ನು ಬಂದ್ ಮಾಡಲಾಗುವುದು – ಶಿಕ್ಷಣ ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ

ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ – ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜಾಜಿನಗರ 1ನೇ ಎನ್ ಬ್ಲಾಕ್‌ ನಲ್ಲಿರುವ ಬಿಡಬ್ಲ್ಯೂ ಎಸ್‌ಎಸ್‌ಬಿ ಕ್ವಾರ್ಟರ್ಸ್‌ ನ ಆವರಣದಿಂದ ಬೆಲೆ ಬಾಳುವ ಶ್ರೀಗಂಧದ ಮರ ಕದಿಯಲು ಕೆಲವು ಕಳ್ಳರು ಮಾಡಿದ ಪ್ರಯತ್ನವನ್ನು ಬೀದಿ ನಾಯಿಗಳು ವಿಫಲಗೊಳಿಸಿವೆ. ನಾಯಿಗಳು ನಿರಂತರವಾಗಿ ಬೊಗಳುತ್ತಿದ್ದರಿಂದ ನಿವಾಸಿಗಳು ಎಚ್ಚೆತ್ತಿದ್ದಾರೆ. ಬೊಗಳುವ ಸದ್ದು ಕೇಳಿದ ನಿವಾಸಿಗಳು ಮರಗಳತ್ತ ತೆರಳಿ ಐವರಲ್ಲಿ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ BWSSB ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದೂರು ದಾಖಲಿಸಿದ್ದಾರೆ. ಪೊಲೀಸರು ಕರ್ನಾಟಕ ಅರಣ್ಯ ಕಾಯ್ದೆಯಡಿ ಐಪಿಸಿಯ ಇತರ

ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ – ಇಬ್ಬರ ಬಂಧನ Read More »

ಕರ್ನಾಟಕ

ಹೊಸ ಪಠ್ಯಪುಸ್ತಕದ ಪಾಠದಲ್ಲಿ ಬ್ರಾಹ್ಮಣರ ಅವಹೇಳನ ವಿವಾದ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.12. ಕರ್ನಾಟಕ ಸರ್ಕಾರ ಇತ್ತೀಚೆಗೆ ಪಠ್ಯ ಪುಸ್ತಕಗಳನ್ನು ಈ ವರ್ಷದ ಮಟ್ಟಿಗೆ ತಾತ್ಕಾಲಿಕವಾಗಿ ಪರಿಷ್ಕರಿಸಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ಸೇರಿಸಿದ್ದ ಕೆಲವು ಪಾಠಗಳನ್ನು ತೆಗೆದು ಅದರ ಬದಲು ಬೇರೆ ಪಾಠಗಳನ್ನು ಸೇರ್ಪಡೆ ಮಾಡಿದೆ. ಆದರೆ, ಇದೀಗ ಸೇರ್ಪಡೆಯಾದ ಪಾಠಗಳೂ ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವಂತಿದೆ ಎಂಬ ಆರೋಪ ಕೇಳಿ ಬಂದಿದೆ. 8ನೇ ತರಗತಿಯ ಕನ್ನಡ ದ್ವಿತೀಯ ಭಾಷೆಯ ಪಠ್ಯದಲ್ಲಿ ವಿಜಯಮಾಲಾ ರಂಗನಾಥ ಬರೆದ ‘ಬ್ಲಡ್‌ ಗ್ರೂಪ್‌’ ಎಂಬ ಪಾಠದಲ್ಲಿ ಜಾತಿ ವ್ಯವಸ್ಥೆಗೆ ಬ್ರಾಹ್ಮಣ

ಹೊಸ ಪಠ್ಯಪುಸ್ತಕದ ಪಾಠದಲ್ಲಿ ಬ್ರಾಹ್ಮಣರ ಅವಹೇಳನ ವಿವಾದ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕರ್ನಾಟಕ ವಿಧಾನಸಭೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾಗೀರಥಿ ಅವರ ನೇಮಕದ ಆದೇಶಕ್ಕೆ ಸಹಿ ಹಾಕಿದ್ದಾರೆ. ರೂಪಕಲಾ ಎಂ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಸಮಿತಿಗೆ 15 ವಿಧಾನಸಭಾ ಸದಸ್ಯರು ಮತ್ತು 5 ವಿಧಾನ ಪರಿಷತ್ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಸುಳ್ಯ ಕ್ಷೇತ್ರದ ಶಾಸಕರಾಗಿರುವ ಭಾಗೀರಥಿ ಅವರು ಮೊದಲ ಬಾರಿಗೆ ವಿಧಾನಸಭೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ನೇಮಕ Read More »

ಕರ್ನಾಟಕ

ನಾಳೆಯಿಂದ ಮೂರು ದಿನ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶದ ಜನತೆ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಕರೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.12. ಆ.13 ರಿಂದ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಮನವಿ ಮಾಡಿದ್ದಾರೆ. ಭಾರತೀಯ ಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಭಾರತೀಯರು ತಮ್ಮ ಛಾಯಾ ಚಿತ್ರಗಳನ್ನು ‘ಹರ್ ಘರ್ ತಿರಂಗಾ’ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕೆಂದು ಅವರು ಒತ್ತಾಯಿಸಿದರು. “ತಿರಂಗಾ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ. ಪ್ರತಿಯೊಬ್ಬ ಭಾರತೀಯನು

ನಾಳೆಯಿಂದ ಮೂರು ದಿನ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶದ ಜನತೆ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಕರೆ Read More »

ರಾಷ್ಟ್ರೀಯ ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ – 500 ರೂ. ಹೆಚ್ಚಿನ ಪ್ರೋತ್ಸಾಹಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.12. ಕೇಂದ್ರ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ 500 ರೂ, ಪ್ರೋತ್ಸಾಹಧನ ನೀಡಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಮಿಷನ್ ಪೋಷಣ್ 2.0 ಅಡಿಯಲ್ಲಿ 2 ಲಕ್ಷ ಅಂಗನವಾಡಿ ಕೇಂದ್ರಗಳನ್ನು ಸಕ್ಷಮ್ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಪೌಷ್ಠಿಕಾಂಶ ಮತ್ತು ಆರಂಭಿಕ ಮಕ್ಕಳ ಆರೈಕೆ ಮತ್ತು ಶಿಕ್ಷಣ ಸೇವೆಗಳ ಸುಧಾರಿತ ವಿತರಣೆಗಾಗಿ ಮಿಷನ್ ಪೋಷಣ್

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ – 500 ರೂ. ಹೆಚ್ಚಿನ ಪ್ರೋತ್ಸಾಹಧನ Read More »

ರಾಷ್ಟ್ರೀಯ ನ್ಯೂಸ್

ಖಾಸಗಿ ಕಾಲೇಜು ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣ..! – ಇಬ್ಬರು ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಆ.12. ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಫೋಟೋ ಗಳನ್ನು ಅಸಭ್ಯವಾಗಿ ಇನ್ಸ್ಟ್ರಾಗ್ರಾಂನಲ್ಲಿ ಫೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಸೇರಿ ‌ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅದೇ ಕಾಲೇಜಿನ ದ್ವಿತೀಯ ಬಿಕಾಂ ಓದುತ್ತಿರುವ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇದೇ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಪರೀಕ್ಷೆ ಮಾಡಿದಾಗ ಇವರಿಬ್ಬರ ಹೆಸರನ್ನು ಬಾಯಿಬಿಟ್ಟಿದ್ದ. ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಖಾಸಗಿ ಕಾಲೇಜು ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣ..! – ಇಬ್ಬರು ವಿದ್ಯಾರ್ಥಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top