News Kadaba

ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ –  ಇಬ್ಬರು‌ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಹಾವೇರಿ, ಆ.07. ವೇಗವಾಗಿ ಚಲಿಸುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ನೀರಲಗಿ ಗ್ರಾಮದ ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಶೇರವಾಡ (55) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊನ್ನಾಪುರ ಗ್ರಾಮದ ಬಸನಗೌಡ ಶಿವನಗೌಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿಗ್ಗಾವಿ ಪಟ್ಟಣಕ್ಕೆ ತೆರಳಲು ನೀರಲಗಿ ಬಳಿ ಹೆದ್ದಾರಿ ಬದಿ ನಿಂತಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಚಿದಾನಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು  ಸರಿಯಾದ […]

ಬಸ್‌ ಗಾಗಿ ಕಾದು ನಿಂತಿದ್ದವರಿಗೆ ಕಾರು ಢಿಕ್ಕಿ –  ಇಬ್ಬರು‌ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಇಂಡಿಯಾ’ಮೈತ್ರಿಕೂಟದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ನೇಮಕ ಫಿಕ್ಸ್

(ನ್ಯೂಸ್ ಕಡಬ)newskadaba.com ಪಾಟ್ನಾ, ಆ.07. 26 ಪಕ್ಷಗಳ ಪ್ರತಿಪಕ್ಷ ‘ಇಂಡಿಯಾ’ ಮೈತ್ರಿಕೂಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಚಾಲಕರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮೈತ್ರಿಕೂಟದ ಮುಂದಿನ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಮೈತ್ರಿಕೂಟದ 11 ಸದಸ್ಯರ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರಲಿದ್ದು, ನಿತೀಶ್ ಕುಮಾರ್ ಅವರನ್ನು ಸಂಚಾಲಕರಾಗಿ ಆಯ್ಕೆ

‘ಇಂಡಿಯಾ’ಮೈತ್ರಿಕೂಟದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ನೇಮಕ ಫಿಕ್ಸ್ Read More »

ರಾಷ್ಟ್ರೀಯ ನ್ಯೂಸ್

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಮನೆಯ ಕೋಣೆಯಲ್ಲಿ ಕಿಟಕಿಯ ಬಳಿ ಕುಳಿತು ಓದುತ್ತಿರುವಾಗ ವೇಳೆ ಆರೋಪಿಯೋರ್ವ ಮನೆಯ ಹೊರಗೆ ನಿಂತು ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ ಘಟನೆ ವರದಿಯಾಗಿದೆ. ಆರೋಪಿಯು ಕೆಲವು ಸಮಯಗಳಿಂದ ದೂರದಾರರನ್ನು ಪ್ರೀತಿಸುವುದಾಗಿ ಹೇಳುತ್ತಾ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಕಿಟಕಿಯ ಮೂಲಕ ಮೈಗೆ ಕೈಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ಕರಾವಳಿಯ ಪ್ರಸಿದ್ದ ಜಾನಪದ ಕ್ರೀಡೆ ಕಂಬಳ ಕಂಪು ರಾಜಧಾನಿ ಬೆಂಗಳೂರಿಗೂ ಪಸರಿಸಲಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ. ರಾಜ್ಯ ರಾಜಧಾನಿಯಲ್ಲಿ ತುಳುಕೂಟದ ಸುವರ್ಣ ಸಂಭ್ರಮದ ಹಿನ್ನಲೆಯಲ್ಲಿ ಕಂಬಳಾ ಆಯೋಜನೆಗೆ ನಿರ್ಧರಿಸಲಾಗಿದ್ದು, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಪೂರಕ ಸಿದ್ಧತೆ ನಡೆಯುತ್ತಿದೆ. ಕಂಬಳ ಕರೆಗೆ ರಾಜ ಮಹಾರಾಜ ‘ಜಯಚಾಮರಾಜೇಂದ್ರ ಒಡೆಯರ್‌ ಜೋಡುಕರೆ ಕಂಬಳ’ ಎಂದು ಹೆಸರಿಡಲು ತೀರ್ಮಾನಿಸಲಾಗಿದ್ದು, ಅರಮನೆ ಮೈದಾನದಲ್ಲಿ

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ ! Read More »

ಕರ್ನಾಟಕ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಮಂಗಳೂರು ರೈಲ್ವೆ ನಿಲ್ದಾಣದ ಆಧುನೀಕರಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು. ನವದೆಹಲಿ ವಿಡಿಯೋ ಕಾನ್ಫೆರೆನ್ಸ್(ವರ್ಚುವಲ್) ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು ಎನ್ನಲಾಗಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಆವರಣದಲ್ಲಿ ನಡೆದ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲು ಜ್ಯೋತಿ ಬೆಳಗಿಸಿ ಉದ್ಘಾಟಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ರೂ.19.32 ಕೋಟಿ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ Read More »

ಕರಾವಳಿ

ಶಂಕಿತ ಉಗ್ರರು ಎನ್‌ಐಎ ತಂಡದ ವಶಕ್ಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ರಾಜ್ಯದ ಹಲವೆಡೆ ಬಾಂಬ್‌ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಆರು ಮಂದಿ ಉಗ್ರರರನ್ನು ಹೆಚ್ಚಿನ ವಿಚಾರಣೆಗಾಗಿ ಎನ್‌ಐಎ ಸದ್ಯದಲ್ಲೇ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಸಿಸಿಬಿ ಪೊಲೀಸರ ತನಿಖೆ ಪೂರ್ಣಗೊಂಡು ಆರೋಪಿಗಳನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೀಗಾಗಿ, ಕೇಂದ್ರ ಗೃಹ ಸಚಿವಾಲಯ ಅಥವಾ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಎನ್‌ಐಎ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆಯಲಿದ್ದಾರೆ. ವಿದೇಶದಿಂದ‌ ಆರ್ಥಿಕ ನೆರವು ಮತ್ತು ವಿಧ್ವಂಸಕ ಕೃತ್ಯಕ್ಕೆ ಗ್ರೆನೇಡ್ ಪೂರೈಕೆ ಮಾಡಿರುವುದನ್ನು ಎನ್‌ಐಎ ಗಂಭೀರವಾಗಿ

ಶಂಕಿತ ಉಗ್ರರು ಎನ್‌ಐಎ ತಂಡದ ವಶಕ್ಕೆ..! Read More »

ಕರ್ನಾಟಕ

ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ..! –  ಇಂದಿನ ಕಲಾಪದಲ್ಲಿ ರಾಹುಲ್ ಗಾಂಧಿ ಭಾಗಿ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದ್ದು, ಇಂದಿನಿಂದ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿ ಸೂರತ್‌ ನ್ಯಾಯಾಲಯವು ಕಾಂಗ್ರೆಸ್‌ ಮುಖಂಡ ರಾಹುಲ್‌ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂ ಕೋರ್ಟ್‌ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಸಂಸತ್ತ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃ ಸ್ಥಾಪಿಸಿದ್ದಾರೆ. ರಾಹುಲ್‌ ಗಾಂಧಿ ಅವರಿಗೆ ಗರಿಷ್ಠ ಶಿಕ್ಷೆ ವಿಧಿಸಲು ಅಧೀನ

ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ..! –  ಇಂದಿನ ಕಲಾಪದಲ್ಲಿ ರಾಹುಲ್ ಗಾಂಧಿ ಭಾಗಿ Read More »

ರಾಷ್ಟ್ರೀಯ ನ್ಯೂಸ್

ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ..! – ಓರ್ವ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.07. ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ ನಡೆದು ಓರ್ವ ಆಸ್ಪತ್ರೆಗೆ ದಾಖಲಾದ ಘಟನೆ ಉಪ್ಪಿನಂಗಡಿ ಪೆರಿಯಡ್ಕದ ನೆಡ್ಚಿಲ್ ಬಳಿ ನಡೆದಿದೆ. ಕೇರಳ ಮೂಲದ ಮೂವರು ಇಲ್ಲಿ ಬಾಡಿಗೆ ರೂಂನಲ್ಲಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ನಡೆಸುತ್ತಿದ್ದರು. ಇವರು ತಮ್ಮ ಬಾಡಿಗೆ ಕೊಠಡಿಯಲ್ಲಿ ಪರಸ್ಪರ ಜಗಳವಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರು ಸೇರಿ ಮರದ ತುಂಡಿನಿಂದ ಮತ್ತೋರ್ವನ ತಲೆಗೆ ಹೊಡೆದಿದ್ದಲ್ಲದೆ, ತೀವ್ರ ಗಾಯಗೊಂಡು ಬಿದ್ದಿದ್ದ ಈತನನ್ನು ಕೊಠಡಿಯ ಹೊರಗೆ ಹಾಕಿ, ಬಾಗಿಲು ಹಾಕಿ ಕುಳಿತ್ತಿದ್ದರು ಎನ್ನಲಾಗಿದೆ.

ರಬ್ಬರ್ ಟ್ಯಾಪಿಂಗ್ ಕಾರ್ಮಿಕರ ನಡುವೆ ಜಗಳ..! – ಓರ್ವ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್- ಅರ್ಜಿ ನೋಂದಾಯಿಸಿದ್ದರೂ ಎಂದಿನಂತೆ ಬಂದ ಕರೆಂಟ್ ಬಿಲ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 07. ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗಿದ್ದರೂ ಕೆಲವು ಗ್ರಾಹಕರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ಬದಲಿಗೆ ಬಳಕೆ ಮಾಡಿದ ವಿದ್ಯುತ್ ಬಿಲ್ ನೀಡಲಾಗಿದೆ. ಇಂಧನ ಇಲಾಖೆಯ ಆದೇಶದ ಪ್ರಕಾರ ಜುಲೈ 27ಕ್ಕೆ ಮೊದಲೇ ನೋಂದಣಿ ಮಾಡಿಸಿಕೊಂಡಿದ್ದರೂ ಎಂದಿನಂತೆಯೇ ಬಿಲ್ ಬಂದಿದ್ದು, ಕೆಲವು ಗ್ರಾಹಕರು ಬಿಲ್ ಪಾವತಿಸಬೇಕೆ, ಬೇಡವೇ ಎನ್ನುವ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಪಡೆದ 2.16 ಕೋಟಿ ಗ್ರಾಹಕರಲ್ಲಿ 2.14 ಕೋಟಿ ಮಂದಿ 200 ಯೂನಿಟ್ ಗಿಂತ

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್- ಅರ್ಜಿ ನೋಂದಾಯಿಸಿದ್ದರೂ ಎಂದಿನಂತೆ ಬಂದ ಕರೆಂಟ್ ಬಿಲ್..! Read More »

ಕರ್ನಾಟಕ

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07. ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ ಗಳ ತೆರವಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು‌ ನೀಡಲಾಗಿತ್ತು. ಈ ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ಸಮಾಜದಲ್ಲಿ ಶಾಂತಿ

ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..! Read More »

ಕರಾವಳಿ
Scroll to Top