News Kadaba

ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.03. ನೇತ್ರಾವತಿ ನದಿಯಲ್ಲಿ ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹದ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ. ಇಲ್ಲಿನ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50ರಿಂದ 55 ವರ್ಷದ ಮಹಿಳೆಗೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, 142 ಸೆಂ. ಮೀ. ಎತ್ತರವಿದ್ದು, ಕೆಂಪು ಬಣ್ಣದ ರವಿಕೆ ಹಾಗೂ ಹಸಿರು ಬಣ್ಣದ ಬಟ್ಟೆ ತೊಟ್ಟಿರುತ್ತಾರೆ. ಮೂಗಲ್ಲಿ ಮೂಗುತಿ ಹಾಗೂ ಬಲ ಕೈಯಲ್ಲಿ ಗುಲಾಬಿ ಬಣ್ಣದ ಗಾಜಿನ ಬಳೆಯೊಂದಿದೆ. ಆದ್ದರಿಂದ ಇವರ ಬಗ್ಗೆ ತಿಳಿದವರು […]

ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಒಡಿಶಾ ರೈಲು ದುರಂತ….! – ಇನ್ನೂ ಪತ್ತೆಯಾಗದ 29 ಮೃತದೇಹದ ಗುರುತು

(ನ್ಯೂಸ್ ಕಡಬ)newskadaba.com ಒಡಿಶಾ, ಆ.02. ಒಡಿಶಾದ ಬಾಲಸೋರ್‌ನಲ್ಲಿ ರೈಲು ದುರಂತ ಸಂಭವಿಸಿ ಎರಡು ತಿಂಗಳು ಕಳೆದಿದೆ. ಆದರೂ ಭುವನೇಶ್ವರದ ಏಮ್ಸ್‌ ಆಸ್ಪತ್ರೆಯಲ್ಲಿ ಇರಿಸಲಾದ 29 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಎಐಐಎಂಎಸ್‍ನ‌ ವೈದ್ಯಕೀಯ ಅಧೀಕ್ಷಕ ದಿಲೀಪ್ ಕುಮಾರ್ ಪರಿದಾ ಹೇಳಿದ್ದಾರೆ. ಆಸ್ಪತ್ರೆಯಲ್ಲಿ 162 ದೇಹಗಳನ್ನು ಇರಿಸಲಾಗಿತ್ತು. ಆದರಲ್ಲಿ 113 ಮೃತದೇಹಗಳ ಗುರುತು ಪತ್ತೆಯಾಗಿದ್ದು ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಉಳಿದ ಮೃತ ದೇಹಗಳಿಗಾಗಿ ಡಿಎನ್‍ಎ ಪರೀಕ್ಷೆ ನಡೆಸಲಾಗಿದೆ. ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಖಚಿತ ವರದಿಯ

ಒಡಿಶಾ ರೈಲು ದುರಂತ….! – ಇನ್ನೂ ಪತ್ತೆಯಾಗದ 29 ಮೃತದೇಹದ ಗುರುತು Read More »

ರಾಷ್ಟ್ರೀಯ ನ್ಯೂಸ್

ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಣ್ಣೂರು ನಿವಾಸಿಯೋರ್ವನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಕಣ್ಣೂರು ಪರಪ್ಪನಂಗಡಿಯ ಜೋರ್ಜ್ ಜೋಸೆಫ್ (51) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಈ ಘಟನೆ ನಡೆದಿದೆ. ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದ್ದು, ಕಣ್ಣೂರು- ಪಯ್ಯ ನ್ನೂರು ನಡುವೆ ಈತ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ಲಭಿಸಿದ್ದು, ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ

ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಆ.02. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರಂತರವಾಗಿ ಚೀತಾಗಳು ಸಾವನ್ನಪ್ಪುತ್ತಿದ್ದು, ಇದೀಗ ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ಪ್ರಾಜೆಕ್ಟ್ ಚೀತಾ ಎಂದು ಕರೆಯಲ್ಪಡುವ ಮಹತ್ವಾಕಾಂಕ್ಷೆಯ ಉಪಕ್ರಮದ ಭಾಗವಾಗಿ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ 20 ಚಿರತೆಗಳನ್ನು ಆಮದು ಮಾಡಿಕೊಳ್ಳಲಾದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯ ಸಾವಿನ ಸರಣಿಯಲ್ಲಿ ಇದು ಕೂಡ ಒಂದು. ಸುಮಾರು ಏಳು ದಶಕಗಳ ಹಿಂದೆ ದೇಶದಲ್ಲಿ

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರತಿಸಲಾಗಿದೆ. ಸೆಬಾಸ್ಟಿಯನ್ ಗೆಳೆಯರ ಜೊತೆ ಮನೆ ಸಮೀಪದ ಹೊಂಡದಲ್ಲಿ ಸ್ನಾನ ಕ್ಕಿಳಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕನಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಮುಳುಗು ತಜ್ಞರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು ಎನ್ನಲಾಗಿದೆ.

ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 100ರೂ.ಇಳಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.02. ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಬೆಲೆಯನ್ನು ನವೀಕರಿಸಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಗಳ ದರ ಇಳಿಕೆ‌ ಮಾಡಲಾಗಿದ್ದು, ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು 100 ರೂ.ಗೆ ಇಳಿಸಲಾಗಿದೆ ಎನ್ನಲಾಗಿದೆ. ದೇಶದ ರಾಜಧಾನಿ ನವದೆಹಲಿಯಲ್ಲಿ LPG ಸಿಲಿಂಡರ್ ಬೆಲೆ 1680 ರೂ.ಗೆ ಇಳಿದಿದ್ದು, ಜುಲೈನಲ್ಲಿ ಸಿಲಿಂಡರ್ ಬೆಲೆ ಏರಿಕೆಯಾದ ನಂತರ ಮೊದಲ ಬಾರಿಗೆ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 100 ರೂ. ಇಳಿಸಿದೆ. ಇದಕ್ಕೂ ಮೊದಲು

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 100ರೂ.ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನ ವೈದ್ಯರ ಕಾರು ತಡೆದು ಅನೈತಿಕ ಪೊಲೀಸ್ ಗಿರಿ – ಐವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ಕಾರವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ ಘಟನೆ ಸಂಭವಿಸಿದೆ. ಮಂಗಳೂರಿನ‌ ಹೆಸರಾಂತ ಕಾಲೇಜುವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು. ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ

ಮಂಗಳೂರಿನ ವೈದ್ಯರ ಕಾರು ತಡೆದು ಅನೈತಿಕ ಪೊಲೀಸ್ ಗಿರಿ – ಐವರು ಅರೆಸ್ಟ್..! Read More »

ಕರಾವಳಿ

ಚಾರ್ಜರ್ ಪಿನ್‌ ನಿಂದ ಶಾಕ್‌ ಹೊಡೆದು ಕಂದಮ್ಮ ಮೃತ್ಯು

(ನ್ಯೂಸ್ ಕಡಬ)newskadaba.com ಕಾರವಾರ, ಆ.02. ಮೊಬೈಲ್ ಚಾರ್ಜರ್‌ ನ್ನು ಬಾಯಿಗೆ ಹಾಕಿದಾಗ ಶಾಕ್ ಹೊಡೆದು 8 ತಿಂಗಳ ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿಗಳ 8 ತಿಂಗಳ ಮಗು ಸಾನಿಧ್ಯ ಬಲಿಯಾದ ಕಂದಮ್ಮ ಎಂದು ತಿಳಿದುಬಂದಿದೆ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್‌ ಅನ್ನು ಆಫ್ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ. ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್

ಚಾರ್ಜರ್ ಪಿನ್‌ ನಿಂದ ಶಾಕ್‌ ಹೊಡೆದು ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

‘ವಿಟ್ಲದಲ್ಲಿ ನಡೆದ ಅತ್ಯಾಚಾರವನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ’ ? – ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಉಡುಪಿ ಕಾಲೇಜಿನ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇರಳ ಫೈಲ್ಸ್‌ ಸಿನಿಮಾ ಮಾದರಿಯ ಕೃತ್ಯ ಎಂದು ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಔಟ್ ಗೋಯಿಂಗ್ ಅಧ್ಯಕ್ಷ/ವಿದೂಷಕ ಕಟೀಲ್ ಉಡುಪಿ ಪ್ರಕರಣವನ್ನು ಕೇರಳ ಫೈಲ್ಸ್ ಗೆ ಹೋಲಿಸಿದ್ದು, ಹಾಗಾದರೆ ಇವರದ್ದೇ ಕ್ಷೇತ್ರದ ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಂಘ ಪರಿವಾರಕ್ಕೆ ಸೇರಿದ 3 ಯುವಕರಿಂದ

‘ವಿಟ್ಲದಲ್ಲಿ ನಡೆದ ಅತ್ಯಾಚಾರವನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ’ ? – ಸಚಿವ ದಿನೇಶ್ ಗುಂಡೂರಾವ್ ತಿರುಗೇಟು Read More »

ಕರ್ನಾಟಕ

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಮೃತ ಬಾಲಕಿಯನ್ನು ಕೃತಿಕಾ(3)ಎಂದು ಗುರುತಿಸಲಾಗಿದೆ. ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top