News Kadaba

ಕರಾಚಿಯಲ್ಲಿ 150 ವರ್ಷ ಹಳೆಯ ಮಾರಿ ಮಾತಾ ಹಿಂದೂ ದೇವಸ್ಥಾನ ಧ್ವಂಸ

(ನ್ಯೂಸ್ ಕಡಬ)newskadaba.com ಪಾಕಿಸ್ತಾನ, ಜು.18. 150 ವರ್ಷಗಳಷ್ಟು ಹಳೆಯದಾದ ಮಾರಿ ಮಾತಾ ಹಿಂದೂ ದೇವಾಸ್ಥಾನವನ್ನು ಕರಾಚಿಯಲ್ಲಿ ನೆಲಸಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಈ ಪ್ರದೇಶದಲ್ಲಿ ವಿದ್ಯುತ್ ಸ್ಥಗಿತಗೊಳ್ಳುತ್ತಿದ್ದಂತೆ ಬುಲ್ಡೋಜರ್ ಬಂದು ನಿಂತಿದ್ದು, ನೋಡನೋಡುತ್ತಿದ್ದಂತೆ ದೇವಾಸ್ಥಾನವನ್ನು ಧ್ವಂಸಗೊಳಿಸಲಾಗಿದೆ. ಇನ್ನು 150 ವರ್ಷಗಳ ಹಿಂದೆ ದೇವಾಸ್ಥಾನವನ್ನು ನಿರ್ಮಿಸಲಾಗಿದ್ದು ಇದರ ಅಂಗಳದಲ್ಲಿ ನಿಧಿ ಹೂತಿಡಲಾಗಿದ್ದು, ಆಕ್ರಮಣಕಾರರು ಬಹಳ ದಿನಗಳಿಂದ ಇದರ ಮೇಲೆ ಕಣ್ಣಿಟ್ಟಿದ್ದರು ಎಂದು ವರದಿಯಾಗಿದೆ.

ಕರಾಚಿಯಲ್ಲಿ 150 ವರ್ಷ ಹಳೆಯ ಮಾರಿ ಮಾತಾ ಹಿಂದೂ ದೇವಸ್ಥಾನ ಧ್ವಂಸ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸುಳ್ಯ: ಅಣ್ಣನ ಹತ್ಯೆ ಪ್ರಕರಣ..!   ➤ ಬಂಧಿತ ಸಹೋದರರನ್ನು ಕರೆತಂದು ಮಹಜರು

(ನ್ಯೂಸ್ ಕಡಬ)newskadaba.com  ಸುಳ್ಯ, ಜು.18. ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿಂತೆ ಸಹೋದರರಿಂದ ಕೊಲೆಯಾದ ಉಸ್ಮಾನ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಆರೋಪಿ ಸಹೋದರರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು ಅವರನ್ನು ಘಟನಾ ಸ್ಥಳಕ್ಕೆ ಕೊಂಡೊಯ್ದು ಮಹಜರು ನಡೆಸಲಾಗಿದೆ ಎನ್ನಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ ಉಸ್ಮಾನ್ ರನ್ನ ಚೂರಿಯಿಂದ ಇರಿದು ಜುಲೈ 14ರಂದು ಕೊಲೆ ಮಾಡಿ ಬಳಿಕ ಅವರು ರಿಕ್ಷಾದಲ್ಲಿ ಅರಂತೋಡುವರೆಗೆ ಬಂದು ಮತ್ತೊಂದು ರಿಕ್ಷಾದಲ್ಲಿ ಸುಳ್ಯಕ್ಕೆ ಬಂದು ಕೇರಳ ಕಡೆಗೆ ಪರಾರಿಯಾಗಿದ್ದರು. ಆರೋಪಿಗಳನ್ನು ಕೊಡಗು

ಸುಳ್ಯ: ಅಣ್ಣನ ಹತ್ಯೆ ಪ್ರಕರಣ..!   ➤ ಬಂಧಿತ ಸಹೋದರರನ್ನು ಕರೆತಂದು ಮಹಜರು Read More »

ಕರಾವಳಿ

ಖಲಿಸ್ತಾನಿಗಳ ದಾಳಿ ವಿರೋಧಿಸಿ ಭಾರತೀಯರ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಅಮೇರಿಕಾ, ಜು.18. ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ದೂತವಾಸ ಕಚೇರಿ ಮೇಲೆ ಇತ್ತೀಚೆಗೆ ಖಲಿಸ್ತಾನಿ ಬೆಂಬಲಿಗರು ದಾಳಿ ಖಂಡಿಸಿ ಭಾರತೀಯ ಸಮುದಾಯದವರು ಮೌನ ಪ್ರತಿಭಟನೆ ನಡೆಸಿದ್ದಾರೆ. ಸ್ಯಾನ್‌ ಫ್ರಾನ್ಸಿಸ್ಕೊದ ದೂತವಾಸ ಕಚೇರಿ ಎದುರು ಭಾರತವನ್ನು ಬೆಂಬಲಿಸಿ ನೂರಾರು ಭಾರತೀಯ ಸಮುದಾಯದವರು ಬೃಹತ್‌ ಮೌನ ರ್ಯಾಲಿ ನಡೆಸಿದ್ದಾರೆ. ಇನ್ನು ಇದೇ ವೇಳೆ ದಾಳಿಯನ್ನು ಉಗ್ರರ ಕೃತ್ಯವೆಂದು ಹಾಗೂ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಖಲಿಸ್ತಾನಿಗಳ ದಾಳಿ ವಿರೋಧಿಸಿ ಭಾರತೀಯರ ಪ್ರತಿಭಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ   ➤ ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ

(ನ್ಯೂಸ್ ಕಡಬ)newskadaba.com  ಉಡುಪಿ, ಜು.18. ದೋಷ ಪೂರಿತ ಟೈಲ್ಸ್ ಗಳನ್ನು ಪೂರೈಕೆ ಮಾಡಿದ ಕಂಪನಿ ಮತ್ತು ಡೀಲರ್ ಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 1 ಲಕ್ಷ ರೂ ಕ್ಕೂ ಹೆಚ್ಚಿನ ದಂಡ ವಿಧಿಸಿದೆ. ಕುಂದಾಪುರದ ಸ್ಟೇಟ್ ಬ್ಯಾಂಕ್ ಉದ್ಯೋಗಿ ಪ್ರಕಾಶ್ ರವರು ತಮ್ಮ ಮನೆಯ ನವೀಕರಣಕ್ಕಾಗಿ ಉಡುಪಿಯ ನಿಟ್ಟೂರು ಬಳಿಯಿರುವ ಗಣೇಶ್ ಮಾರ್ಬಲ್ಸ್ ನಿಂದ ಕಜಾರಿಯ ಕಂಪೆನಿಯ ಸುಮಾರು 81,158 ರೂ ಬೆಲೆ ಬಾಳುವ ಟೈಲ್ಸ್ ಗಳನ್ನು ಖರೀದಿಸಿದ್ದಾರೆ.

ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ   ➤ ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ Read More »

ಕರಾವಳಿ

‘ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ’- ವಿಪಕ್ಷಗಳ ಸಭೆ ಬಗ್ಗೆ ಮೋದಿ ವಾಗ್ದಾಳಿ 

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜು.18. ಕಟ್ಟರ್‌ ಭ್ರಷ್ಟಾಚಾರಿಗಳ ಸಮ್ಮೇಳ ನಡೆಯುತ್ತಿದೆ”ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಸಭೆ ಕುರಿತು ಟೀಕಾ ಪ್ರಹಾರ ನಡೆಸಿದ್ದಾರೆ. ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇ ರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟಿಸಿದರು. ಬಳಿ ಮಾತನಾಡಿದ ಪ್ರಧಾನಿ ಮೋದಿ, ವಿರೋಧ ಪಕ್ಷಗಳು ವೈಯಕ್ತಿಕ ಲಾಭಗಳಲ್ಲಿ ಮಾತ್ರ ಆಸಕ್ತಿ ಹೊಂದಿವೆ. ಅವರ ಮಂತ್ರ ’ಕುಟುಂಬದಿಂದ ಮತ್ತು ಕುಟುಂಬಕ್ಕಾಗಿ’ ತಮ್ಮಲ್ಲಿರುವ ಭ್ರಷ್ಟರನ್ನು ರಕ್ಷಿಸಲು ಪ್ರತಿ ಪಕ್ಷಗಳು ಒಂದಾಗುತ್ತವೆ’ ಎಂದು

‘ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ’- ವಿಪಕ್ಷಗಳ ಸಭೆ ಬಗ್ಗೆ ಮೋದಿ ವಾಗ್ದಾಳಿ  Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಭರ್ಜರಿ ಗಿಫ್ಟ್‌ ➤ ಗೃಹಜ್ಯೋತಿಯಲ್ಲಿ ಮೂರು ಯೋಜನೆ ವಿಲೀನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.18. ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ವಿದ್ಯುತ್‌ ಸಂಬಂಧಿ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ನೇರ ಲಾಭ ದಕ್ಕಲಿದೆ. ಚುನಾವಣೆ ವೇಳೆ ಘೋಷಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಜುಲೈ 1 ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿ ಕುಟುಂಬಕ್ಕೆ

ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಭರ್ಜರಿ ಗಿಫ್ಟ್‌ ➤ ಗೃಹಜ್ಯೋತಿಯಲ್ಲಿ ಮೂರು ಯೋಜನೆ ವಿಲೀನ Read More »

ಕರ್ನಾಟಕ

ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಪಾಪಿಗಳು !   ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com  ವಿಜಯವಾಡ, ಜು.18. ವಿಜಯವಾಡದಲ್ಲಿ ಇಬ್ಬರು ಎಲೆಕ್ಟ್ರಿಷಿಯನ್‌ ಗಳು ತರಗತಿಯ ಕೊಠಡಿಯಲ್ಲಿ ಸ್ಟೀಲ್ ಬೆಂಚಿನ ಮೇಲೆ ಕುಳಿತಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ‘ಮೋಜಿಗಾಗಿ’ ಉದ್ದೇಶಪೂರ್ವಕವಾಗಿ ಪದೇ ಪದೇ ವಿದ್ಯುತ್ ಶಾಕ್ ಕೊಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು ಇಬ್ಬರನ್ನೂ ಬಂಧಿಸಿದ್ದಾರೆ ಎನ್ನಲಾಗಿದೆ. ಈಡುಪುಗಲ್ಲು ಗ್ರಾಮದ ಜಿಲ್ಲಾ ಪರಿಷತ್‌ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಓರ್ವ ಬಾಲಕಿ ಪ್ರಜ್ಞೆ ತಪ್ಪಿದ್ದು, ಇನ್ನಿಬ್ಬರು ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶನಿವಾರ ಚಿಕಿತ್ಸೆ ಬಳಿಕ ಡಿಸ್ಚಾರ್ಜ್

ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಪಾಪಿಗಳು !   ➤ ಇಬ್ಬರು ಆರೋಪಿಗಳ ಬಂಧನ Read More »

ಕರ್ನಾಟಕ

ರಾಜ್ಯದಲ್ಲಿ ಬರಗಾಲ ಘೋಷಿಸಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ರೂ. ನೀಡಿ ➤ ಬಸವರಾಜ ಬೊಮ್ಮಾಯಿ ಆಗ್ರಹ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.18. ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ. ನಿಗದಿತ ಸಮಯಕ್ಕೂ ಮಳೆ ಬಂದಿಲ್ಲ. ಮಳೆ ಬಾರದ ಕಾರಣ ರೈತರು ಬಿತ್ತನೆ

ರಾಜ್ಯದಲ್ಲಿ ಬರಗಾಲ ಘೋಷಿಸಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ರೂ. ನೀಡಿ ➤ ಬಸವರಾಜ ಬೊಮ್ಮಾಯಿ ಆಗ್ರಹ Read More »

ಕರ್ನಾಟಕ

ಮೊದಲ ಪೋಸ್ಟಿಂಗ್‌ ನಲ್ಲಿಯೇ ಲಂಚಕ್ಕೆ ಕೈಯೊಡ್ಡಿದ ಮಹಿಳಾ ಅಧಿಕಾರಿ ➤ ರೆಡ್ ಹ್ಯಾಂಡ್ ಆಗಿ ACB ಬಲೆಗೆ

(ನ್ಯೂಸ್ ಕಡಬ)newskadaba.com  ಹಜಾರಿಬಾಗ್, ಜು.18. ವ್ಯಕ್ತಿಯೊಬ್ಬರಿಂದ ಲಂಚ ಪಡೆದುಕೊಳ್ಳುತ್ತಿದ್ದ ಸರ್ಕಾರಿ ಅಧಿಕಾರಿಣಿಯೊಬ್ಬರನ್ನು ಜಾರ್ಖಂಡ್‌ ನ ಹಜಾರಿಬಾಗ್ ಭ್ರಷ್ಟಾಚಾರ ನಿಯಂತ್ರಣ ದಳ (ಎಸಿಬಿ) ರೆಡ್ ಹ್ಯಾಂಡ್ ಆಗಿ ಹಿಡಿದಿದೆ ಎಂದು ವರದಿಯಾಗಿದೆ. ಬಂಧಿತ ಮಹಿಳಾ ಅಧಿಕಾರಿಯನ್ನು ಮಿಥಾಲಿ ಶರ್ಮಾ ಎಂದು ಗುರುತಿಸಲಾಗಿದ್ದು, ಎಂಟು ತಿಂಗಳ ಹಿಂದೆ ಜಾರ್ಖಂಡ್‌ನ ಕೊಡೆರ್ಮಾದಲ್ಲಿ ಸಹಕಾರ ಇಲಾಖೆಯ ಸಹಾಯಕ ರಿಜಿಸ್ಟ್ರಾರ್ ಆಗಿ ನಿಯೋಜನೆಗೊಂಡಿದ್ದರು. ಇದು ಅವರ ವೃತ್ತಿ ಜೀವನದ ಮೊದಲ ಪೋಸ್ಟಿಂಗ್ ಆಗಿದೆ ಎಂದು ತಿಳಿದುಬಂದಿದೆ.  

ಮೊದಲ ಪೋಸ್ಟಿಂಗ್‌ ನಲ್ಲಿಯೇ ಲಂಚಕ್ಕೆ ಕೈಯೊಡ್ಡಿದ ಮಹಿಳಾ ಅಧಿಕಾರಿ ➤ ರೆಡ್ ಹ್ಯಾಂಡ್ ಆಗಿ ACB ಬಲೆಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ !

(ನ್ಯೂಸ್ ಕಡಬ)newskadaba.com ಚೆನ್ನೈ, ಜು.18. ತಾನು ಸತ್ತರೆ ಮಗನ ಕಾಲೇಜು ಶುಲ್ಕವನ್ನು ಸರ್ಕಾರ ಭರಿಸುತ್ತದೆ ಎಂದು ಮಹಿಳೆಯೊಬ್ಬರು ಚಲಿಸುತ್ತಿರುವ ಬಸ್ಸಿನ ಮುಂದೆ ಹಾರಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾಪತಿ(45) ಎಂದು ಗುರುತಿಸಲಾಗಿದೆ. ಮಹಿಳೆಯು ಕಳೆದ 15 ವರ್ಷದಿಂದ ಗಂಡನಿಂದ ದೂರವಾಗಿ ಕಷ್ಟಪಟ್ಟು ಮಗನನ್ನು ಸಾಕಿ ಬೆಳೆಸಿದ್ದು, ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ಕಳೆದ ಕೆಲ ಸಮಯದಿಂದ ಸ್ವಚ್ಛತೆಯ ಕೆಲಸವನ್ನು ಮಾಡುತ್ತಿದ್ದರು. ಮಗನ ಕಾಲೇಜು ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣ ಪಾಪತಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top