News Kadaba

‘ರೈತರ ಪರವಾಗಿ ಸರಕಾರ ಪರಿಹಾರ ನೀಡಬೇಕು’ ➤ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ತೀವ್ರವಾದ ಬರಗಾಲದಿಂದಾಗಿ ಬಿತ್ತನೆ ಬೀಜಗಳು ಹಾಳಾಗಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದು, ರೈತರ ಪರವಾಗಿ ಸರಕಾರ ತಕ್ಷಣವೇ ಪರಿಹಾರ ನೀಡಬೇಕು ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಎಪಿಎಂಸಿ ಕಾಯ್ದೆಯಡಿ ರೈತ ತನ್ನ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಿತ್ತು. ಆದರೆ, ಹಿಂದಿನ ಎಪಿಎಂಸಿ ಕಾಯ್ದೆಯನ್ನು ಕಾಂಗ್ರೆಸ್ ಸರಕಾರ ತಿದ್ದುಪಡಿ ಮಾಡಿದ್ದು, ರೈತ ವಿರೋಧಿ ರಾಜ್ಯ ಸರಕಾರವನ್ನು ವಿರೋಧಿಸುತ್ತಿದ್ದೇವೆ […]

‘ರೈತರ ಪರವಾಗಿ ಸರಕಾರ ಪರಿಹಾರ ನೀಡಬೇಕು’ ➤ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ Read More »

ಕರ್ನಾಟಕ

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆ ➤ ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಜು.18. ‘ಎಲ್ಲ ಕಳ್ಳರಿಗೂ ಮೋದಿ ಸರ್‌ನೇಮ್ ಇದೆ’ ಎಂಬ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 21ರ ವಿಚಾರಣೆಗೆ ಒಳಪಡಿಸಲಿದೆ. ಸೂರತ್ ನ್ಯಾಯಾಲಯವು ತಮಗೆ ವಿಧಿಸಿರುವ ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್ ಗಾಂಧಿ ಅವರು ಅರ್ಜಿ ಸಲ್ಲಿಸಿದ್ದರು. ಇದನ್ನು ತುರ್ತು ವಿಚಾರಣೆಗೆ ಎತ್ತಿಕೊಳ್ಳುವಂತೆ ಮನವಿ ಮಾಡಲಾಗಿತ್ತು. ಸಿಜೆಐ ಡಿವೈ ಚಂದ್ರಚೂಡ್

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆ ➤ ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಪರೀಕ್ಷೆ ವೇಳೆ ಮೊಬೈಲ್ ಫೋನ್ ಬಳಸಿ ಸಿಕ್ಕಿ ಬಿದ್ದ 19 ವರ್ಷದ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಹಾರಿ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರಿನ ಗಿರಿನಗರ ಸಮೀಪದ ಪಿಇಎಸ್ ಕಾಲೇಜಿನಲ್ಲಿ ಬಿಟೆಕ್ ವಿದ್ಯಾರ್ಥಿಯಾಗಿರುವ ಆದಿತ್ಯ ಪ್ರಭು ಎಂಬಾತ ಸೋಮವಾರ ಮಧ್ಯಾಹ್ನ 1.20 ರ ಸುಮಾರಿಗೆ ಎರಡನೇ ಸೆಮಿಸ್ಟರ್ ಪರೀಕ್ಷೆಯ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಇನ್ವಿಜಿಲೇಟರ್ ಆತನನ್ನು ಪರೀಕ್ಷಾ ನಿಯಂತ್ರಕರಿಗೆ ಹಸ್ತಾಂತರಿಸಿದ್ದಾರೆ. ವಿದ್ಯಾರ್ಥಿಯ ಪೋಷಕರನ್ನು ಬರುವಂತೆ

ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಕೊಲೆಗಳ ಪ್ರಕರಣ ➤ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ನಾಯಕ ಒತ್ತಾಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಹತ್ಯೆಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರೈ, ಕಾಂಗ್ರೆಸ್ ಸರ್ಕಾರ ಆಡಳಿತ ವಹಿಸಿಕೊಂಡು ಎರಡು ತಿಂಗಳು ಪೂರ್ಣಗೊಳ್ಳುವ ಮುನ್ನವೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸುತ್ತಿದ್ದಾರೆ. ಕಟೀಲು ತಪ್ಪು ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಕೊಲೆಗಳ ಪ್ರಕರಣ ➤ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ನಾಯಕ ಒತ್ತಾಯ Read More »

ಕರಾವಳಿ

ಮಂಗಳೂರು: ಮಟ್ಕ ಚೀಟಿ ದಂಧೆ !!! ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಉರ್ವ ಪೊಲೀಸ್ ಥಾಣಾ ವ್ಯಾಪ್ತಿಯ ಉರ್ವಾ ಜಂಕ್ಷನ್ ಹತ್ತಿರದ ಮೈದಾನದಲ್ಲಿ ಮಟ್ಕ ಚೀಟಿ ದಂದೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ದೀಪಕ್ ಶೆಟ್ಟಿ ಕೋಡಿಕಲ್, ಅನಿಲ್ ಶೆಟ್ಟಿ, ಗಿರೀಶ್ ರೈ ವಾಮಂಜುರು ಎಂದು ತಿಳಿದುಬಂದಿದೆ. ಈ ಕುರಿತು ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.  

ಮಂಗಳೂರು: ಮಟ್ಕ ಚೀಟಿ ದಂಧೆ !!! ➤ ಮೂವರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ಇನ್ಮುಂದೆ ದೇವಾಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ತಮಿಳುನಾಡಿನ ಬಳಿಕ ಕರ್ನಾಟಕದ ದೇವಾಸ್ಥಾನಗಳ ಒಳಗಡೆ ಮೊಬೈಲ್ ಫೋನ್ ನಿಷೇಧ ಹೇರಲಾಗಿದ್ದು, ಮೊಬೈಲ್ ಫೋನ್ ಬಳಕೆ ನಿಷೇಧದ ಬಗ್ಗೆ ಮೊದಲಿನಿಂದ ಚರ್ಚೆ ನಡೆಯುತ್ತಿತ್ತು ಎನ್ನಲಾಗಿದೆ. ಅಧಿಕೃತವಾಗಿ ಫೋನ್ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗುತ್ತಿದೆ ಎಂದು ಪ್ರಕಟಣೆ

ಇನ್ಮುಂದೆ ದೇವಾಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ Read More »

ಕರಾವಳಿ

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ ➤ ಜಾಗ್ರತೆ ವಹಿಸಲು SP ಸೂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.18. ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್‌ ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ. ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ ನ್ನು

ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ ➤ ಜಾಗ್ರತೆ ವಹಿಸಲು SP ಸೂಚನೆ Read More »

ಕರಾವಳಿ

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಪೊಲೀಸರು ಯಶಸ್ವಿಯಾಗಿದ್ದಾರೆ. ಕಣ್ಣೂರು ಅಡ್ಯಾರ್‌ ನಿವಾಸಿ ಹಸೈನಾರ್‌ ಆಲಿಯಾಸ್‌ ಹಸೈನ್‌(35) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಲೇಡಿಹಿಲ್‌ ಸಮೀಪ ಫ್ಲ್ಯಾಟ್‌ ಕಡೆಗೆ ಹೋಗುತ್ತಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಗೆ ಯುವತಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಎನ್ನಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು 4 ತಿಂಗಳ ಕಾರಾಗೃಹ ಶಿಕ್ಷೆ

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಗುಜರಾತ್‌, ಜು.18. 20 ವರ್ಷದ ಯುವಕನೊರ್ವ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಯುವಕನೋರ್ವ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಮಾಹಿತಿಯ ಪ್ರಕಾರ, ಪರ್ವ ಸೋನಿ ಅವರು ಅರವಳ್ಳಿಯ ಮೊಡಸದಲ್ಲಿರುವ ಗೋವರ್ಧನ್ ಸೊಸೈಟಿಯಲ್ಲಿರುವ ಶ್ರೈನ್ ಅಪಾರ್ಟ್‌ಮೆಂಟ್‌ ನಲ್ಲಿ ವಾಸಿಸುತ್ತಿದ್ದರು. ಕ್ರಿಕೆಟ್ ಮೈದಾನದಲ್ಲಿ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.  

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮೈಸೂರು, ಜು.18. ನಿಂತಿದ್ದ ಟ್ರ್ಯಾಕ್ಟರ್ ಗೆ ಬೆಳ್ಳಂ ಬೆಳಗ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಮುಂಜಾನೆ 4.30 ರ ಸುಮಾರಿಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತರನ್ನು ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ

ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top