News Kadaba

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ.!➤ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿರುವುದು ಪಾಲಕರಿಗೆ ದೊಡ್ಡ ತಲೆನೋವು 

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ,ಮೇ.30  ಧಾರವಾಡ ಜಿಲ್ಲೆಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ. ಇದು ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಗುಣಮಟ್ಟದ ಶಿಕ್ಷಣ ಸಿಗಬೇಕಾದರೆ ಅತ್ಯುತ್ತಮ ತರಬೇತಿ ಪಡೆದ, ಅನುಭವಿ ಶಿಕ್ಷಕರ ಪಡೆಯ ಅಗತ್ಯವಿದೆ. ಆದರೆ, ಸರ್ಕಾರಿ ಶಾಲೆಗಳು ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವುದು ಒಂದೆಡೆಯಾದರೆ ಸರ್ಕಾರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿರುವುದು ಪಾಲಕರಿಗೆ ಎಲ್ಲಕ್ಕಿಂತ ದೊಡ್ಡ ತಲೆನೋವಾಗಿ ಪರಿಣಮಿಸಿದೆ.    

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ.!➤ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿರುವುದು ಪಾಲಕರಿಗೆ ದೊಡ್ಡ ತಲೆನೋವು  Read More »

ಕರ್ನಾಟಕ
Theft, crime, Robbery

ಪುತ್ತೂರು: ಹಾಡಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.30. ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಹಾಡಹಗಲೇ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ನಡೆಸಿರುವ ಘಟನೆ ನಡೆದಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಮೌನಿಶ್‌ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.  

ಪುತ್ತೂರು: ಹಾಡಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟಿಆರ್ ಬಿಎಫ್ ತರಬೇತಿ ವಿಮಾನ ಭೂ ಸ್ಪರ್ಶ.!➤ ತಪ್ಪಿದ ಭಾರಿ ಅನಾಹುತಾ

(ನ್ಯೂಸ್ ಕಡಬ)newskadaba.com ಬೆಳಗಾವಿ,ಮೇ.30 ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂ ಸ್ಪರ್ಶವಾದ ಘಟನೆ ನಡೆದಿದೆ. ವಿಮಾನದಲ್ಲಿ ಇಬ್ಬರು ಇದ್ದರು ಎನ್ನಲಾಗುತ್ತಿದ್ದು, ರೆಡ್‌ಬರ್ಡ್ ಸಂಸ್ಥೆಗೆ ಸೇರಿದ ವಿಟಿ-ಆರ್ ಬಿಎಫ್ ತರಬೇತಿ ವಿಮಾನ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಟಿತ್ತು ಎನ್ನಲಾಗಿದೆ. ಘಟನೆಗೆ ಆಕಾರಣ ತಾಂತ್ರಿಕ ತೊಂದರೆ ಎನ್ನಲಾಗುತ್ತಿದೆ. ಯಾರಿಗೂ ಕೂಡ ಯಾವುದೇ ತೊಂದ್ರೆಯಾಗಿಲ್ಲ ಎನ್ನಲಾಗಿದೆ. ಇನ್ನೂ ಘಟನ ಸ್ಥಳಕ್ಕೆ ಮಾರಿಹಾರಳ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.  

ವಿಟಿಆರ್ ಬಿಎಫ್ ತರಬೇತಿ ವಿಮಾನ ಭೂ ಸ್ಪರ್ಶ.!➤ ತಪ್ಪಿದ ಭಾರಿ ಅನಾಹುತಾ Read More »

ಕರ್ನಾಟಕ

ಈಜಲು ತೆರಳಿದ್ದ ಉಪನ್ಯಾಸಕ ಸೇರಿ ಇಬ್ಬರು ನೀರುಪಾಲು

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.30. ಕಂದಾವರ ಗ್ರಾಮದ ಉಳ್ಳೂರು – ಕಾಡಿನಕೊಂಡ ಎಂಬಲ್ಲಿ ಕಂದಾವರ ಡಂಪಿಂಗ್ ಯಾರ್ಡ್‌ ಹತ್ತಿರದ ಮದಗಗಕ್ಕೆ ಈಜಲು ತೆರಳಿದ್ದ ಶಂಕರನಾರಾಯಣ ಮದರ್ ಥೇರಸಾ ಕಾಲೇಜಿನ ಉಪನ್ಯಾಸಕ ಸೇರಿ ಇಬ್ಬರು ನೀರು ಪಾಲಾಗಿದ್ದಾರೆ ಎಂದು ವರದಿ ತಿಳಿಸಿದೆ. ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ (28) ಶಂಕರನಾರಾಯಣ ಹೈಸ್ಕೂಲ್ ವಿದ್ಯಾರ್ಥಿ ಭರತ್ ಶೆಟ್ಟಿಗಾರ (15) ನೀರಲ್ಲಿ ಮುಳುಗಿ ಮೃತರಾಗಿದ್ದಾರೆ ಎನ್ನಲಾಗಿದೆ.

ಈಜಲು ತೆರಳಿದ್ದ ಉಪನ್ಯಾಸಕ ಸೇರಿ ಇಬ್ಬರು ನೀರುಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಧ್ಯಾಹ್ನದ ಬಿಸಿಯೂಟದಲ್ಲಿ ʻಗೋಸುಂಬೆʼ ಪತ್ತೆ.!➤ ಐವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಬಿಹಾರ,ಮೇ.30 ಮಧ್ಯಾಹ್ನದ ಬಿಸಿ ಊಟದಲ್ಲಿ ಗೋಸುಂಬೆ ಪತ್ತೆಯಾಗಿದ್ದು, 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ವರದಿಯಾಗಿದೆ. ಭೀಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ತುಡಿ ಗ್ರಾಮದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನದ ಬಿಸಿ ಊಟ ಸೇವಿಸಿದ ನಂತರ ಅನೇಕ ವಿದ್ಯಾರ್ಥಿಗಳು ವಾಂತಿ ಮತ್ತು ಹೊಟ್ಟೆ ನೋವು ಎಂದು ದೂರಿದ್ದಾರೆ. ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ತಕ್ಷಣ 45 ಮಕ್ಕಳನ್ನು ಸಾಮಾನ್ಯ ಆರೋಗ್ಯ ಕೇಂದ್ರ ನರಪತಗಂಜ್‌ಗೆ ಚಿಕಿತ್ಸೆಗಾಗಿ ಕರೆದೊಯ್ದರು.

ಮಧ್ಯಾಹ್ನದ ಬಿಸಿಯೂಟದಲ್ಲಿ ʻಗೋಸುಂಬೆʼ ಪತ್ತೆ.!➤ ಐವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಗೇರುಬೀಜ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ! ➤ ಚಾಲಕನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಮೇ, 30. ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66ರ ಬಲಾಯಿಪಾದೆ ಜಂಕ್ಷನ್ ನಲ್ಲಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿ ಎಂದು ತಿಳಿದುಬಂದಿದೆ. ಲಾರಿಯಲ್ಲಿ ಗೇರುಬೀಜ ತುಂಬಿ ಕೊಂಡು ಹೋಗುತಿದ್ದು, ಬಲಾಯಿಪದೆ ಜಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ನಡುವೆಯೆ ಮಗುಚಿ ಬಿದ್ದಿದೆ ಎಂದು ವರದಿ ತಿಳಿಸಿದೆ.

ಗೇರುಬೀಜ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ! ➤ ಚಾಲಕನಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ ➤ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮೇ.30. ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ತರಬೇತಿ ವಿಮಾನವೊಂದು ಭೂಸ್ಪರ್ಶವಾಗಿದೆ ಎಂದು ವರದಿ ತಿಳಿಸಿದೆ. ಬೆಳಗಾವಿ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಒಂದು ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ- ಬಾಗೇವಾಡಿ ರಸ್ತೆ ಮಧ್ಯದಲ್ಲಿ ತುರ್ತು ಭೂಸ್ಪರ್ಶವಾಗಿದೆ ಎನ್ನಲಾಗಿದೆ. ಇನ್ನು ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.

ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ ➤ ತಪ್ಪಿದ ಭಾರಿ ಅನಾಹುತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ.!➤ಎನ್‌ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಈ ಕುರಿತಾಗಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ.ಹೊಸ ಶಿಕ್ಷಣ ನೀತಿಯ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡವಲು ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.      

ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ.!➤ಎನ್‌ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ Read More »

ಕರ್ನಾಟಕ

ಚಾಲಕನ ನಿಯಂತ್ರನ ತಪ್ಪಿ ಸೇತುವೆಯಿಂದ ಕಣಿವೆಗೆ ಬಿದ್ದ ಬಸ್

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ ,30. ಸಾರಿಗೆ ಬಸ್​ ಒಂದು ಸೇತುವೆಯಿಂದ ಕಣಿವೆಗೆ ಬಿದ್ದ ಪರಿಣಾಮ 10 ಮಂದಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ಸಮಯದಲ್ಲಿ 75 ಪ್ರಯಾಣಿಕರನ್ನು ಹೊತ್ತ ಬಸ್ ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದರು. ಈ ಅವಘಡದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ನಿಯಂತ್ರನ ತಪ್ಪಿ ಸೇತುವೆಯಿಂದ ಕಣಿವೆಗೆ ಬಿದ್ದ ಬಸ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಗಾರಿಗೂ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ ➤`ಯೆಲ್ಲೋ ಅಲರ್ಟ್’; ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ ,30. ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ ಎನ್ನಲಾಗಿದೆ.    

ಮುಂಗಾರಿಗೂ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ ➤`ಯೆಲ್ಲೋ ಅಲರ್ಟ್’; ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ
Scroll to Top