News Kadaba

‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ ➤ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.29. ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ನಡೆಸುತ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದರು.  

‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ ➤ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ Read More »

ಕರ್ನಾಟಕ

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ➤6 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.29 ನಗರದ ಚೌಡೇಶ್ವರಿನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿ ರವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಲಗ್ಗೆರೆ ಸಮೀಪದ ಚೌಡೇಶ್ವರಿ ನಗರದ ಹಳ್ಳಿ ರುಚಿ ಹೋಟೆಲ್ ಮುಂಭಾಗ ರವಿ ಅಲಿಯಾಸ್ ಮತ್ತಿ ರವಿಯನ್ನು ದುರ್ಷರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು.ಈ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ನಂದಿನಿ ಲೇಔಟ್ ಠಾಣೆ ಪೊಲೀಸರು, ಮಂಜ, ಸ್ಪಾಟ್ ನಾಗ, ಗೋಪಿ ಸೇರಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ.  

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ➤6 ಆರೋಪಿಗಳು ಅರೆಸ್ಟ್ Read More »

ಕರ್ನಾಟಕ

ರೈಲಿನಡಿ ಸಿಲುಕಿ ಮೃತಪಟ್ಟ ಕಾರ್ಮಿಕ.!

(ನ್ಯೂಸ್ ಕಡಬ)newskadaba.com ರಾಯಚೂರು,ಮೇ.29 ರಾಯಚೂರಿನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ರೈಲು ಅಪಘಾತ ಸಂಭವಿಸಿ ವ್ಯಕ್ತಿಯ ರುಂಡ ಮುಂಡ ಬೇರ್ಪಟ್ಟ ಭೀಕರ ಘಟನೆ ನಡೆದಿದೆ.ಮೃತನನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ. ರಾಯಚೂರಿನ ಶಕ್ತಿನಗರದ ಆರ್ ಟಿ ಪಿಎಸ್ ವಿದ್ಯುತ್ ಕೇಂದ್ರದಲ್ಲಿ ಘಟನೆ ನಡೆದಿದೆ. ಕಲ್ಲಿದ್ದಲ್ಲು ಸ್ಯಾಂಪಲ್ ತೆಗೆಯುವ ಕೆಲಸ ಮಾಡುತ್ತಿದ್ದ ಇವರು ಆಕಸ್ಮಿಕವಾಗಿ ರೈಲಿನಡಿಗೆ ಸಿಲುಕಿದ್ದಾರೆ ಎನ್ನಲಾಗಿದೆ. ರೈಲು ಕುತ್ತಿಗೆ ಮೇಲೆ ಹರಿದ ಪರಿಣಾಮ ರುಂಡ ಹಾಗೂ ಮುಂಡ ಬೇರ್ಪಟ್ಟು ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ರೈಲಿನಡಿ ಸಿಲುಕಿ ಮೃತಪಟ್ಟ ಕಾರ್ಮಿಕ.! Read More »

ಕರ್ನಾಟಕ

ಜಿಎಸ್‌‌ಎಲ್‌‌ವಿ -ಎಫ್‌12 ನ್ಯಾವಿಗೇಷನ್ ಉಪಗ್ರಹ ಇಸ್ರೋದಿಂದ ಉಡಾವಣೆ

(ನ್ಯೂಸ್ ಕಡಬ)newskadaba.com ಚೆನ್ನೈ, ಮೇ.29. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶ್ರೀ ಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ ಜಿಎಸ್‌‌ಎಲ್‌‌ವಿ – ಎಫ್‌12 (GSLV-F12) ಮತ್ತು ಎನ್‌‌ವಿಎಸ್‌‌ -01 (NVS-01) ಅನ್ನು ಇಂದು ಉಡಾವಣೆ ಮಾಡಿದೆ ಎಂದು ತಿಳಿದುಬಂದಿದೆ. ನ್ಯಾವಿಗೇಷನ್ ಸೇವೆಗಳನ್ನು ಸುಧಾರಿಸಲು ಮತ್ತು ವ್ಯವಸ್ಥೆಗೆ ಹೊಸ ವಿಚಾರಗಳನ್ನು ಪರಿಚಯಿಸಲು ಈ ಉಡಾವಣೆ ಮಾಡಲಾಗಿದೆ.

ಜಿಎಸ್‌‌ಎಲ್‌‌ವಿ -ಎಫ್‌12 ನ್ಯಾವಿಗೇಷನ್ ಉಪಗ್ರಹ ಇಸ್ರೋದಿಂದ ಉಡಾವಣೆ Read More »

ರಾಷ್ಟ್ರೀಯ ನ್ಯೂಸ್

ಯು.ಟಿ ಖಾದರ್ ವಿರುದ್ದ ಫೇಸ್​ಬುಕ್​ ನಲ್ಲಿ ಅವಹೇಳನಕಾರಿ ಪೋಸ್ಟ್ ➤ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮೇ.29. ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ವಿರುದ್ದ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್ ದಾಖಲಾಗಿದೆ. ಪ್ರೀತೇಶ್ ಚಿಕ್ಕಮಗಳೂರು ಎಂಬಾತ ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್​​ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ. ಈ ಕೂಡಲೇ ಇತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.  

ಯು.ಟಿ ಖಾದರ್ ವಿರುದ್ದ ಫೇಸ್​ಬುಕ್​ ನಲ್ಲಿ ಅವಹೇಳನಕಾರಿ ಪೋಸ್ಟ್ ➤ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್ Read More »

ಕರ್ನಾಟಕ

ಸುಳ್ಯ: KSRTC ಬಸ್‌ ಗೆ ಢಿಕ್ಕಿಯಾದ ಆಲ್ಟೋ ಕಾರು ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.29. ಗೂನಡ್ಕದ ಸಮೀಪ ಸರ್ಕಾರಿ ಬಸ್‌ಗೆ ಹಿಂದಿನಿಂದ ಬಂದು ಆಲ್ಟೋ ಕಾರು ಗುದ್ದಿದ ಘಟನೆ ಸಂಭವಿಸಿದೆ. ಘಟನೆಯ ರಭಸಕ್ಕೆ ಅಲ್ಟೋ ಕಾರು ಬಸ್ಸಿನೊಳಗೆ ನುಗ್ಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ ಎನ್ನಲಾಗಿದೆ. ಇನ್ನು ಘಟನೆಯಿಂದ ಯಾವುದೇ ಪ್ರಾಣ ಹಾನಿ, ಗಾಯ ಸಂಭವಿಸಿಲ್ಲ. ಬಸ್‌ ಸುಳ್ಯದಿಂದ ಕೊಯನಾಡಿಗೆ ಸಂಚರಿಸುತ್ತಿತ್ತು. ಅದೇ ಮಾರ್ಗವಾಗಿ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಹಿಂಬದಿಯಿಂದ ಢಿಕ್ಕಿಯಾಗಿದೆ.

ಸುಳ್ಯ: KSRTC ಬಸ್‌ ಗೆ ಢಿಕ್ಕಿಯಾದ ಆಲ್ಟೋ ಕಾರು ➤ ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾವು ಕಚ್ಚಿ 18 ತಿಂಗಳ ಮಗು ಮೃತ್ಯು.!

(ನ್ಯೂಸ್ ಕಡಬ)newskadaba.com ತಮಿಳುನಾಡು,ಮೇ.29  ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಸರಿಯಾದ ರಸ್ತೆ ಸೌಕರ್ಯ ಇಲ್ಲದ ಕಾರಣ ಹಾವು ಕಡಿತಕ್ಕೆ ತುತ್ತಾಗಿ 18 ತಿಂಗಳ ಮಗು ಮೃತಪಟ್ಟಿರುವ ಘಟನೆ ನಡೆದಿದೆ. 18 ತಿಂಗಳ ಅಂಬೆಗಾಲಿಡುವ ತನುಷ್ಕಾ ತನ್ನ ಪೋಷಕರೊಂದಿಗೆ ತನ್ನ ನಿವಾಸದ ಹೊರಗೆ ಮಲಗಿದ್ದಾಗ ಹಾವು ಕಚ್ಚಿದೆ. ಏನೋ ಗಂಭೀರವಾಗಿದೆ ಎಂದು ತಿಳಿದ ನಂತರ, ಮಗುವನ್ನು ತಂದೆ ವಿಜಿ ಮತ್ತು ತಾಯಿ ಪ್ರಿಯಾ ಆನೈಕಟ್ಟು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು.ಆದರೆ ಸರಿಯಾದ ರಸ್ತೆ ಸೌಕರ್ಯ ಇಲ್ಲದ ಕಾರಣ ಆಸ್ಪತ್ರೆಗೆ ತಲುಪುವಾಗಲೇ ಮಗು ಮೃತಪಟ್ಟಿದೆ

ಹಾವು ಕಚ್ಚಿ 18 ತಿಂಗಳ ಮಗು ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಕಾರು & ಲಾರಿ ನಡುವೆ ಭೀಕರ ಅಪಘಾತ ➤ 6 ಮಂದಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕುಷ್ಟಗಿ, ಮೇ.29. ಕಾರು ಹಾಗೂ ಲಾರಿಯ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಗುಡಿ ಕಲಕೇರಿ ಸಾಮಾಜಿಕ ಅರಣ್ಯ ವಲಯದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ‌ ನಡೆದಿದೆ‌. ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ ಕಾಂಬಳೆ, ಅಕ್ಷಯ, ಶಿವಶರಣ, ಜಯಶ್ರೀ ಹಾಗೂ ಮಕ್ಕಳಾದ ರಾಕಿ, ರಶ್ಮಿಕಾ ಎಂದು ಗುರುತಿಸಲಾಗಿದೆ.  

ಕಾರು & ಲಾರಿ ನಡುವೆ ಭೀಕರ ಅಪಘಾತ ➤ 6 ಮಂದಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇವಸ್ಥಾನದಲ್ಲಿ ಭಕ್ತರ ತಲೆ ಮೇಲೆ ಕಾಲಿಟ್ಟ ಪುಡಿ ರೌಡಿ!

(ನ್ಯೂಸ್ ಕಡಬ)newskadaba.com ಬೆಂಗಳೂರು ,ಮೇ.29  ಗಾಣಗಾಪುರದ ದತ್ತಾತ್ರೇಯನ ಸನ್ನಿಧಿಯಲ್ಲಿ ಪುಡಿ ರೌಡಿಯಿಂದ ಭಕ್ತರಿಗೆ ದೌರ್ಜನ್ಯ ನಡೆದಿದ್ದು, ಈತ ಭಕ್ತರ ತಲೆ ಮೇಲೆ ಕಾಲಿಟ್ಟಿದ್ದಾನೆ ಎಂಬ ಆರೋಪ ಕೇಳಿಬರುತ್ತಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ಗಾಣಗಾಪುರದಲ್ಲಿ ಪುಡಿ ರೌಡಿ ಉದ್ಧಟತನ ಮೆರೆದಿದ್ದು, ಈತನನ್ನು ಯಲ್ಲಪ್ಪ ಕಲ್ಲೂರ್ ಎಂದು ಗುರುತಿಸಲಾಗಿದೆ.  

ದೇವಸ್ಥಾನದಲ್ಲಿ ಭಕ್ತರ ತಲೆ ಮೇಲೆ ಕಾಲಿಟ್ಟ ಪುಡಿ ರೌಡಿ! Read More »

ಕರ್ನಾಟಕ

ಪಾಕ್‌ನಲ್ಲಿ ಮರ್ಯಾದಾ ಹತ್ಯೆ➤ ಮಗಳನ್ನು ಜೀವಂತ ಸುಟ್ಟು ಹಾಕಿದ ತಂದೆ

 (ನ್ಯೂಸ್ ಕಡಬ) newskadaba.com. ಪಾಕಿಸ್ತಾನ,ಮೇ.27.   ಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಯುವತಿಯನ್ನು ಕುಟುಂಬದ ಗೌರವದ ಹೆಸರಿನಲ್ಲಿ ಸಜೀವ ದಹನ ಮಾಡಿರುವ ಘಟನೆ ನಡೆದಿದೆ. ಲಾಹೋರ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಜಾಂಗ್ ಜಿಲ್ಲೆಯ ಗರ್ ಮಹಾರಾಜದಲ್ಲಿ ಈ ಘಟನೆ ನಡೆದಿದೆ. ರಜಬ್ ಅಲಿ ಎಂಬಾತ ತನ್ನ ಮಕ್ಕಳಾದ ಜಬ್ಬಾರ್, ಅಮೀರ್ ಮತ್ತು ಇತರ ಕೆಲವು ಕುಟುಂಬ ಸದಸ್ಯರೊಂದಿಗೆ ಸೇರಿಕೊಂಡು ತಮ್ಮ ಮಗಳನ್ನು ಸುಟ್ಟು ಹಾಕಿದ್ದಾನೆ. ಇದಕ್ಕೂ ಮುನ್ನ ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ತನಿಖಾಧಿಕಾರಿ ಮುಹಮ್ಮದ್ ಅಜಮ್

ಪಾಕ್‌ನಲ್ಲಿ ಮರ್ಯಾದಾ ಹತ್ಯೆ➤ ಮಗಳನ್ನು ಜೀವಂತ ಸುಟ್ಟು ಹಾಕಿದ ತಂದೆ Read More »

ಕರಾವಳಿ
Scroll to Top