News Kadaba

ಉಡುಪಿ: ಚಲಿಸುತ್ತಿದ್ದ ಕಂಟೇನರ್ ಲಾರಿ ತಾಗಿ ರಸ್ತೆಗೆ ಬಿದ್ದ ಮರದ ಗೆಲ್ಲು ➤ ಕೆಲಕಾಲ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ)newskadaba.com ಉಡುಪಿ, ಮೇ.29. ಪರ್ಕಳದ ರಾಷ್ಟ್ರೀಯ ಹೆದ್ದಾರಿಯ ಹಳೆಯ ರಸ್ತೆಯಲ್ಲಿ ಚಲಿಸುತ್ತಿದ್ದ ಬೃಹತ್ ಕಂಟೇನರ್ ಲಾರಿಗೆ ರಸ್ತೆಗೆ ವಾಲಿಕೊಂಡಿದ್ದ ಮರದ ಗೆಲ್ಲುತಾಗಿ ಮುರಿದು ಬಿದ್ದು ಕೆಲ ಹೊತ್ತು ವಾಹನ ಸಂಚಾರ ತಡೆ ಉಂಟಾಯಿತು ಎನ್ನಲಾಗಿದೆ. ಈ ಘಟನೆ 8:30ರ ಸಂದರ್ಭದಲ್ಲಿ ನಡೆದಿದ್ದು, ತಕ್ಷಣ ಸ್ಥಳೀಯ ವಾಹನ ಚಾಲಕರು ಸೇರಿ ಮುರಿದ ಮರದ ಭಾಗವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.  

ಉಡುಪಿ: ಚಲಿಸುತ್ತಿದ್ದ ಕಂಟೇನರ್ ಲಾರಿ ತಾಗಿ ರಸ್ತೆಗೆ ಬಿದ್ದ ಮರದ ಗೆಲ್ಲು ➤ ಕೆಲಕಾಲ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಶಾಂಪಿಗ್ ಕಾಂಪ್ಲೆಕ್ಸ್ ಹೆಸರಿನಲ್ಲಿ ಕೋಟಿ-ಕೋಟಿ ಹಣ ಲೂಟಿ.!➤ಮಾಜಿ ಶಾಸಕಿ ವಿರುದ್ಧ ಹಾಲಿ ಶಾಸಕ ದೂರು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.29 ಜಯನಗರ ಶಾಂಪಿಗ್ ಕಾಂಪ್ಲೇಕ್ಸ್ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಲೂಟಿ ಮಾಡಲಾಗಿದೆ ಎಂಬ ಆರೋಪ ಬಿಬಿಎಂಪಿ ಅಧಿಕಾರಿಗಳು ಹಾಗೂ ಮಾಜಿ ಶಾಸಕರ ವಿರುದ್ಧ ಕೇಳಿಬಂದಿದೆ. 15 ರಿಂದ 20 ಕೋಟಿ ಲೂಟಿ ಮಾಡಲಾಗಿದೆ ಎನ್ನಲಾಗುತ್ತಿದೆ. ಜಯನಗರ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗುತ್ತಿದ್ದಂತೆ ನೂತನ ಶಾಸಕ ರಾಮಮೂರ್ತಿ ಭ್ರಷ್ಟರ ಹಿಂದೆ ಬಿದ್ದಿದ್ದಾರೆ. ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಮಾಡಿ ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಮಾಡಿದ್ದಾರೆ ಎಂದಿದ್ದಾರೆ. ಹೀಗಾಗಿ ಶಾಸಕ ರಾಮಮೂರ್ತಿ,

ಶಾಂಪಿಗ್ ಕಾಂಪ್ಲೆಕ್ಸ್ ಹೆಸರಿನಲ್ಲಿ ಕೋಟಿ-ಕೋಟಿ ಹಣ ಲೂಟಿ.!➤ಮಾಜಿ ಶಾಸಕಿ ವಿರುದ್ಧ ಹಾಲಿ ಶಾಸಕ ದೂರು Read More »

ಕರ್ನಾಟಕ

ವಿವಾಹವಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮೇ.29. ರೀಡ್ಸ್‌ಬರ್ಗ್ ಮನೆಯ ಎರಡನೇ ಮಹಡಿಯಲ್ಲಿ ವಧು  ನಿದ್ರಿಸುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ. ಪೈಜ್ ರಡ್ಡಿ (19) ವರ್ಷದ ಯುವತಿ  ಈ ಘಟನೆಯಲ್ಲಿ ಮೃತಪಟ್ಟ ವಧು ಎಂದು ಗುರುತಿಸಲಾಗಿದೆ. ಈ ಘಟನೆ ಅಮೇರಿಕಾದ ವಿಸ್ಕಾನ್ಸಿನ್‌ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಎರಡನೇ ಮಹಡಿಯಲ್ಲಿ  ನಿದ್ರಿಸುತ್ತಿದ್ದ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಹೊಗೆಯಿಂದಾಗಿ ಉಸಿರುಗಟ್ಟಿ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆ ಫ‌ಲಕಾರಿಯಾಗದೆ ಯುವತಿ  ಸಾವನ್ನಪ್ಪಿದ್ದಾಳೆ

ವಿವಾಹವಾಗಬೇಕಿದ್ದ ವಧು ಅಗ್ನಿ ಅವಘಡದಲ್ಲಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ

(ನ್ಯೂಸ್ ಕಡಬ)newskadaba.com  ಸುಳ್ಯ, ಮೇ.29. ಬೈಕ್ ವೊಂದು ಪಾದಚಾರಿಗೆ ಢಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡೀಲ್ ಎಂಬಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮಂಡೆಕೋಲು ಗ್ರಾಮದ ಭವಾನಿಶಂಕರ್, ಪತ್ನಿ ಲೀಲಾವತಿ ಹಾಗೂ ಇಬ್ಬರು ಮಕ್ಕಳು ಸುಳ್ಯದಿಂದ ಮಂಡೆಕೋಲು ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪಡೀಲ್ ಎಂಬಲ್ಲಿ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಗುದ್ದಿದ್ದು, ಬೈಕ್ ನಲ್ಲಿದ್ದ ನಾಲ್ವರೂ ಕೂಡಾ ರಸ್ತೆಗೆಸೆಯಲ್ಪಟ್ಟಿದ್ದಾರೆ ಎನ್ನಲಾಗಿದೆ.  

ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ಖಾಲಿ ಹುದ್ದೆ ಭರ್ತಿ ಮಾಡುತ್ತೇವೆ.!➤ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು ,ಮೇ.29 ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ಖಾಲಿ ಹುದ್ದಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡುವುದಾಗಿ ಜನರಿಗೆ ಮಾತು ನೀಡಿದ್ದೇವೆ.ಕೊಟ್ಟ ಮಾತಿನಂತೆ ಆದಷ್ಟು ಬೇಗ ಹುದ್ದೆ ಭರ್ತಿ ಮಾಡುತ್ತೇವೆ. ಅರ್ಹರನ್ನು ಪಾರದರ್ಶಕವಾಗಿ ನೇಮಿಸುತ್ತೇವೆ ಎಂದು ತಿಳಿಸಿದ್ದಾರೆ.    

ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ಖಾಲಿ ಹುದ್ದೆ ಭರ್ತಿ ಮಾಡುತ್ತೇವೆ.!➤ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ Read More »

ಕರ್ನಾಟಕ
Crime

ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ➤ ಮೂರು ಜನರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.29. ಮದ್ಯ ಸೇವಿಸಿ ವಾಹನ ಚಲಾಯಿಸಿದ ಮೂವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಒಟ್ಟು 59 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಿದ್ದಾರೆ. ಇದ್ದು ತಪಾಸಣೆಯ ವೇಳೆ ಮೂವರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಮಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ➤ ಮೂರು ಜನರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಡವರಿಗೆ ಸಿಗಬೇಕಾದ ಸವಲತ್ತುಗಳನ್ನು ಉಳ್ಳವರು ಪಡೆದರೆ ಅದು ಹೆಣದ ಮೇಲಿನ ಅನ್ನ ತಿಂದಂತೆ.!➤ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು ,ಮೇ.29 ನಾಡಿನ ಬಡ ಜನತೆಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ಉಳ್ಳವರು ಪಡೆದರೆ ಅದು ಹೆಣದ ಮೇಲಿನ ಅನ್ನ ತಿಂದಂತೆ ಎಂದು ನೂತನ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ, ಭರವಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದ ಅವರು, ಪ್ರತಿಪಕ್ಷಗಳು ಮುಗ್ಧ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು ಎಂದು ಹೇಳಿದರು.  

ಬಡವರಿಗೆ ಸಿಗಬೇಕಾದ ಸವಲತ್ತುಗಳನ್ನು ಉಳ್ಳವರು ಪಡೆದರೆ ಅದು ಹೆಣದ ಮೇಲಿನ ಅನ್ನ ತಿಂದಂತೆ.!➤ಸಚಿವ ಕೆ.ಎನ್. ರಾಜಣ್ಣ ಹೇಳಿಕೆ Read More »

ಕರ್ನಾಟಕ

ನಿರುದ್ಯೋಗದಿಂದ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೈಂದೂರು, ಮೇ.29. ಯುವತಿಯೋರ್ವಳು ನಿರುದ್ಯೋಗದಿಂದ ಮನನೊಂದು ಡೆತ್‌ ನೋಟ್‌ ಬರೆದು  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ಎಂಬಲ್ಲಿ ಸಂಭವಿಸಿದೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್‌ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ನಿರುದ್ಯೋಗದಿಂದ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪದವಿ ಕಾಲೇಜುಗಳ `ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ.!➤ ಜು.17 ರಿಂದ ತರಗತಿ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.29 ಉನ್ನತ ಶಿಕ್ಷಣ ಇಲಾಖೆಯು 2023-24 ನೇ ಸಾಲಿನಿಂದ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಅವುಗಳ ಸಂಯೋಜಿತ ಕಾಲೇಜುಗಳಲ್ಲಿ ಪದವಿ ಕೋರ್ಸುಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಪ್ರಸ್ತುತ ಸಾಲಿನಲ್ಲಿ ಮೇ.22 ರಿಂದ ಜುಲೈ 15 ರೊಳಗೆ ಪದವಿ ಕಾಲೇಜುಗಳ ಪ್ರಥಮ ಸೆಮಿಸ್ಟರ್ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜು.17 ರಿಂದ ತರಗತಿಗಳನ್ನು ಆರಂಭಿಸಿ, ನವೆಂಬರ್ 18 ಕ್ಕೆ ಮುಕ್ತಾಯಗೊಳಿಸಬೇಕು. 13 ರಿಂದ 2

ಪದವಿ ಕಾಲೇಜುಗಳ `ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ.!➤ ಜು.17 ರಿಂದ ತರಗತಿ ಆರಂಭ Read More »

ಕರ್ನಾಟಕ

ಇಂದಿನಿಂದ 2023- 24 ನೇ ಸಾಲಿನ ಶೈಕ್ಷಣಿಕ ವರ್ಷ ➤ ಮೇ 31ರಿಂದ ತರಗತಿ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.29. ಇಂದಿನಿಂದ 2023- 24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಶಾಲೆಗಳು ತೆರೆಯಲಿದ್ದು, ಮೇ.31 ರಿಂದ ರಾಜ್ಯಾದಾದ್ಯಂತ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಲಿದೆ ಎಂದು ವರದಿ ತಿಳಿಸಿದೆ. ಮೇ.29 ಮತ್ತು 30 ರಂದು ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಸಿದ್ದತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ.

ಇಂದಿನಿಂದ 2023- 24 ನೇ ಸಾಲಿನ ಶೈಕ್ಷಣಿಕ ವರ್ಷ ➤ ಮೇ 31ರಿಂದ ತರಗತಿ ಆರಂಭ Read More »

ಕರ್ನಾಟಕ
Scroll to Top