News Kadaba

ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ.!➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು ,ಮೇ.29  ಮೇ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ.ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ  ಮಳೆಯ ಅಬ್ಬರ ಹೆಚ್ಚಾಗಲಿದ್ದು, ಮೇ 31 ಮತ್ತು ಜೂನ್ 1ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. […]

ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ.!➤ ಹವಾಮಾನ ಇಲಾಖೆ ಸೂಚನೆ Read More »

ಕರ್ನಾಟಕ

ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.29. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದ್ದು, 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪ್ರಕಟವಾಗಿದೆ. ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಡಾ. ಜಿ.ಪರಮೇಶ್ವರ್- ಗೃಹ ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ ಕೆ.ಹೆಚ್.ಮುನಿಯಪ್ಪ- ಆಹಾರ &

ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟ Read More »

ಕರ್ನಾಟಕ

ಮತ್ತೇ ಭುಗಿಲೆದ್ದ ಹಿಂಸಾಚಾರ..! ➤ 40 ಕ್ಕೂ ಹೆಚ್ಚು ಉಗ್ರರ ಹತ್ಯೆ

(ನ್ಯೂಸ್ ಕಡಬ)newskadaba.com ಮಣಿಪುರ, ಮೇ.29. ಕೆಲ ದಿನಗಳಿಂದ ತಣ್ಣಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿ ತಿಳಿಸಿದೆ. ಬಹುಸಂಖ್ಯಾತ ಹಿಂದೂ ಮೀಟಿ ಸಮುದಾಯದವರನ್ನು ಗುರಿಯಾಗಿಸಿ ಕುಕಿ ಉಗ್ರರು ನಡೆಸಿದ ದಾಳಿಗೆ ಇಬ್ಬರು ಬಲಿಯಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಜೊತೆಗೆ ಉಗ್ರರು 80ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸೇನೆಯ ಹೆಚ್ಚುವರಿ ಪಡೆಯನ್ನು ರವಾನಿಸಲಾಗಿದೆ. ಸೇನಾ ಮುಖ್ಯಸ್ಥ ನರವಣೆ ಪರಿಸ್ಥಿತಿಯ ಅಧ್ಯಯನಕ್ಕೆ ರಾಜ್ಯಕ್ಕೆ

ಮತ್ತೇ ಭುಗಿಲೆದ್ದ ಹಿಂಸಾಚಾರ..! ➤ 40 ಕ್ಕೂ ಹೆಚ್ಚು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ವಿಮಾನದ ತುರ್ತುದ್ವಾರ ತೆರೆದ ಪ್ರಯಾಣಿಕ ➤ ಉಸಿರಾಟ ಸಮಸ್ಯೆಗೆ ಸಿಲುಕಿ 9 ಮಂದಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಸಿಯೋಲ್, ಮೇ.27. ದಕ್ಷಿಣ ಕೊರಿಯಾದ ಡಾಯೆಗು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗುತ್ತಿದ್ದ  ವಿಮಾನವೊಂದು ಪ್ರಯಾಣಿಕ ಲ್ಯಾಂಡಿಂಗ್‌ಗೆ ಮುಂಚೆಯೇ ತುರ್ತುದ್ವಾರ ತೆರೆದಿದ್ದು ಇದರಿಂದ  9 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ. 200 ಪ್ರಯಾಣಿಕರನ್ನು ಏಷಿಯಾನಾ ಏರ್‌ಲೈನ್ಸ್‌ನ ವಿಮಾನವೊಂದು ಹೊತ್ತು ನಿಲ್ದಾಣದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ಲ್ಯಾಂಡಿಂಗ್‌ ಇನ್ನೂ 200 ಮೀಟರ್‌ (650 ಅಡಿ) ಎತ್ತರವಿರುವಾಗಲೇ ಪ್ರಯಾಣಿಕರೊಬ್ಬರು ತುರ್ತು ದ್ವಾರ ತೆರೆದಿದ್ದು, ಇದರಿಂದ ಗಾಳಿ ವಿಮಾನದ ಒಳನುಗ್ಗಿದ ರಭಸಕ್ಕೆ 9 ಪ್ರಯಾಣಿಕರಿಗೆ ಉಸಿರಾಟದ ಸಮಸ್ಯೆಯಾಗಿದೆ.  

ವಿಮಾನದ ತುರ್ತುದ್ವಾರ ತೆರೆದ ಪ್ರಯಾಣಿಕ ➤ ಉಸಿರಾಟ ಸಮಸ್ಯೆಗೆ ಸಿಲುಕಿ 9 ಮಂದಿ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.27. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಮನದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಲ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಾಯಾಳುಗಳಿಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

108 ಆಂಬ್ಯುಲೆನ್ಸ್​ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ.!

(ನ್ಯೂಸ್ ಕಡಬ)newskadaba.com ಉಡುಪಿ ,ಮೇ.27  108 ಆಂಬ್ಯುಲೆನ್ಸ್​ನಲ್ಲಿಯೇ ಮಹಿಳೆಯೊರ್ವರಿಗೆ ಹೆರಿಗೆ ಆದ ಘಟನೆ ಆದಿ ಉಡುಪಿ ಬಳಿ ನಡೆದಿದೆ. ಆದಿ ಉಡುಪಿಯಿಂದ ಹೆರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಧ್ಯ ದಾರಿಯಲ್ಲಿ ಸರೋಜಾ (28) ಎಂಬ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸಹಾಯಕರಾದ ಆಂಬುಲೆನ್ಸ್ ಚಾಲಕರು ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದ್ದು, ತಾಯಿ ಮಗು ಆರೋಗ್ಯವಾಗಿ ಇದ್ದಾರೆ.  

108 ಆಂಬ್ಯುಲೆನ್ಸ್​ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ.! Read More »

ಕರ್ನಾಟಕ

ಮಂಗಳೂರು: ‘ತಿಂಗಳ‌ ಒಳಗಾಗಿ ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ’ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.27. ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ ನೀಡಿರುವ ಉಚಿತ ಗ್ಯಾರೆಂಟಿ‌ ಭರವಸೆಯನ್ನು ಇನ್ನೂ ಅದನ್ನು ಈಡೇರಿಸಿಲ್ಲ. ಒಂದು ತಿಂಗಳ‌ ಒಳಗಾಗಿ ಉಚಿತ ಘೋಷಣೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ‌ ಅವರಿಗೆ ಈ‌ ಹಿಂದೆ

ಮಂಗಳೂರು: ‘ತಿಂಗಳ‌ ಒಳಗಾಗಿ ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ’ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

ಯೂಟ್ಯೂಬ್ ಸ್ಟೋರಿಸ್‌ ಫೀಚರ್‌ ಸ್ಥಗಿತ

(ನ್ಯೂಸ್ ಕಡಬ)newskadaba.com ಅಮೇರಿಕಾ, ಮೇ.27. ಜನಪ್ರಿಯ ಆನ್‌ಲೈನ್ ವಿಡಿಯೋ ಹಂಚಿಕೆ ಪ್ಲಾಟ್‌ಫಾರ್ಮ್ ಯೂಟ್ಯೂಬ್ ಜೂನ್ 26ರಿಂದ ಸ್ಟೋರಿಸ್‌ ಫೀಚರ್‌ ಅನ್ನು ಸ್ಥಗಿತಗೊಳಿಸಲಿದೆ. ಬಳಕೆದಾರರಿಗೆ ಆ ದಿನದಿಂದ ಯಾವುದೇ ಹೊಸ ಸ್ಟೋರಿಸ್‌ ಪೋಸ್ಟ್ ಮಾಡಲು ಸಾಧ್ಯವಾಗುವುದಿಲ್ಲ ಮತ್ತು ಅಸ್ತಿತ್ವದಲ್ಲಿರುವ ಪೋಸ್ಟ್‌ಗಳು ಕೂಡ ಏಳು ದಿನಗಳ ನಂತರ ಲಭ್ಯವಿರುವುದಿಲ್ಲ ಎನ್ನಲಾಗಿದೆ.  

ಯೂಟ್ಯೂಬ್ ಸ್ಟೋರಿಸ್‌ ಫೀಚರ್‌ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ.!➤ನಳಿನ್ ಕಮಾರ್ ಕಟೀಲ್

(ನ್ಯೂಸ್ ಕಡಬ)newskadaba.com ಮಂಗಳೂರು,ಮೇ.27 ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ‌ ಅವರಿಗೆ ಈ‌ ಹಿಂದೆ ಬಿಜೆಪಿ ಸರಕಾರ ಅನುಕಂಪದ ಆಧಾರದಲ್ಲಿ ಕೆಲಸ‌ ಕೊಡಿಸಿತ್ತು.‌ ಇದೀಗ ಕಾಂಗ್ರೆಸ್ ಸರಕಾರದ ಅವರನ್ನು ಉದ್ಯೋಗದಿಂದ ಬಿಡುಗಡೆ ಮಾಡಿದೆ.‌ ಕಾಂಗ್ರೆಸ್ ಈ ರೀತಿಯ ದ್ವೇಷ ಸಾಧಿಸದೆ ಅವರಿಗೆ ಮತ್ತೆ ಕೆಲಸ ನೀಡಬೇಕು.ಒಂದು ವೇಳೆ ಕೆಲಸ ನೀಡದಿದ್ದರೆ ಕೇಂದ್ರ ಸರಕಾರ ಸಾಮ್ಯದ ಸಂಸ್ಥೆಗಳನ್ನು ಕೆಲಸ ಕೊಡಿಸುತ್ತೇವೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

ಕಾಂಗ್ರೆಸ್ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ.!➤ನಳಿನ್ ಕಮಾರ್ ಕಟೀಲ್ Read More »

ಕರಾವಳಿ

ಭಯೋತ್ಪಾದಕ ಸಹಚರನ ಬಂಧನ…! ➤ ಗ್ರೆನೇಡ್ ವಶಕ್ಕೆ

(ನ್ಯೂಸ್ ಕಡಬ)newskadaba.com ಜಮ್ಮು ಕಾಶ್ಮೀರ, ಮೇ.27. ಕಾಶ್ಮೀರ ಪೊಲೀಸರು ಕಾರ್ಯಾಚರಣೆ ನಡೆಸಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಭಯೋತ್ಪಾದಕ ಸಹಚರನನ್ನು ಬಾರಾಮುಲ್ಲಾ ಜಿಲ್ಲೆಯ ನಾಗಬಲ್ ಚಂದೂಸಾ ಪ್ರದೇಶದಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ. ಭಯೋತ್ಪಾದಕನನ್ನು ಬಾರಾಮುಲ್ಲಾದ ಲಾರಿದೂರ ಚಂದೂಸಾ ನಿವಾಸಿ ಮೊಹಮ್ಮದ್ ಅಶ್ರಫ್ ಮಿರ್ ಎಂದು ಗುರುತಿಸಲಾಗಿದೆ. ಆತನಿಗಾಗಿ ಹುಡುಕಾಟ ನಡೆಸಿದ ಸಮಯದಲ್ಲಿ  ಪೊಲೀಸರು ಅವನ ಬಳಿ ಇದ್ದ  ಗ್ರೆನೇಡ್ ಅನ್ನು ವಶಪಡಿಸಿಕೊಂಡರು.  ಈತನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ  ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ  ಪ್ರಕರಣ ಚಂದೂಸಾ ಪೊಲೀಸ್

ಭಯೋತ್ಪಾದಕ ಸಹಚರನ ಬಂಧನ…! ➤ ಗ್ರೆನೇಡ್ ವಶಕ್ಕೆ Read More »

ರಾಷ್ಟ್ರೀಯ ನ್ಯೂಸ್
Scroll to Top