News Kadaba

ಕಲ್ಲು ಕ್ವಾರಿಯಲ್ಲಿ ಸ್ಪೋಟ ಸಂಭವಿಸಿ, ಕೂಲಿ ಕಾರ್ಮಿಕ ಮೃತ್ಯು.!

(ನ್ಯೂಸ್ ಕಡಬ)newskadaba.com ಕೋಲಾರ,ಮೇ.25  ಕಲ್ಲು ಕ್ವಾರಿಯಲ್ಲಿ ಸ್ಪೋಟ ಸಂಭವಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ಕೆ.ಬಿ.ಹೊಸಹಳ್ಳಿ ಬಳಿ ನಡೆದಿದೆ.ಕೆ.ಬಿ.ಹೊಸಹಳ್ಳಿ ಬಳಿಯ ಜೈರಾಮರೆಡ್ಡಿ ಎಂಬುವರಿಗೆ ಸೇರಿದ ಕಲ್ಲಿನ ಕ್ವಾರಿಯಲ್ಲಿ ಸ್ಪೋಟ ಸಂಭವಿಸಿದ್ದು, ಯಾದಗಿರಿ ಮೂಲದ ಕಾರ್ಮಿಕ ಸೋಮಶೇಖರ್ ಮೃತಪಟ್ಟಿದ್ದಾರೆ. ಕಲ್ಲು ಕ್ವಾರಿಯಲ್ಲಿ ಸ್ಪೋಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಸೋಮಶೇಖರ್ ನನ್ನು ಹೊಸಕೋಟೆಯ ಎಂಬಿಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವೇಮಗಲ್ ಠಾಣೆ ಪೊಲೀಸರು ಭೇಟಿ […]

ಕಲ್ಲು ಕ್ವಾರಿಯಲ್ಲಿ ಸ್ಪೋಟ ಸಂಭವಿಸಿ, ಕೂಲಿ ಕಾರ್ಮಿಕ ಮೃತ್ಯು.! Read More »

ಕರ್ನಾಟಕ

ಮಾರಾಕಾಸ್ತ್ರಗಳಿಂದ ಕೊಚ್ಚಿ `ಕಾಂಗ್ರೆಸ್ ಕಾರ್ಯಕರ್ತ’ನ ಬರ್ಬರ ಹತ್ಯೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25   ಬೆಂಗಳೂರಿನ ಚೌಡೇಶ್ವರಿ ನಗರದ ಹಳ್ಳಿ ರುಚಿ ಬಳಿ ಕಾಂಗ್ರೆಸ್ ಕಾರ್ಯಕರ್ತರ ರವಿ ಅಲಿಯಾಸ್ ಮತ್ತಿ ರವಿ (42) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ರವಿ ಹತ್ಯೆಗೂ ಮುನ್ನ ಏರಿಯಾಗಳಲ್ಲಿ ಹಾಕಿದ್ದ ಬ್ಯಾನರ್ ಹರಿದು ಹಾಕಿದ್ದಾರೆ. ಬಳಿಕ ರವಿಯನ್ನು ಸಿಎಂಹೆಚ್ ಬಾರ್ ನಿಂದ ಅಟ್ಟಾಡಿಸಿಕೊಂಡು ಬಂದು ಹಳ್ಳಿ ರುಚಿ ಹೋಟೆಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ

ಮಾರಾಕಾಸ್ತ್ರಗಳಿಂದ ಕೊಚ್ಚಿ `ಕಾಂಗ್ರೆಸ್ ಕಾರ್ಯಕರ್ತ’ನ ಬರ್ಬರ ಹತ್ಯೆ.! Read More »

ಕರ್ನಾಟಕ

ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ಪರಿಹಾರ ನೀಡುತ್ತೇವೆ.!➤ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25  ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ನೀಡಲು ಬಿಬಿಎಂಪಿ ಮುಂದಾಗಿದೆ. ಅಧಿಕಾರಿಗಳಿಂದ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದ್ದು, ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಬೆಂಗಳೂರು ಮಹಾನಗರದಲ್ಲಿ ಕಳೆದ ನಾಲ್ಕು ದಿನ ಸುರಿದ ಭಾರಿ ಮಳೆಯಿಂದ ಮನೆಗೆ ನೀರು ನುಗ್ಗಿ ತೊಂದರೆಗೆ ಒಳಗಾದ ಪ್ರತಿ ಕುಟುಂಬಗಳಿಗೆ 10000 ರೂ.ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.        

ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ಪರಿಹಾರ ನೀಡುತ್ತೇವೆ.!➤ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ Read More »

ಕರ್ನಾಟಕ

ಟಿಪ್ಪು ಖಡ್ಗ 145 ಕೋಟಿಗೆ ಲಂಡನ್‌ನಲ್ಲಿ ಹರಾಜು

 (ನ್ಯೂಸ್ ಕಡಬ) newskadaba.com. ಮೈಸೂರು, ಮೇ.25. ಹುಲಿ ಟಿಪ್ಪು ಸುಲ್ತಾನ್‌ ಬಳಿಯಿದ್ದ ಖಡ್ಗ ಬರೋಬ್ಬರಿ 145 ಕೋಟಿ ರೂ.ಗೆ ಮತ್ತೊಮ್ಮೆ ಹರಾಜು ಆಗಿದೆ. ಮದ್ಯದ ದೊರೆ ವಿಜಯ್‌ ಮಲ್ಯ ಅವರು ಬ್ರಿಟೀಷರ ರಾಜಮನೆತನದ ವಸ್ತು ಸಂಗ್ರಹಾಲಯದಲ್ಲಿದ್ದ ಟಿಪ್ಪು ಖಡ್ಗವನ್ನು 2004ರಲ್ಲಿ ಹರಾಜಿನಲ್ಲಿ ಖರೀದಿ ಮಾಡಿದ್ದರು. ಇದೀಗ ಈ ಖಡ್ಗ ಮತ್ತೆ ಹರಾಜು ಆಗಿದ್ದು, ಅನಾಮಧೇಯ ವ್ಯಕ್ತಿಯ ಪರವಾಗಿ ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಲಂಡನ್‌ನಲ್ಲಿ ಅದನ್ನು ಖರೀದಿಸಿರುವುದಾಗಿ ವರದಿಯಾಗಿದೆ. ಗೌಪ್ಯತೆ & ಸುರಕ್ಷತೆ ದೃಷ್ಟಿಯಿಂದ ಹರಾಜು ಪಡೆದವರ ಮಾಹಿತಿ

ಟಿಪ್ಪು ಖಡ್ಗ 145 ಕೋಟಿಗೆ ಲಂಡನ್‌ನಲ್ಲಿ ಹರಾಜು Read More »

ಕರ್ನಾಟಕ

ನಿಂತಿದ್ದ ಬಸ್ ಗೆ ಟೆಂಪೋ ಟ್ರಾವಲ್ಸ್ ಢಿಕ್ಕಿ.!➤ ಇಬ್ಬರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ)newskadaba.com ಕುಣಿಗಲ್,ಮೇ.25 ನಿಂತಿದ್ದ ಬಸ್ ಗೆ ಟೆಂಪೋ ಟ್ರಾವಲ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದ ಪರಿಣಾಮ ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿ ಟಿಟಿ ಚಾಲಕ ವೀರೇಶ್ (30), ಶಶಿಕಲಾ (69) ಮೃತಪಟ್ಟವರಾಗಿದ್ದು, ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಗಾಯಗೊಂಡಿದ್ದಾರೆ. ಇವರುಗಳು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಹುಲಿಯೂರುದುರ್ಗ

ನಿಂತಿದ್ದ ಬಸ್ ಗೆ ಟೆಂಪೋ ಟ್ರಾವಲ್ಸ್ ಢಿಕ್ಕಿ.!➤ ಇಬ್ಬರು ಮೃತ್ಯು, ಹಲವರಿಗೆ ಗಾಯ Read More »

ಕರ್ನಾಟಕ

TMC ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಿರುವ ಹಿನ್ನೆಲೆ.!➤ಧ್ವಂಸಗೊಳಿಸುವಂತೆ ಹೈಕೋರ್ಟ್‌ ಆದೇಶ

(ನ್ಯೂಸ್ ಕಡಬ)newskadaba.com ಕೋಲ್ಕತ,ಮೇ.25  ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿರುವ ತೃಣಮೂಲ ಕಾಂಗ್ರೆಸ್‌ ಪಕ್ಷದ (ಟಿಎಂಸಿ) ಕಚೇರಿಯನ್ನು ಜಿಲ್ಲಾಡಳಿತ ಬುಲ್ಡೋಜರ್‌ ಬಳಸಿ ಧ್ವಂಸಗೊಳಿಸಿದೆ. ಟಿಎಂಸಿ ಆಡಳಿತಾರೂಢ ಸರ್ಕಾರವಿರುವ ರಾಜ್ಯದಲ್ಲಿ ಅದೇ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿರುವ ಘಟನೆ ಇದೇ ಮೊದಲಬಾರಿಗೆ ವರದಿಯಾಗಿದೆ. ಬುರುವಾ ಪ್ರದೇಶದಲ್ಲಿ ಟಿಎಂಸಿ ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಿರುವ ಹಿನ್ನೆಲೆ ಇತ್ತೀಚೆಗಷ್ಟೇ ಕೋಲ್ಕತ ಹೈಕೋರ್ಟ್‌ ಕಟ್ಟಡ ಧ್ವಂಸಗೊಳಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿಯೇ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.  

TMC ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಿರುವ ಹಿನ್ನೆಲೆ.!➤ಧ್ವಂಸಗೊಳಿಸುವಂತೆ ಹೈಕೋರ್ಟ್‌ ಆದೇಶ Read More »

ರಾಷ್ಟ್ರೀಯ ನ್ಯೂಸ್

ಜಾತ್ರೆಯಲ್ಲಿ ಆಡುತ್ತಿದ್ದ ಬಾಲಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com. ದೊಡ್ಡಬಳ್ಳಾಪುರ, ಮೇ.25. ಮುತ್ಯಾಲಮ್ಮ ಜಾತ್ರೆಯಲ್ಲಿ ಏರ್​ ಬಲೂನ್​ ಜಂಪಿಂಗ್​​ ಆಟವಾಡುತ್ತಿದ್ದ ಬಾಲಕ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆಯಿತು.  ಬಾಲಕನ ಸಾವಿನಿಂದಾಗಿ ಜಾತ್ರೆಯ ಆಯೋಜಕರ ಮೇಲೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಮಂಜುನಾಥ್ ಎಂಬವರ ಪುತ್ರ 11 ವರ್ಷದ ಶ್ರೇಯಸ್​ ಮೃತ ಬಾಲಕ. ಮಂಜುನಾಥ್​ ಅವರು ಚಿಕ್ಕ ಕುರುಕಲು ಅಂಗಡಿ ನಡೆಸುತ್ತಿದ್ದಾರೆ. ಶ್ರೇಯಸ್​ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ರಾತ್ರಿ ತನ್ನ ತಾಯಿ ಜೊತೆಗೆ

ಜಾತ್ರೆಯಲ್ಲಿ ಆಡುತ್ತಿದ್ದ ಬಾಲಕ ಹೃದಯಾಘಾತದಿಂದ ಮೃತ್ಯು Read More »

ಕ್ರೈಮ್ ನ್ಯೂಸ್

4ನೇ ಮಹಡಿಯಿಂದ ಜಿಗಿದು ವ್ಯಕ್ತಿ ಮೃತ್ಯು.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25  ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ವ್ಯಕ್ತಿಯೊಬ್ಬ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 4ನೇ ಮಹಡಿಯಿಂದ ಜಿಗಿದು 31 ವರ್ಷದ ಮೊಹಮ್ಮದ್ ಹುಸೇನ್ ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ಬೇಗೂರು ರಸ್ತೆಯಲ್ಲಿ ನಡೆದಿದೆ. ಮಹಮ್ಮದ್ ಹುಸೇನ್​ನನ್ನು ವಶಕ್ಕೆ ಪಡೆಯಲು ನಾಲ್ವರು ಪೊಲೀಸರ ತಂಡ ತೆರಳಿತ್ತು. ನಾಲ್ಕನೇ ಮಹಡಿಯ ಟೆರೇಸ್ ಮೇಲಿಂದ ವಶಕ್ಕೆ ಪಡೆಯುತ್ತಿದ್ದ ವೇಳೆ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

4ನೇ ಮಹಡಿಯಿಂದ ಜಿಗಿದು ವ್ಯಕ್ತಿ ಮೃತ್ಯು.! Read More »

ಕರ್ನಾಟಕ

ಮಹಿಳೆಯ ಅಶ್ಲೀಲ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ಕಿಡಿಗೇಡಿ.! ➤ದೂರು ದಾಖಲು

(ನ್ಯೂಸ್ ಕಡಬ)newskadaba.com ಶಿವಮೊಗ್ಗ,ಮೇ.25 ಮಹಿಳೆಯ ಖಾಸಗಿ ಫೋಟೋ, ವಿಡಿಯೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿ ವಿರುದ್ಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡೂರು ಮೂಲದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳೆ ಬೆಂಗಳೂರಿನಲ್ಲಿದ್ದ ಸಂದರ್ಭದಲ್ಲಿ ಮೊಬೈಲ್ ನಲ್ಲಿ ಗೌಪ್ಯವಾಗಿ ಅಶ್ಲೀಲ ಫೋಟೋ, ವಿಡಿಯೋ ತೆಗೆದಿದ್ದಾನೆ. ಮಹಿಳೆ ಶಿವಮೊಗ್ಗದಲ್ಲಿ ಕೆಲಸ ಮಾಡುತ್ತಿದ್ದು, ಕರೆ ಮಾಡಿ ತನ್ನೊಂದಿಗೆ ಬರುವಂತೆ ಬ್ಲಾಕ್ ಮೇಲ್ ಮಾಡಿ ಬೆದರಿಸಿದ್ದಾನೆ.ಇದಕ್ಕೆ ಮಹಿಳೆ ಒಪ್ಪದಿದ್ದಾಗ ಆಕೆಯ ಸಂಬಂಧಿಕರ ಮೊಬೈಲ್ ಸಂಖ್ಯೆ ತಿಳಿದುಕೊಂಡು ಖಾಸಗಿ ಫೋಟೋಗಳನ್ನು ಅವರಿಗೆ ಕಳುಹಿಸಿದ್ದಾನೆ.

ಮಹಿಳೆಯ ಅಶ್ಲೀಲ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ಕಿಡಿಗೇಡಿ.! ➤ದೂರು ದಾಖಲು Read More »

ಕರ್ನಾಟಕ

ಮಂಗಳೂರಿನಲ್ಲಿ ಟೇಕಾಫ್ ಗೆ ಸಿದ್ದವಾಗಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹದ್ದು ಡಿಕ್ಕಿ

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ.25. ದಕ್ಷಿಣ ಕನ್ನಡ  ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ಗೆ ಸಿದ್ದವಾಗಿದ್ದ ವಿಮಾನದ ರೆಕ್ಕೆಗೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ನಡೆದಿದೆ.  ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಟೇಕಾಪ್ ವೇಳೆ ರನ್ ವೇನಲ್ಲಿಯೇ ಘಟನೆ ನಡೆಯಿತು ಎಂದು ತಿಳಿದುಬಂದಿದೆ. ಬೆಳಗ್ಗೆ 8.15 ಕ್ಕೆ ಹೊರಟಿದ್ದ ವಿಮಾನವು ಟ್ಯಾಕ್ಸಿ ವೇ ದಾಟಿ ರನ್​ವೇನಲ್ಲಿ ಸಾಗುತ್ತಿದ್ದಂತೆ ವಿಮಾನದ ರೆಕ್ಕೆಯ ಭಾಗಕ್ಕೆ ಹದ್ದು ಡಿಕ್ಕಿ ಹೊಡೆದಿದೆ. ಅಪಾಯದ ಸೂಚನೆ ಅರಿತ ಪೈಲೆಟ್ ಎಟಿಸಿಗೆ

ಮಂಗಳೂರಿನಲ್ಲಿ ಟೇಕಾಫ್ ಗೆ ಸಿದ್ದವಾಗಿದ್ದ ಇಂಡಿಗೋ ವಿಮಾನದ ರೆಕ್ಕೆಗೆ ಹದ್ದು ಡಿಕ್ಕಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top