News Kadaba

ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಾಧ್ಯತೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಚುನಾವಣೆಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ನಿಖಿಲ್​ ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸತತ ಎರಡು ಸೋಲುಗಳಿಂದ ಕಂಗಾಲಾಗಿರುವ ನಿಖಿಲ್​ ಕುಮಾರಸ್ವಾಮಿ ಇದೀಗ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳುವ ಚಿಂತನೆಯಲ್ಲಿದ್ದಾರೆ. ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದು, ಸಿನಿಮಾದಲ್ಲಿ ತೊಡಗಿಸಿಕೊಳ್ಳಲು ಗಂಭೀರ ಚಿಂತನೆ ನಡೆಸಿದ್ದಾರೆ. ಇದಕ್ಕೆ ಎಚ್.ಡಿ.ಕುಮಾರಸ್ವಾಮಿ ಸಹ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ.  

ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಾಧ್ಯತೆ.! Read More »

ಕರ್ನಾಟಕ

ಕಡಬ: ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ !

(ನ್ಯೂಸ್ ಕಡಬ)newskadaba.com ಕಡಬ, ಮೇ.24. ಕಡಬ ಸಮೀಪದ  ಇಚ್ಲಂಪಾಡಿಯಲ್ಲಿ ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ ಎಂದು ವರದಿ ತಿಳಿಸಿದೆ. ಅನುಮತಿ ಪಡೆದು ಮರಳುಗಾರಿಕೆ ನಡೆಸುತ್ತಿದ್ದೇವೆ ಎಂದು ಮರಳು  ಸಂಗ್ರಹಕಾರರು ಮಾಹಿತಿಯನ್ನು ನೀಡುತ್ತಿದ್ದರಾದರೂ ಕೂಡಾ, ಅನುಮತಿ ಪತ್ರ ಒಂದು ಕಡೆಯ ಪ್ರದೇಶದದ್ದಾರೆ ಬೇರೊಂದು ಕಡೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.  ಅಲ್ಲದೆ, ಅನುಮತಿ ಒಂದು ಕಡೆ, ಮರಳು ಸಂಗ್ರಹ ಇನ್ನೊಂದು ಕಡೆ ಎಂಬ ಆರೋಪಕ್ಕೆ ಸಾಕ್ಷಿಯೆಂಬಂತೆ

ಕಡಬ: ಅನುಮತಿ ಹೆಸರಲ್ಲಿ ಅನಧೀಕೃತವಾಗಿ ಮರಳುಗಾರಿಕೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್ ಹೊಡೆದು ಕುಮಾರಧಾರ ನದಿಯ ಬಳಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮೇ.24. ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕ.  ಈತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ. ಯುವಕ  ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇದೀಗ ಬಾಲಕನ ಅಗಲಿಕೆಯಿಂದ ತಾಯಿ ಕಣ್ಣೀರಲ್ಲಿ ಮುಳುಗಿದ್ದಾರೆ. ಘಟನೆಯ ಬಗ್ಗೆ  ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ವಿದ್ಯುತ್ ಶಾಕ್ ಹೊಡೆದು ಕುಮಾರಧಾರ ನದಿಯ ಬಳಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ, ಡಿಸಿಎಂ ದೆಹಲಿಗೆ ಪ್ರಯಾಣ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆಯ ಸಂಬಂಧ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ಕುರಿತಾಗಿ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ.    

ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ, ಡಿಸಿಎಂ ದೆಹಲಿಗೆ ಪ್ರಯಾಣ.! Read More »

ಕರ್ನಾಟಕ

ಸುಳ್ಯ: ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಅಪಘಾತ   ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.24. ವಿಷ್ಣು ಸರ್ಕಲ್ ಬಳಿ ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಅತಿ ವೇಗದಿಂದ ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದ್ದು, ಚಾಲಕ ಗಾಬರಿಗೊಂಡು ಲಾರಿಯನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸುಳ್ಯದಿಂದ ಕೊಯನಾಡಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ ನ ಹಿಂಭಾಗ ಜಖಂಗೊಂಡಿದೆ. ಘಟನೆಯಿಂದ ಓರ್ವ ಪ್ರಯಾಣಿಕನಿಗೆ ಗಾಯಗಳಾಗಿವೆ ಎಂಬ ಮಾಹಿತಿ ಲಭಿಸಿದೆ. ಸುಳ್ಯ ಪೊಲೀಸರು ಘಟನಾ

ಸುಳ್ಯ: ಕೆಎಸ್ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಅಪಘಾತ   ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ .!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಜೀವಾವಧಿ ಶಿಕ್ಷೆಗೆ ಒಳಗಾಗಿ ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ  ಬಿಡುಗಡೆಯ ಭಾಗ್ಯ ಸಿಕ್ಕಿತು.ಸನ್ನಡತೆ ಆಧಾರದಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರವು ಆದೇಶಿಸಿತ್ತು.  ಪರಪ್ಪನ ಅಗ್ರಹಾರ ಜೈಲಿನಿಂದಲೂ ಕೈದಿಗಳು ಬಂಧಮುಕ್ತರಾದರು. ಪರಪ್ಪನ ಅಗ್ರಹಾರದಲ್ಲಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ ಒಟ್ಟು 79 ಮಂದಿಗೆ ಬಿಡುಗಡೆ ಮಾಡಲಾಯಿತು. ಅನಾರೋಗ್ಯದ ಚಿಕಿತ್ಸೆಗೆಂದು ಮೈಸೂರು ಹಾಗೂ ವಿಜಯಪುರದ ತಲಾ ಒಬ್ಬರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆ ತರಲಾಗಿತ್ತು.

ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ .! Read More »

ಕರ್ನಾಟಕ

ರಾಜ್ಯದಲ್ಲಿ ಮೇ.29 ರಿಂದ ಶಾಲೆಗಳು ಆರಂಭ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ರಾಜ್ಯಾಧ್ಯಂತ ಏಕರೂಪದ ಯಶಸ್ವಿ ಅನುಷ್ಠಆನಕ್ಕಾಗಿ ವಾರ್ಷಿಕ ಶಿಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಮೇ.29 ರಿಂದ ಶಾಲೆಗಳು ಆರಂಭ..! Read More »

ಕರ್ನಾಟಕ

ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಮೇ.24. ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿ ನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.

ಉಡುಪಿ: ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಕೊಪ್ಪಳ,ಮೇ.24 ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ವಿಚಾರದಲ್ಲಿ ಲೈನ್​ಮ್ಯಾನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕೆಲ ಜನರು ವಿದ್ಯುತ್​ ಬಿಲ್​ ಕಟ್ಟುವುದಿಲ್ಲ ಎಂದು ಲೈನ್​ಮ್ಯಾನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ.ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಬಂದ ಲೈನ್​ಮ್ಯಾನ್​ ಮೇಲೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದು

ಲೈನ್​ಮ್ಯಾನ್​ಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ವ್ಯಕ್ತಿ Read More »

ಕರ್ನಾಟಕ

ಕಾಪು: ಅಡ್ಡಾದಿಡ್ಡಿ ಚಲಾವಣೆ     ➤ ನಾಲ್ವರ ವಿರುದ್ದ ಕೇಸು, ವಾಹನ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಪು, ಮೇ.24. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಡ್ಡಾದಿಡ್ಡಿಯಾಗಿ‌ ವಾಹನ ಚಲಾಯಿಸಿ ಸಾರ್ವಜನಿಕ ಸಂಚಾರಕ್ಕೆ ತೊಡಕು ಉಂಟು ಮಾಡಿದ ನಾಲ್ವರು ಕಾರು ಚಾಲಕರ ಮೇಲೆ ಕಾಪು ಪೋಲಿಸರು ಕೇಸ್ ದಾಖಲಿಸಿದ್ದಾರೆ. ವಾಹನ ಚಾಲಕರಾದ ಗುಡ್ಡೆಯಂಗಡಿ ಉದ್ಯಾವರ ಗ್ರಾಮ ಅಯಾನ್ (24), ಕುಂಜಿಬೆಟ್ಟು ಮಿಶಾಲ್ವುದ್ದೀನ್ (23) ಉಡುಪಿಯ ಹೈಕ ಬಿಲ್ಡಿಂಗ್ ಶಾನೂನ್ ಡಿಸೋಜಾ (25), ಕೊಡಂತೂರು 10ನೇ ಕ್ರಾಸ್ ವಿವೇಕ್ (23) ಎಂಬ ನಾಲ್ವರ ವಿರುದ್ದ ಕೇಸು ದಾಖಲಿಸಿದ್ದಾರೆ.

ಕಾಪು: ಅಡ್ಡಾದಿಡ್ಡಿ ಚಲಾವಣೆ     ➤ ನಾಲ್ವರ ವಿರುದ್ದ ಕೇಸು, ವಾಹನ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top