News Kadaba

ಯುಟಿ ಖಾದರ್ ಗೆ ಸ್ಪೀಕರ್ ಹುದ್ದೆ    ➤ ಖಾದರ್ ಗೆ ಇಲ್ಲ ಸಚಿವ ಸ್ಥಾನ ?

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಫೈನಲ್ ಮಾಡಿದೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರನ್ನು ಕರೆದು ಮಾತನಾಡಿದ್ದು ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಹೇಳಿದ್ದಾರೆ ಎನ್ನಲಾಗಿದೆ.  

ಯುಟಿ ಖಾದರ್ ಗೆ ಸ್ಪೀಕರ್ ಹುದ್ದೆ    ➤ ಖಾದರ್ ಗೆ ಇಲ್ಲ ಸಚಿವ ಸ್ಥಾನ ? Read More »

ಕರ್ನಾಟಕ

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮೇ.23. ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕ ಎಂದು ಗುರುತಿಸಲಾಗಿದೆ. ಶರೀಪುಧ್ದೀನ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ ಎನ್ನಲಾಗಿದೆ.  

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ

(ನ್ಯೂಸ್ ಕಡಬ)newskadaba.com ತುಮಕೂರು, ಮೇ.23. ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಡೆದಿದೆ. ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾದ ಮಕ್ಕಳು. ಮಕ್ಕಳು ಆಟ ಆಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿಲ್ಲ. ನಾಪತ್ತೆಯಾಗಿರುವ ಎಲ್ಲ ಮಕ್ಕಳು 15-16 ವರ್ಷದ ವಯಸ್ಸಿನವರಾಗಿದ್ದಾರೆ. 4 ಮಕ್ಕಳು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟಿಹಾಕಿದೆ.  

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ Read More »

ಕರ್ನಾಟಕ

ಡಿಜಿ-ಐಜಿಪಿಯಾಗಿ  ಹಿರಿಯ ಐಪಿಎಸ್‌ ಅಧಿಕಾರಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕಾರ 

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕರಿಸಿದರು.ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಪ್ರವೀಣ್‌ ಸೂದ್‌ ಅವರು ಆಲೋಕ್‌ ಮೋಹನ್‌ ಅವರಿಗೆ ಬ್ಯಾಟನ್‌ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಡಿಜಿ- ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿದ್ದು, ಅವರಿಗೆ ಇಲಾಖೆಯಿಂದ ಬೀಳ್ಕೊಡುಗೆ ಪಥಸಂಚಲನ ಮೂಲಕ ಗೌರವಿಸಿ ಅವರನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಲಾಯಿತು.ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಆಲೋಕ್‌ ಮೋಹನ್‌

ಡಿಜಿ-ಐಜಿಪಿಯಾಗಿ  ಹಿರಿಯ ಐಪಿಎಸ್‌ ಅಧಿಕಾರಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕಾರ  Read More »

ಕರ್ನಾಟಕ

ಸಂಸದೆ ಸುಮಲತಾ​ ವಿರುದ್ಧ ಬಿಜೆಪಿ ಅಭ್ಯರ್ಥಿ ಇಂದ್ರೇಶ್ ಗಂಭೀರ ಆರೋಪ

(ನ್ಯೂಸ್ ಕಡಬ)newskadaba.com ಮಂಡ್ಯ,ಮೇ.23 ಸಂಸದೆ ಸುಮಲತಾ ಅಂಬರೀಷ್​ ಅವರ ಅನೈತಿಕ ಬೆಂಬಲದಿಂದ ಬಿಜೆಪಿಗೆ ಕಡಿಮೆ ಮತಗಳು ಬಂದಿವೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಇಂದ್ರೇಶ್​ ಗಂಭೀರ ಆರೋಪ ಮಾಡಿದ್ದಾರೆ.ಇಂದ್ರೇಶ್​ ಅವರು ಮೇಲುಕೋಟೆ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ. ಸುಮಲತಾ ವಿರುದ್ಧ ಹರಿಹಾಯ್ದಿರುವ ಇಂದ್ರೇಶ್​, ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ನೀಡುತ್ತೇನೆಂದು ಹೇಳಿ, ದರ್ಶನ್​ ಪುಟ್ಟಣ್ಣಯ್ಯ ಪರ ಮಾತನಾಡಿದರು. ದರ್ಶನ್ ಗೆದ್ದರೆ ಖುಷಿ ಎಂದು ರೈತ ಸಂಘದ ಪರ ಮಾತನಾಡಿದ್ದೇ ಕೊನೆಯ ಕ್ಷಣದಲ್ಲಿ ಫಲಿತಾಂಶ ಮೇಲೇ ಪರಿಣಾಮ

ಸಂಸದೆ ಸುಮಲತಾ​ ವಿರುದ್ಧ ಬಿಜೆಪಿ ಅಭ್ಯರ್ಥಿ ಇಂದ್ರೇಶ್ ಗಂಭೀರ ಆರೋಪ Read More »

ಕರ್ನಾಟಕ

ಸುಳ್ಯ: ಬೈಕ್ ಅಪಘಾತ ➤ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.23. ಕಲ್ಚರ್ಪೆ – ಪಾಲಡ್ಕ ಬಳಿ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟು ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ, ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಪಿಕಪ್ ವಾಹನವೊಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ

ಸುಳ್ಯ: ಬೈಕ್ ಅಪಘಾತ ➤ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಕ್ಕಲಪ್ಪ ನೀಲಜೇರಿ ಬಂಧಿತ ಪಿಸಿ. ಸಂಜನಾ ಬೀರಪ್ಪ ಎಂಬುವವರ ಬಳಿ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್ ಟೇಬಲ್ ರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ದೂರುದಾರರ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಸಿ ಮಕ್ಕಲಪ್ಪ ನೀಲಜೇರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.    

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್ Read More »

ಕರ್ನಾಟಕ

ಮಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ➤ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.23. ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ಆಗಿ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದ್ದು, ಕೂಡಲೇ ಅವರನ್ನು ಫಳ್ನೀರಿನ ಅಥೆನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನವರು ಕೇರಳದ ವಿದ್ಯಾರ್ಥಿನಿಯರಾಗಿದ್ದು, ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎನ್ನುವ ಮಾಹಿತಿ ವಿದ್ಯಾರ್ಥಿನಿಯರ ಹೆತ್ತವರ ಕಡೆಯಿಂದ ಬಂದಿದೆ. ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿದ್ದು,

ಮಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ➤ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ Read More »

ಕರಾವಳಿ

ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಿಂದ ಹಲವು ಕಡೆ ಸಾವು-ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಇಂದು ಆಯಾ ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಆ ಬಳಿಕ, ಮಳೆ ಜೋರಾಗಿರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು

ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ Read More »

ಕರ್ನಾಟಕ

ಬೆಳ್ತಂಗಡಿ: ಶಾಲಾ ಬಸ್ ಢಿಕ್ಕಿ – ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.23. ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಗುರುವಾಯನಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕಸಬಾ ನೆಡಿಗುತ್ತು ನಿವಾಸಿ ಯೋಗೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಾಲಾ ಬಸ್ ಬೆಳ್ತಂಗಡಿಯಿಂದ ಮದಡ್ಕ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್ ಯೋಗೀಶ್ ಪೂಜಾರಿ ಅವರಿಗೆ ಡಿಕ್ಕಿ ಹೊಡೆದು ಅವರ ಕಾಲಿನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಯೋಗೀಶ್ ರವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಬೆಳ್ತಂಗಡಿ: ಶಾಲಾ ಬಸ್ ಢಿಕ್ಕಿ – ಪಾದಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top