News Kadaba

ನದಿ ನೀರಿಗೆ ವಿಷಪ್ರಾಶನ ಹಾಕಿದ ದುಷ್ಕರ್ಮಿಗಳು.!

(ನ್ಯೂಸ್ ಕಡಬ)newskadaba.com ಕಾರ್ಕಳ,ಮೇ.23 ಮಲೆಬೆಟ್ಟು ಮತ್ತು ಕೆರ್ವಾಶೆಯ ನಡುವೆ ಹರಿಯುವ ‘ಸ್ವರ್ಣ ನದಿಯ ಬಾಂಕ ಗುಂಡಿ’ಯಲ್ಲಿ ಯಾರೋ ದುಷ್ಕರ್ಮಿಗಳು ರಾತ್ರಿ ವೇಳೆ ನೀರಿಗೆ “ವಿಷಪ್ರಾಶನ” ಮಾಡಿ ನೀರನ್ನೂ ಕಲುಷಿತಗೊಳಿಸಿದ್ದಾರೆ. ದಿನನಿತ್ಯ ಕುಡಿಯಲು ಬಳಸುವ ನೀರಿಗೆ “ಗೇರುಬೀಜ ಎಣ್ಣೆ” ಇಲ್ಲವೇ ಯಾವುದೋ “ಕೀಟನಾಶಕ” ಹಾಕಿರುವ ಶಂಕೆ ಇದ್ದು ಇದರಿಂದ ಯಥೇಚ್ಛವಾಗಿ ಮೀನುಗಳ ಮಾರಣ ಹೋಮವಾಗಿದೆ.ಕುಡಿಯುವ ನೀರಿಗೆ ಬರ ಇರುವ ಈ ಸಮಯದಲ್ಲಿ ದಿನನಿತ್ಯದ ಬಳಕೆಗೆ ಆಧಾರವಾಗಿದ್ದ ನೀರಿನ ಮೂಲಕ್ಕೆ ವಿಷ ಪ್ರಾಶನ ಮಾಡಿರುವುದಕ್ಕೆ ಗ್ರಾಮಸ್ಥರು ಆಕ್ರೋಶಿತರಾಗಿದ್ದಾರೆ.  

ನದಿ ನೀರಿಗೆ ವಿಷಪ್ರಾಶನ ಹಾಕಿದ ದುಷ್ಕರ್ಮಿಗಳು.! Read More »

ಕರ್ನಾಟಕ

ಮಂಗಳೂರು: ಅ.15ರ ವರೆಗೆ ಮರಳುಗಾರಿಕೆ ನಿಷೇಧ

(ನ್ಯೂಸ್ ಕಡಬ) newskadaba.com.ಮಂಗಳೂರು, ಮೇ.23. ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆ ಮಳೆಗಾಲ ಆರಂಭವಾಗುವ ಎರಡು ತಿಂಗಳ ಮೊದಲೇ ಪೂರ್ಣಗೊಂಡಿದ್ದು, ಅಕ್ಟೋಬರ್‌ 15ರವರೆಗೆ ಮರಳುಗಾರಿಕೆ ನಿಷೇಧ ಜಾರಿಮಾಡಲಾಗಿದೆ. ಪರವಾನಿಗೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾ. 4ಕ್ಕೇ ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಣ್ಣೆಗಳಲ್ಲಿ ಮರಳುಗಾರಿಕೆ ನಿಂತಿದ್ದು, ಆ ಬಳಿಕ ಪರಿಸರ ಕ್ಲಿಯರೆನ್ಸ್‌ ಮತ್ತೆ ಪಡೆಯುವುದಕ್ಕೆ ಬೇಕಾದ ಬೆಥಮೆಟ್ರಿ ಸರ್ವೇ ಪೂರ್ಣಗೊಂಡಿದ್ದು, ಆದರೆ ವರದಿ ಬರಲು ಬಾಕಿ ಇದೆ. ಅಲ್ಲದೆ ಈ ಮಧ್ಯೆ ಚುನಾವಣ ಪ್ರಕ್ರಿಯೆಯೂ ಇದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ

ಮಂಗಳೂರು: ಅ.15ರ ವರೆಗೆ ಮರಳುಗಾರಿಕೆ ನಿಷೇಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಪೂರ್ವ ಮುಂಗಾರು ➤ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿರುವ ಸಿಎಂ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮೇ.23. ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಿಂದ ಹಲವು ಕಡೆ ಸಾವು-ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಇಂದು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲು ವಿಶೇಷ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ರಾಜ್ಯದಲ್ಲಿ ಪೂರ್ವ ಮುಂಗಾರು ➤ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿರುವ ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಯನ್ನು ಸಕಾಲಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಪೊಲೀಸ್ ಸಿಬ್ಬಂದಿ ➤ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ವಿದ್ಯಾರ್ಥಿಯೊಬ್ಬ ಸಿಇಟಿ ಪರೀಕ್ಷೆ ಬರೆಯಲು ಹೋಗಬೇಕಿತ್ತು. ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇದ್ದಿದ್ದರಿಂದ ನಗರದಲ್ಲಿ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಿದ್ಯಾರ್ಥಿ ಮನನೊಂದಿದ್ದ. ಈ ವಿಧ್ಯಾರ್ಥಿಯನ್ನು ನಗರದ ಪೊಲೀಸ್​ ಸಿಬ್ಬಂದಿ  ಹೊಯ್ಸಳ ವಾಹನದಲ್ಲಿ  ಸೈರನ್ ಹಾಕಿಕೊಂಡು ಸಕಾಲಕ್ಕೆ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಕೊತ್ತನೂರಿನ ಹೊಯ್ಸಳ ಸಿಬ್ಬಂದಿ ಗೌರಿಶ್ ಹಾಗೂ ಸೋಮಶೇಖರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.  

ವಿದ್ಯಾರ್ಥಿಯನ್ನು ಸಕಾಲಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಪೊಲೀಸ್ ಸಿಬ್ಬಂದಿ ➤ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ Read More »

ಕರ್ನಾಟಕ

ಸ್ಪೀಕರ್ ಆಗಿ ಯು.ಟಿ ಖಾದರ್   ➤ ಇಂದು ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.23. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಕೆಲ ಹೊತ್ತು ಯು.ಟಿ ಖಾದರ್ ಅವರು ಕುಳಿತುಕೊಂಡಿದ್ದರು.  

ಸ್ಪೀಕರ್ ಆಗಿ ಯು.ಟಿ ಖಾದರ್   ➤ ಇಂದು ನಾಮಪತ್ರ ಸಲ್ಲಿಕೆ Read More »

ಕರಾವಳಿ

ಮೇ.23 ರಿಂದ ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ.ವಿದ್ಯಾರ್ಥಿಗಳು ಪರೀಕ್ಷಾ ವಲಯಗಳಲ್ಲಿ ನಿಯಮ ಪಾಲನೆ ಮಾಡುವುದು ಕಡ್ಡಾಯವಾವಾಗಿದೆ.  ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.

ಮೇ.23 ರಿಂದ ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ಆರಂಭ Read More »

ಕರ್ನಾಟಕ

ಬೆಂಗಳೂರು ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮೇ.22. ಟೆಕ್ಕಿ ಯುವತಿ ನೀರಲ್ಲಿ ಮುಳುಗಿ, ಮೃತಪಟ್ಟ ಬೆನ್ನಲ್ಲೇ, ಮತ್ತೋರ್ವ ಯುವಕ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ 31 ವರ್ಷದ ಯುವಕ ಲೋಕೇಶ್ ರಾಜಕಾಲುವೆಯಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದು, ಇಂದು ಬ್ಯಾಟರಾಯನಪುರದ ರಾಜಕಾಲುವೆ ಬಳಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೆಪಿ ಅಗ್ರಹಾರದಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದ್ದು, ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿಯಿಂದಾಗಿ‌ಈ ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ಸುರಿದ

ಬೆಂಗಳೂರು ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕ Read More »

ಕರ್ನಾಟಕ

ದಂಪತಿ ಕಲಹಕ್ಕೆ ಇಬ್ಬರು ಕಂದಮ್ಮಗಳು ಬಲಿ

(ನ್ಯೂಸ್ ಕಡಬ)newskadaba.com ಹಾವೇರಿ,ಮೇ.22 ಪತಿ-ಪತ್ನಿಯರ ನಡುವೆ ನಡೆಯುತ್ತಿದ್ದ ಜಗಳ ಹಾಗೂ ಸಂಶಯ ಎರಡು ಕಂದಮ್ಮಗಳನ್ನು ಬಲಿ ತೆಗೆದುಕೊಂಡ ಘಟನೆ ಹಾವೇರಿ ಜಿಲ್ಲೆ ರಾಣಿಬೆನ್ನೂರ ತಾಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ನಡೆದಿದೆ. ಪತಿ ಮಂಜಯ್ಯ ಪಾಟೀಲಗೆ ಪತ್ನಿ ಸುನೀತಾ ಮೇಲೆ ಸಂಶಯ ಉಂಟಾಗಿದ್ದು, ನಿತ್ಯವೂ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಜಗಳದಿಂದ ಬೇಸತ್ತ ಸುನೀತಾ ಎರಡೂ ಮಕ್ಕಳನ್ನು ಕೊಠಡಿಯಲ್ಲಿ ನೇಣು ಹಾಕಿ, ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಳು. ಈ ಸಮಯದಲ್ಲಿ ಸಾಯುವ ಸಂಕಟದಲ್ಲಿದ್ದ ಸುನೀತಾ ಚೀರಿದ್ದಾಳೆ. ತಕ್ಷಣ ಧಾವಿಸಿದ ಅತ್ತೆ-ಮಾವ

ದಂಪತಿ ಕಲಹಕ್ಕೆ ಇಬ್ಬರು ಕಂದಮ್ಮಗಳು ಬಲಿ Read More »

ಕರ್ನಾಟಕ

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ. ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು ಬಂದು ಮನೆಯ ಸಮೀಪದ ಗುಡ್ಡದಲ್ಲಿ ಹೋಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ರಿತೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌.  

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಂದ್ರಯಾನ- 3 ಜುಲೈನಲ್ಲಿ ಉಡಾವಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.22. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಅನ್ನು ಜುಲೈನಲ್ಲಿ ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯೋಜನೆ ಹಾಕಿಕೊಂಡಿದೆ. ಯುಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಬಾಹ್ಯಾಕಾಶ ನೌಕೆಯು ಪೇಲೋಡ್‌ ಗಳ ಅಂತಿಮ ಜೋಡಣೆಯಲ್ಲಿದೆ. ಅತ್ಯಂತ ಸೂಕ್ಷ್ಮ ತಂತ್ರಜ್ಞಾನ ಬಳಸಿ ಚಂದ್ರನ ದಕ್ಷಿಣ ದ್ರುವದ ಮೇಲೆ ಚಂದ್ರಯಾನ-೩ ಬಾಹ್ಯಕಾಶ ನೌಕೆಯನ್ನು ಇಳಿಸಲಾಗುವುದು.

ಚಂದ್ರಯಾನ- 3 ಜುಲೈನಲ್ಲಿ ಉಡಾವಣೆ Read More »

ರಾಷ್ಟ್ರೀಯ ನ್ಯೂಸ್
Scroll to Top