News Kadaba

ಸಿಎಸ್‌ಇಇಟಿ ಅರ್ಹತಾ ಪರೀಕ್ಷೆಯಲ್ಲಿ  ಕ್ರಿಯೇಟಿವ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಆಯ್ಕೆ..!

(ನ್ಯೂಸ್ ಕಡಬ)newskadaba.com ಕಾರ್ಕಳ,ಮೇ.19 ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಮೇ 6, 2023 ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಸಿಎಸ್‌ಇಇಟಿ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ 11 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್‌ನ ವಿದ್ಯಾರ್ಥಿಗಳು ಪಿಯುಸಿಯಲ್ಲೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್ ಕಾಲೇಜಿನ […]

ಸಿಎಸ್‌ಇಇಟಿ ಅರ್ಹತಾ ಪರೀಕ್ಷೆಯಲ್ಲಿ  ಕ್ರಿಯೇಟಿವ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಆಯ್ಕೆ..! Read More »

ಕರ್ನಾಟಕ

ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟಿರೋದು ನನಗೆ ತೃಪ್ತಿ ಇಲ್ಲ..!➤ ಡಿಕೆ ಸುರೇಶ್

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.19 ರಾಜ್ಯದ ಮುಖ್ಯಮಂತ್ರಿ ಪಟ್ಟದ ವಿವಾದ ಕೊನೆಗೂ ಬಗೆಹರಿದಿದೆ. ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಹಾಗೂ ಡಿಕೆ ಶಿವಕುಮಾರ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರಕಿದೆ. ಆದರೆ ಡಿಕೆಶಿ ಅವರ ಸೋದರ ಡಿಕೆ ಸುರೇಶ್ ‘ಇದು ನನಗೆ ತೃಪ್ತಿ ತಂದಿಲ್ಲ’ ಎಂದಿದ್ದಾರೆ. ರಾಜ್ಯದ ಹಿತ ದೃಷ್ಟಿಯಿಂದ ಹೈಕಮಾಂಡ್ ನಿರ್ಧಾರವನ್ನು ಒಪ್ಪಿಕೊಳ್ಳಲೇಬೇಕು. ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟಿರೋದು ನನಗೆ ತೃಪ್ತಿ ಇಲ್ಲ. ಅವರು ಸಿಎಂ ಆಗಬೇಕೆಂಬುದೇ ನನ್ನ ಆಸೆಯಾಗಿತ್ತು. ಆದರೆ ಆ ಆಸೆ ಈಡೇರಲಿಲ್ಲ ಎಂದು ಡಿಕೆ ಸುರೇಶ ನುಡಿದಿದ್ದಾರೆ.

ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟಿರೋದು ನನಗೆ ತೃಪ್ತಿ ಇಲ್ಲ..!➤ ಡಿಕೆ ಸುರೇಶ್ Read More »

ರಾಷ್ಟ್ರೀಯ ನ್ಯೂಸ್

ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ

(ನ್ಯೂಸ್ ಕಡಬ) newskadaba.com.ಬೆಂಗಳೂರು , ಮೇ.19. ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹೈಕಮಾಂಡ್ ಹಾಗೂ ದೇಶದ ಹಲವು ಘಟಾನುಘಟಿ ರಾಜಕೀಯ ಮುಖಂಡರು ಹಾಜರಿರುವ ಸಾಧ್ಯತೆ ಇದೆ. ಸಿದ್ದು ಮತ್ತು ಡಿಕೆ ಇವರಿಬ್ಬರ ಪದಗ್ರಹಣ ಮಾತ್ರ ಬೇಡ, ಇವರೊಂದಿಗೆ ಸಚಿವರು ಪ್ರಮಾಣ ವಚನ ತೆಗೆದುಕೊಳ್ಳಲಿ ಎಂದ ಕಾರಣ ಇವರ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಸುಮಾರು 28

ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ Read More »

ಕರ್ನಾಟಕ

ಸಚಿವ ಸ್ಥಾನದಿಂದ ಕಿರಣ್ ರಿಜಿಜುಗೆ ಗೇಟ್ ಪಾಸ್..!➤ಕಾನೂನು ಸಚಿವರಾಗಿ ಅರ್ಜುನ್ ಮೇಘವಾಲ್ ನೇಮಕ *

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ,ಮೇ.19 ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜುಗೆ ಗೇಟ್ ಪಾಸ್ ನೀಡಲಾಗಿದೆ. ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಕಿರಣ್ ರಿಜಿಜು ಗೇಟ್ ಪಾಸ್ ನೀಡಲಾಗಿದ್ದು, ಕಾನೂನು ಸಚಿವರಾಗಿ ಅರ್ಜುನ್ ಮೇಘವಾಲ್ ನೇಮಕ ಮಾಡಲಾಗಿದೆ. ಕಿರಣ್ ಅವರನ್ನು ಭೂ ವಿಜ್ಞಾನ ಸಚಿವಾಲಯಕ್ಕೆ ನಿಯೋಜಿಸಲಾಗಿದೆ.  

ಸಚಿವ ಸ್ಥಾನದಿಂದ ಕಿರಣ್ ರಿಜಿಜುಗೆ ಗೇಟ್ ಪಾಸ್..!➤ಕಾನೂನು ಸಚಿವರಾಗಿ ಅರ್ಜುನ್ ಮೇಘವಾಲ್ ನೇಮಕ * Read More »

ರಾಷ್ಟ್ರೀಯ ನ್ಯೂಸ್

ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ..!

(ನ್ಯೂಸ್ ಕಡಬ)newskadaba.com ಕೊಡಗು,ಮೇ.19 ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2023-24 ನೇ ಸಾಲಿನ ಸೀಮಿತ ಅವಧಿಗೆ ಮಡಿಕೇರಿ, ಕೊಡ್ಲಿಪೇಟೆ ಹಾಗೂ ಶಾಂತಳ್ಳಿ ಹೋಬಳಿಗಳಿಗೆ ಸೇರಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಮೇ, 31 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ

ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ..! Read More »

ಕರ್ನಾಟಕ

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ➤ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

(ನ್ಯೂಸ್ ಕಡಬ)newskadaba.com ಹೊಸಕೋಟೆ,ಮೇ.19 ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ ಆಗುತ್ತಿದೆ, ಹಲವು ಕಡೆ ಗೂಂಡಾಗಿರಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಹೊಸಕೋಟೆ ಕ್ಷೇತ್ರ ದ ಡಿ ಶೆಟ್ಟಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೋತ್ಸವ ನೆಪದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಖಂಡಿಸುತ್ತೆವೆ. ಪೊಲೀಸರು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು. ಪೊಲೀಸರು ಖಾಕಿ ಹಾಕಿದ್ದಾರಾ ಅಥವಾ ಕಾಂಗ್ರೆಸ್ ಬಟ್ಟೆ ಹಾಕಿದ್ದಾರಾ. ಕಾಂಗ್ರೆಸ್ಸಿಗರು

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಗೂಂಡಾ ರಾಜ್ಯ ಆಗಿ ಬದಲಾವಣೆ➤ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ Read More »

ಕರ್ನಾಟಕ

ಜ್ಞಾನವಾಪಿ ಮಸೀದಿಯಲ್ಲಿನ ಶಿವಲಿಂಗ ಪರೀಕ್ಷೆ ➤ ಇಂದು ತುರ್ತು ಅರ್ಜಿ ವಿಚಾರಣೆ ಸಾದ್ಯತೆ

(ನ್ಯೂಸ್ ಕಡಬ) newskadaba.com.ದೆಹಲಿ , ಮೇ.19. ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವ ‘ಶಿವಲಿಂಗ’ ಎಷ್ಟು ವರ್ಷ ಹಳೆಯದು ಎಂದು ತಿಳಿಯಲು ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಹಾಗೂ ವೈಜ್ಞಾನಿಕ ಸರ್ವೇಗೆ ಅಲಹಾಬಾದ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಮುಸ್ಲಿಂ ಸಮುದಾಯದ ಪರ ಸಲ್ಲಿಕೆಯಾಗಿರುವ ಅರ್ಜಿಯ ತುರ್ತು ವಿಚಾರಣೆ ಇಂದು ನಡೆಯಲಿದೆ. ಮಸೀದಿ ಪರವಾಗಿ ಉಸ್ತುವಾರಿ ಹೊತ್ತಿರುವ ಅಂಜುಮಾನ್ ಇಂತೆಝಾಮಿಯ ಮಸೀದಿ ವಾರಣಾಸಿ ಪರವಾಗಿ ಮುಖ್ಯ ನ್ಯಾಯಧೀಶ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠದ ಎದುರು ಹಾಜರಾದ ಹಿರಿಯ ವಕೀಲ ಹುಝೇಪ್ ಹ ಅಹ್ಮದಿ

ಜ್ಞಾನವಾಪಿ ಮಸೀದಿಯಲ್ಲಿನ ಶಿವಲಿಂಗ ಪರೀಕ್ಷೆ ➤ ಇಂದು ತುರ್ತು ಅರ್ಜಿ ವಿಚಾರಣೆ ಸಾದ್ಯತೆ Read More »

ರಾಷ್ಟ್ರೀಯ ನ್ಯೂಸ್

ಪಟಾಕಿ ಮದ್ದು ಸೇವಿಸಿ ಬಾಲಕ ಮೃತ್ಯು.!

(ನ್ಯೂಸ್ ಕಡಬ)newskadaba.com ಮಂಡ್ಯ,ಮೇ.19 ಪಟಾಕಿ ಮದ್ದು ಸೇವಿಸಿ ಬಾಲಕ ಮೃತಪಟ್ಟ ಘಟನೆ ಹಲಗೂರು ಸಮೀಪದ ಧನಗೂರು ಗ್ರಾಮದಲ್ಲಿ ನಡೆದಿದೆ. ಮಹಮ್ಮದ್ ಅಯುಬ್ ಎಂಬುವವರ ಫಾರಂ ಹೌಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿರುವ ಕಮಲನಾಥ್ ಅವರ ಪುತ್ರ ಸೂರಜ್ ಮೃತಪಟ್ಟ ಬಾಲಕ. ಜಮೀನಿನಲ್ಲಿ ಕೋತಿಗಳ ಹಾವಳಿ ತಡೆಯಲು ಪಟಾಕಿ ಸಿಡಿಸಲಾಗಿತ್ತು. ಪಟಾಕಿಯಲ್ಲಿ ಬಳಕೆ ಮಾಡಿದ್ದ ಮದ್ದು ತೋಟದಲ್ಲಿ ಇದ್ದು, ಆಟವಾಡಲು ಹೋಗಿದ್ದ ಬಾಲಕ ಮದ್ದು ಸೇವಿಸಿ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಮಳವಳ್ಳಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ

ಪಟಾಕಿ ಮದ್ದು ಸೇವಿಸಿ ಬಾಲಕ ಮೃತ್ಯು.! Read More »

ಕರ್ನಾಟಕ

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ.!➤ಮೂವರು ಅಧಿಕಾರಿಗಳ ವಿರುದ್ಧ FIR  ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿರುವ ಆರೋಪ ವ್ಯಕ್ತವಾಗಿದ್ದು, ನಿಗಮದ ಮೂವರು ಅಧಿಕಾರಿಗಳ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಿ.ನಾಗೇಶ್ ಅವರು ಅಕ್ರಮದ ಬಗ್ಗೆ ದೂರು ನೀಡಿದ್ದಾರೆ. ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್, ಹಿಂದಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ಪ್ರಕಾಶ್ ಎಂ. ಹರಗಾಪುರೆ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್‌.ಟಿ. ಸೀತಾರಾಮ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ.!➤ಮೂವರು ಅಧಿಕಾರಿಗಳ ವಿರುದ್ಧ FIR  ದಾಖಲು Read More »

ಕರ್ನಾಟಕ

ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನ ಬರ್ಬರ ಹತ್ಯೆ.!➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳಗಾವಿ,ಮೇ.19 ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ನಡೆದಿದೆ.ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾರೀಹಾಳ

ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನ ಬರ್ಬರ ಹತ್ಯೆ.!➤ ಪ್ರಕರಣ ದಾಖಲು Read More »

ಕರ್ನಾಟಕ
Scroll to Top