News Kadaba

ವೃದ್ಧನ ಜೇಬಲ್ಲಿದ್ದ ಮೊಬೈಲ್ ಸ್ಫೋಟ.!➤ ಅದೃಷ್ಟವಶಾತ್ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಕೇರಳ,ಮೇ.19 ಕೇರಳದ ತ್ರಿಶೂರು ಜಿಲ್ಲೆಯಲ್ಲಿ ವೃದ್ಧರೊಬ್ಬರ ಜೇಬಲ್ಲಿದ್ದ ಮೊಬೈಲ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.ಶರ್ಟ್ ಜೇಬಲ್ಲಿ ಮೊಬೈಲ್ ಇಟ್ಟುಕೊಂಡು ಹೋಟೆಲ್ ನಲ್ಲಿ ಟೀ ಕುಡಿಯುತ್ತಿದ್ದ ವೇಳೆ ಏಕಾಏಕಿ ಮೊಬೈಲ್ ಸ್ಪೋಟಗೊಂಡಿದೆ. ಕೂಡಲೇ ಅದನ್ನು ಕೆಳಗೆ ಎಸೆದಿದ್ದಾರೆ. ಮೊಬೈಲ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸಮಯ ಪ್ರಜ್ಞೆಯಿಂದಾಗಿ ವೃದ್ಧ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.  

ವೃದ್ಧನ ಜೇಬಲ್ಲಿದ್ದ ಮೊಬೈಲ್ ಸ್ಫೋಟ.!➤ ಅದೃಷ್ಟವಶಾತ್ ಅಪಾಯದಿಂದ ಪಾರು Read More »

ರಾಷ್ಟ್ರೀಯ ನ್ಯೂಸ್

ಭೂಮಿಯಂತಿರುವ ಮತ್ತೊಂದು ಗ್ರಹವನ್ನು ಪತ್ತೆಹಚ್ಚಿದ ಖಗೋಳಶಾಸ್ತ್ರಜ್ಞರು.!

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ,ಮೇ.19 ಭೂಮಿಯ ಗಾತ್ರ ಇರುವ ಗ್ರಹವೊಂದನ್ನು ಖಗೋಳಶಾಸ್ತ್ರಜ್ಞರು ಪತ್ತೆಹಚ್ಚಿದ್ದಾರೆ. ಇದಕ್ಕೆ “ಎಲ್‌ಪಿ 791-18ಡಿ” ಎಂದು ನಾಮಕರಣ ಮಾಡಿದ್ದಾರೆ.ಈ ಗ್ರಹವು ಜ್ವಾಲಾಮುಖೀಗಳಿಂದ ಕೂಡಿದ್ದು, ಇಲ್ಲಿ ಮಾನವರು ಜೀವನ ನಡೆಸಲು ಅನುಕೂಲವಾಗಿರುವ ವಾತಾವರಣ ಇರಬಹುದು ಎಂದು ಖಗೋಳಶಾಸ್ತ್ರಜ್ಞರು ಅಂದಾಜಿಸಿದ್ದಾರೆ. ಈ ಗ್ರಹವು ತನ್ನಿಂದ 90 ಜ್ಯೋತಿರ್ವರ್ಷ ದೂರವಿರುವ ಕೆಂಪು ಕುಬ್ಜ ನಕ್ಷತ್ರವನ್ನು ಸುತ್ತುತ್ತಿದೆ. ಈ ನಕ್ಷತ್ರದ ಹೆಸರು “ಕ್ರೇಟರ್‌”. ಈ ಗ್ರಹದಲ್ಲಿ ಅಗ್ಗಿಂದಾಗೆ ಜ್ವಾಲಾಮುಖೀಗಳು ಸ್ಫೋಟಗೊಳ್ಳುತ್ತಿವೆ ಎಂದು ಅಮೆರಿಕದ ಹಾರ್ವರ್ಡ್‌ ವಿವಿ ಮತ್ತು ಸ್ಮಿತ್‌ಸೋನಿಯನ್‌ ಸಂಸ್ಥೆಯ ಖಗೋಳ

ಭೂಮಿಯಂತಿರುವ ಮತ್ತೊಂದು ಗ್ರಹವನ್ನು ಪತ್ತೆಹಚ್ಚಿದ ಖಗೋಳಶಾಸ್ತ್ರಜ್ಞರು.! Read More »

ರಾಷ್ಟ್ರೀಯ ನ್ಯೂಸ್

ಭರವಸೆ ನೀಡಿದ ಐದು ಯೋಜನೆಗಳು ಗ್ಯಾರಂಟಿ ಜಾರಿ – ಖರ್ಗೆ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.18. ಸಿದ್ದರಾಮಯ್ಯ ಸಿಎಂ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲೇ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಟ್ವೀಟ್‌ ಮಾಡಿದ್ದು 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸುತ್ತೇವೆ ಎಂದಿದ್ದಾರೆ. ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ. 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿಗಳನ್ನು ನಾವು ಜಾರಿಗೊಳಿಸುತ್ತೇವೆʼ ಎಂದಿದ್ದಾರೆ. ಆ ಮೂಲಕ ಸಿದ್ದು, ಡಿಕೆಶಿ ಮತ್ತು ಖರ್ಗೆ ಏಕಕಾಲಕ್ಕೆ ಟ್ವೀಟ್‌ ಮಾಡುವ ಮೂಲಕ

ಭರವಸೆ ನೀಡಿದ ಐದು ಯೋಜನೆಗಳು ಗ್ಯಾರಂಟಿ ಜಾರಿ – ಖರ್ಗೆ Read More »

ಕರ್ನಾಟಕ

ಸುಳ್ಯ; ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com. ಸುಳ್ಯ, ಮೇ.18. ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ರವರು ಆಕಸ್ಮಿಕವಾಗಿ  ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಅವರು ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ಬೇಕಾದ ನೀರು ಸರಬರಾಜು ಮಾಡಲು ಅಳವಡಿಸಿದ್ದ ಪಂಪ್‌ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದ ನವೀನ್ ಕುಮಾರ್

ಸುಳ್ಯ; ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿ ಹಾಗೂ ಮಕ್ಕಳ ಮೇಲೆ ಚಾಕು ಇರಿತ.!➤ ಬಳಿಕ ಪತಿ ನೇಣಿಗೆ ಶರಣು

(ನ್ಯೂಸ್ ಕಡಬ)newskadaba.com ದೆಹಲಿ,ಮೇ.18 ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿ) ನ ಉದ್ಯೋಗಿಯಾಗಿದ್ದ 43 ವರ್ಷದ ವ್ಯಕ್ತಿಯೊಬ್ಬರು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಇರಿದು, ತಾವೂ ನೇಣಿಗೆ ಶರಣಾಗಿರುವ ಘಟನೆ, ಶಹದಾರಾದಲ್ಲಿರುವ ಜ್ಯೋತಿ ಕಾಲೋನಿಯಲ್ಲಿ ನಡೆದಿದೆ.ಸುಶೀಲ್ ಕುಮಾರ್ ಎನ್ನುವವರು ನೇಣಿಗೆ ಶರಣಾಗಿರುವ ದುರ್ದೈವಿ. ಈ ಘಟನೆಯಲ್ಲಿ ಪತ್ನಿ ಅನುರಾಧಾ (40), ಪುತ್ರಿ ಅದಿತಿ (6) ಮೃತಪಟ್ಟಿದ್ದಾರೆ. ಅದೃಷ್ಟವಶಾತ್ 13 ವರ್ಷದ ಪುತ್ರ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.ದೆಹಲಿಯ ಪೂರ್ವ ವಿನೋದ ನಗರ ಡಿಪೋದಲ್ಲಿ ಸುಶೀಲ್ ಕುಮಾರ್ ನಿರ್ವಹಣಾ ಮೇಲ್ವಿಚಾರಕರಾಗಿ

ಪತ್ನಿ ಹಾಗೂ ಮಕ್ಕಳ ಮೇಲೆ ಚಾಕು ಇರಿತ.!➤ ಬಳಿಕ ಪತಿ ನೇಣಿಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಮದ್ಯದ ಬಾಕ್ಸ್‌ಗಳನ್ನು ತುಂಬಿ ಸಾಗುತ್ತಿದ್ದ ಲಾರಿ ಪಲ್ಟಿ.!

(ನ್ಯೂಸ್ ಕಡಬ)newskadaba.com ಯಲ್ಲಾಪುರ,ಮೇ.18 ಮದ್ಯದ ಬಾಕ್ಸ್‌ಗಳನ್ನು ತುಂಬಿ ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ತಾಲ್ಲೂಕಿನ ಆರ್ತಿಬೈಲ್ ಘಟ್ಟದಲ್ಲಿ ಪಲ್ಟಿಯಾಗಿ ಪಕ್ಕದ ಚರಂಡಿಗೆ ಉರುಳಿದ ಘಟನೆ ನಡೆದಿದೆ.ಲಾರಿ ಮದ್ಯದ ಬಾಟಲ್ ಇರುವ ಬಾಕ್ಸ್‌ಗಳನ್ನು ತುಂಬಿಕೊಂಡು ಕಲಬುರ್ಗಿಯಿಂದ ಉಡುಪಿಗೆ ಸಾಗುತ್ತಿತ್ತು. ಪಲ್ಟಿಯಾದ ಕಾರಣ ಲಾರಿಯ ಮುಂಭಾಗ ಜಖಂ ಆಗಿದ್ದು, ಲಾರಿಯ ಚಾಲಕ ಮತ್ತು ಸಹಾಯಕನಿಗೆ ಅಲ್ಪ ಪ್ರಮಾಣದ ಪೆಟ್ಟಾಗಿದೆ. ಯಲ್ಲಾಪುರ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.    

ಮದ್ಯದ ಬಾಕ್ಸ್‌ಗಳನ್ನು ತುಂಬಿ ಸಾಗುತ್ತಿದ್ದ ಲಾರಿ ಪಲ್ಟಿ.! Read More »

ಕರ್ನಾಟಕ

ಗುಂಡು ಹಾರಿಸಿ ಯುವಕನನ್ನು ಹತ್ಯೆಗೈದ ದುಷ್ಕರ್ಮಿಗಳು.!

(ನ್ಯೂಸ್ ಕಡಬ)newskadaba.com ದೆಹಲಿ,ಮೇ.18 ದೆಹಲಿಯ ಜಾಮಾ ಮಸೀದಿ ಬಳಿ ದುಷ್ಕರ್ಮಿಗಳು ಗುಂಡು ಹಾರಿಸಿ ಯುವಕನನ್ನು ಹತ್ಯೆ ಮಾಡಿದ್ದಾರೆ. ಮೃತಪಟ್ಟವರನ್ನು ಚಾವ್ರಿ ಬಜಾರ್ ನಿವಾಸಿ ಸಮೀರ್ ಎಂದು ಗುರುತಿಸಲಾಗಿದೆ. ಸಮೀರ್ ಹೋಟೆಲ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು, ಕೆಲವು ಕಿಡಿಗೇಡಿಗಳು ಹೋಟೆಲ್ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಜಗಳದ ವೇಳೆ ಸಮೀರ್ ಮಧ್ಯ ಪ್ರವೇಶಿಸಿದ್ದರು, ಆದರೆ ದುಷ್ಕರ್ಮಿಗಳು ಅಲ್ಲಿಯೇ ಗುಂಡು ಹಾರಿಸಲು ಶುರು ಮಾಡಿದ್ದರು. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಸಮೀರ್ ತಲೆಗೆ ಗುಂಡು ತಗುಲಿತ್ತು. ಗಾಯಗೊಂಡಿದ್ದ ಸಮೀರ್​ನನ್ನು ಜಯಪ್ರಕಾಶ್

ಗುಂಡು ಹಾರಿಸಿ ಯುವಕನನ್ನು ಹತ್ಯೆಗೈದ ದುಷ್ಕರ್ಮಿಗಳು.! Read More »

ರಾಷ್ಟ್ರೀಯ ನ್ಯೂಸ್

ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ➤ ರಸ್ತೆಯಲ್ಲಿ ಕೆಟ್ಟುನಿಂತ ಆರ್‌ಬಿಐಯ ಟ್ರಕ್.!

(ನ್ಯೂಸ್ ಕಡಬ)newskadaba.com ಚೆನ್ನೈ,ಮೇ.18 ಚೆನ್ನೈನಲ್ಲಿರುವ ರಿಸರ್ವ್ ಬ್ಯಾಂಕ್ ಕಚೇರಿಯಿಂದ 1,070 ಕೋಟಿ ರೂ.ನಗದನ್ನು ಸಾಗಿಸುತ್ತಿದ್ದ ಎರಡು ಕಂಟೇನರ್ ಟ್ರಕ್ ಗಳನ್ನು ಕೆಲಕಾಲ ಚೆನ್ನೈನ ತಾಂಬರಂ ರಸ್ತೆಯಲ್ಲಿ ನಿಲ್ಲಿಸಿದ ಘಟನೆ ನಡೆದಿದೆ. ಚೆನ್ನೈನಲ್ಲಿರುವ ರಿಸರ್ವ್ ಬ್ಯಾಂಕ್ ಕಚೇರಿಯಿಂದ ಜಿಲ್ಲೆಯ ಬ್ಯಾಂಕ್‌ಗಳಿಗೆ ಕರೆನ್ಸಿ ತಲುಪಿಸಲು ವಿಲ್ಲುಪುರಂಗೆ ಬರುತ್ತಿತ್ತು. ಈ ವೇಳೆ 535 ಕೋಟಿ ರೂಪಾಯಿ ನಗದು ಸಾಗಿಸುತ್ತಿದ್ದ ಒಂದು ಕಂಟೈನರ್ ಟ್ರಕ್ ಚೆನ್ನೈನಲ್ಲಿ ಕೆಟ್ಟು ನಿಂತಿದೆ. ಒಂದು ಟ್ರಕ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಎರಡೂ ಲಾರಿಗಳನ್ನು

ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ➤ ರಸ್ತೆಯಲ್ಲಿ ಕೆಟ್ಟುನಿಂತ ಆರ್‌ಬಿಐಯ ಟ್ರಕ್.! Read More »

ರಾಷ್ಟ್ರೀಯ ನ್ಯೂಸ್

ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ ➤ ಕೆ.ಸಿ ವೇಣುಗೋಪಾಲ್ ಅಧಿಕೃತ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.18. ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಹಾಗೂ ಏಕೈಕ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣು ಗೋಪಾಲ್, ಮೇ 20ರಂದು (ಶನಿವಾರ) ಮಧ್ಯಾಹ್ನ 12:30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜೊತೆಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ ➤ ಕೆ.ಸಿ ವೇಣುಗೋಪಾಲ್ ಅಧಿಕೃತ ಘೋಷಣೆ Read More »

ಕರ್ನಾಟಕ

ನಿಶ್ಚಿತಾರ್ಥದ ಹಿಂದಿನ ದಿನ ಗುಂಡು ಹಾರಿಸಿ ಪ್ರೇಯಸಿಯನ್ನು ಹತ್ಯೆಗೈದ ಪ್ರಿಯಕರ.!

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ,ಮೇ.18 ನಿಶ್ಚಿತಾರ್ಥದ ಹಿಂದಿನ ದಿನ ತನ್ನ ಸಂಗಾತಿಯನ್ನು ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿದ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.ಪೊಲೀಸರ ಪ್ರಕಾರ ದಸ್ತೋಯ್ ಗ್ರಾಮದ ಆರೋಪಿ ಸೋನು ಪ್ರಜಾಪತಿ ಡೈರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಆತ ಫೂಲ್‌ಗರ್ಹಿಯಲ್ಲಿರುವ ನೀತು ಪ್ರಜಾಪತಿ ಮನೆಗೆ ನುಗ್ಗಿ ಆಕೆಯ ತಲೆಗೆ ಗುಂಡು ಹಾರಿಸಿದ್ದಾನೆ. ಈ ವೇಳೆ ಸಂತ್ರಸ್ತೆಯ ಕುಟುಂಬವು ಅವನನ್ನು ಹಿಡಿಯಲು ಪ್ರಯತ್ನಿಸಿತು. ಆದರೆ ಅವನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದನು. ನಂತರ ಅವನು ಫ್ಯಾನ್‌ಗೆ ನೇಣು

ನಿಶ್ಚಿತಾರ್ಥದ ಹಿಂದಿನ ದಿನ ಗುಂಡು ಹಾರಿಸಿ ಪ್ರೇಯಸಿಯನ್ನು ಹತ್ಯೆಗೈದ ಪ್ರಿಯಕರ.! Read More »

ರಾಷ್ಟ್ರೀಯ ನ್ಯೂಸ್
Scroll to Top