ವಿಧಾನಸಭೆ ಚುನಾವಣೆ ಸೋಲಿಗೆ ಎದೆಗುಂದಬೇಡಿ..!➤ಎಚ್.ಡಿ.ದೇವೇಗೌಡ
(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18 ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಎದೆಗುಂದದೆ ಎಲ್ಲರೂ ಸೇರಿ ಪಕ್ಷ ಸಂಘಟನೆ ಮಾಡಿ ಬಲ ತುಂಬುವ ಕೆಲಸ ಮಾಡೋಣ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಕುರಿತು ಭಾವನಾತ್ಮಕವಾಗಿ ಪಕ್ಷದ ಮುಖಂಡರಿಗೆ ಪತ್ರ ಬರೆದಿರುವ ಅವರು, ಪ್ರಜಾಪ್ರಭುತ್ವದ ಚುನಾವಣೆ ವ್ಯವಸ್ಥೆಯಲ್ಲಿ ಏಳು-ಬೀಳು ಸಹಜ. ಆದರೆ, ಪಕ್ಷಕ್ಕೆ ದೊರೆತಿರುವ ಫಲಿತಾಂಶದಿಂದ ಯಾರೂ ಎದೆಗುಂದಬಾರದು ಎಂದು ಮನವಿ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸೋಲಿಗೆ ಎದೆಗುಂದಬೇಡಿ..!➤ಎಚ್.ಡಿ.ದೇವೇಗೌಡ Read More »
ಕರ್ನಾಟಕ