‘ಜಲ್ಲಿಕಟ್ಟು’ ಮತ್ತು ಎತ್ತಿನಗಾಡಿ ಓಟದ ಸ್ಪರ್ಧೆಗಳಿಗೆ ಅವಕಾಶ ಪ್ರಶ್ನಿಸಿ ಅರ್ಜಿ ಸಲ್ಲಿಕೆ ➤ ಇಂದು ಸುಪ್ರೀಂ ಕೋರ್ಟ್ ತೀರ್ಪು ?
(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.18. ತಮಿಳುನಾಡು ಮತ್ತು ಮಹಾರಾಷ್ಟ್ರದ ಸಾಂಪ್ರದಾಯಿಕ ಗೂಳಿ ಪಳಗಿಸುವ ಕ್ರೀಡೆ ‘ಜಲ್ಲಿಕಟ್ಟು’ ಮತ್ತು ಎತ್ತಿನಗಾಡಿ ಓಟದ ಸ್ಪರ್ಧೆಗಳಿಗೆ ಅವಕಾಶ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. 8 ಡಿಸೆಂಬರ್ 2022ರಂದು ಈ ವಿಷಯದ ವಿಚಾರಣೆಯನ್ನು ಪೂರ್ಣಗೊಳಿಸಿದ ನಂತರ ಸಂವಿಧಾನ ಪೀಠವು ತೀರ್ಪು ಕಾಯ್ದಿರಿಸಿತ್ತು. ಐದೂವರೆ ತಿಂಗಳ ನಂತರ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಈ ಬಗ್ಗೆ ಇಂದೇ ನಿರ್ಧಾರ ಹೊರಬರಲಿದೆ. ನ್ಯಾಯಮೂರ್ತಿ ಕೆಎಂ ಜೋಸೆಫ್ […]
