News Kadaba

ಕೌಟುಂಬಿಕ ಕಲಹ ಹಿನ್ನೆಲೆ➤ ಪತ್ನಿಯನ್ನೇ ಹತ್ಯೆಗೈದ ಪತಿ..!

(ನ್ಯೂಸ್ ಕಡಬ) newskadaba.com ಯಾದಗಿರಿ,ಮೇ.17 ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಹತ್ಯೆಗೈದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ.ಮಲಗಿದ್ದಾಗ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಲಕ್ಷ್ಮೀ ಮೃತ ಮಹಿಳೆ. ನಿಂಗಪ್ಪ ಪತ್ನಿಯನ್ನೇ ಕೊಲೆಗೈದ ಪತಿ. ಕೌಟುಂಬಿಕ ಕಲಹದಿಂದಾಗಿ ಪತಿ ಹಾಗೂ ಪತ್ನಿ ಇಬ್ಬರೂ ದೂರವಿದ್ದರು.ಮಗಳ ಮದುವೆ ಎಂದು ಪತಿ ನಿಂಗಪ್ಪ ಮನೆಗೆ ವಾಪಸ್ ಬಂದಿದ್ದ. ರಾತ್ರಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಶಹಾಪುರ ಪೊಲೀಸ್ […]

ಕೌಟುಂಬಿಕ ಕಲಹ ಹಿನ್ನೆಲೆ➤ ಪತ್ನಿಯನ್ನೇ ಹತ್ಯೆಗೈದ ಪತಿ..! Read More »

ಕರ್ನಾಟಕ

ಕಾಪು: ಕಾರುಗಳ ನಡುವೆ ಅಪಘಾತ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾಪು, ಮೇ.17. ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ನ್ಯಾನೊ ಕಾರು ಮತ್ತು ಡಸ್ಟರ್ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಎರಡು ಕಾರು ಪಲ್ಟಿ ಹೊಡೆದಿದ್ದು ನ್ಯಾನೋ ಕಾರಿನಲ್ಲಿದ್ದ ನಾಲ್ವರು ಗಾಯ ಗೊಂಡಿದ್ದಾರೆ. ಡಸ್ಟರ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾಪು: ಕಾರುಗಳ ನಡುವೆ ಅಪಘಾತ ➤ ನಾಲ್ವರಿಗೆ ಗಾಯ Read More »

ಕರಾವಳಿ

ಬಂಟ್ವಾಳ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.16. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಇತ್ತಂಡಗಳವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪರಸ್ಪರ ಪ್ರಕರಣ ದಾಖಲಾಗಿದೆ‌. ಒಂದು ಪ್ರಕರಣದಲ್ಲಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಎದುರುಕಜೆ ನಿವಾಸಿ ಅಬ್ದುಲ್ ರಹಿಮಾನ್ ರವರ ಪುತ್ರ ಅಬ್ದುಲ್ ಅಜೀಜ್ ದೂರುದಾರರಾಗಿದ್ದು, ಅಬೂಬಕ್ಕರ್‌ ಸಿದ್ದಿಕ್‌ ಆರೋಪಿಯಾಗಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ನಿವಾಸಿ ಅಬ್ದುಲ್ಲ ರವರ ಪುತ್ರ ಅಬೂಬಕ್ಕರ್‌ ಸಿದ್ದೀಕ್‌ ದೂರುದಾರರಾಗಿದ್ದು, ಅಪ್ರಾಝ್‌ ಅಲಿಯಾಸ್ ಅಜೀಜ್‌,

ಬಂಟ್ವಾಳ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ Read More »

ಕರಾವಳಿ

ಮಂಗಳೂರು: ಸೈನಿಕ ಎಂದು ನಂಬಿಸಿ ವ್ಯಕ್ತಿಗೆ ಹಣ ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.17. ಯೋಧ ಎಂದು ಹೇಳಿ ಬಾಡಿಗೆಗೆ ಫ್ಲ್ಯಾಟ್ ಪಡೆಯುವುದಾಗಿ‌‌ ನಂಬಿಸಿ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವ್ಯಕ್ತಿಯೋರ್ವರು ಬೆಂಗಳೂರಿನಲ್ಲಿ ಬಾಡಿಗೆಗೆ ಫ್ಲ್ಯಾಟ್ ಇರುವ ಬಗ್ಗೆ ವೆಬ್ ಸೈಟ್ ಒಂದರಲ್ಲಿ ಜಾಹೀರಾತು ನೀಡಿದ್ದರು. ಅದನ್ನು ಗಮನಿಸಿದ ವ್ಯಕ್ತಿಯೋರ್ವ ತನ್ನನ್ನು ಸೈನಿಕ ದೀಪಕ್ ಪವಾರ್ ಎಂದು ಹೇಳಿ ಬೆಂಗಳೂರಿಗೆ ವರ್ಗಾವಣೆಯಾಗಿರುವುದಾಗಿ ತಿಳಿಸಿ ಫ್ಲ್ಯಾಟ್ ಖರೀದಿಸುತ್ತೇನೆ ಎಂದು ಹೇಳಿಕೊಂಡಿದ್ದಾನೆ.  

ಮಂಗಳೂರು: ಸೈನಿಕ ಎಂದು ನಂಬಿಸಿ ವ್ಯಕ್ತಿಗೆ ಹಣ ವಂಚನೆ Read More »

ಕರಾವಳಿ

ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ.!➤ ಹವಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.17 ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್ 1 ರ ವೇಳೆಗೆ ಆಗಮಿಸುವ ಮುಂಗಾರು ಈ ಬಾರಿ ಜೂನ್ 4ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಹೇಳಿದೆ.ಸಾಮಾನ್ಯವಾಗಿ ಮುಂಗಾರು ಜೂನ್ 1ಕ್ಕೆ ಕೇರಳ ಪ್ರವೇಶಿಸುತ್ತದೆ. ಇದರಲ್ಲಿ 7 ದಿನ ಮುಂದೂಡಿಕೆ ಅಥವಾ ಹಿಂದೂಡಿಕೆ ಸಾಧ್ಯತೆ ಇರುತ್ತದೆ. ಕಳೆದ ವರ್ಷ ಮೇ 29ಕ್ಕೆ ಮುಂಗಾರು ಪ್ರವೇಶಿಸಿತ್ತು. ಈ ಬಾರಿ ಜೂನ್ 4ರ

ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ.!➤ ಹವಮಾನ ಇಲಾಖೆ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಸರ್ಕಾರಿ ಕಾಮಗಾರಿ 30 ಚೀಲ ಸಿಮೆಂಟ್ ವಶ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.17. ಅರಳ ಗ್ರಾಮದ ಕಲ್ಪನೆ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಸನಿಹ ಸರಕಾರಿ ಕಾಮಗಾರಿಗೆ ಬಳಸುವ ಮಾರಾಟ ಮಾಡಲು ಅವಕಾಶ ಇಲ್ಲದ ಸಿಮೆಂಟ್ ಗೋಣಿಗಳು ಪತ್ತೆಯಾಗಿದ್ದು ದೂರಿನ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ಬಂಟ್ವಾಳ ತಹಶೀಲ್ದಾರ್ ಎಸ್.ಬಿ. ಕೂಡಲಗಿ ನೇತೃತ್ವದಲ್ಲಿ ತಂಡ ದಾಳಿ ನಡೆಸಿ ೩೦ ಚೀಲ ಸಿಮೆಂಟ್ ಚೀಲ ವಶಪಡಿಸಿಕೊಂಡಿದೆ. ರಸ್ತೆ ಕಾಮಸ್ಗಾರಿಗೆ ಸಿಮೆಂಟ್ ತರಿಸಲಾಗಿದೆ ಎಂಬ ಮಾಹಿತಿ ಲಭಿಸಿದ್ದು, ಪತ್ತೆಯಾದ ಸ್ಥಳದಲ್ಲಿ ಯಾವುದೇ ಸಿಮೆಂಟ್ ಖಾಸಗಿ ಕಾಮಗಾರಿ ನಡೆಯುತ್ತಿರುವುದು ಬೆಳಕಿಗೆ ಬಂದಿಲ್ಲ.

ಬಂಟ್ವಾಳ: ಸರ್ಕಾರಿ ಕಾಮಗಾರಿ 30 ಚೀಲ ಸಿಮೆಂಟ್ ವಶ Read More »

ಕರಾವಳಿ

ಲೇಡಿ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ.17. ಅಸ್ಸಾಂನ ಮಹಿಳಾ ಪೊಲೀಸ್ ಅಧಿಕಾರಿ, ಲೇಡಿ ಸಿಂಗಂ, ದಬಾಂಗ್ ಕ್ಯಾಪ್ ಎಂದು ಖ್ಯಾತಿ ಗಳಿಸಿದ್ದ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು ಎಂದು ವರದಿ ತಿಳಿಸಿದೆ. ನಾಗಾವ್ ಜಿಲ್ಲೆಯಲ್ಲಿ ಹಾದು ಹೋದ ರಾಜ್ಯ ಹೆದ್ದಾರಿಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  

ಲೇಡಿ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿ ➤ ಮಾಜಿ ಸಚಿವ ಬಿ.ರಮಾನಾಥ ರೈ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.16. ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿರುವುದಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಘೋಷಿಸಿದ್ದಾರೆ. ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತನಾದರೂ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿ ➤ ಮಾಜಿ ಸಚಿವ ಬಿ.ರಮಾನಾಥ ರೈ Read More »

ಕರಾವಳಿ

ಪುತ್ತೂರು: ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ ➤ ಮತ್ತೆ 7 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.16. ಪುತ್ತೂರು ಕೆಎಸ್ಆರ್‌‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್

ಪುತ್ತೂರು: ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ ➤ ಮತ್ತೆ 7 ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ

 ಬಂಟ್ವಾಳ: ಉಚಿತವಾಗಿ ನೀರು ಒದಗಿಸಿ ಮಾನವೀಯತೆ ಮೆರೆದ ಕೃಷಿಕ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.16. ಈ ಬಾರಿ ಬೇಸಿಗೆಯ ಕಾವು ಹೆಚ್ಚಾಗಿದೆ, ನದಿಗಳು ಸಹಿತ ಅಂತರ್ಜಲವೆಲ್ಲಾ ಬತ್ತಿ ಎಲ್ಲೆಡೆ ನೀರಿನ ಸಮಸ್ಯೆ ಕಾಡುತ್ತಿದೆ. ಬಿರು ಬಿಸಿಲಿನಿಂದಾಗಿ ನೀರಿನ ಒರತೆಗಳು ಬತ್ತಿ ಹೋಗಿವೆ. ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಬಂದಿದೆ. ಬಂಟ್ವಾಳ ತಾಲೂಕಿನ ಎಲಿಯ ನಡುಗೋಡು ಗ್ರಾಮದ ಉಪ್ಪಿರ ಪರಿಸರದಲ್ಲೂ ನೀರಿನ ಸಮಸ್ಯೆ ತಲೆದೋರಿದ್ದು, ಹೊಕ್ಕಾಡಿಗೋಳಿಯ ಉದ್ಯಮಿ, ಕೃಷಿಕ ರಾಘವೇಂದ್ರ ಭಟ್ ಎಂಬವರು ಪರಿಸರದ ಸುಮಾರು ಹಲವು ಮನೆಗಳಿಗೆ ಕಳೆದ ಕೆಲ ದಿನಗಳಿಂದ ಉಚಿತವಾಗಿ ವಾಹನದ ಮೂಲಕ ನೀರು

 ಬಂಟ್ವಾಳ: ಉಚಿತವಾಗಿ ನೀರು ಒದಗಿಸಿ ಮಾನವೀಯತೆ ಮೆರೆದ ಕೃಷಿಕ Read More »

ಕರಾವಳಿ
Scroll to Top