News Kadaba

ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಮೃತ್ಯು.!

(ನ್ಯೂಸ್ ಕಡಬ) newskadaba.com  ಕೇರಳ,ಮೇ.15 ಕೇರಳ ರಾಜಧಾನಿ ತಿರುವನಂತಪುರಂನಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ತಿರುವನಂತಪುರಂನ ಮುಸ್ಲಿಂ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭೀಮಪಲ್ಲಿ ಮೂಲದ 17 ವರ್ಷದ ಬಾಲಕಿ ಶನಿವಾರ ಬಲರಾಮಪುರಂನಲ್ಲಿರುವ ಮುಸ್ಲಿಂ ಧಾರ್ಮಿಕ ಸಂಸ್ಥೆಯ ಗ್ರಂಥಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳು ಎಂದು ಪೊಲೀಸರು ತಿಳಿಸಿದ್ದಾರೆ. […]

ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ಅಭ್ಯರ್ಥಿ ಸಚಿವ ಡಾ.ಸುಧಾಕರ್ ಸೋಲಿನ ಹಿನ್ನೆಲೆ➤ಆತ್ಮಹತ್ಯೆಗೆ ಶರಣಾದ ಅಭಿಮಾನಿ.!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ,ಮೇ.15 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಡಾ.ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹೀನಾಯವಾಗಿ ಸೋಲನುಭವಿಸಿದ್ದಾರೆ. ಇದರಿಂದ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ತಾರ ವೆಂಕಟೇಶ್ ಎಂಬ ಅಂಧ ಅಭಿಮಾನಿ ಸಚಿವ ಸುಧಾಕರ್ ಸೋತಿರುವ ಕಾರಣಕ್ಕೆ ಬೇಸರಗೊಂಡು ವಡ್ರೆಪಾಳ್ಯದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೋಟೆ ನಿವಾಸಿಯಾಗಿರುವ ವೆಂಕಟೇಶ್, ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದ. ಇದೀಗ ಸುಧಾಕರ್ ಸೋಲಿನ ಹಿನ್ನೆಲೆಯಲ್ಲಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.      

ಬಿಜೆಪಿ ಅಭ್ಯರ್ಥಿ ಸಚಿವ ಡಾ.ಸುಧಾಕರ್ ಸೋಲಿನ ಹಿನ್ನೆಲೆ➤ಆತ್ಮಹತ್ಯೆಗೆ ಶರಣಾದ ಅಭಿಮಾನಿ.! Read More »

ಕರ್ನಾಟಕ

ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ..!➤ಶಾಸಕ ಪ್ರದೀಪ್ ಈಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.15 ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ನಿಯೋಜಿಸಿದ ಮೂವರು ವೀಕ್ಷಕರು ಪಕ್ಷದ ಶಾಸಕರಿಂದ ಲಿಖಿತ ಅಭಿಪ್ರಾಯ ಸಂಗ್ರಹಿಸಿದ್ದಾರೆ.ಈ ಕುರಿತು ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರದ ನೂತನ ಶಾಸಕ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ. ನನಗೆ  ಇಬ್ಬರೂ ಕೂಡಬೇಕು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದರು.’ಶಾಸಕರು ಚೀಟಿಯಲ್ಲಿ ಸಿಎಂ ಯಾರಾಗಬೇಕೆಂದು ಗುಪ್ತ ಮತದಾನ ಮಾಡಿದ್ದಾರೆ. ಎಲ್ಲ ಶಾಸಕರೂ

ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ..!➤ಶಾಸಕ ಪ್ರದೀಪ್ ಈಶ್ವರ್ Read More »

ಕರ್ನಾಟಕ

ಉಳ್ಳಾಲ: ಇಬ್ಬರು ಯುವಕರ ಮೇಲೆ ತಂಡದಿಂದ ಹಲ್ಲೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.15. ತಂಡವೊಂದು ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರಿನಲ್ಲಿ ನಡೆದಿದೆ. ಹಲ್ಲೆ ನಡೆಸಿ ಯುವಕರ ಗುಂಪು ಸ್ಥಳದಿಂದ ಪರಾರಿಯಾಗಿದೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಗಾಯಗಳಾಗಿದೆ. ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.

ಉಳ್ಳಾಲ: ಇಬ್ಬರು ಯುವಕರ ಮೇಲೆ ತಂಡದಿಂದ ಹಲ್ಲೆ Read More »

ಕರಾವಳಿ

ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೇರಳ,ಮೇ.15 ಕರ್ತವ್ಯದಲ್ಲಿದ್ದ ವೇಳೆ ಕಟ್ಟಡದಿಂದ ಬಿದ್ದು ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿರೋ ದುರದೃಷ್ಟಕರ ಘಟನೆ ಕೇರಳದ ಕೊಟ್ಟಾಯಂನ ಪಾಲಾದಲ್ಲಿ ನಡೆದಿದೆ.ಮೃತರನ್ನು ರಾಮಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕುರವಿಲಂಗಾಡ್ ಮೂಲದ ಜೋಬಿ ಜಾರ್ಜ್ ಎಂದು ಗುರುತಿಸಲಾಗಿದೆ. ರಾಮಪುರಂನ ಬಸ್ ಡಿಪೋ ಬಳಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ ಈ ಪ್ರದೇಶದಲ್ಲಿ ಜೂಜಾಟದ ಗ್ಯಾಂಗ್ ಇದೆ ಎಂಬ ಮಾಹಿತಿಯ ಮೇರೆಗೆ ಜಾರ್ಜ್ ಕಟ್ಟಡಕ್ಕೆ ಆಗಮಿಸಿದ್ದರು. ಆದರೆ ಅಧಿಕಾರಿ ಕಾರಿಡಾರ್ ನಲ್ಲಿ ಜಾರಿದ ಪರಿಣಾಮ

ಕಟ್ಟಡದಿಂದ ಬಿದ್ದು ಪೊಲೀಸ್ ಅಧಿಕಾರಿ ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತೆ..!➤ ಶ್ರೀ ದಿಂಗಾಲೇಶ್ವರ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ,ಮೇ.15  ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗತ್ತೆ ಅಂತ ನಾನು ಈ ಹಿಂದೆ ಹೇಳಿದ್ದೆ. ಈಗ ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ. ಅಧಿಕಾರ ಬಂದ ಸಂದರ್ಭದಲ್ಲಿ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೇ ತಿನ್ನಬಾರದ ಪೆಟ್ಟು ತಿಂತಾರೆ. ನಾನು ಅವತ್ತು ಒಬ್ಬ ವ್ಯಕ್ತಿಯನ್ನು ಉದ್ದೇಶಿಸಿ ಮಾತನಾಡಿರಲಿಲ್ಲ. ಬಿ.ಎಸ್​​ ಯಡಿಯೂರಪ್ಪ ಅವರು ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಬಿ.ಎಸ್​ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು ಎಂದಿದ್ದರು.

ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗುತ್ತೆ..!➤ ಶ್ರೀ ದಿಂಗಾಲೇಶ್ವರ ಸ್ವಾಮೀಜಿ Read More »

ಕರ್ನಾಟಕ

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ➤ ಇಬ್ಬರು ಮಹಿಳೆಯರಿಗೆ ಗಾಯ

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.15. ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ. ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಆಲ್ಟೋ ಕಾರಿನಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ➤ ಇಬ್ಬರು ಮಹಿಳೆಯರಿಗೆ ಗಾಯ Read More »

ಕರಾವಳಿ

ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ➤  ಉದ್ಯಮಿ ವಿರುದ್ದ ದೂರು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.15. ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಯನ್ನು ಕಿಡ್ನಾಪ್ ಮಾಡಿ ಹಾಗೂ ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪದ ಉದ್ಯಮಿಯೋರ್ವನ ವಿರುದ್ದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ದ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ಮಹಿಳೆ ಪತಿಯ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು ದಾಖಲಿಸಿದ್ದಾರೆ.  

ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ➤  ಉದ್ಯಮಿ ವಿರುದ್ದ ದೂರು Read More »

ಕರಾವಳಿ

ಇಂದು(ಮೇ.15) SSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.15. 2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ. 15 ರ ಕೊನೆಯ ದಿನವಾಗಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಮೇ.15 ರವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಛಾಯಾಪ್ರತಿಯನ್ನು ಪಡೆಯಬೇಕು. ನಂತರವಷ್ಟೇ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ.

ಇಂದು(ಮೇ.15) SSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ Read More »

ಕರ್ನಾಟಕ

ಬಂಟ್ವಾಳ: ಅನಾರೋಗ್ಯದಿಂದ ಹಿಂದೂ ಸಂಘಟನೆಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.15. ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(೩೦) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಂಟ್ವಾಳ: ಅನಾರೋಗ್ಯದಿಂದ ಹಿಂದೂ ಸಂಘಟನೆಯ ಯುವಕ ಮೃತ್ಯು Read More »

ಕರ್ನಾಟಕ
Scroll to Top