News Kadaba

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಗಮನಿಸಿ.!➤ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.15 2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ. 15 ರ ಇಂದು ಕೊನೆಯ ದಿನವಾಗಿದೆ.ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮೇ.15 ರವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಛಾಯಾಪ್ರತಿಯನ್ನು ಪಡೆಯಬೇಕು. ನಂತರವಷ್ಟೇ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ. ಪೂರಕ ಪರೀಕ್ಷೆಗೆ ಒಂದು ವಿಷಯಕ್ಕೆ 370 ರೂ. […]

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಗಮನಿಸಿ.!➤ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ   Read More »

ಕರ್ನಾಟಕ

ಸಿಬಿಐ ಗೆ ಹೊಸ ನಿರ್ದೇಶಕರ ಆಯ್ಕೆ ➤ ಮುಂಚೂಣಿಯಲ್ಲಿದೆ ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಹೆಸರು

(ನ್ಯೂಸ್ ಕಡಬ)newskadaba.com ಹೈದರಾಬಾದ್, ಮೇ.15. ಇದೇ ತಿಂಗಳು 25ರಂದು ಹಾಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರ ಅಧಿಕಾರವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಹುದ್ದೆಗೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಅವರ ಹೆಸರು ಕೇಳಿಬಂದಿದೆ. ಸದ್ಯಕ್ಕೆ ನಿರ್ದೇಶಕರ ಹುದ್ದೆಗೆ ಕರ್ನಾಟಕ, ದೆಹಲಿ ಸೇರಿದಂತೆ ಮೂರು ರಾಜ್ಯಗಳ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿದೆ ಎಂದು ತಿಳಿದುಬಂದಿದೆ.

ಸಿಬಿಐ ಗೆ ಹೊಸ ನಿರ್ದೇಶಕರ ಆಯ್ಕೆ ➤ ಮುಂಚೂಣಿಯಲ್ಲಿದೆ ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಹೆಸರು Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ➤ ಉದ್ಯಮಿ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಮೇ.15. ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಗೆ  ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪದ ಮೇಲೆ ಉದ್ಯಮಿಯೋರ್ವನ ವಿರುದ್ದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ದ ಎಫ್ಐಆರ್ ದಾಖಲಾಗಿದೆ.  ಸಂತ್ರಸ್ತ ಮಹಿಳೆ ಪತಿಯ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು ದಾಖಲಿಸಿದ್ದಾರೆ. ತನ್ನ ಸೂಪರ್ ಮಾರ್ಕೇಟ್​ನ ಬಿಲ್ಲಿಂಗ್

ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ➤ ಉದ್ಯಮಿ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

16 ಮತಗಳ ಅಂತರದಿಂದ ಸೋಲು – ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ ಸೌಮ್ಯ ರೆಡ್ಡಿ

(ನ್ಯೂಸ್ ಕಡಬ) newskadaba.com.ಜಯನಗರ,  ಮೇ.15. 6 ಮತಗಳ ಅಂತರದಿಂದ ಸೋತ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಕೋರ್ಟ್‍ಗೆ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಸೌಮ್ಯ ರೆಡ್ಡಿ, ವಿಧಾನಸಭೆ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವದಿಸಿದ ಜಯನಗರದ ನನ್ನ ಪ್ರೀತಿಯ ಜನತೆಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ನನ್ನ ಬೆನ್ನೆಲುಬಾಗಿ ನಿಂತ ನಾಯಕರಿಗೆ ಅನಂತ ಧನ್ಯವಾದಗಳು. ಕಷ್ಟದ ಸಂದರ್ಭದಲ್ಲಿ ಒಗ್ಗಟ್ಟು ಪ್ರದರ್ಶಿಸಿ ನನ್ನ ಜೊತೆ ನಿಂತ ಸಾವಿರಾರು ಜನರಿಗೆ ಇದೇ ಸಂದರ್ಭದಲ್ಲಿ

16 ಮತಗಳ ಅಂತರದಿಂದ ಸೋಲು – ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ ಸೌಮ್ಯ ರೆಡ್ಡಿ Read More »

ಕರ್ನಾಟಕ

ಮಂಗಳೂರಿನಲ್ಲಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಮೃತ್ಯು

(ನ್ಯೂಸ್ ಕಡಬ) newskadaba.com.ಮಂಗಳೂರು,  ಮೇ.15. ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ ಮುದುಡಿದ ಕಮಲ  ➤ ದಕ್ಷಿಣ ಭಾರತ ಬಿಜೆಪಿ ಮುಕ್ತ !

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಕ್ಷ ಸೋತಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಇದ್ದ ಬಿಜೆಪಿ ಆಡಳಿತ ಇಂದಿಗೆ ಕೈತಪ್ಪಿ ಹೋಗಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚಿಸುವ ಏಕೈಕ ರಾಜ್ಯ ಕರ್ನಾಟಕವಾಗಿತ್ತು. ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಬಿಜೆಪಿಯನ್ನು ಒಳಗೊಂಡ ಮೈತ್ರಿಕೂಟ ಅಧಿಕಾರದಲ್ಲಿದೆ. ಸಾಮಾನ್ಯವಾಗಿ ಬಿಜೆಪಿ ಪ್ರಬಲ ಚುನಾವಣಾ ತಂತ್ರ, ಪಕ್ಷದ ಶ್ರೀಮಂತ ಖಜಾನೆ ಮತ್ತು ಪ್ರಧಾನ ಮಂತ್ರಿ ಮೋದಿಯವರ ಸಮರ್ಪಿತ ಅನುಯಾಯಿಗಳಿಂದ ಬೆಂಬಲಿತ ಪಕ್ಷವಾಗಿದ್ದರೂ

ಕರ್ನಾಟಕದಲ್ಲಿ ಮುದುಡಿದ ಕಮಲ  ➤ ದಕ್ಷಿಣ ಭಾರತ ಬಿಜೆಪಿ ಮುಕ್ತ ! Read More »

ಕರ್ನಾಟಕ

‘ಸೋಲು-ಗೆಲುವು ಹೊಸದೇನಲ್ಲ’ ಎಂದ ಮಾಜಿ ಸಿಎಂ.!➤ ಎಚ್​​ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ .13  ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸೋಲು-ಗೆಲುವು  ಹೊಸದೇನಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಎಚ್​​ಡಿಕೆ ಹೇಳಿದ್ದಾರೆ. ಕಾಂಗ್ರೆಸ್​ ಸ್ಪಷ್ಟ ಬಹುಮತದತ್ತ ಮುನ್ನಡೆ ಸಾಧಿಸಿದೆ.

‘ಸೋಲು-ಗೆಲುವು ಹೊಸದೇನಲ್ಲ’ ಎಂದ ಮಾಜಿ ಸಿಎಂ.!➤ ಎಚ್​​ಡಿ ಕುಮಾರಸ್ವಾಮಿ Read More »

ಕರ್ನಾಟಕ

ಮೊದಲ ಸಚಿವ ಸಂಪುಟದಲ್ಲಿ 5 ಭರವಸೆ ಈಡೇರಿಸ್ತೇವೆ  ➤ ರಾಹುಲ್ ಗಾಂಧಿ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ. 13. ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ನ ದೊಡ್ಡ ಗೆಲುವಿನ ಬಗ್ಗೆ ಹೇಳಿಕೆ ನೀಡಿದ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಜನತೆಗೆ, ಕಾರ್ಯಕರ್ತರಿಗೆ, ನಾಯಕರಿಗೆ ಹಾಗೂ ಕರ್ನಾಟಕದಲ್ಲಿ ದುಡಿದ ಎಲ್ಲ ನಾಯಕರನ್ನ ಅಭಿನಂದಿಸುತ್ತೇನೆ ಎಂದು ಹೇಳಿದರು. ಗೆಲುವಿನ ಕುರಿತು ಮಾತು ಮುಂದುವರೆಸಿದ ರಾಹುಲ್, ‘ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಬಡವರ ಜೊತೆಗಿದೆ. ಈ ದೇಶವು ಪ್ರೀತಿಯನ್ನ ಇಷ್ಟಪಡುತ್ತದೆ ಎಂದು ಕರ್ನಾಟಕ ಹೇಳಿದೆ. ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ

ಮೊದಲ ಸಚಿವ ಸಂಪುಟದಲ್ಲಿ 5 ಭರವಸೆ ಈಡೇರಿಸ್ತೇವೆ  ➤ ರಾಹುಲ್ ಗಾಂಧಿ ಮಹತ್ವದ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಓವರ್‌ಚಾರ್ಜ್‌ನಿಂದ ಇ–ರಿಕ್ಷಾ ಬ್ಯಾಟರಿ ಸ್ಪೋಟ.! ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಲಕ್ನೋ,ಮೇ.13 ಮನೆಯಲ್ಲಿ ಚಾರ್ಜ್‌ಗೆ ಇಟ್ಟಿದ್ದ ಇ–ಆಟೋ ರಿಕ್ಷಾದ ಬ್ಯಾಟರಿ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಲಕ್ನೋದಲ್ಲಿ ನಡೆದಿರುವುದು ವರದಿಯಾಗಿದೆ.ಬಿಬಿಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಇ-ರಿಕ್ಷಾವೊಂದರ ಬ್ಯಾಟರಿಯು ಓವರ್‌ಚಾರ್ಜ್‌ನಿಂದ ಸ್ಫೋಟಗೊಂಡಿದೆ ಎಂದು ಪೂರ್ವ ಡಿಸಿಪಿ ಹಿರ್ದೇಶ್ ಕುಮಾರ್ ತಿಳಿಸಿದ್ದಾರೆ. ಸ್ಫೋಟದ ಶಬ್ದವನ್ನು ಕೇಳಿ ಅಂಕಿತ್‌ ತನ್ನ ಮನೆಯೊಳಗೆ ಹೋಗಿದ್ದಾರೆ. ಈ ವೇಳೆ ಅಂಕಿತ್‌ ಅವರ ಪತ್ನಿ ರೇಣು ಮಗ ಕುಂಜ್, ಸೊಸೆ ರಿಯಾ ಸುಟ್ಟಗಾಯದಿಂದ ಬಿದ್ದಿರುವುದನ್ನು ನೋಡಿದ್ದಾರೆ.

ಓವರ್‌ಚಾರ್ಜ್‌ನಿಂದ ಇ–ರಿಕ್ಷಾ ಬ್ಯಾಟರಿ ಸ್ಪೋಟ.! ➤ ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಎರಡು ಬಸ್‌‌ಗಳ ನಡುವೆ ಅಪಘಾತ  ➤ 30ಕ್ಕೂ ಹೆಚ್ಚು ಮಂದಿಗೆ ಗಾಯ 

(ನ್ಯೂಸ್ ಕಡಬ)Newskadaba.com ಸುರತ್ಕಲ್, ಮೇ.13. ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಢಿಕ್ಕಿ ಹೊಡೆದಿದೆ.  

ಎರಡು ಬಸ್‌‌ಗಳ ನಡುವೆ ಅಪಘಾತ  ➤ 30ಕ್ಕೂ ಹೆಚ್ಚು ಮಂದಿಗೆ ಗಾಯ  Read More »

ಕರಾವಳಿ
Scroll to Top